Tel: 7676775624 | Mail: info@yellowandred.in

Language: EN KAN

    Follow us :


ಮಂಡ್ಯದಲ್ಲೂ ಸ್ಪರ್ಧಿಸಲು ಒತ್ತಡವಿದೆ, ಚನ್ನಪಟ್ಟಣ ದಲ್ಲೆ ನನ್ನ ಸ್ಪರ್ಧೆ ಕುಮಾರಸ್ವಾಮಿ

Posted date: 19 Apr, 2023

Powered by:     Yellow and Red

ಮಂಡ್ಯದಲ್ಲೂ ಸ್ಪರ್ಧಿಸಲು ಒತ್ತಡವಿದೆ, ಚನ್ನಪಟ್ಟಣ ದಲ್ಲೆ ನನ್ನ ಸ್ಪರ್ಧೆ ಕುಮಾರಸ್ವಾಮಿ

ಚನ್ನಪಟ್ಟಣ ೨೦೨೩ರ ವಿಧಾನಸಭಾ ಚುನಾವಣಾ ಕಣಕ್ಕೆ ಇಂದಿನ ದಿನ ಸೇರಿದಂತೆ ಕುಮಾರಸ್ವಾಮಿ ಮೂರು, ಆಮ್ ಆದ್ಮಿ, ಕೆ ಆರ್ ಎಸ್ ಪಕ್ಷಗಳಿಂದ ತಲಾ ಒಂದು, ಬಿ ಫಾರಂ ಇಲ್ಲದ ಕಾಂಗ್ರೆಸ್ (ಐ) ನಿಂದ ಒಂದು ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಒಟ್ಟು ಎಂಟು ನಾಮಪತ್ರಗಳು ಸಲ್ಲಿಕೆಯಾಗಿವೆ.


ಚನ್ನಪಟ್ಟಣ:

ಚನ್ನಪಟ್ಟಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಮರು ಆಯ್ಕೆ ಬಯಸಿ  ಸೋಮವಾರ, ಜೆಡಿಎಸ್ ಮುಖಂಡರು ಹಾಗೂ ಸಹಸ್ರಾರು ಕಾರ್ಯಕರ್ತರು, ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ತಾಲ್ಲೂಕು ಕಛೇರಿಯಲ್ಲಿನ ಚುನಾವಣಾಧಿಕಾರಿಗಳಿಗೆ ಮೂರು ನಾಮಪತ್ರಗಳನ್ನು ಸಲ್ಲಿಸಿದರು.


ಮೇ 10ರಂದು ನಡೆಯಲಿರುವ ರಾಜ್ವಿ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೂ ಮುನ್ನಾ ನಗರದ ಬೆಂಗಳೂರು ಮಾರ್ಗವಾಗಿ ತೆರೆದ ವಾಹನದಲ್ಲಿ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಷೇರು ಹೋಟೆಲ್ ವೃತ್ತಕ್ಕೆ ಆಗಮಿಸುತ್ತಿದ್ದಂತೆಯೇ  ಜೆಡಿಎಸ್ ಮುಖಂಡರು ಹಾಗೂ ಸಹಸ್ರಾರು ಕಾರ್ಯಕರ್ತರು, ಬೆಂಬಲಿಗರು ಕುಮಾರಸ್ವಾಮಿ ಹಾಗೂ ಜೆಡಿಎಸ್ ಪರ ಜಯಕಾರ ಕೂಗಿ, ಪುಷ್ಪಗಳ ಸುರಿಮಳೆಗೈದು ಮೆರವಣಿಗೆ ಮೂಲಕ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ತಾಲ್ಲೂಕು ಕಛೇರಿವರೆಗೆ ಕರೆ ತರಲಾಯಿತು. ಷೇರು ಹೋಟೆಲ್ ಮತ್ತು ಸಾತನೂರು ವೃತ್ತ ಹಾಗೂ ಬಿ.ಎಂ.ರಸ್ತೆಯ ಇಕ್ಕೆಲಗಳಲ್ಲೂ ಕಾರ್ಯಕರ್ತರು ಮತ್ತು ಬೆಂಬಲಿಗರ ದಂಡು ಬಿಸಿಲನ್ನು ಲೆಕ್ಕಿಸದೇ ನಿಂತಿತ್ತು.


