ಕಲೆ, ಸಂಸ್ಕೃತಿಯನ್ನು ಇನ್ನಷ್ಟು ಬೆಳಸಿ :ಶಿವಾನಂದ ಮೂರ್ತಿ

ರಾಮನಗರ ನ.26: ಮಹತ್ವಪೂರ್ಣವಾದ ಸುದಿನ, ಸಂವಿದಾನ ಆಚರಣೆಗೆ ಬಂದ ಈ ಸುದಿನ, ಆದ್ದರಿಂದ ಈ ದಿನವನ್ನು ಜಾನಪದ ಕಲಾತಂಡದ ಮೂಲಕ ಜನಪರ ಉತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಕಲೆ, ಸಂಸ್ಕೃತಿಯನ್ನು ಇನ್ನಷ್ಟು ಬೆಳಸಿ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ತಿಳಿಸಿದರು.
ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೈಲಾಂಚ ಹೋಬಳಿಯ ಬನ್ನಿಕುಪ್ಪೆ ಗ್ರಾಮದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಜನಪರ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ ರಚನೆಯಾದಂತ ಸಂವಿಧಾನವನ್ನು ಅಂಗೀಕಾರ ಮಾಡಿದಂತಹ ದಿನವನ್ನು ಇಂದು ಆಚರಿಸಲಾಗುತ್ತಿದೆ ಎಂದರು.
ಕಲೆ, ಸಂಸ್ಕೃತಿಯನ್ನು ಇನ್ನಷ್ಟು ಬೆಳಸಿ ಮುಂದಿನ ಪೀಳಿಗೆಯವರೆಗೆ ಹೋಗುವಂತೆ ಮಾಡುವುದು ಮಹತ್ವಪೂರ್ಣವಾಂದಂತ ವಿಚಾರವಾಗಿದೆ ಎಂದರು.
ಸಾವಿರಾರು ವರ್ಷಗಳ ಹಿಂದಿನಿಂದಲೂ ಇತಿಹಾಸ ಉಳ್ಳ ಭಾಷೆ ನಮ್ಮ ಕನ್ನಡ ಭಾಷೆಯಾಗಿದೆ. ಕನ್ನಡ ಭಾಷೆಯನ್ನು ಎಲ್ಲರೂ ಸೇರಿ ಬೆಳೆಸಬೇಕು, ಭಾಷೆಯ ಜೊತೆಗೆ ಜಾನಪದ ಕಲೆ ಹಾಗೂ ಸಂಸೃತಿಯನ್ನು ಸಹ ಮುಂದಿನ ಪೀಳಿಗೆಯವರಿಗೆ ಬೆಳೆಸಿ ಉಳಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸುಗಮಸಂಗೀತ, ಜಾನಪದ ಗೀತೆ, ಸೋಬಾನೆ ಪದ, ತತ್ವಪದ, ಗೀತಗಾಯನ, ರಂಗಗೀತೆ, ತಂಬೂರಿ, ಮೈಸೂರು ನಗಾರಿ, ಡೊಳ್ಳು , ಕಂಸಾಳೆ, ತಮಟೆವಾದನ , ಚರ್ಮವಾದ್ಯ, ಚಿಟ್ಟಿಮೇಳ ಹಾಗೂ ಸೋಮನ ಕುಣಿತ ತಂಡಗಳು ಕಲಾ ಪ್ರದರ್ಶನ ನೀಡಿದವು.
ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಬನ್ನಿಕುಪ್ಪೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಲಾ ತಂಡಗಳಿಂದ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ, ಕೈಲಾಂಚ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಮ್ಮ, ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಹೇಮಂತ್ ಮತ್ತು ಮೂರ್ತಿ ನಾಯಕ್, ಅಂಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸ್ವಾಮಿ, ರಣಧೀರ ಪಡೆ ಯುವ ರಾಜ್ಯ ಉಪಾಧ್ಯಕ್ಷ ಗೋವಿಂದರಾಜು , ದಲಿತ ಮುಂಖಡರುಗಳಾದ ವೆಂಕಟೇಶ್, ಶ್ರೀನಿವಾಸ್ ಮೂರ್ತಿ, ಹೊಂಬಾಳಯ್ಯ, ಕೇತುಹಳ್ಳಿ ಶಿವಲಿಂಗಯ್ಯ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ರಮೇಶ್, ಕಲಾಸಂಘಟಕ ಜಯಸಿಂಹ , ಕಲಾವಿದರಾದ ಪುಟ್ಟಣ್ಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಹಾಯಕ ನಿರ್ದೇಶಕ ರಮೇಶ್ ಬಾಬು ಟಿ.ಜಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »

ಬಮೂಲ್ ಕಛೇರಿಯಲ್ಲಿ ನಿರ್ದೇಶಕರು ಮತ್ತು ಬೆಂಬಲಿಗರ ನಡುವೆ ಜಟಾಪಟಿ
ಚನ್ನಪಟ್ಟಣ.ಜ.೨೭: ನಗರದಲ್ಲಿನ ಬಮೂಲ್ ಕಛೇರಿಯಲ್ಲಿ ಶುಕ್ರವಾರ ಬೆಳಿಗ್ಗೆ ಚುನಾಯಿತ ಬಮೂಲ್ ನಿರ್ದೇಶಕ ಹೆಚ್ ಸಿ ಜಯಮುತ್ತು ಮತ್ತು ಇತ್ತೀಚೆಗೆ ಸರ

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ
ಚನ್ನಪಟ್ಟಣ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ( ರಿ) ತಾಲ್ಲೂಕು ಘಟಕ ಚನ್ನಪಟ್ಟಣ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚನ್

ಪೌರಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಿ: ಡಾ.ಅವಿನಾಶ್ ಮೆನನ್
ರಾಮನಗರ, ಜ. 2: ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ಜಿಲ್ಲೆಯ ಕೆರೆಗಳನ್ನು ತುಂಬಿಸಲು ನೀರಾವರಿ ಯೋಜನೆಗಳಿಗೆ ವೇಗ: ಡಾ ಸಿ ಎನ್ ಅಶ್ವತ್ಥನಾರಾಯಣ
ರಾಮನಗರ, ಜ. 2: ಜಿಲ್ಲೆಯಲ್ಲಿರುವ 2,500 ಕೆರೆಗಳಿಗೆ ನೀರು ತುಂಬಿಸುವ ಗುರಿಯೊಂದಿಗೆ ಹಲವಾರು ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಕಾರ್ಯಗತಗೊಳಿಸಲು ಒತ್ತುಕೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿ

ವಸ್ತು, ವ್ಯಕ್ತಿ ಆರಿಸಿಕೊಳ್ಳಲು ಯೋಚಿಸುತ್ತೇವೆ ಜನಪ್ರತಿನಿಧಿ ಆರಿಸಲು ಎಡಗುತ್ತಿದ್ದೇವೆ. ನ್ಯಾ ಎಂ ಮಹೇಂದ್ರ
ಚನ್ನಪಟ್ಟಣ: ಜ:೨೫:೨೩. ಒಂದು ನಿರ್ಜೀವ, ಸಜೀವ

ಹಳೆ ದ್ವೇಷದ ಹಿನ್ನೆಲೆ. ಕಣ್ಣಿಗೆ ಖಾರದ ಪುಡಿ ಎರಚಿ, ಮಚ್ಚು ಬೀಸಿ ಕತ್ತು ಕೊಯ್ದು ಮಾರಣಾಂತಿಕ ಹಲ್ಲೆ
ಮದ್ದೂರು: ೨೪-೨೩; ಜನನಿಬಿಡ ಪ್ರದೇಶವಾದ ತಾಲೂಕು ಕಚೇರಿಯ ಆವರಣದಲ್ಲಿ, ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೋರ್ವ ತನ್ನ ದಾಯಾದಿ ಮೇಲೆ ಕಣ್ಣಿಗೆ ಖಾ

ನಗರದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ
ಚನ್ನಪಟ್ಟಣ.ಜ.೨೩: ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುರ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡ

ಉಜ್ಜನಹಳ್ಳಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ
ಚನ್ನಪಟ್ಟಣ: ಜನ-ಜಾನುವಾರುಗಳಿಗೆ ಉಪಟಳ ನೀಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಬಳಿಯ ತೋಟವೊಂದರಲ್ಲಿ ಅರಣ್

ಯಶಸ್ವಿಯಾಗಿ ಜರುಗಿದ ಶ್ರೀ ಕೆಂಗಲ್ ಲಕ್ಷ್ಮೀವೆಂಕಟೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ಜಿಲ್ಲಾಡಳಿತ ಭಾಗಿ
ಚನ್ನಪಟ್ಟಣ: ತಾಲ್ಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಡಳಿತ,

ಕೆಂಗಲ್ ಜಾತ್ರೆ ರದ್ದುಗೊಳಿಸಿದರೂ ಕಳೆಗಟ್ಟುತ್ತಿರುವ ಜಾನುವಾರುಗಳು
ಚನ್ನಪಟ್ಟಣ: ಜಾನುವಾರುಗಳಿಗೆ ಇತ್ತೀಚೆಗೆ ರಾಜ್ಯದಾದ್ಯಂತ ಚರ್ಮಗಂಟು ರೋಗ ಹರಡಿದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾಡಳಿತ ಇತಿಹಾಸ ಪ್ರಸಿದ್ಧ ಕೆಂಗ
ಪ್ರತಿಕ್ರಿಯೆಗಳು