ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ. 2700/- ಬಾಡಿಗೆ ದರ ನಿಗದಿ: ಡಾ.ಅವಿನಾಶ್ ಮೆನನ್

ರಾಮನಗರ ನ.26: ರಾಮನಗರ ಜಿಲ್ಲೆಯಲ್ಲಿ 2022-23 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 66,719 ಹೆಕ್ಚೇರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ಕಟಾವು ಹಂತದಲ್ಲಿದ್ದು ಕಟಾವು ಕಾರ್ಯ ಪ್ರಾರಂಭಗೊಂಡಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ ಮೂಲಕ ಕಟಾವು ಕೈಗೊಳ್ಳುತ್ತಿದ್ದು ಖಾಸಗಿ ರಾಗಿ ಮಾಲೀಕರು ಪ್ರತಿ ಗಂಟೆಗೆ ರೂ. 3500/- ರಿಂದ 4000/- ಗಳವರೆಗೆ ಬಾಡಿಗೆ ಹಣವನ್ನು ರೈತರಿಂದ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದಿರುತ್ತದೆ. ಅತಿವೃಷ್ಠಿ ಸಂದರ್ಭದಲ್ಲಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಪ್ರತಿ ಗಂಟೆಗೆ ರೂ. 2700/- ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿದೆ. ತಪ್ಪಿದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಅತಿವೃಷ್ಠಿ ಸಂಕಷ್ಟದ ದಿನಗಳಲ್ಲಿ ಕಟಾವು ಯಂತ್ರದ ಮಾಲೀಕರು ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಾಮನಗರ ಜಿಲ್ಲೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »

ಬಮೂಲ್ ಕಛೇರಿಯಲ್ಲಿ ನಿರ್ದೇಶಕರು ಮತ್ತು ಬೆಂಬಲಿಗರ ನಡುವೆ ಜಟಾಪಟಿ
ಚನ್ನಪಟ್ಟಣ.ಜ.೨೭: ನಗರದಲ್ಲಿನ ಬಮೂಲ್ ಕಛೇರಿಯಲ್ಲಿ ಶುಕ್ರವಾರ ಬೆಳಿಗ್ಗೆ ಚುನಾಯಿತ ಬಮೂಲ್ ನಿರ್ದೇಶಕ ಹೆಚ್ ಸಿ ಜಯಮುತ್ತು ಮತ್ತು ಇತ್ತೀಚೆಗೆ ಸರ

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ
ಚನ್ನಪಟ್ಟಣ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ( ರಿ) ತಾಲ್ಲೂಕು ಘಟಕ ಚನ್ನಪಟ್ಟಣ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚನ್

ಪೌರಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಿ: ಡಾ.ಅವಿನಾಶ್ ಮೆನನ್
ರಾಮನಗರ, ಜ. 2: ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ಜಿಲ್ಲೆಯ ಕೆರೆಗಳನ್ನು ತುಂಬಿಸಲು ನೀರಾವರಿ ಯೋಜನೆಗಳಿಗೆ ವೇಗ: ಡಾ ಸಿ ಎನ್ ಅಶ್ವತ್ಥನಾರಾಯಣ
ರಾಮನಗರ, ಜ. 2: ಜಿಲ್ಲೆಯಲ್ಲಿರುವ 2,500 ಕೆರೆಗಳಿಗೆ ನೀರು ತುಂಬಿಸುವ ಗುರಿಯೊಂದಿಗೆ ಹಲವಾರು ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಕಾರ್ಯಗತಗೊಳಿಸಲು ಒತ್ತುಕೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿ

ವಸ್ತು, ವ್ಯಕ್ತಿ ಆರಿಸಿಕೊಳ್ಳಲು ಯೋಚಿಸುತ್ತೇವೆ ಜನಪ್ರತಿನಿಧಿ ಆರಿಸಲು ಎಡಗುತ್ತಿದ್ದೇವೆ. ನ್ಯಾ ಎಂ ಮಹೇಂದ್ರ
ಚನ್ನಪಟ್ಟಣ: ಜ:೨೫:೨೩. ಒಂದು ನಿರ್ಜೀವ, ಸಜೀವ

ಹಳೆ ದ್ವೇಷದ ಹಿನ್ನೆಲೆ. ಕಣ್ಣಿಗೆ ಖಾರದ ಪುಡಿ ಎರಚಿ, ಮಚ್ಚು ಬೀಸಿ ಕತ್ತು ಕೊಯ್ದು ಮಾರಣಾಂತಿಕ ಹಲ್ಲೆ
ಮದ್ದೂರು: ೨೪-೨೩; ಜನನಿಬಿಡ ಪ್ರದೇಶವಾದ ತಾಲೂಕು ಕಚೇರಿಯ ಆವರಣದಲ್ಲಿ, ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೋರ್ವ ತನ್ನ ದಾಯಾದಿ ಮೇಲೆ ಕಣ್ಣಿಗೆ ಖಾ

ನಗರದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ
ಚನ್ನಪಟ್ಟಣ.ಜ.೨೩: ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುರ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡ

ಉಜ್ಜನಹಳ್ಳಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ
ಚನ್ನಪಟ್ಟಣ: ಜನ-ಜಾನುವಾರುಗಳಿಗೆ ಉಪಟಳ ನೀಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಬಳಿಯ ತೋಟವೊಂದರಲ್ಲಿ ಅರಣ್

ಯಶಸ್ವಿಯಾಗಿ ಜರುಗಿದ ಶ್ರೀ ಕೆಂಗಲ್ ಲಕ್ಷ್ಮೀವೆಂಕಟೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ಜಿಲ್ಲಾಡಳಿತ ಭಾಗಿ
ಚನ್ನಪಟ್ಟಣ: ತಾಲ್ಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಡಳಿತ,

ಕೆಂಗಲ್ ಜಾತ್ರೆ ರದ್ದುಗೊಳಿಸಿದರೂ ಕಳೆಗಟ್ಟುತ್ತಿರುವ ಜಾನುವಾರುಗಳು
ಚನ್ನಪಟ್ಟಣ: ಜಾನುವಾರುಗಳಿಗೆ ಇತ್ತೀಚೆಗೆ ರಾಜ್ಯದಾದ್ಯಂತ ಚರ್ಮಗಂಟು ರೋಗ ಹರಡಿದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾಡಳಿತ ಇತಿಹಾಸ ಪ್ರಸಿದ್ಧ ಕೆಂಗ
ಪ್ರತಿಕ್ರಿಯೆಗಳು