ಸಾತನೂರು ವೃತ್ತದ ಬಳಿ ನೆರೆದಿದ್ದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಮತ್ತು ಜನತೆಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಯಾವುದೇ ಕುತಂತ್ರ ರಾಜಕಾರಣ ಮಾಡಿದರೂ ರಾಜ್ಯದಲ್ಲಿ ಈ ಬಾರೀ ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್ ಪಕ್ಷಕ್ಕೆ ೨೫ರಿಂ೩೦ ಸ್ಥಾನ ಬರುತ್ತೆ ಎಂದು ಹೇಳುತ್ತಾರೋ ಅದು ಎರಡು ರಾಷ್ಟ್ರೀಯ ಪಕ್ಷಗಳು ದುಡ್ಡು ಕೊಟ್ಟು ಮಾಡಿಸಿರುವ ಸರ್ವೆ ಆಗಿದೆ. ನಾವು ೧೨೩ಕ್ಕೂ ಹೆಚ್ಚು ಸ್ಥಾನ ಗಳಿಸುವ ಮೂಲಕ ರಾಜ್ಯದ ಚುಕ್ಕಾಣಿ ಹಿಡಿಯುತ್ತೇವೆ ಎಂದರು.

 

ಕಳೆದ ಬಾರಿ ಅನಿವಾರ್ಯವಾಗಿ ಕಾರ್ಯಕರ್ತರ ಒತ್ತಾಯ ಮತ್ತು ರಕ್ಷಣೆಗಾಗಿ ಚನ್ನಪಟ್ಟಣ ಮತ್ತು ರಾಮನಗರದಿಂದ ಸ್ಪರ್ಧಿಸಿದ್ದೆ. ಈಗಲೂ ಮಂಡ್ಯ ಕ್ಷೇತ್ರದಿಂದ ಒತ್ತಡವಿದೆ. ಮಂಡ್ಯದಲ್ಲಿ ಏಳಕ್ಕೆ ಏಳು ಸ್ಥಾನಗಳನ್ನು ಗೆಲ್ಲಬೇಕೆಂದರೆ ನೀವು ಸ್ಪರ್ಧಿಸಬೇಕು ಎಂದು ಕಾರ್ಯಕರ್ತರ ಒತ್ತಡವಾಗಿದೆ. ನಾನು ಚನ್ನಪಟ್ಟಣ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸುತ್ತೇನೆ. ಯಾರು ಏನೇ ಅಪಪ್ರಚಾರ ಮಾಡಲಿ, ಸಮೀಕ್ಷೆಗಳು ಏನೇ ಹೇಳಲಿ. ಈಗಾಗಲೇ ಪಂಚರತ್ನ ಯಾತ್ರೆ ಯಶಸ್ವಿಯಾಗಿದೆ. ರಾಜ್ಯದಲ್ಲಿ ಜನರ ಒಲವು ನಮ್ಮ ಜೆಡಿಎಸ್ ಪರವಿದೆ. ಕಾರ್ಯಕರ್ತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ. ಜನಪರ ರೈತಪರವಾದ ಜೆಡಿಎಸ್ ಸ್ವಂತ ಬಲದ ಸರ್ಕಾರವನ್ನು ತರಲು ಹೊರಟಿರುವ ನನ್ನನ್ನು ರಕ್ಷಣೆ ಮಾಡಿ ಆಶೀರ್ವದಿಸುವ ಮೂಲಕ ರಾಜಕೀಯ ಶಕ್ತಿ ನೀಡಬೇಕು. ತಾವೆಲ್ಲರೂ ಮುಂಬರುವ ಚುನಾವಣೆಯಲ್ಲಿ ಒಗ್ಗಟ್ಟಾಗಿ ನಿಂತು ನನ್ನನ್ನು ರಕ್ಷಣೆ ಮಾಡಿದರೆ ನಾನು ನಾಡಿನ ಬಡವರು, ರೈತರನ್ನು ರಕ್ಷಣೆ ಮಾಡುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಜನತೆಯಲ್ಲಿ ಮನವಿ ಮಾಡಿದರು.


ಚನ್ನಪಟ್ಟಣ ಮತ್ತು ರಾಮನಗರ ತಾಲ್ಲೂಕು ನನ್ನ ಎರಡು ಕಣ್ಣುಗಳಿದ್ದಂತೆ. ಶಿವನಿಗೆ ಹೇಗೆ ಮೂರು ಕಣ್ಣೋ ಹಾಗೇ ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳು. ಜಿಲ್ಲೆಯ ಜನತೆ ಆಶೀರ್ವಾದದಿಂದ ರಾಮನಗರ ಜಿಲ್ಲೆಯಲ್ಲಿ ಚನ್ನಪಟ್ಟಣ, ರಾಮನಗರ ಹಾಗೂ ಮಾಗಡಿ ಕ್ಷೇತ್ರಗಳಲ್ಲಿ ಜೆಡಿಎಸ್‍ ಸದೃಢವಾಗಿದೆ. ಕಾರ್ಯಕರ್ತರ ಶ್ರಮ ಮತ್ತು ಜನತೆಯ ಆಶೀರ್ವಾದದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ಮೂರೂ ಕ್ಷೇತ್ರಗಳಲ್ಲೂ ಜಯಬೇರಿ ಬಾರಿಸಲಿದೆ ಎಂಬ ವಿಶ್ವಾಸ ನನಗೆ ಇದೆ. ಮುಂದಿನ 2028ರಲ್ಲಿ ಕನಕಪುರ ಕ್ಷೇತ್ರಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಜೆಡಿಎಸ್ ತೆಕ್ಕೆಗೆ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.


