Tel: 7676775624 | Mail: info@yellowandred.in

Language: EN KAN

    Follow us :


ಶಾಲಾ ಸಬಲೀಕರಣ ಸಮಿತಿ ವರದಿಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಅಳವಡಿಸಲು ಒತ್ತಾಯ

Posted date: 07 Apr, 2018

Powered by:     Yellow and Red

ಶಾಲಾ ಸಬಲೀಕರಣ ಸಮಿತಿ ವರದಿಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಅಳವಡಿಸಲು ಒತ್ತಾಯ

ರಾಮನಗರ : ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸರ್ಕಾರಕ್ಕೆ ಸಲ್ಲಿಸಿರುವ  ‘ಶಾಲಾ ಸಬಲೀಕರಣ ಸಮಿತಿ ವರದಿ’ಯನ್ನು ಅನುಷ್ಠಾನಗೊಳಿಸುವ ನಿರ್ಣಯನ್ನು ಅಳವಡಿಸಿಕೊಳ್ಳಬೇಕು ಎಂದು ಸಮಾನ ಶಿಕ್ಷಣಕ್ಕಾಗಿ ನಾಗರಿಕರ ವೇದಿಕೆ ಒತ್ತಾಯಿಸಿದೆ. 

    ರಾಮನಗರದ ಚೈತನ್ಯ ಭವನದಲ್ಲಿ ಸಮಾನ ಶಿಕ್ಷಣಕ್ಕಾಗಿ ನಾಗರಿಕರ ವೇದಿಕೆ ವತಿಯಿಂದ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ಶಿಕ್ಷಣ ಎಲ್ಲಾ ಮಕ್ಕಳ ಮೂಲಭೂತ ಹಕ್ಕಾಗಿದೆ. ಅದನ್ನು ಸಾಕಾರಗೊಳಿಸುವುದು ಸರ್ಕಾರದ ಕರ್ತವ್ಯವಾಗಿದೆ. ಸಂವಿಧಾನದ ಆಶಯದಂತೆ ದೇಶದ 14 ವರ್ಷದವರೆಗಿನ ಎಲ್ಲಾ ಮಕ್ಕಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಸರ್ಕಾರ ನೀಡಬೇಕು ಎಂದು ಒತ್ತಾಯಿಸಲಾಯಿತು. 

    ಸರ್ಕಾರ ಸಾರ್ವಜನಿಕ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ರಾಜ್ಯದ ಅಭಿವೃದ್ಧಿಯ ಭಾಗವೆಂದು ಪರಿಗಣಿಸಿ, ಅಗತ್ಯ ಸಂಪನ್ಮೂಲ ಹಾಗೂ ಅನುದಾನವನ್ನು ಮೀಸಲಿಡದೆ ಇರುವುದರಿಂದ ಸರ್ಕಾರಿ ಶಾಲೆಗಳು ತನ್ನ ಗುಣಮಟ್ಟವನ್ನು ಕಾಯ್ದುಕೊಳ್ಳಲು  ಸಾಧ್ಯವಾಗುತ್ತಿಲ್ಲ. ಎಲ್ಲಾ ಮಕ್ಕಳಿಗೂ ಗುಣಮಟ್ಟದ  ಸಮಾನ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಸಾಮಾಜಿಕ ನ್ಯಾಯದ ತಳಹದಿಯಲ್ಲಿ ಕಾರ್ಯಪ್ರವೃತ್ತರಾಗಬೇಕು.

    ಮೂರು ವರ್ಷದ ಮಕ್ಕಳ ಪೋಷಣೆ ಹಾಗೂ ಆರೈಕೆಗೆ ಪೂರಕವಾದ ವ್ಯವಸ್ಥೆ, ನಾಲ್ಕು ವರ್ಷದಿಂದ ಆರು ವರ್ಷಗಳಿಗೆ ಶಾಲಾ ಪೂರ್ವ ಶಿಕ್ಷಣ ಹಾಗೂ ಒಂದರಿಂದ ನಾಲ್ಕನೇ ತರಗತಿಯ ಎಲ್ಲಾ ಮಕ್ಕಳಿಗೆ ಉಚಿತ, ಕಡ್ಡಾಯ ಪ್ರಾಥಮಿಕ ಶಿಕ್ಷಣವನ್ನು ಗುಣಾತ್ಮಕವಾಗಿ ಶಿಕ್ಷಣ ನೀಡಬೇಕು.

