Tel: 7676775624 | Mail: info@yellowandred.in

Language: EN KAN

    Follow us :


ಸಾರಿಗೆ ಬಸ್ ಸ್ಟಿಯರಿಂಗ್ ಕಟ್, ಸ್ಕೂಟರ್ ಗೆ ಢಿಕ್ಕಿ ಇಬ್ಬರ ಸಾವು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಪಾರು

Posted date: 13 Nov, 2023

Powered by:     Yellow and Red

ಸಾರಿಗೆ ಬಸ್ ಸ್ಟಿಯರಿಂಗ್ ಕಟ್, ಸ್ಕೂಟರ್ ಗೆ ಢಿಕ್ಕಿ ಇಬ್ಬರ ಸಾವು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಪಾರು

ಚನ್ನಪಟ್ಟಣ: ನಗರಕ್ಕೆ ಹೊಂದಿಕೊಂಡಿರುವ ತಿಟ್ಟಮಾರನಹಳ್ಳಿ ಗ್ರಾಮದ ನಡುವಿನ ರಾಮಮ್ಮ ನ ಕೆರೆ ಏರಿಯ ಮೇಲೆ ಸೋಮವಾರ ಮುಂಜಾನೆ ಸಾರಿಗೆ ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿಯಾಗಿ ಸ್ಕೂಟರ್ ಸವಾರರಾದ ತಂದೆ-ಮಗ ಸಾವನ್ನಪ್ಪಿದ ಘಟನೆ ಜರುಗಿದೆ.


ಚನ್ನಪಟ್ಟಣ ನಗರದಿಂದ ಭೈರನಾಯಕನಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದ ಸಾರಿಗೆ ಬಸ್ಸಿನಲ್ಲಿ ಮೂವತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು. ಸಾರಿಗೆ ಬಸ್ಸಿನ ಸ್ಟಿಯರಿಂಗ್ ರಾಡಿನ ಬೋಲ್ಟ್ ತುಂಡಾಗಿ, ಅಳವಡಿಸಿದ ಪಿನ್ನು ಕಳಚಿ ಬಿದ್ದಿದ್ದರಿಂದ ಬಸ್ಸು ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಎಡಭಾಗದಲ್ಲಿ ಚಲಿಸುತ್ತಿದ್ದ ಬಸ್ಸು ಏಕಾಏಕಿ ಕೆರೆಯ ಕಡೆಗೆ ವಾಲಿದೆ. ಎದುರಿನಿಂದ ಚನ್ನಪಟ್ಟಣ ನಗರಕ್ಕೆ ಬರುತ್ತಿದ್ದ ಕೋಟಮಾರನಹಳ್ಳಿ ಗ್ರಾಮದ ಸಿದ್ದಯ್ಯ (೬೫) ಮತ್ತು ಅವರ ಪುತ್ರ ಅರುಣ್ (೨೮) ಇದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಸಿದ್ದಯ್ಯ ಸ್ಥಳದಲ್ಲೇ ಸಾವನ್ನಪಿದರೆ ಅವರ ಪುತ್ರ ಅರುಣ್ ಕುಮಾರ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.


ಚಾಲಕನ ಸಮಯ ಪ್ರಜ್ಞೆ;

ಚಾಲಕನ ನಿಯಂತ್ರಣ ಕಳೆದುಕೊಂಡಿದ್ದರಿಂದ ಸವಾರ ತನ್ನ ಸಮಯ ಪ್ರಜ್ಞೆಯಿಂದ ತಡೆಗೋಡೆಗೆ ಢಿಕ್ಕಿ ಹೊಡೆಸಿದ್ದಾನೆ. ಅದೇ ಸಂದರ್ಭದಲ್ಲಿ ಬಂದಂತಹ ದ್ವಿಚಕ್ರ ವಾಹನಕ್ಕೂ ಬಸ್ ಢಿಕ್ಕಿ ಹೊಡೆದಿದೆ. ಬಸ್ಸು ಕೆರೆಗೆ ಬೀಳದಂತೆ ಚಾಲಕ ಯತ್ನಿಸಿದ್ದಾನೆ. ತಡೆಗೋಡೆ ಇದ್ದಿದ್ದರಿಂದ ಹಾಗೂ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸು ಕೆರೆಗೆ ಬೀಳದಂತೆ ಎಚ್ಚರಿಕೆ ವಹಿಸಿದ್ದಾನೆ. ಒಂದು ವೇಳೆ ಬಸ್ಸು ಕೆರೆಗೆ ಬಿದ್ದಿದ್ದರೆ ಮೂವತ್ತು ಮಂದಿ ಪ್ರಯಾಣಿಕರು ಜಲಸಮಾಧಿ ಆಗುವ ಸಂಭವವಿತ್ತು.


ಶವಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದು, ಸಂಬಂಧಿಕರ ರೋದನ ಮುಗಿಲು ಮುಟ್ಟಿತ್ತು. ಎರಡು ವಾಹನಗಳನ್ನು ಗ್ರಾಮಾಂತರ ಪೋಲೀಸರು ವಶಕ್ಕೆ ಪಡೆದು, ಸ್ಥಳ ಪರಿಶೀಲನೆ ಮಾಡಿ ತನಿಖೆ ಕೈಗೊಂಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