ನಮ್ಮಲ್ಲೇ ಇದ್ದು ಎಲ್ಲಾ ಅಧಿಕಾರ ಅನುಕೂಲವನ್ನು ಪಡೆದುಕೊಂಡು ಇಂದು ಜೆಡಿಎಸ್ ಮುಗಿಸುತ್ತೇವೆ ಎಂದು ತಮ್ಮ ಸ್ವಂತ ಲಾಭಕ್ಕಾಗಿ ಹೊರಹೋಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ನನ್ನನ್ನು ಆಶೀರ್ವದಿಸುವ ಮೂಲಕ ಅವರಿಗೆ ತಕ್ಕ ಉತ್ತರ ನೀಡಬೇಕು ಎಂದು ಕುಮಾರಸ್ವಾಮಿ ಅವರು ಕರೆ ನೀಡಿದರು.  

ವಿಧಾನ ಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರ ಹೆಸರೇಳದೇ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು, ಯಾವ ಸ್ವಾಭಿಮಾನದ ನಡಿಗೆ, ಮೆಘಾಸಿಟಿ ಹೆಸರಿನಲ್ಲಿ ಲಕ್ಷಾಂತರ ರೂ. ಹಣ ವಸೂಲಿ ಮಾಡಿ ಸಾವಿರಾರು ಕುಟುಂಬಗಳನ್ನು ಹಾಳು ಮಾಡಿದರು. ಬಡವರ ಜಮೀನನ್ನು ಹೆದರಿಸಿ ಬೆದರಿಸಿ ತಮ್ಮ ಹೆಸರಿಗೆ ಬರೆಸಿಕೊಂಡವರು, 14 ತಿಂಗಳ ಮೈತ್ರಿ ಸರ್ಕಾರದಲ್ಲಿ ಒತ್ತಡದ ನಡುವೆಯೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ 26 ಲಕ್ಷ ರೈತ ಕುಟುಂಬಕ್ಕೆ ಅನುಕೂಲ ಮಾಡಿಕೊಟ್ಟು, 5 ವರ್ಷದಲ್ಲಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನ ತಂದು ಪ್ರಾಮಾಣಿಕವಾಗಿ ಶ್ರಮಿಸಿದ ನನ್ನ ಮೈತ್ರಿ ಸರ್ಕಾರವನ್ನು  ಮಟ್ಕ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಜತೆಗೂಡಿ ಬೀಳಿಸಿದ ಅವರ ಕುತಂತ್ರ, ಅಪಪ್ರಚಾರ ಇಂದು ನಡೆಯದು. ತಾಲ್ಲೂಕಿನ ಜನತೆಗೆ ಯಾರು ಏನು ಎಂದು ಅರಿವಿದೆ. ಅವರ  ನಿರ್ನಾಮದ ಅಂತಿಮ ಕಾಲ ಸಮೀಪಿಸುತ್ತಿದೆ. ತಾಲ್ಲೂಕಿನ ಜನತೆ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಏ.23 ಮತ್ತು 24 ರಂದು ಚನ್ನಪಟ್ಟಣದಲ್ಲಿ ಪ್ರವಾಸ ಹಮ್ಮಿಕೊಂಡು ಹಳ್ಳಿಗಳಿಗೆ ಭೇಟಿ ನೀಡಿ ಜನತೆಯ ಆಶೀರ್ವಾದವನ್ನು ಪಡೆಯುವೆ. ಕ್ಷೇತ್ರದ ಕಾರ್ಯಕರ್ತರೇ ಪಕ್ಷದ ಶಕ್ತಿ. ಯಾವುದೇ ಅಪಪ್ರಚಾರಗಳು, ರಾಜಕೀಯ ಕುತಂತ್ರಗಳಿಗೆ ಹೆದರದೇ ಧೈರ್ಯದಿಂದ ತಾವೇ ಅಭ್ಯರ್ಥಿ ಎಂಬಂತೆ ಪ್ರಚಾರ ಮಾಡಿ ಕಳೆದ ಬಾರಿಯಂತೆ ಈ ಬಾರಿಯೂ ಗೆಲುವು ತಂದು ಕೊಡುವ ಮೂಲಕ ನನಗೆ ರಾಜಕೀಯ ಶಕ್ತಿ ನೀಡಬೇಕು ಎಂದು ಮನವಿ ಮಾಡಿದರು.


