ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ: ನ್ಯಾ. ಅನಿತಾ ಎನ್.ಪಿ

ರಾಮನಗರ, ಅ. 11: ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅನಿತಾ ಎನ್.ಪಿ ಅವರು ತಿಳಿಸಿದರು.
ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಗಳ ವಿಭಾಗದ ಸಹಯೋಗದೊಂದಿಗೆ ಪೊಲೀಸ್ ಭವನದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜೀವನ ಶೈಲಿಯನ್ನು ಸಮತೋಲನವಾಗಿ ನಿರ್ವಹಿಸುವುದನ್ನು ರೂಡಿಸಿಕೊಳ್ಳಬೇಕು. ಒಳ್ಳೆಯ ಆರೋಗ್ಯ ಶೈಲಿಯನ್ನು ಕಾಪಾಡಿಕೊಳ್ಳಲು ಒತ್ತಡಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಮಾಡಬೇಕಾದ ಕೆಲಸಗಳನ್ನು ಮಾಡಬೇಕಾದ ಸಮಯದಲ್ಲೇ ಮಾಡಿ ಮುಗಿಸಬೇಕು ಇದರಿಂದಾಗಿ ಒತ್ತಡಗಳು ಕಡಿಮೆಯಾಗುತ್ತದೆ ಎಂದು ತಿಳಿಸಿದರು.
ಸಮಸ್ಯೆಗಳನ್ನು ಅತಿಯಾಗಿ ಮನಸ್ಸಿಗೆ ತೆಗೆದುಕೊಳ್ಳದೇ ಸರಿಯಾಗಿ ನಿಭಾಯಿಸಿದಾಗ ಮಾತ್ರ ಮಾನಸಿಕ ಕಾಯಿಲೆಯಿಂದ ದೂರ ಉಳಿಯಬಹುದು. ದೇಹಕ್ಕೆ ಮಾತ್ರವಲ್ಲದೇ ಮನಸ್ಸಿಗೂ ಚಿಕಿತ್ಸೆಯ ಅವಶ್ಯಕತೆ ಇದೆ ಎಂದರು.
ಅಪರ ಪೊಲೀಸ್ ಅಧೀಕ್ಷಕರಾದ ಸುರೇಶ್ ಟಿ.ವಿ ಅವರು ಮಾತನಾಡಿ, ಎಲ್ಲಾ ಸಮಯ ಸಂದರ್ಭದಲ್ಲಿ ನೆಮ್ಮದಿಯಿಂದ ಇರುತ್ತಾ, ಎಲ್ಲರೊಡನೆ ಹೊಂದಾಣಿಕೆಯಿಂದ ಬದುಕುತ್ತಾ, ಸ್ವಾವಲಂಬಿಯಾಗಿ, ಸಂತೋಷವಾಗಿ, ತೃಪ್ತಿಕರವಾಗಿರುವುದೇ ಮಾನಸಿಕ ಆರೋಗ್ಯ ಎಂದರು.
ದೇಹ ಮತ್ತು ಮನಸ್ಸು ಒಂದೇ ನಾಣ್ಯದ ಎರಡು ಮುಖಗಳು ಒಂದಕ್ಕೆ ತೊಂದರೆಯಾದರೆ ಮತ್ತೊಂದಕ್ಕೆ ತೊಂದರೆಯಾಗಬಹುದು. ದೈಹಿಕ ಖಾಯಿಲೆ ಮಾನಸಿಕ ನೆಮ್ಮದಿಯನ್ನು ಕೆಡಿಸಿದರೆ, ಮಾನಸಿಕ ಸಮಸ್ಯೆ ದೇಹದ ಆರೋಗ್ಯವನ್ನು ಕೆಡಿಸಬಲ್ಲದು. ಮಾನಸಿಕ ಒತ್ತಡಕ್ಕೆ ಪರಿಹಾರಗಳು ಜೀವನಶೈಲಿಯಲ್ಲಿ ಸೂಕ್ತ ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಚಿಂತೆ ಮಾಡುವುದನ್ನು ಬಿಟ್ಟು ಕಾರ್ಯೋನ್ಮುಖವಾಗಬೇಕಾಗುತ್ತದೆ ಎಂದು ತಿಳಿಸಿದರು.
ಪೊಲೀಸ್ ಸಿಬ್ಬಂದಿಗಳು ಹೆಚ್ಚು ಒತ್ತಡದಿಂದ ಪ್ರತಿನಿತ್ಯ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ಇರುವುದಿಲ್ಲ. ಈ ಸಂದರ್ಭದಲ್ಲಿ ಠಾಣೆಗೆ ಹಾಜರಾಗುವ ಹಿರಿಯರಿಗೆ, ಹೆಣ್ಣು ಮಕ್ಕಳಿಗೆ, ಶೋಶಿತರಿಗೆ ಪೊಲೀಸ್ ಸಿಬ್ಬಂದಿಗಳು ದರ್ಪವನ್ನು ತೋರದೆ ಅವರಿಗೆ ಮಾನಸಿಕವಾಗಿ ಧೈರ್ಯವನ್ನು ತುಂಬಿ ನ್ಯಾಯವನ್ನು ಒದಗಿಸುವಂತಹ ಕೆಲಸಗಳನ್ನು ಮಾಡುವಂತೆ ತಿಳಿಸಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳಾದ ಡಾ. ಮಂಜುನಾಥ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2023ರ ಕುರಿತು ಕರಪತ್ರ ಬಿಡುಗಡೆ ಮಾಡಿದರು.
ಮಾನಸಿಕ ಆರೋಗ್ಯ ವಿಭಾಗದ ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತರಾದ ಪದ್ಮರೇಖಾ ಅವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಕುಮಾರ್, ಜಿಲ್ಲಾ ರೋಗವಾಹಕ ಆಶ್ರಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಶಶಿಧರ್ ಎಂ.ಎನ್., ರಾಮನಗರ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಉಮಾ, ಮಾನಸಿಕ ಆರೋಗ್ಯ ವಿಭಾಗದ ಮನೋರೋಗ ತಜ್ಞರಾದ ಡಾ. ಆದರ್ಶ, ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »

