ಸಂವಿಧಾನ ನಮ್ಮೆಲ್ಲರ ಉಸಿರು ನ್ಯಾಯಾಧೀಶೆ ಶುಭಾ ಅಭಿಮತ

ಚನ್ನಪಟ್ಟಣ: ಸಂವಿಧಾನ ನಮ್ಮೆಲ್ಲರ ಉಸಿರು. ಸಂವಿಧಾನವನ್ನು ಎಲ್ಲರೂ ತಿಳಿದು ನಡೆದರೆ ಸ್ವಸ್ಥ ಸಮಾಜ ಕಟ್ಟಲು ಸಾಧ್ಯ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬುದು ಇದರ ಧ್ಯೇಯವಾಗಿದ್ದು ಸಂವಿಧಾನವನ್ನು ನಮ್ಮೆಲ್ಲರ ಜೀವನದ ಜೊತೆಗೆ ಸಮಾಜದಲ್ಲಿಯೂ ಅಳವಡಿಸಿಕೊಂಡಾಗ ಯಾವುದೇ ಅಡೆತಡೆಯಿಲ್ಲದೆ ಉತ್ತಮ ಸಮಾಜ ನಿರ್ಮಾಣದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶವನ್ನು ಮುಂಚೂಣಿಯಲ್ಲಿ ಕೊಂಡೊಯ್ಯಲು ಸಾಧ್ಯವಾಗುತ್ತದೆ ಎಂದು ನ್ಯಾಯಾಧೀಶರಾದ ಶುಭಾ ರವರು ತಿಳಿಸಿದರು.
ಅವರು ಶುಕ್ರವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲ್ಲೂಕು ಆಡಳಿತ, ಬೊಂಬೆನಾಡು ರೋಟರಿ ಸಂಸ್ಥೆ ಒಗ್ಗೂಡಿ ಸಂವಿಧಾನ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಮ್ಯಾರಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಮಾಜ ನಿಂತಿರುವುದೇ ಸಂವಿಧಾನದ ಅಡಿಪಾಯದ ಮೇಲೆ, ಸಂವಿಧಾನವನ್ನು ಎಲ್ಲರೂ ಓದಿ ತಿಳಿದುಕೊಳ್ಳಬೇಕು. ತಿಳಿದುಕೊಂಡಿರುವವರು ತಿಳಿಯದವರಿಗೆ ಅರಿವು ಮೂಡಿಸಬೇಕು. ಸಮಾಜದಲ್ಲಿ ಎಲ್ಲರೂ ಸಮಾನರೇ, ಮೇಲು ಕೀಳು ಎಂಬ ಭಾವವನ್ನು ಅಳಿಸಬೇಕು. ಹಿರಿ-ಕಿರಿಯರೆನ್ನದೆ ಎಲ್ಲರೂ ಸಮಾನರೆನ್ನುವ ಭಾವನೆ ಮೂಡಿಸಿ, ಅದೇ ರೀತಿಯಲ್ಲಿ ನಡೆಯಲು ಅವಕಾಶ ಮಾಡಿಕೊಟ್ಟಾಗ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಿಸಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ಮತ್ತೋರ್ವ ನ್ಯಾಯಾಧೀಶರಾದ ಮಹೇಂದ್ರ ಎಂ ರವರು ಮಾತನಾಡಿ, ಘನ ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ತಾಲ್ಲೂಕಿನಾದ್ಯಂತ ತಿಂಗಳಕಾಲ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಶಾಲಾಕಾಲೇಜುಗಳು, ವಿದ್ಯಾರ್ಥಿ ನಿಲಯಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ಹಮ್ಮಿಕೊಳ್ಳುವ ಮೂಲಕ ಸಂವಿಧಾನದ ಅರಿವನ್ನು ಮೂಡಿಸಿದ್ದೇವೆ. ಪ್ರಜಾಪ್ರಭುತ್ವ ಎಂದರೇನೆಂದು ತಿಳಿಸಿಕೊಟ್ಟಿದ್ದೇವೆ. ಇದಕ್ಕೆ ಸಹಕಾರ ನೀಡಿದ ನ್ಯಾಯಾಧೀಶರುಗಳು, ವಕೀಲರುಗಳು, ಸಂಘಸಂಸ್ಥೆಗಳು ಹಾಗೂ ಶಾಲಾಕಾಲೇಜಿನವರಿಗೆ ವಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಭೋಜೇಗೌಡ ಮಾತನಾಡಿ ಸಂವಿಧಾನದ ಅರಿವು-ನೆರವು ಕಾರ್ಯಕ್ರಮದಲ್ಲಿ ಇಂದು ಮಹತ್ವದ್ದಾಗಿದೆ. ನ್ಯಾಯಾಧೀಶರು, ವಕೀಲರು ಅಷ್ಟೇ ಅಲ್ಲದೆ, ಸಂಘಸಂಸ್ಥೆಗಳು, ಸಾರ್ವಜನಿಕರು ಸಾಥ್ ನೀಡಿ ಇಂದಿನ ಮ್ಯಾರಥಾನ್ ಹಾಗೂ ಸಮಾರೋಪ ಸಮಾರಂಭವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಕ್ಕೆ ಸರ್ವರಿಗೂ ವಂದನೆ ಸಲ್ಲಿಸಿದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ್ ರವರು ಸಂವಿಧಾನ ಎಂದರೇನು ಎಂದು ತಿಳಿದುಕೊಳ್ಳಬೇಕೆಂದರೆ ಸಂವಿಧಾನವನ್ನು ಓದಿ ತಿಳಿದುಕೊಳ್ಳಬೇಕು. ಸಂವಿಧಾನ ಬರುವ ಮುಂಚೆ ಮತ್ತು ಬಂದ ನಂತರದ ವ್ಯತ್ಯಾಸಗಳನ್ನು ತಿಳಿದುಕೊಂಡರೆ ಮಾತ್ರ ಅದರ ಅರಿವು ಆಗುತ್ತದೆ. ಇಲ್ಲವಾದರೆ ಇದರ ಅರ್ಥವೇ ಅನರ್ಥವಾಗುತ್ತದೆ. ಸಂವಿಧಾನವನ್ನು ಅರ್ಥೈಸಿಕೊಂಡಾಗ ಮಾತ್ರ ಸ್ವಸ್ಥ ಸಮಾಜ ಕಟ್ಟಲು ಸಾಧ್ಯ ಎಂದರು.
ನಗರದ ನ್ಯಾಯಾಲಯದ ಆವರಣದಿಂದ ಆರಂಭವಾದ ಮ್ಯಾರಥಾನ್ ಹೆದ್ದಾರಿ ಮೂಲಕ ಗಾಂಧಿಭವನದ ಮುಂಭಾಗ ಇರುವ ಕುವೆಂಪು ಮತ್ತು ಅಂಬೇಡ್ಕರ್ ರವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಅಪ್ರಮೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಅರ್ಚಕರ ಮೂಲಕ ಅಂಬೆಗಾಲು ಶ್ರೀಕೃಷ್ಣ ನ ಬಗ್ಗೆ ಮಾಹಿತಿ ಪಡೆದುಕೊಂಡರು. ವೇದಿಕೆ ಕಾರ್ಯಕ್ರಮದಲ್ಲಿ ಮತ್ತೋರ್ವ ನ್ಯಾಯಾಧೀಶರಾದ ಉಷಾರಾಣಿ, ತಹಶಿಲ್ದಾರ್ ಸುದರ್ಶನ್, ಬೊಂಬೆನಾಡು ರೋಟರಿ ಸಂಸ್ಥೆಯ ಶ್ರೀನಿವಾಸ್ ಮತ್ತು ಪದಾಧಿಕಾರಿಗಳು, ವಕೀಲರ ಸಂಘದ ಪದಾಧಿಕಾರಿಗಳು, ವಕೀಲರುಗಳು ಭಾಗವಹಿಸಿದ್ದರು
ಗೋ ರಾ ಶ್ರೀನಿವಾಸ...
ಮೊ:9845856139
Recent news in ramanagara »