    ಐದರಿಂದ ಪಿಯುಸಿ ವರೆಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಸಲುವಾಗಿ ಗ್ರಾಮ ಪಂಚಾಯಿತಿ, ವಾರ್ಡ್‌ ಮಟ್ಟದಲ್ಲಿ ಕೇಂದ್ರೀಯ ವಿದ್ಯಾಶಾಲೆಗಳ ಗುಣಮಟ್ಟಕ್ಕೆ ಅನುಸಾರವಾಗಿರುವಂತೆ ಸುಸಜ್ಜಿತ ಸಾರ್ವಜನಿಕ ಸರ್ಕಾರಿ ಶಾಲೆಗಳನ್ನು ಸ್ಥಾಪಿಸಬೇಕು. ಪ್ರೌಢಶಾಲಾ ಹಂತದಲ್ಲಿ ಮೊದಲ ಅಥವಾ ಎರಡನೆಯ ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯವಾಗಬೇಕು.

    ಆರ್‌ಟಿಇ ಕಾಯ್ದೆಯನ್ನು ಖಾಸಗಿ ಶಾಲೆಗಳ ಸಾಮಾಜಿಕ ಹೊಣೆಗಾರಿಕೆ ಕಾಯ್ದೆ ಎಂದು ತಿದ್ದುಪಡಿ ಮಾಡಿ ಖಾಸಗಿ ಶಾಲೆಗಳಲ್ಲಿ ಹಿಂದುಳಿದ ಬಡವರ್ಗದ ಮಕ್ಕಳಿಗೆ ಅವರ ವಾರ್ಷಿಕ ಪ್ರವೇಶಾವಕಾಶಗಳ ಶೇ 25 ರಷ್ಟನ್ನು ಮೀಸಲಿಡಬೇಕು. ಜತೆಗೆ ಆರ್‌ಟಿಇ ಗೆ ಮೀಸಲಿರಿಸಿದ ನಿಧಿಯನ್ನು ಗ್ರಾಮೀಣ ಶಾಲಾ ಮಕ್ಕಳ ಅಭಿವೃದ್ಧಿಗೆ ಮೀಸಲಿಡಬೇಕು. 

    ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ. ಇದಿರಂದ ಪೋಷಕರು ಖಾಸಗಿ ಶಾಲೆಗಳತ್ತ ಒಲವು ತೋರುತ್ತಿದ್ದಾರೆ. ಸರ್ಕಾರ ಕೂಡಲೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟವನ್ನು ಹೆಚ್ಚಿಸಬೇಕು. ಇಲ್ಲದಿದ್ದರೆ ಸರ್ಕಾರಿ ಶಾಲೆಗಳ ಮುಚ್ಚುವಿಕೆ ಇನ್ನೂ ಹೆಚ್ಚಾಗುತ್ತದೆ. 

    ಈಗ ಅಸಮಾನತೆಯ ಶಿಕ್ಷಣ ದೊರೆಯುತ್ತಿದೆ. ಇದರಿಂದ ಸಂವಿಧಾನದ ಆಶಯಕ್ಕೆ ಧಕ್ಕೆಯಾಗುತ್ತಿದೆ. ಜನರು ಜಾಗೃತಿಯಾದರೆ ಮಾತ್ರ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ.

    ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆಯುತ್ತಿದ್ದರೂ ನಾವು ಈಗಲೂ ಮೂಲಭೂತ ಸೌಕರ್ಯಗಳನ್ನು ಕೊಡಿ ಎಂದು ಕೇಳುತ್ತಲೆ ಇದ್ದೇವೆ. ಸರ್ಕಾರ ಈಗಲಾದರೂ ಖಾಸಗಿ ಶಾಲೆಗಳನ್ನು ತೆರೆಯಲು ಅನುಮತಿ ನೀಡುವುದನ್ನು ನಿಲ್ಲಿಸಬೇಕು.

    ಸಭೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಸು.ತ.ರಾಮೇಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಸಿಂ.ಲಿಂ. ನಾಗರಾಜ್‌, ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷೆ ಅನಸೂಯಮ್ಮ, ಹಿರಿಯ ಹೋರಾಟಗಾರ ರಾ.ಸಿ. ದೇವರಾಜು, ಸಮಾನ ಶಿಕ್ಷಣಕ್ಕಾಗಿ ನಾಗರಿಕರ ವೇದಿಕೆಯ ಸಂಚಾಲಕಿ ನಾಗರತ್ನ ಬಂಜಗೆರೆ, ಶೋಭಾ, ಎಸ್ ಡಿಎಂಸಿ ಸಮನ್ವಯ ವೇದಿಕೆಯ ಜಿಲ್ಲಾ ಅಧ್ಯಕ್ಷ ಬಿ. ಗೋಪಾಲ್, ತಾಲ್ಲೂಕು ಅಧ್ಯಕ್ಷ ಜಿ. ಉಮೇಶ್, ಡಿಎಸ್‌್ಎಸ್ ಜಿಲ್ಲಾ ಅಧ್ಯಕ್ಷ ಗೋವಿಂದರಾಜು ಕೊತ್ತೀಪುರ, ಮುಖಂಡರಾದ ಗಂಗಾಧರ್, ರಾಜು ಮುಂತಾದವರು ಪಾಲ್ಗೊಂಡಿದ್ದರು. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