Tel: 7676775624 | Mail: info@yellowandred.in

Language: EN KAN

    Follow us :


ನಗರದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ

Posted date: 23 Jan, 2023

Powered by:     Yellow and Red

ನಗರದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ

ಚನ್ನಪಟ್ಟಣ.ಜ.೨೩: ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುರ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಗಲು ವೇಳೆಯಲ್ಲಿ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದು ಸಾರಿಗೆ ಬಸ್‌ನಲ್ಲಿ ಪ್ರಯಾಣ ಮಾಡುವ ಸಾರ್ವಜನಿಕರಿಂದ ಮೊಬೈಲ್, ಜೇಬು ಕಳ್ಳತನ ಮಾಡುತ್ತಿದ್ದ ಹಾಗೂ ರಾತ್ರಿ ವೇಳೆ ಲಾರಿಗಳನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳನ್ನು ತೋರಿಸಿ ರಾಬರಿ ಮಾಡುತ್ತಿದ್ದ ಖತರ್‌ನಾಕ್ ಕಳ್ಳರ ಗುಂಪೊಂದನ್ನು ಚನ್ನಪಟ್ಟಣ ಪುರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.


ಮೈಸೂರಿನ ಉದಯಗಿರಿ ನಿವಾಸಿಗಳಾದ ಇಮ್ರಾನ್ ಪಾಷ, ತೌಶಿಫ್, ನಿಶಾದ್ ಪಾಷ, ನದೀಮ್ ಹಾಗೂ ಚಾಂದ್ ಪಾಷ ಎಂಬುವವರು ಬಂಧಿತ ಆರೋಪಿಗಳಾಗಿದ್ದಾರೆ.


ಖಚಿತ ಮಾಹಿತಿ ಮೇರೆಗೆ ಚನ್ನಪಟ್ಟಣ ಬಸ್ ನಿಲ್ದಾಣಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಮೊಬೈಲ್ ಕದಿಯುತ್ತಿದ್ದ ಖದೀಮರ ಸೆರೆ ಹಿಡಿದಿದ್ದಾರೆ. ಪೊಲೀಸರನ್ನು ನೋಡಿದ ಕೂಡಲೇ ನಾಲ್ವರು ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರ ಕಾರ್ಯಾಚರಣೆ ವೇಳೆ ಇಮ್ರಾನ್ ಪಾಷ ಸ್ಥಳದಲ್ಲೇ ಸಿಕ್ಕಿಬಿದ್ದಿದ್ದು,  ತೌಶಿಫ್, ನಿಶಾದ್ ಪಾಷ, ನದೀಮ್ ಹಾಗೂ ಚಾಂದ್ ಪಾಷ ಪರಾರಿಯಾಗಿದ್ದರು.

ಅವರನ್ನೂ ಸಹ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ನಾಲ್ಕು ಮೊಬೈಲ್‌ಗಳನ್ನ ವಶಕ್ಕೆ ಪಡೆಯಲಾಗಿದೆ.


 ಈ ಖತರ್ನಾಕ್ ಕಳ್ಳರು ಅಧಿಕ ಜನಸ್ತೋಮವಿದ್ದ ಬಸ್ಸುಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಬಸ್‌ನಲ್ಲಿ ಮೊಬೈಲ್ ಕಳ್ಳತನ ಮಾಡಿದ ಕೂಡಲೇ ಮಾರುತಿ ಜೆನ್ ಕಾರಿನಲ್ಲಿ ಪರಾರಿಯಾಗುತ್ತಿದ್ದರು. ಜೊತೆಗೆ ರಾತ್ರಿ ವೇಳೆ ಲಾರಿ, ಟ್ರಕ್‌ಗಳನ್ನ ಅಡ್ಡಗಟ್ಟಿ, ಮಚ್ಚು, ಹಾಗೂ ಚಾಕು ತೋರಿಸಿ ಹಣ, ಮೊಬೈಲ್ ಕಿತ್ತುಕೊಳ್ಳುತ್ತಿದ್ದರು. ಬೆಂಗಳೂರು, ರಾಮನಗರ, ಮಂಡ್ಯ, ಚನ್ನಪಟ್ಟಣ ಹೀಗೆ ಹಲವಾರು ಕಡೆ ಕೃತ್ಯ ಎಸಗಿದ್ದರು ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಬಮೂಲ್ ಕಛೇರಿಯಲ್ಲಿ ನಿರ್ದೇಶಕರು ಮತ್ತು ಬೆಂಬಲಿಗರ ನಡುವೆ ಜಟಾಪಟಿ
ಬಮೂಲ್ ಕಛೇರಿಯಲ್ಲಿ ನಿರ್ದೇಶಕರು ಮತ್ತು ಬೆಂಬಲಿಗರ ನಡುವೆ ಜಟಾಪಟಿ

ಚನ್ನಪಟ್ಟಣ.ಜ.೨೭: ನಗರದಲ್ಲಿನ ಬಮೂಲ್ ಕಛೇರಿಯಲ್ಲಿ ಶುಕ್ರವಾರ ಬೆಳಿಗ್ಗೆ ಚುನಾಯಿತ ಬಮೂಲ್ ನಿರ್ದೇಶಕ ಹೆಚ್ ಸಿ ಜಯಮುತ್ತು ಮತ್ತು ಇತ್ತೀಚೆಗೆ ಸರ

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ
ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ

ಚನ್ನಪಟ್ಟಣ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ( ರಿ) ತಾಲ್ಲೂಕು ಘಟಕ ಚನ್ನಪಟ್ಟಣ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚನ್

ಪೌರಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಿ: ಡಾ.ಅವಿನಾಶ‍್ ಮೆನನ್
ಪೌರಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಿ: ಡಾ.ಅವಿನಾಶ‍್ ಮೆನನ್

ರಾಮನಗರ, ಜ. 2:     ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.