ಕನ್ನಡದ ಕಟ್ಟಾಳು, ಸಹಕಾರಿ ಧುರೀಣ ಸಿಂ ಲಿಂ ನಾಗರಾಜು ಸ್ಮರಣ ಕಾರ್ಯಕ್ರಮ
ಚನ್ನಪಟ್ಟಣ: ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಸಿಂ.ಲಿಂ.ನಾಗರಾಜು ಅವರು ವಯಕ್ತಿಕವಾಗಿ ಹಾಗೂ
ಕೌಟುಂಬಿಕವಾಗಿ ತಮಗೆ ಏ

ಬುಧವಾರ ಕೆಆರ್ ಪೇಟೆಯಲ್ಲಿ ನಡೆಯುವ ಕಸಾಪ ದತ್ತಿ ಪ್ರಶಸ್ತಿ ಸ್ವೀಕರಿಸಲಿರುವ ಜಿಲ್ಲೆಯ ಜಾನಪದ ಕಲಾವಿದೆ ಲಕ್ಷ್ಮಿ ಶ್ರೀನಿವಾಸ
ರಾಮನಗರ/ಚನ್ನಪಟ್ಟಣ:ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ೨೦೨೦ ೨೦೨೧ ಹಾಗೂ ೨೦೨೨ ನೇ ಸಾಲಿನ "ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ ಪ್ರಶ

ತಾಲ್ಲೂಕು ಆಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ ರೈತ ಸಂಘದ ವಿಭಾಗೀಯ ಅಧ್ಯಕ್ಷ ಮಲ್ಲಯ್ಯ
ಚನ್ನಪಟ್ಟಣ: ತಾಲ್ಲೂಕು ಆಡಳಿತ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ, ಇಡೀ ತಾಲ್ಲೂಕನ್ನು ನಿಯಂತ್ರಿಸಬೇಕಾದ ದಂಡಾಧಿಕಾರಿಗಳು ತೆಪ್ಪಗಿದ್ದಾರೆ. ಇದಕ್ಕೆ ಇತ್ತೀಚ

ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್, ಡಿಪೋ ತಡೆಗೋಡೆಗೆ ಢಿಕ್ಕಿ
ಚನ್ನಪಟ್ಟಣ: ಇತ್ತೀಚೆಗೆ ತಾಲ್ಲೂಕಿನಾದ್ಯಂತ ಸಾರಿಗೆ ಬಸ್ಸುಗಳ ಅಪಘಾತ ಹೆಚ್ಚಾಗುತ್ತಿದ್ದು, ಅಮಾಯಕರ ಪ್ರಾಣವನ್ನು ಬಲಿ ಪಡೆಯುತ್ತಿವೆ. ರಸ್ತೆಯ ಮೇಲೆ ಸಂಚರಿ

