Tel: 7676775624 | Mail: info@yellowandred.in

Language: EN KAN

    Follow us :


ಭೀಕರ ಅಪಘಾತ. ಒಂದೇ ಕುಟುಂಬದ ಐವರು ಸಾವು

Posted date: 23 Apr, 2023

Powered by:     Yellow and Red

ಭೀಕರ ಅಪಘಾತ. ಒಂದೇ ಕುಟುಂಬದ ಐವರು ಸಾವು

ಚನ್ನಪಟ್ಟಣ: ಮಧ್ಯಾಹ್ನ ತಾಲೂಕು ಲಂಬಾಣಿ ತಾಂಡ್ಯ ಬಳಿ ಇರುವ ಬೆಂಗಳೂರು ಮೈಸೂರು ಹೆದ್ದಾರಿ ಬೈಪಾಸ್ ರಸ್ತೆಯಲ್ಲಿ ಆಲ್ಟೊ ಕಾರು ಹಾಗೂ ಇನ್ನೋವಾ ಕಾರುಗಳ ಮಧ್ಯೆ ಅಪಘಾತವಾಗಿದ್ದು, ರವಿ ಪೂಜಾರಿ ಬಿನ್ ಭೀಮಪ್ಪ ಪೂಜಾರಿ 46 ವರ್ಷ, ಕೆಂಗೇರಿ, ಬೆಂಗಳೂರು ಹಾಗೂ ಅವರ ಮಕ್ಕಳಾದ ಇಂಚರ ಪೂಜಾರ್ 14 ವರ್ಷ,ಹಾಗೂ ಸಿರಿ ಪೂಜಾರ್ 2 ವರ್ಷ ರವರುಗಳು ಮೃತಪಟ್ಟಿದ್ದಾರೆ.

ಪತ್ನಿ ಲಕ್ಷ್ಮಿ ಪೂಜಾರ್ 40 ವರ್ಷ ಹಾಗೂ  ಮಗಳು ಶಾಂತಲಾ ಪೂಜಾರ್ 8 ವರ್ಷ ರವರುಗಳಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಮೃತಪಟ್ಟಿರುತ್ತಾರೆ. 


ಈ ಸಂಬಂಧವಾಗಿ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಮೋ.ಸಂಖ್ಯೆ 75/2023 ಕಲಂ 279,337,304A ಐಪಿಸಿ ರೀತಿಯ ಪ್ರಕರಣ ದಾಖಲಿಸಿಕೊಂಡು ತನಿಖೆ  ಕೈಗೊಂಡಿರುತ್ತಾರೆ. 


ಮೃತಪಟ್ಟಿರುವ ರವಿ ಪೂಜಾರಿ ಬನ್ ಭೀಮಪ್ಪ, ಇಂಚರ ಪೂಜಾರ್ ,ಸಿರಿ ಪೂಜಾರ್, ಲಕ್ಷ್ಮಿ ಪೂಜಾರ್ ಹಾಗೂ  ಶಾಂತಲಾ ಪೂಜಾರ್ ರವರುಗಳ ಮೃತದೇಹವನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಸಿದ್ದು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ  ಹಸ್ತಾಂತರಿಸಿದ್ದಾರೆ.


ರವಿ ಪೂಜಾರ್ ರವರು ಮೂಲತಃ ಬಾಗಲಕೋಟೆ ಜಿಲ್ಲೆಯ ಬಾದಾಮಿ ಯವರಾಗಿದ್ದು, ಬೆಂಗಳೂರಿನ ರಾಜೀವ್ ಗಾಂಧಿ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ ಆಯೋಜಕರಾಗಿದ್ದು, ಕೆಂಗೇರಿ ಯಲ್ಲಿ ವಾಸವಿದ್ದರು. ಅವರ ಪತ್ನಿಯ ತವರೂರಾದ ಟಿ ನರಸೀಪುರ ಕ್ಕೆ ಕುಟುಂಬದ ಕಾರ್ಯಕ್ರಮ ಇದ್ದುದರಿಂದ ಕುಟುಂಬದ ಐವರು ಅವರ ಆಲ್ಟೋ ಕಾರಿನಲ್ಲಿ ತೆರಳುತ್ತಿದ್ದಾಗ ಮುಂದಿನ ಚಕ್ರ ಸಿಡಿದು, ರಸ್ತೆ ವಿಭಜಕ ದಾಟಿ ಮೈಸೂರಿನ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರಿಗೆ ಢಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಅಸುನೀಗಿ, ಮತ್ತೀರ್ವರು ಬೆಂಗಳೂರಿನ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ನಗರದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಸಂಬಂಧಿಕರ ರೋದನ ಮುಗಿಲು ಮುಟ್ಟಿದ್ದು, ನೆರೆದಿದ್ದ ಸ್ಥಳೀಯರ ಕಣ್ಷಂಚಿನಲ್ಲೂ ನೀರು ಸುರಿಯುತ್ತಿತ್ತು.


*ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತರಾಗಿದ್ದಾರೆ. ನಾನು ಸ್ಥಳ ಪರಿಶೀಲನೆ ಮಾಡಿದ್ದು, ಅಪಘಾತವಾಗಲು ಸ್ಪಷ್ಟ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತದೆ.*

*ಕಾರ್ತಿಕ್ ರೆಡ್ಡಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