Tel: 7676775624 | Mail: info@yellowandred.in

Language: EN KAN

    Follow us :


ಆಮಿಷಕ್ಕೆ ಒಳಗಾಗದೆ ಮತದಾನ ಮಾಡುವ ಮೂಲಕ ಆಳುವ ನಾಯಕನನ್ನು ಆರಿಸಿ. ನ್ಯಾಯಾಧೀಶರಾದ ಶುಭಾ

Posted date: 13 Apr, 2023

Powered by:     Yellow and Red

ಆಮಿಷಕ್ಕೆ ಒಳಗಾಗದೆ ಮತದಾನ ಮಾಡುವ ಮೂಲಕ ಆಳುವ ನಾಯಕನನ್ನು ಆರಿಸಿ. ನ್ಯಾಯಾಧೀಶರಾದ ಶುಭಾ

ಚನ್ನಪಟ್ಟಣ:ಏ:12- ೨೦೨೩ ರ ಚುನಾವಣಾ ಸಂದರ್ಭದಲ್ಲಿ ಯಾವುದೇ ರೀತಿಯ ಆಮಿಷಕ್ಕೆ ಒಳಗಾಗದೆ,  ಪ್ರತಿಯೊಬ್ಬರು ಸರಿಯಾದ ಸಮಯಕ್ಕೆ ಹಾಜರಾಗಿ ಮತದಾನ ಮಾಡುವ ಮೂಲಕ, ಸ್ಥಿರ ಸರ್ಕಾರ ಹಾಗೂ ಸಮಾಜಮುಖಿ ಚಿಂತಕರಂತಹ ನಾಯಕನನ್ನು ಆರಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭಾ ತಿಳಿಸಿದರು.

ಅವರು ನ್ಯಾಯಾಲಯದ ಮುಂಭಾಗ ಚುನಾವಣಾ ಆಯೋಗವು ಹಮ್ಮಿಕೊಂಡಿದ್ದ ಇವಿಎಂ ಮತದಾನದ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಚುನಾವಣಾಧಿಕಾರಿ ಮುನೇಗೌಡ ಮಾತನಾಡಿ ಅಭ್ಯರ್ಥಿಗಳು ನಾನು ಗೆಲ್ಲಬೇಕೆಂಬ ಒಂದೇ ಇಚ್ಛೆಯಿಂದ ಹಲವಾರು ತಂತ್ರಗಳನ್ನು ಉಪಯೋಗಿಸುತ್ತಾರೆ. ಪ್ರತಿಯೊಬ್ಬ ಮತದಾರರು ಅಭ್ಯರ್ಥಿ ತೋರಿಸುವ ಆಸೆಆಮಿಷಗಳಿಗೆ ಬಲಿಯಾಗದೆ ಮತದಾನ ಮಾಡಿದಾಗ ಮಾತ್ರ ಸುಸ್ಥಿರ ಆಡಳಿತ ಸಾಧ್ಯವಾಗುತ್ತದೆ. ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬೇಕಾದರೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಚುನಾವಣಾ ಸಂದರ್ಭದಲ್ಲಿ ಯಾವುದೇ ಅಕ್ರಮ ಕಂಡರೆ ಸಿ-ವಿಜಿಲ್ ಆಪ್ ಮೂಲಕ ಹಾಗೂ ಕಂಟ್ರೋಲ್‌ ರೂಂ ಗೆ ಕರೆ ಮಾಡಿ ದೂರು ನೀಡಿದರೆ ತಕ್ಷಣ ಕ್ರಮಕೈಗೊಳ್ಳಲಾಗುತ್ತದೆ ಎಂದರು.


ಸಹಾಯಕ ಚುನಾವಣಾಧಿಕಾರಿ ಮಹೇಂದ್ರ ಮಾತನಾಡಿ ಬುಲೆಟ್ ಗಿಂತ ಬ್ಯಾಲೆಟ್ ಸಮಾಜದ ಒಳಿತಿಗಾಗಿ ಪ್ರಭಾವಶಾಲಿಯಾಗಿದೆ. ಚುನಾವಣಾ ಆಯೋಗವು ಈಗಾಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ವಿವಿ ಪ್ಯಾಟ್ ನಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲಾ, ನೀವು ಯಾರಿಗೆ ಮತ ಹಾಕಿದ್ದೀರಿ ಎಂಬುದು ನಿಮಗೆ ಕ್ಷಣಾರ್ಧದಲ್ಲಿಯೇ ತಿಳಿಯುತ್ತದೆ. ಹಾಗಾಗಿ ಮತದಾನದ ದಿನ ಯಾವುದೇ ಕಾರ್ಯಕ್ರಮ ಇಟ್ಟುಕೊಳ್ಳದೆ ಮತದಾನಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ಕರೆ ನೀಡಿದರು.


ಇದೇ ಸಂದರ್ಭದಲ್ಲಿ ಚುನಾವಣಾ ಪ್ರತಿಜ್ಞೆ ಸ್ವೀಕರಿಸಲಾಯಿತು. ನ್ಯಾಯಾಧೀಶರು, ವಕೀಲರು, ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಿ ಅಭಿಯಾನವನ್ನು ಸಹ ಹಮ್ಮಿಕೊಳ್ಳಲಾಗಿತ್ತು.


ಮತದಾನದ ಅರಿವು ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಮಹೇಂದ್ರ ರವರು, ಅಪರ ಸಿವಿಲ್ ನ್ಯಾಯಾಧೀಶರಾದ ಉಷಾರಾಣಿ, ಸ್ವೀಪ್ ಕಮಿಟಿ ಅಧಿಕಾರಿ ಶಿವಕುಮಾರ್, ಅಸೆಂಬ್ಲಿ ಲೆವೆಲ್ ಮಾಸ್ಟರ್ ಟ್ರೈನರ್ ಹರಿದಾಸ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಭೋಜೇಗೌಡ ಮತ್ತಿತರರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