ದೀಪಾವಳಿ ನೆಪದಲ್ಲಿ ಅನಾಥವಾದ ನೆಹರು/ಮಕ್ಕಳ ಜಯಂತಿ
ರಾಮನಗರ: ಇಂದು ನವೆಂಬರ್ ೧೪ ಮಕ್ಕಳ ದಿನಾಚರಣೆ, ಚಾಚಾಜಿ ಅಡ್ಡ ಹೆಸರಿನ ಸ್ವತಂತ್ರ ಭಾರತದ ಪ್ರಪ್ರಥಮ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ರವರ ಹೆಸರಿನಲ್ಲಿ ರ

ಸಾರಿಗೆ ಬಸ್ ಸ್ಟಿಯರಿಂಗ್ ಕಟ್, ಸ್ಕೂಟರ್ ಗೆ ಢಿಕ್ಕಿ ಇಬ್ಬರ ಸಾವು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಪಾರು
ಚನ್ನಪಟ್ಟಣ: ನಗರಕ್ಕೆ ಹೊಂದಿಕೊಂಡಿರುವ ತಿಟ್ಟಮಾರನಹಳ್ಳಿ ಗ್ರಾಮದ ನಡುವಿನ ರಾಮಮ್ಮ ನ ಕೆರೆ ಏರಿಯ ಮೇಲೆ ಸೋಮವಾರ ಮುಂಜಾನೆ ಸಾರಿಗೆ ಬಸ್ ಮತ್ತು ಸ್ಕೂಟರ್ ನಡ

ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಟಿ ವಿ ಗಿರೀಶ್ ಆಯ್ಜೆ, ಹಲವರಿಂದ ಅಭಿನಂದನೆ
ಚನ್ನಪಟ್ಟಣ:ನಗರದ ನ್ಯಾಯಾಲಯದಲ್ಲಿರುವ ವಕೀಲರ ಸಂಘದ ಕಛೇರಿಯಲ್ಲಿ ತಾಲ್ಲೂಕು ವಕೀಲರ ಸಂಘದ ಚುನಾವಣೆಯು ಶನಿವಾರ ಜರುಗಿದ್ದು ಅತ್ಯಧಿಕ ಮತಗಳನ್ನು ಪಡೆಯುವ ಮೂಲ

ಸಿಂ ಲಿಂ ನಾಗರಾಜು ಸತ್ಯಸಂಧರು, ವಾಟಾಳ್ ನಾಗರಾಜು ಅಭಿಮತ
ಚನ್ನಪಟ್ಟಣ; ಸಿಂ ಲಿಂ ನಾಗರಾಜು ಸತ್ಯಸಂಧರು, ಯೋಗ್ಯರು, ನಂಬಿಕಸ್ತರು, ವಿವೇಕವುಳ್ಳವರು, ವಿಚಾರವಂತರು, ಸರಳಜೀವಿ ಇಂತಹವರು ನನ್ನ ಸ್ನೇಹಿತರಾಗಿ, ಒಡನಾಡಿಯಾ

ತೌಟನಹಳ್ಳಿ ಬಳಿ ಹತ್ತಾರು ಎಕರೆ ಸರ್ಕಾರಿ ಗುಡ್ಡೆ, ದಲಿತರ ಜಮೀನು ಒತ್ತುವರಿ ಮಾಡಿದ ಬಿಜೆಪಿ ಮುಖಂಡ, ಕ್ರಮಕ್ಕೆ ಆಗ್ರಹ
ಚನ್ನಪಟ್ಟಣ: ತಾಲ್ಲೂಕಿನ ಮಳೂರು ಹೋಬಳಿ ಯ ತೌಟನಹಳ್ಳಿ ಗ್ರಾಮದ ಸರ್ವೇ ನಂಬರ್ ೭೪ ರಲ್ಲಿ ೧೭೦ ಎಕರೆ ಸರ್ಕಾರಿ ಜಮೀನು ಇದ್ದು, ಸ್ಥಳೀಯ ರೈತರ ಜಾನುವಾರುಗಳಿಗೆ

ಹಲವು ಎಡವಟ್ಟುಗಳೊಂದಿಗೆ ರಾಜ್ಯೋತ್ಸವ ಆಚರಿಸಿದ ತಾಲ್ಲೂಕು ಆಡಳಿತ
ಚನ್ನಪಟ್ಟಣ: ಚನ್ನಪಟ್ಟಣ ನಗರ ಮತ್ತು ತಾಲ್ಲೂಕು ಕೇಂದ್ರವೂ ಪುರಾಣ, ಇತಿಹಾಸ, ಚಳವಳಿ ಸೇರಿದಂತೆ ಅನೇಕ ವಿಚಾರಗಳಲ್ಲಿ ಸ್ವಾತಂತ್ರ್ಯ ಪೂರ್ವ ಹಾಗೂ
ಪ್ರತಿಕ್ರಿಯೆಗಳು