Tel: 7676775624 | Mail: info@yellowandred.in

Language: EN KAN

    Follow us :


ಬೃಹತ್ ರೋಡ್ ಶೋ ನಡೆಸಿದ ಹೆಚ್ಡಿಕೆ

Posted date: 09 May, 2023

Powered by:     Yellow and Red

ಬೃಹತ್ ರೋಡ್ ಶೋ ನಡೆಸಿದ ಹೆಚ್ಡಿಕೆ

ಚನ್ನಪಟ್ಟಣ: ಬಹಿರಂಗ ಚುನಾವಣಾ ಪ್ರಚಾರ (ಏ-8) ಸಂಜೆ 6ಕ್ಕೆ ಅಂತ್ಯ ಆಗಲಿದ್ದು, ಈ ಹಿನ್ನೆಲೆಯಲ್ಲಿ ರೇಷ್ಮೆನಾಡು ರಾಮನಗರ ಹಾಗೂ ಚನ್ನಪಟ್ಟಣ, ಕನಕಪುರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ರೋಡ್ ಶೋ ಮೂಲಕ ಅಬ್ಬರದ ಪ್ರಚಾರ ಕೈಗೊಂಡು ಗಮನ ಸೆಳೆದರು.

ಚನ್ನಪಟ್ಟಣ ಸರ್ಕಾರಿ ಬಸ್ ನಿಲ್ದಾಣದ ಬಳಿ ಮತದಾರರನ್ನು ಕುರಿತು ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ಸಿಎಂ ಆದರೂ ಸಹ ಬಿಡದಿಯ ಕೇತಗಾನ ಹಳ್ಳಿಯಲ್ಲಿಯೇ ಇರುತ್ತೇನೆ. ಮೈಸೂರು ಭಾಗದ ಜನರು ಏನೇ ಕಷ್ಟ ಇದ್ದರೂ ಮನೆ ಬಳಿ ಬನ್ನಿ ಪೋಲೀಸರು ತಡೆಯುವುದಿಲ್ಲ ಎಂದು ಮನವಿ ಮಾಡಿದರು.


ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಈ ಭಾರಿ ಜನಪರ ಆಡಳಿತಕ್ಕೆ ಹೆಸರಾಗಿರುವ ಜೆಡಿಎಸ್ ತನ್ನ ಸರ್ಕಾರವನ್ನು ರಚನೆ ಮಾಡಲಿದ್ದು, ನಿಮ್ಮೆಲ್ಲರ ಆಶೀರ್ವಾದದಿಂದ ಅದರಲ್ಲೂ ಕ್ಷೇತ್ರದಿಂದ ಆಯ್ಕೆಯಾಗುವ ನಾನು ಮೂರನೇ ಭಾರಿಗೆ ಮುಖ್ಯಮಂತ್ರಿಯಾಗುವುದರಲ್ಲಿ ಸಂಶಯವೇ ಇಲ್ಲ ಎಂದು ತಮ್ಮ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ದೇಶವನ್ನು ಆಳಿದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಜನರಿಗೆ ಅನುಕೂಲವಾಗುವ ಯಾವುದೇ ಯೋಜನೆಗಳನ್ನು ರೂಪಿಸದೆ,ಜನರಿಗೆ ಭ್ರಷ್ಟಚಾರವನ್ನೇ ಎಸೆಗುತ್ತಿರುವುದರಿಂದ,ಜನರು ರೋಸಿ ಹೋಗಿದ್ದು, ಈ ಭಾರಿ ಪ್ರಾದೇಶಿಕ ಪಕ್ಷಕ್ಕೆ ಬಹುಮತ ನೀಡಲು ತೀರ್ಮಾಸಿದ್ದಾರೆ ಎಂದು ತಿಳಿಸಿದರು.


ಸಮ್ಮಿಶ್ರ ಸರ್ಕಾರದಲ್ಲಿ ಜನಪರ ಆಡಳಿತ ನೀಡುತ್ತಿದ್ದ ನನ್ನನ್ನು ಈ ಕ್ಷೇತ್ರದ ಮಹಾನುಭಾವ ಕ್ರಿಕೆಟ್ ಬೆಟ್ಟಿಂಗ್ ಹಾಗೂ ಜೂಜಾಟದ ಪಾಪದ ಹಣವನ್ನು ತಂದು ನನ್ನ ಸರ್ಕಾರದ ಉಳಿಸಲು ಕಾರಣರಾದವರಿಗೆ ಇದೇ ತಾಲ್ಲೂಕಿನ ನನ್ನ ಜನರು ಈ ಭಾರಿ ತಕ್ಕ ಪಾಠ ಕಲಿಸಲಿದ್ದಾರೆ ಪರೋಕ್ಷವಾಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿದರು.


