Tel: 7676775624 | Mail: info@yellowandred.in

Language: EN KAN

    Follow us :


ಕ್ಷೇತ್ರದ ಮತದಾರರು ಕಳೆದ ಚುನಾವಣೆಯಲ್ಲಿ ಮಾಡಿದ ತಪ್ಪನ್ನು ಈಬಾರಿ ಮಾಡುವುದಿಲ್ಲ. ಸಿ ಪಿ ಯೋಗೇಶ್ವರ್

Posted date: 19 Apr, 2023

Powered by:     Yellow and Red

ಕ್ಷೇತ್ರದ ಮತದಾರರು ಕಳೆದ ಚುನಾವಣೆಯಲ್ಲಿ ಮಾಡಿದ ತಪ್ಪನ್ನು ಈಬಾರಿ ಮಾಡುವುದಿಲ್ಲ. ಸಿ ಪಿ ಯೋಗೇಶ್ವರ್

ಚನ್ನಪಟ್ಟಣ: ೨೦೧೮ರ ಚುನಾವಣೆಯಲ್ಲಿ ಮಾಡಿದ ತಪ್ಪನ್ನು ಕ್ಷೇತ್ರದ ಮತದಾರರು ೨೦೨೩ರ ಚುನಾವಣೆಯಲ್ಲಿ ಮಾಡುವುದಿಲ್ಲಾ ಎಂಬ ಭರವಸೆ ನನಗುದೆ. ಕಳೆದ ಚುನಾವಣೆಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡು ಕ್ಷೇತ್ರದ ಶಾಸಕರಾಗಿ ಆಯ್ಕೆ ಜನ ಮಾಡಿದರು. ಇಲ್ಲಿಂದ ಗೆದ್ದ ಅವರು ಜನರ ಕಷ್ಟ ಪರಿಹರಿಸಲಿಲ್ಲ, ಜನರ ಕಷ್ಟ ಕೇಳಲು ಕ್ಷೇತ್ರಕ್ಕೆ ಬರಲಿಲ್ಲಾ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದರು.


ನಗರದ ತಾಲೂಕು ಕಚೇರಿಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಶಾಸಕತ್ವದ ಐದು ವರ್ಷಗಳ ಅವಧಿಯಲ್ಲಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಕೇವಲ 12ರಿಂದ 13ಬಾರಿ ಮಾತ್ರ ಆಗಮಿಸಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಬಂದೇ ಇಲ್ಲಾ. ನಾನು ದಾಖಲೆ ಇಟ್ಟುಕೊಂಡಿದ್ದೇನೆ. ಜನರ ಸುಖಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಯ ಕೆಲಸ. ಆದರೆ ಕುಮಾರಸ್ವಾಮಿ ಆ ಕೆಲಸ ಮಾಡಲಿಲ್ಲ. ಜನಸಾಮಾನ್ಯರ ನೋವಿಗೆ ಸ್ಪಂದಿಸದ ಅವರು ಜನ ಕೊಟ್ಟಂತಹ ಅಧಿಕಾರವನ್ನು ದುರುಪಯೋಗಪಡಿಸಿಕೊಂಡರು ಎಂದರು.


ಈಗಾಗಲೇ ಸ್ವಾಭಿಮಾನ ಸಂಕಲ್ಪ ನಡಿಗೆಯ ಮುಖಾಂತರ ಪ್ರತಿ ಗ್ರಾಮ ಹಾಗೂ ನಗರ ಪ್ರದೇಶದ ಪ್ರವಾಸ ಮಾಡಿದ್ದೇನೆ. ಕಳೆದ ಎರಡೂವರೆ ತಿಂಗಳಿನಿಂದ ಪ್ರತಿ ಹಳ್ಳಿ, ನಗರ ಪ್ರದೇಶದ ವಾರ್ಡ್‍ಗಳನ್ನು ಸುತ್ತಿದ್ದೇನೆ. ಪ್ರತಿ ಮನೆಯನ್ನು ತಲುಪಿದ್ದು, ಈ ಬಾರಿ ಮತದಾರರು ನನ್ನನ್ನು ಕೈಬಿಡದೆ, ಕೈಹಿಡಿಯುವ ವಿಶ್ವಾಸವಿದೆ. ಸ್ವಾಭಿಮಾನ ಸಂಕಲ್ಪ ನಡಿಗೆ, ನೀರಾವರಿ ಜೊತೆಗೆ ಹೆಚ್ ಡಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಬರದೆ ಇರುವುದು ಸಹ ವರದಾನವಾಗಲಿದೆ ಎಂದರು.  