<

ಜಿಲ್ಲೆಯ ಕೆರೆಗಳನ್ನು ತುಂಬಿಸಲು ನೀರಾವರಿ ಯೋಜನೆಗಳಿಗೆ ವೇಗ: ಡಾ ಸಿ ಎನ್ ಅಶ್ವತ್ಥನಾರಾಯಣ
ಜಿಲ್ಲೆಯ ಕೆರೆಗಳನ್ನು ತುಂಬಿಸಲು ನೀರಾವರಿ ಯೋಜನೆಗಳಿಗೆ ವೇಗ: ಡಾ ಸಿ ಎನ್ ಅಶ್ವತ್ಥನಾರಾಯಣ

ರಾಮನಗರ, ಜ. 2: ಜಿಲ್ಲೆಯಲ್ಲಿರುವ 2,500 ಕೆರೆಗಳಿಗೆ ನೀರು ತುಂಬಿಸುವ ಗುರಿಯೊಂದಿಗೆ ಹಲವಾರು ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಕಾರ್ಯಗತಗೊಳಿಸಲು ಒತ್ತುಕೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿ

ಹಳೆ ದ್ವೇಷದ ಹಿನ್ನೆಲೆ. ಕಣ್ಣಿಗೆ ಖಾರದ ಪುಡಿ ಎರಚಿ, ಮಚ್ಚು ಬೀಸಿ ಕತ್ತು ಕೊಯ್ದು ಮಾರಣಾಂತಿಕ ಹಲ್ಲೆ
ಹಳೆ ದ್ವೇಷದ ಹಿನ್ನೆಲೆ. ಕಣ್ಣಿಗೆ ಖಾರದ ಪುಡಿ ಎರಚಿ, ಮಚ್ಚು ಬೀಸಿ ಕತ್ತು ಕೊಯ್ದು ಮಾರಣಾಂತಿಕ ಹಲ್ಲೆ

ಮದ್ದೂರು: ೨೪-೨೩; ಜನನಿಬಿಡ ಪ್ರದೇಶವಾದ ತಾಲೂಕು ಕಚೇರಿಯ ಆವರಣದಲ್ಲಿ, ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೋರ್ವ ತನ್ನ ದಾಯಾದಿ ಮೇಲೆ ಕಣ್ಣಿಗೆ ಖಾ

ನಗರದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ
ನಗರದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ

ಚನ್ನಪಟ್ಟಣ.ಜ.೨೩: ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುರ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡ

ಉಜ್ಜನಹಳ್ಳಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ
ಉಜ್ಜನಹಳ್ಳಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಚನ್ನಪಟ್ಟಣ: ಜನ-ಜಾನುವಾರುಗಳಿಗೆ ಉಪಟಳ ನೀಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಬಳಿಯ ತೋಟವೊಂದರಲ್ಲಿ ಅರಣ್

ಯಶಸ್ವಿಯಾಗಿ ಜರುಗಿದ ಶ್ರೀ ಕೆಂಗಲ್ ಲಕ್ಷ್ಮೀವೆಂಕಟೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ಜಿಲ್ಲಾಡಳಿತ ಭಾಗಿ
ಯಶಸ್ವಿಯಾಗಿ ಜರುಗಿದ ಶ್ರೀ ಕೆಂಗಲ್ ಲಕ್ಷ್ಮೀವೆಂಕಟೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ಜಿಲ್ಲಾಡಳಿತ ಭಾಗಿ

ಚನ್ನಪಟ್ಟಣ: ತಾಲ್ಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಡಳಿತ,

ಕೆಂಗಲ್ ಜಾತ್ರೆ ರದ್ದುಗೊಳಿಸಿದರೂ ಕಳೆಗಟ್ಟುತ್ತಿರುವ ಜಾನುವಾರುಗಳು
ಕೆಂಗಲ್ ಜಾತ್ರೆ ರದ್ದುಗೊಳಿಸಿದರೂ ಕಳೆಗಟ್ಟುತ್ತಿರುವ ಜಾನುವಾರುಗಳು

ಚನ್ನಪಟ್ಟಣ: ಜಾನುವಾರುಗಳಿಗೆ ಇತ್ತೀಚೆಗೆ ರಾಜ್ಯದಾದ್ಯಂತ ಚರ್ಮಗಂಟು ರೋಗ ಹರಡಿದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾಡಳಿತ ಇತಿಹಾಸ ಪ್ರಸಿದ್ಧ ಕೆಂಗ

Top Stories »  


Top ↑