Tel: 7676775624 | Mail: info@yellowandred.in

Language: EN KAN

    Follow us :


ಪರಿಸರ ಉಳಿಸುವ ಹಾಗೂ ದೇಶ ಕಟ್ಟುವ ಅತ್ಯುತ್ತಮ ಸಂಸ್ಥೆ ಸ್ಕೌಟ್ಸ್ ಮತ್ತು ಗೈಡ್ಸ್ ಡಾ ಪ್ರಭು ಉಪಾಸೆ

Posted date: 25 Apr, 2023

Powered by:     Yellow and Red

ಪರಿಸರ ಉಳಿಸುವ ಹಾಗೂ ದೇಶ ಕಟ್ಟುವ ಅತ್ಯುತ್ತಮ ಸಂಸ್ಥೆ ಸ್ಕೌಟ್ಸ್ ಮತ್ತು ಗೈಡ್ಸ್ ಡಾ ಪ್ರಭು ಉಪಾಸೆ

ಚನ್ನಪಟ್ಟಣ: ಸ್ವಾತಂತ್ರ್ಯ ಪೂರ್ವದಿಂದಲೂ ದೇಶ ಕಟ್ಟುವಲ್ಲಿ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ದೇಶದ ಕೆಲವೇ ಸಂಸ್ಥೆಗಳ ಪೈಕಿ ಒಂದಾಗಿದೆ ಎಂದು ಸಂಸ್ಥೆಯ ರೋವರ್ಸ್ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ ಪ್ರಭು ಉಪಾಸೆ ತಿಳಿಸಿದರು. ಅವರು ಮಂಗಳವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್, ರೋವರ್ಸ್ ಅಂಡ್ ರೇಂಜರ್ಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯು ಒಂದು ಚಳವಳಿಯ ರೂಪವಾಗಿದೆ. ಭಾರತದಲ್ಲಿ ೧೯೦೭ ರಲ್ಲಿ ಆರಂಭವಾಗಿ ೧೯೧೭ ರಲ್ಲಿ ಅಧಿಕೃತವಾಗಿ ಆರಂಭವಾಗಿ ಇಲ್ಲಿಯವರೆಗೂ ಪರಿಸರ ಮತ್ತು ದೇಶಕ್ಕಾಗಿ ದುಡಿಯುತ್ತಾ ಬಂದಿದೆ. ಪ್ರತಿ ಕಾಲೇಜುಗಳ ಹದಿನೆಂಟರಿಂದ ಇಪ್ಪತೈದು ವರ್ಷದೊಳಗಿನ ವಿದ್ಯಾರ್ಥಿಗಳು ಸೇರಿ, ಬೆಟ್ಟ, ಗುಡ್ಡ, ನದಿ ಸ್ವಚ್ಚತೆಯ ಜೊತೆಗೆ ಪರಿಸರ ಕಾಪಾಡಲು ಪಣ ತೊಡಬೇಕು. ಇದರಿಂದ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು ತಮ್ಮ ವೃತ್ತಿ ಮತ್ತು ಖಾಸಗಿ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತರಬೇತಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ ವಿ ವೆಂಕಟೇಶ್ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಮೂರೂವರೆ ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಓದು, ಕ್ರೀಡೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಎನ್ ಸಿ ಸಿ ತಂಡವೂ ಸಹ ಬರಲಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿಯುತ್ತಿರುವುದು ತಾಲ್ಲೂಕಿನ ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿಪ್ರಾಯ ಪಟ್ಟರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಮಾಜಿಕ ಹೋರಾಟಗಾರ ಗೋ ರಾ ಶ್ರೀನಿವಾಸ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯದಲ್ಲಿ ಕಲಿಯುವುದಷ್ಟೇ ಶಿಕ್ಷಣವಲ್ಲಾ, ಎಲ್ಲಾ ರೀತಿಯ ಜನರ ನಡುವೆ ಬೆರೆತು ಕಲಿಯುವ ಸಾಮಾನ್ಯ ಜ್ಞಾನ ಬಹಳ ಮುಖ್ಯವಾದುದಾಗಿದೆ. ಪ್ರತಿ ವಿದ್ಯಾರ್ಥಿಗಳು ಪಂಚಭೂತಗಳ ಪಾತ್ರವನ್ನು ಅರಿತು, ಪರಿಸರಕ್ಕೆ ಒತ್ತು ನೀಡುವ ಮೂಲಕ ಸ್ಕೌಟ್ಸ್ ಅಂಡ್ ಗೈಡ್ಸ್ ನ ಮುಖ್ಯ ಉದ್ದೇಶವನ್ನು ಈಡೇರಿಸಬೇಕು ಎಂದು ತರಬೇತಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ಮೊದಲಿಗೆ ಸ್ಕೌಟ್ಸ್ ಅಂಡ್ ಗೈಡ್ಸ್ ನ ಧ್ವಜಾರೋಹಣ ಮಾಡಿ, ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿ, ನಿರೂಪಿಸಿದರು. ಕಾರ್ಯಕ್ರಮದ ರೂವಾರಿಗಳು, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ರೇಂಜರ್ಸ್ ನ ಮುಖ್ಯಸ್ಥರಾದ ಡಾ ಚನ್ನಮ್ಮ, ದೈಹಿಕ ಶಿಕ್ಷಣ ನಿರ್ದೇಶಕರಾದ ನಂಜುಂಡ ಆರ್. ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ನಿರಂತರ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