ರಾಜ್ಯದಲ್ಲಿ ಜಲಧಾರೆ ಮಾಡುವುದರ ಮುಖಾಂತರ ರಾಜ್ಯದ ಕಟ್ಟಕಡೆಯ ನೀರಾವರಿ ಇಲ್ಲದ ಜಿಲ್ಲೆಗೂ ನೀರಾವರಿ ಮಾಡುವುದು ಹಾಗೂ ರಾಜ್ಯದ ಎಲ್ಲಾ ನದಿಗಳ ಜೋಡಣೆ ಮಾಡುವುದರ ಮುಖಾಂತರ ರಾಜ್ಯಕ್ಕೆ ನೀರಾವರಿ ಸೌಲಭ್ಯ ಒದಗಿಸುವುದು ಹಾಗೂ ರಾಜ್ಯವ್ಯಾಪ್ತಿ ನಡೆಸಿದ ಜಲಧಾರೆಯ ಉದ್ದೇಶವಾಗಿದೆ ಎಂದರು.


ಜಲಧಾರೆಯ ನಂತರ ಪಂಚರತ್ನ ಯೋಜನೆ ಯನ್ನು ಕೈಗೊಂಡು ರಾಜ್ಯವ್ಯಾಪ್ತಿ ಪ್ರಚಾರ ಕೈಗೊಂಡಿ ರುವುದು ಸಾಮಾನ್ಯದ ವಿಚಾರವಲ್ಲ ಈ ಪಂಚರತ್ನ ಯೋಜನೆ ರಾಜ್ಯದ ಜನರ ಕಲ್ಯಾಣದ ಯೋಜನಗಳಾಗಿದ್ದು,ಇದಲ್ಲದೆ ರಾಜ್ಯದ ಜನರ ಕಲ್ಯಾಣಕ್ಕೆ ಅಗತ್ಯವಾಗುವ ಯೋಜನೆಗಳನ್ನು ಜಾರಿಗೆ ತರುವ ಉದ್ದೇಶ ನನ್ನದಾಗಿದೆ ಎಂದರು.


ಕ್ಷೇತ್ರದಲ್ಲಿ ಈಗಾಗಲೇ ನೂರಾರು ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, 1,500 ಕೋಟಿ ರೂ ಹಣವನ್ನು ಕ್ಷೇತ್ರಕ್ಕೆ ತಂದಿರುವುದಾಗಿ ತಿಳಿಸಿ, ಚನ್ನಪಟ್ಟಣ ರಾಮನಗರ ನನಗೆ ಎರಡು ಕಣ್ಣುಗಳಾಗಿದ್ದು, ಹುಬ್ಬಳಿ-ದಾರವಾಡದಂತೆ ರಾಮನಗರ ಚನ್ನಪಟ್ಟಣವನ್ನು ಅವಳಿ ಜಿಲ್ಲೆಯನ್ನಾಗಿ ಮಾಡುತ್ತೇನೆ ಹಾಗೂ ಜಿಲ್ಲೆಯನ್ನು ಪ್ರತಿಯೊಂದು ಹಂತದಲ್ಲಿ ಅಭಿವೃದ್ದಿ ಪಡಿಸುತ್ತೇನೆ ನನ್ನ ಮೇಲೆ ನಂಬಿಕೆ ವಿಶ್ವಾಸವಿರಲಿ ಎಂದು ಮನವಿ ಮಾಡಿದರು.


ಇಷ್ಟು ಜನರು ಬಂದಿರುವುದನ್ನು ನೋಡಿ ನನ್ನ ಜನ್ಮ ಸಾರ್ಥಕ ಆಯಿತು. ಕಾಂಗ್ರೆಸ್‍ನವರು ಏನೂ ತಪ್ಪಿಲ್ಲದಿದ್ದರೂ ಕೂಡ ದೇವೇಗೌಡರನ್ನು ಪ್ರಧಾನಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದರು. ಅಷ್ಟೇ ಅಲ್ಲದೆ ನನ್ನ ಸರ್ಕಾರವನ್ನು ಕೂಡ ಬೀಳಿಸಿದ್ದರು. ಹೀಗೆ ನನಗೆ ತುಂಬಾ ನೋವು ಕೊಟ್ಟಿದ್ದರು. ಆದರೆ ನಿಮ್ಮನ್ನೆಲ್ಲರನ್ನೂ ನೋಡಿ ನನಗೆ ಆನಂದಭಾಷ್ವ ಬರುತ್ತಿದೆ ಎಂದು ಹೇಳುವ ಮೂಲಕ ಬಂದ ಜನರ ಮುಂದೆ ಭಾವುಕರಾದರು. ನಾನು ಕಣ್ಣೀರು ಹಾಕಿದರೆ ನನ್ನ ವಿರೋಧಿಗಳು ಬೇರೆ ಬಣ್ಣ ಕಟ್ಟುತ್ತಾರೆ. ಆದ್ದರಿಂದ ಎಷ್ಟೇ ನೋವಿದ್ದರೂ ಕೂಡ ಮನಸ್ಸಿನಲ್ಲಿ ಇಟ್ಟುಕೊಂಡಿರುತ್ತೇನೆ. ನಾನು ಕನಕಪುರಕ್ಕೂ ಹೋಗಬೇಕಿದೆ. ನೀವು ನಿಖಿಲ್ ಕುಮಾರಸ್ವಾಮಿಗೂ ಆಶೀರ್ವಾದ ಮಾಡಿ ಅಂತಾ ಸಂದೇಶ ಬಂದಿದೆ. ನಿಖಿಲ್ ಅವರನ್ನು ರಾಮನಗರ ಜನರ ಮಡಿಲಿಗೆ ಹಾಕಿದ್ದೇನೆ ಅವರು ಯಾವತ್ತೂ ಕೂಡ ಕೈ ಬಿಡಲ್ಲ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಹಾಗೆಯೆ ಇದೇ ವೇಳೆ ರಾಮನಗರ ಆಗಬಹುದು, ಚನ್ನಪಟ್ಟಣವೇ ಆಗಬಹುದು ಅವರು ನಮ್ಮ ಕುಟುಂಬದ ಸದಸ್ಯರನ್ನು ಕಾಪಾಡುತ್ತಾರೆ ಎಂದರು


