ಹಂಪಿ ಕನ್ನಡ ವಿವಿಯಿಂದ ಶಿಕ್ಷಕಿ ಎಂ.ಕಮಲಮ್ಮ ಅವರಿಗೆ ಪಿಎಚ್.ಡಿ. ಪದವಿ

ರಾಮನಗರ, ಡಿ.3- ಶಿಕ್ಷಕಿ ಎಂ.ಕಮಲಮ್ಮ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಪ್ರಸ್ತುತ ಪಡಿಸಿದ "ಮೈಸೂರು ಕರ್ನಾಟಕ ವೃತ್ತಿ ರಂಗಭೂಮಿಯಲ್ಲಿ ಮಹಿಳಾ ಅಸ್ಮಿತೆಯ ಹುಡುಕಾಟ" ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪದವಿ ಲಭಿಸಿದೆ.
ಇವರು ಮೈಸೂರಿನ ಕುವೆಂಪು ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಎಚ್.ಪಿ.ಗೀತಾ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡನೆ ಮಾಡಿದ್ದಾರೆ.
ಮಂಡ್ಯದ ಕರ್ನಾಟಕ ಸಂಘದ ಎಂ.ಎಲ್. ಶ್ರೀಕಂಠೇಶಗೌಡ ಸಂಶೋಧನಾ ಕೇಂದ್ರದಲ್ಲಿ ಅಧ್ಯಯನ ಸಂಶೋದನೆ ಕೈಗೊಂಡಿದ್ದರು.
ಇವರು ಪ್ರಸ್ತುತ ರಾಮನಗರದ ಮೊರಾರ್ಜಿ ವಸತಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೊತ್ತರ ಪದವಿ ಪಡೆದಿದ್ದು, ರಾಜ್ಯಕ್ಕೆ 5 ನೇ ರ್ಯಾಂಕ್ ಪಡೆದಿದ್ದರು.
"ಶಿವರಾಮ ಕಾಡನಕುಪ್ಪೆ ಅವರ
ಸಾಹಿತ್ಯ" ಕುರಿತ ಅಧ್ಯಯನ ಮಂಡನೆಗೆ 2013 ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಎಂ.ಫಿಲ್ ಪದವಿ ಪಡೆದುಕೊಂಡಿದ್ದಾರೆ.
ಇವರು ಇದೀಗ ಮಹಿಳಾ ರಂಗಭೂಮಿಯ ಬಗ್ಗೆ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗಾ ಸೇರಿದಂತೆ ಹಳೆ ಮೈಸೂರು ಪ್ರದೇಶದ ಜಿಲ್ಲೆಗಳಲ್ಲಿನ ಮಹಿಳಾ ವೃತ್ತಿ ರಂಗಭೂಮಿ ಬಗ್ಗೆ ಕಳೆದ ಆರು ವರ್ಷಗಳಿಂದ ಮೈಸೂರಿನ ಕುವೆಂಪು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಎಚ್.ಪಿ.ಗೀತಾ ಅವರ ಮಾರ್ಗದರ್ಶನದಲ್ಲಿ "ಮೈಸೂರು ಕರ್ನಾಟಕ ವೃತ್ತಿ ರಂಗಭೂಮಿಯಲ್ಲಿ ಮಹಿಳಾ ಅಸ್ಮಿತೆಯ ಹುಡುಕಾಟ" ಎಂಬ ವಿಷಯದ ಮೇಲೆ ಸಮಗ್ರ ಅಧ್ಯಯನ ಮತ್ತು ಕ್ಷೇತ್ರ ಕಾರ್ಯ ನಡೆಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »

ಬಮೂಲ್ ಕಛೇರಿಯಲ್ಲಿ ನಿರ್ದೇಶಕರು ಮತ್ತು ಬೆಂಬಲಿಗರ ನಡುವೆ ಜಟಾಪಟಿ
ಚನ್ನಪಟ್ಟಣ.ಜ.೨೭: ನಗರದಲ್ಲಿನ ಬಮೂಲ್ ಕಛೇರಿಯಲ್ಲಿ ಶುಕ್ರವಾರ ಬೆಳಿಗ್ಗೆ ಚುನಾಯಿತ ಬಮೂಲ್ ನಿರ್ದೇಶಕ ಹೆಚ್ ಸಿ ಜಯಮುತ್ತು ಮತ್ತು ಇತ್ತೀಚೆಗೆ ಸರ