ನನ್ನ ರಾಜಕೀಯ ಜೀವನದಲ್ಲಿ ಇಂದು ನಾನು ಸಲ್ಲಿಸಿರುವ 9ನೇ ನಾಮಪತ್ರವಾಗಿದೆ. ಎಂಟು ಬಾರಿ ವಿಧಾನಸಭೆಗೆ ಮತ್ತು ಒಮ್ಮೆ ಲೋಕಸಭೆಗೆ ನಾಮಪತ್ರ ಸಲ್ಲಿಸಿದ್ದೇನೆ. ಸ್ವಾಭಿಮಾನ ಸಂಕಲ್ಪ ನಡಿಗೆ ನನ್ನ ಆತ್ಮವಿಶ್ವಾಸ ಹೆಚ್ಚಿಸಿದೆ. ಈ ಯಾತ್ರೆ ಸಂದರ್ಭದಲ್ಲಿ ಮತದಾರರು ತೋರಿದ ಅಭಿಮಾನ ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಮೂಡಿಸಿದೆ ಎಂದರು.


ಕುಮಾರಸ್ವಾಮಿ ಕಳೆದ ಬಾರಿ ಗೆದ್ದಲ್ಲಿ ಮುಖ್ಯಮಂತ್ರಿ ಆಗುತ್ತಾರೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಆಗುತ್ತದೆ ಎಂದು ನಂಬಿ ಅವರನ್ನು ಗೆಲ್ಲಿಸಿದ್ದರು. ಆದರೆ ಕ್ಷೇತ್ರದ ಶಾಸಕರಾದ ನಂತರ ಅವರು ಕ್ಷೇತ್ರವನ್ನು ನಿರ್ಲಕ್ಷಿಸಿದರು. ಇಲ್ಲಿಂದ ಆಯ್ಕೆಯಾದ ನಂತರ ಕ್ಷೇತ್ರಕ್ಕೆ 1,500 ಕೋಟಿ ಅನುದಾನ ತಂದಿದ್ದೇನೆ ಅನ್ನುತ್ತಾರೆ. ಆ ಅನುದಾನ ಎಲ್ಲಿದೆ. ಅಷ್ಟು ಅನುದಾನ ಬಂದಿದೆ. ಖಾಸಗಿ ಬಸ್ ನಿಲ್ದಾಣದ ಕಾಮಗಾರಿ ಇನ್ನು ನನೆಗುದಿಗೆ ಏಕೆ ಬಿದ್ದಿದೆ. ಅಷ್ಟೊಂದು ಹಣವನ್ನು ಯಾವ-ಯಾವ ಕಾಮಗಾರಿಗಳಿಗೆ ವಿನಿಯೋಗಿಸಿದ್ದಾರೆ ಎಂದು ಪ್ರಶ್ನಿಸಿದರು.


೨೦೧೮ರ ಚುನಾವಣೆಯಲ್ಲಿ ಕುಮಾರಸ್ವಾಮಿ ಸುಳ್ಳು ಭರವಸೆಗಳನ್ನು ನೀಡಿ ಈ ಕ್ಷೇತ್ರದಿಂದ ಆಯ್ಕೆಯಾದರು. ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡುವುದಾಗಿ ಹೇಳಿ ಮೋಸ ಮಾಡಿದರು.  ಜೆಡಿಎಸ್‍ನ ನಿಷ್ಠಾವಂತ ಕಾರ್ಯಕರ್ತರು ಅವರನ್ನು ಗೆಲ್ಲಿಸಿದರು. ಗೆದ್ದ ಮೇಲೆ ಅವರ ನಿಜ ಬಣ್ಣ ಗೊತ್ತಾದ ಕಾರಣ ಹಲವಾರು ಜೆಡಿಎಸ್ ಪಕ್ಷದ ನಾಯಕರು ನನ್ನ ಪಕ್ಕ ಬಂದು ನಿಂತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.