ಬಮೂಲ್ ಕಛೇರಿಯಲ್ಲಿ ನಿರ್ದೇಶಕರು ಮತ್ತು ಬೆಂಬಲಿಗರ ನಡುವೆ ಜಟಾಪಟಿ
ಚನ್ನಪಟ್ಟಣ.ಜ.೨೭: ನಗರದಲ್ಲಿನ ಬಮೂಲ್ ಕಛೇರಿಯಲ್ಲಿ ಶುಕ್ರವಾರ ಬೆಳಿಗ್ಗೆ ಚುನಾಯಿತ ಬಮೂಲ್ ನಿರ್ದೇಶಕ ಹೆಚ್ ಸಿ ಜಯಮುತ್ತು ಮತ್ತು ಇತ್ತೀಚೆಗೆ ಸರ

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ
ಚನ್ನಪಟ್ಟಣ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ( ರಿ) ತಾಲ್ಲೂಕು ಘಟಕ ಚನ್ನಪಟ್ಟಣ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚನ್

ಪೌರಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಿ: ಡಾ.ಅವಿನಾಶ್ ಮೆನನ್
ರಾಮನಗರ, ಜ. 2: ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ಜಿಲ್ಲೆಯ ಕೆರೆಗಳನ್ನು ತುಂಬಿಸಲು ನೀರಾವರಿ ಯೋಜನೆಗಳಿಗೆ ವೇಗ: ಡಾ ಸಿ ಎನ್ ಅಶ್ವತ್ಥನಾರಾಯಣ
ರಾಮನಗರ, ಜ. 2: ಜಿಲ್ಲೆಯಲ್ಲಿರುವ 2,500 ಕೆರೆಗಳಿಗೆ ನೀರು ತುಂಬಿಸುವ ಗುರಿಯೊಂದಿಗೆ ಹಲವಾರು ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಕಾರ್ಯಗತಗೊಳಿಸಲು ಒತ್ತುಕೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿ

ವಸ್ತು, ವ್ಯಕ್ತಿ ಆರಿಸಿಕೊಳ್ಳಲು ಯೋಚಿಸುತ್ತೇವೆ ಜನಪ್ರತಿನಿಧಿ ಆರಿಸಲು ಎಡಗುತ್ತಿದ್ದೇವೆ. ನ್ಯಾ ಎಂ ಮಹೇಂದ್ರ
ಚನ್ನಪಟ್ಟಣ: ಜ:೨೫:೨೩. ಒಂದು ನಿರ್ಜೀವ, ಸಜೀವ

ಹಳೆ ದ್ವೇಷದ ಹಿನ್ನೆಲೆ. ಕಣ್ಣಿಗೆ ಖಾರದ ಪುಡಿ ಎರಚಿ, ಮಚ್ಚು ಬೀಸಿ ಕತ್ತು ಕೊಯ್ದು ಮಾರಣಾಂತಿಕ ಹಲ್ಲೆ
ಮದ್ದೂರು: ೨೪-೨೩; ಜನನಿಬಿಡ ಪ್ರದೇಶವಾದ ತಾಲೂಕು ಕಚೇರಿಯ ಆವರಣದಲ್ಲಿ, ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೋರ್ವ ತನ್ನ ದಾಯಾದಿ ಮೇಲೆ ಕಣ್ಣಿಗೆ ಖಾ

ನಗರದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ
ಚನ್ನಪಟ್ಟಣ.ಜ.೨೩: ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುರ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡ

ಉಜ್ಜನಹಳ್ಳಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ
ಚನ್ನಪಟ್ಟಣ: ಜನ-ಜಾನುವಾರುಗಳಿಗೆ ಉಪಟಳ ನೀಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಬಳಿಯ ತೋಟವೊಂದರಲ್ಲಿ ಅರಣ್

ಯಶಸ್ವಿಯಾಗಿ ಜರುಗಿದ ಶ್ರೀ ಕೆಂಗಲ್ ಲಕ್ಷ್ಮೀವೆಂಕಟೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ಜಿಲ್ಲಾಡಳಿತ ಭಾಗಿ
ಚನ್ನಪಟ್ಟಣ: ತಾಲ್ಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಡಳಿತ,

ಕೆಂಗಲ್ ಜಾತ್ರೆ ರದ್ದುಗೊಳಿಸಿದರೂ ಕಳೆಗಟ್ಟುತ್ತಿರುವ ಜಾನುವಾರುಗಳು
ಚನ್ನಪಟ್ಟಣ: ಜಾನುವಾರುಗಳಿಗೆ ಇತ್ತೀಚೆಗೆ ರಾಜ್ಯದಾದ್ಯಂತ ಚರ್ಮಗಂಟು ರೋಗ ಹರಡಿದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾಡಳಿತ ಇತಿಹಾಸ ಪ್ರಸಿದ್ಧ ಕೆಂಗ
ಪ್ರತಿಕ್ರಿಯೆಗಳು