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ
ಚನ್ನಪಟ್ಟಣ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ( ರಿ) ತಾಲ್ಲೂಕು ಘಟಕ ಚನ್ನಪಟ್ಟಣ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚನ್

ಪೌರಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಿ: ಡಾ.ಅವಿನಾಶ್ ಮೆನನ್
ರಾಮನಗರ, ಜ. 2: ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ಜಿಲ್ಲೆಯ ಕೆರೆಗಳನ್ನು ತುಂಬಿಸಲು ನೀರಾವರಿ ಯೋಜನೆಗಳಿಗೆ ವೇಗ: ಡಾ ಸಿ ಎನ್ ಅಶ್ವತ್ಥನಾರಾಯಣ
ರಾಮನಗರ, ಜ. 2: ಜಿಲ್ಲೆಯಲ್ಲಿರುವ 2,500 ಕೆರೆಗಳಿಗೆ ನೀರು ತುಂಬಿಸುವ ಗುರಿಯೊಂದಿಗೆ ಹಲವಾರು ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಕಾರ್ಯಗತಗೊಳಿಸಲು ಒತ್ತುಕೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿ

ವಸ್ತು, ವ್ಯಕ್ತಿ ಆರಿಸಿಕೊಳ್ಳಲು ಯೋಚಿಸುತ್ತೇವೆ ಜನಪ್ರತಿನಿಧಿ ಆರಿಸಲು ಎಡಗುತ್ತಿದ್ದೇವೆ. ನ್ಯಾ ಎಂ ಮಹೇಂದ್ರ
ಚನ್ನಪಟ್ಟಣ: ಜ:೨೫:೨೩. ಒಂದು ನಿರ್ಜೀವ, ಸಜೀವ

ಹಳೆ ದ್ವೇಷದ ಹಿನ್ನೆಲೆ. ಕಣ್ಣಿಗೆ ಖಾರದ ಪುಡಿ ಎರಚಿ, ಮಚ್ಚು ಬೀಸಿ ಕತ್ತು ಕೊಯ್ದು ಮಾರಣಾಂತಿಕ ಹಲ್ಲೆ
ಮದ್ದೂರು: ೨೪-೨೩; ಜನನಿಬಿಡ ಪ್ರದೇಶವಾದ ತಾಲೂಕು ಕಚೇರಿಯ ಆವರಣದಲ್ಲಿ, ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೋರ್ವ ತನ್ನ ದಾಯಾದಿ ಮೇಲೆ ಕಣ್ಣಿಗೆ ಖಾ

ನಗರದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ
ಚನ್ನಪಟ್ಟಣ.ಜ.೨೩: ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುರ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡ

ಉಜ್ಜನಹಳ್ಳಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ
ಚನ್ನಪಟ್ಟಣ: ಜನ-ಜಾನುವಾರುಗಳಿಗೆ ಉಪಟಳ ನೀಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಬಳಿಯ ತೋಟವೊಂದರಲ್ಲಿ ಅರಣ್

ಯಶಸ್ವಿಯಾಗಿ ಜರುಗಿದ ಶ್ರೀ ಕೆಂಗಲ್ ಲಕ್ಷ್ಮೀವೆಂಕಟೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ಜಿಲ್ಲಾಡಳಿತ ಭಾಗಿ
ಚನ್ನಪಟ್ಟಣ: ತಾಲ್ಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಡಳಿತ,

ಕೆಂಗಲ್ ಜಾತ್ರೆ ರದ್ದುಗೊಳಿಸಿದರೂ ಕಳೆಗಟ್ಟುತ್ತಿರುವ ಜಾನುವಾರುಗಳು
ಚನ್ನಪಟ್ಟಣ: ಜಾನುವಾರುಗಳಿಗೆ ಇತ್ತೀಚೆಗೆ ರಾಜ್ಯದಾದ್ಯಂತ ಚರ್ಮಗಂಟು ರೋಗ ಹರಡಿದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾಡಳಿತ ಇತಿಹಾಸ ಪ್ರಸಿದ್ಧ ಕೆಂಗ
ಪ್ರತಿಕ್ರಿಯೆಗಳು