ಈ ಕ್ಷೇತ್ರದಿಂದ ಸಾಕಷ್ಟು ಹಿರಿಯ ರಾಜಕಾರಣಿಗಳು ಆಯ್ಕೆಯಾಗಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಮ್ಮ ತಾಲೂಕನ್ನು ಅಭಿವೃದ್ಧಿ ಮಾಡುವ ಶಕ್ತಿ ನಮಗೆ ಇದೆ. ನಾನು ನಿಮ್ಮ ಮಧ್ಯದಲ್ಲೇ ಬೆಳೆದವನು. ಆದ್ದರಿಂದ ಈ ಬಾರಿ ಕಳೆದ ಬಾರಿಯಂತೆ ಕುಮಾರಸ್ವಾಮಿ ಕಣ್ಣೀರಿಗೆ ಕರಗದೆ ನನ್ನನ್ನ ಗೆಲ್ಲಿಸಿ ತಾಲೂಕಿನ ಕೀರ್ತಿ ಉಳಿಸಿ ಎಂದು ಮನವಿ ಮಾಡಿದರು.


ಈ ಬಾರಿಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚನ್ನಪಟ್ಟಣ ಅಥವಾ ರಾಮನಗರಕ್ಕೆ ಆಗಮಿಸುವ ಸಾಧ್ಯತೆ ಇದೆ. ರಾಜ್ಯ ಮುಖಂಡರು ಈ ಕುರಿತಂತೆ ಚರ್ಚೆ ನಡೆಸಿದ್ದಾರೆ. ಪ್ರಧಾನಿ ಪ್ರಚಾರಕ್ಕೆ ಸೂಕ್ತವಾದ ಜಾಗವನ್ನು ಹುಡುಕುವ ಪ್ರಯತ್ನಗಳನ್ನು ಈಗಾಗಲೇ ನಡೆಸಲಾಗಿದೆ.


ಚುನಾವಣೆ ಎಂದ ಮೇಲೆ ಸಾಕಷ್ಟು ಒತ್ತಡವಿರುವುದರಿಂದ ಇಂದು ಯಾವ ರಾಜ್ಯ ನಾಯಕರು ಆಗಮಿಸಲಿಲ್ಲ. ನಿನ್ನೆ ಸಹ ನಾಮಪತ್ರ ಸಲ್ಲಿಕೆಗೆ ಬರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿಕೊಂಡೆ. ಗೋವಿಂದ ಕಾರಜೋಳ ಅವರ ನಾಮಪತ್ರ ಸಲ್ಲಿಕೆಗೆ ಹೋಗಬೇಕಿರುವುದರಿಂದ ಬರಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪ್ರಚಾರಕ್ಕೆ ಬರುತ್ತೇನೆ ಎಂದು ಅವರು ತಿಳಿಸಿದ್ದಾರೆ ಎಂದರು.


ನಾಮಪತ್ರ ಸಲ್ಲಿಸುವ ಮುನ್ನಾ ನಗರದ ಮಂಗಳವಾರಪೇಟೆಯ  ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದ ಮುಂಭಾಗದಿಂದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಹತ್ತಾರು ಸಾವಿರ ಶ್ವೇತ ವಸ್ತ್ರಧಾರಿ ಕಾರ್ಯಕರ್ತರ ಜೊತೆಯಲ್ಲಿ, ಮಂಗಳವಾದ್ಯದ ಸಂಗಡ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.


ಈ ಸಂದರ್ಭದಲ್ಲಿ ಬಮೂಲ್ ನಿರ್ದೇಶಕ ಎಸ್.ಲಿಂಗೇಶ್‍ಕುಮಾರ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಲವೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ತಾಲೂಕು ಅಧ್ಯಕ್ಷ ಕೆ.ಟಿ.ಜಯರಾಮು, ಮುಖಂಡರಾದ ಅರಳಾಳುಸಂದ್ರ ಶಿವಪ್ಪ, ಮುದ್ದುಕೃಷ್ಣ, ಎಲೇಕೇರಿ ರವೀಶ್, ಜಯಕುಮಾರ್ ಇತರರು ಇದ್ದರು.


 ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