ಗುಜರಾತ್‍ನ ಅಮೂಲ್ ಹಾಲು ಮತ್ತು ಮೊಸರು ಇತರ ಉತ್ಪನ್ನಗಳನ್ನು ರಾಜ್ಯದಲ್ಲಿ ತಂದು ಹೈನುಗಾರಿಕೆ, ರೈತರು, ಹೆಣ್ಣು ಮಕ್ಕಳನ್ನು ಬೀದಿಗೆ ತಳ್ಳುವ, ನಂದಿನಿಯನ್ನು ನಿರ್ನಾಮ ಮಾಡುವ ಹುನ್ನಾರ ನಡೆಯುತ್ತಿದೆ. ದೇವೇಗೌಡರು ಮತ್ತು ನಾನು ಬದುಕಿರುವವರೆಗೆ ಯಾವುದೇ ಕಾರಣಕ್ಕೂ ಗುಜರಾತ್‍ನ ಅಮೂಲ್ ರಾಜ್ಯಕ್ಕೆ ಪ್ರವೇಶಿಸಲು, ನಂದಿನಿಯನ್ನು ನಿರ್ನಾಮ ಮಾಡಲು ಬಿಡುವುದಿಲ್ಲ ಎಂದು ಹೇಳಿದ ಅವರು, ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಜೆಡಿಎಸ್ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಗಳ ಜೊತೆಗೆ ಹಾಲಿಗೆ ನೀಡುತ್ತಿರುವ 5 ರೂ. ಪ್ರೋತ್ಸಾಹ ಧನವನ್ನು ರೂ.8 ಗೆ ಹೆಚ್ಚಿಸುತ್ತೇನೆ ಎಂದು ಭರವಸೆ ನೀಡಿದರು. 

ಮಂಡ್ಯದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ನನ್ನನ್ನು ನಿಲ್ಲುವಂತೆ ಒತ್ತಾಯ ಮಾಡುತ್ತಿದ್ದಾರೆ. ಕಳೆದ ಬಾರಿಯಂತೆ  ಈ ಬಾರಿಯೂ ಎರಡು ಕಡೆ ನಿಲ್ಲುವ ಪ್ರಯತ್ನ ಮಾಡುವುದಿಲ್ಲ. ಮಂಡ್ಯ ಜಿಲ್ಲೆಯಲ್ಲಿ ಭಾವನಾತ್ಮಕವಾದ ಸಂಬಂಧವಿದೆ. ನಾವು ೧೨೩ ಸ್ಥಾನ ಗೆಲ್ಲಬೇಕು. ಅದಕ್ಕಾಗಿ ಮಂಡ್ಯ ಜಿಲ್ಲೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಬೇಕು. ಅದಕ್ಕಾಗಿ ೨-೩ ದಿನಗಳಲ್ಲಿ ಅಲ್ಲಿನ ಮುಖಂಡರು ಮತ್ತು ಕಾರ್ಯಕರ್ತರ ಸಭೆ ಕರೆದು ಚರ್ಚಿಸಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಮುಖಂಡರ ಸಮ್ಮುಖದಲ್ಲಿ  ತೀರ್ಮಾನ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.


ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಸಿ.ಅಶ್ವಥ್,  ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಹೆಚ್.ಡಿ.ಜಯಮುತ್ತು ,  ನಗರ ಘಟಕದ ಅಧ್ಯಕ್ಷ ಸಿ.ಅಜಯಕುಮಾರ್, ಮುಖಂಡರಾದ ಗೋವಿಂದಹಳ್ಳಿ ನಾಗರಾಜು, ಪ್ರಸನ್ನ ಪಿ ಗೌಡ, ಎಂ.ಸಿ.ಕರಿಯಪ್ಪ,  ಕುಕ್ಕೂರುದೊಡ್ಡಿ ಜಯರಾಂ, ಎಪಿಎಂಸಿ ಮಾಜಿ ಅಧ್ಯಕ್ಷ ಯಾಲಕ್ಕಿಗೌಡ, ವಡ್ಡರಹಳ್ಳಿ ರಾಜಣ್ಣ, ಪಾರ್ಥಸಾರಥಿ, ನಗರಸಭಾ ಅಧ್ಯಕ್ಷ ಪ್ರಶಾಂತ್, ಮಂಜುನಾಥ್, ಎಂಎನ್.ಸತ್ಯನಾರಾಯಣ, ನರ್ಸರಿ ಲೋಕೇಶ್, ರೇಖಾ ಉಮಾಶಂಕರ್, ಇಗ್ಗಲೂರು ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