ಇನ್ನು ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಸ್ಥಗಿತ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿ.ಪಿ.ಯೋಗೇಶ್ವರ್ ಹೆಸರು ಪ್ರಸ್ತಾಪಿಸದೆ ಟಾಂಗ್ ನೀಡಿದರು. ಇದೊಂದು ಪಾಪದ ಕೂಸು. ಅದನ್ನು ಹಾಗೆಯೇ ಬಿಟ್ಟಿದ್ದಾನೆ. ಸರಿಪಡಿಸುವ ವೇಳೆಗೆ ಸರ್ಕಾರ ಹೋಯ್ತು, ನಾನು ಅಧಿಕಾರಕ್ಕೆ ಬಂದಮೇಲೆ ಸರಿಪಡಿಸಿಯೇ ತೀರುತ್ತೇನೆ ಎಂದು ವಿಶ್ವಾಸವ್ಯಕ್ತಪಡಿಸಿದರು. ನಂತರ ಚನ್ನಪಟ್ಟಣದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು, ಹಳೇ ಮೈಸೂರು ರಸ್ತೆಯ ಶೇರು ಹೋಟೆಲ್ ವೃತ್ತದಿಂದ ಮಂಗಳವಾರ ಪೇಟೆ ಬಸವನಗುಡಿ ಸರ್ಕಲ್‍ರೆಗೂ ರೋಡ್ ಶೋ ಮಾಡಿ ಗಮನ ಸೆಳೆದರು. ಈ ವೇಳೆ ರಸ್ತೆ ತುಂಬೆಲ್ಲಾ ಕುಮಾರಸ್ವಾಮಿ ಅವರ ಅಭಿಮಾನಿಗಳ ದಂಡೇ ನೆರೆದಿತ್ತು. ಅಲ್ಲದೆ ದಾರಿಯುದ್ದಕ್ಕೂ ಕುಮಾರಸ್ವಾಮಿ ಪರ ಅಭಿಮಾನಿಗಳು ಜಯಘೋಷ ಮೊಳಗಿಸಿದರು. ಮುಂದಿನ ಸಿಎಂ ನಮ್ಮ ಕುಮಾರಣ್ಣ ಎನ್ನುವ ಘೋಷಣೆ ಮೊಳಗಿಸಿದರು.

 ಕುಮಾರಸ್ವಾಮಿರವರ ರೋಡ್‍ಶೋನಲ್ಲಿ ಸೇರಿದ್ದ ಭಾರಿ ಜನಸ್ತೋಮವನ್ನು ಕಣ್ತುಂಬಿಕೊಂಡ ಕುಮಾರಸ್ವಾಮಿ ನಗರದ ನಾಲ್ಕು ಕಡೆಗಳಲ್ಲಿ ನಾಲ್ಕು ತಾಸುಗಳ ಕಾಲ ಮಾತನಾಡಿದರು.


 ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು, ಪಿ.ಎಲ್.ಡಿ.ಬ್ಯಾಂಕ್ ಮಾಜಿ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ನಗರಸಭಾ ಅಧ್ಯಕ್ಷ ಪ್ರಶಾಂತ್, ಕುಕ್ಕೂರು ದೊಡ್ಡಿ ಜಯರಾಮು, ಹಾಪ್‍ಕಾಮ್ಸ್ ದೇವರಾಜು, ವಡ್ಡರಹಳ್ಳಿ ರಾಜಣ್ಣ, ಸೇರಿದಂತೆ ಹಲವಾರು ಮಂದಿ ಮುಖಂಡರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