Tel: 7676775624 | Mail: info@yellowandred.in

Language: EN KAN

    Follow us :


ಬಿಡದಿಯಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ

Posted date: 07 Apr, 2018

Powered by:     Yellow and Red

ಬಿಡದಿಯಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ

ರಾಮನಗರ: ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಿಂದ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಎ.ಮಂಜುನಾಥ್ ಅವರಿಗೆ ಮುಂದಿನ ಚುನಾವಣೆಯಲ್ಲಿ ಮತ ನೀಡುವ ಮೂಲಕ ಆರ್ಶೀವಾದ ಮಾಡಿ ಎಂದು ಮತದಾರರಲ್ಲಿ ಮನವಿ ಮಾಡುತ್ತಿರುವುದಾಗಿ ತಾಪಂ ಮಾಜಿ ಅಧ್ಯಕ್ಷೆ ಲಕ್ಷ್ಮೀಮಂಜುನಾಥ್ ಹೇಳಿದರು.

ಶುಕ್ರವಾರ ಬಿಡದಿ ಪುರಸಭೆ ವ್ಯಾಪ್ತಿಯ ಕಲ್ಲುಗೋಪಳ್ಳಿ, ಕೆಂಚನಕುಪ್ಪೆ, ಕೆಂಚನಕುಪ್ಪೆ ಕಾಲೋನಿ, ಹಲಸಿನಮರದದದೊಡ್ಡಿ ವಾರ್ಡ್‍ಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದರು. ನನ್ನ ಪತಿ ಮಂಜುನಾಥ್ ಅವರು ಬಡವರ, ಶೋಷಿತರ ಧ್ವನಿಯಾಗಿ ಸಮಾಜದಲ್ಲಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಬಡವರ ನೋವು ನಲಿವುಗಳನ್ನು ಹತ್ತಿರದಿಂದ ಕಂಡಿರುವ ಅವರಿಗೆ ಜನರ ಸೇವಕನಾಗುವ ಮೂಲಕ ಹೆಚ್ಚಿನ ಸೇವೆ ಮಾಡಲು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಆಯ್ಕೆ ಮಾಡುವಂತೆ ಮತದಾರರ ಮನೆಮನೆಗೆ ತೆರಳಿ ಮನವಿ ಮಾಡಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರ್ಶೀವಾದದಿಂದ ಕಣಕ್ಕಿಳಿದಿದ್ದು, ಪ್ರತಿಯೊಂದು ಗ್ರಾಮದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅವರ ಆಡಳಿತ ಅವಧಿಯಲ್ಲಿ ಕೈಗೊಮಡ ಜನಪರ ಕಾರ್ಯಕ್ರಮಗಳನ್ನು ತಿಳಿಸಿ ಬಿರುಸಿನ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತಗಳು ಸಿಗುವಂತೆ ಶ್ರಮಿಸುವಂತೆ ಮುಖಂಡರಲ್ಲಿ ಮನವಿ ಮಾಡಿದರು. 

ಈ ಸಂಧರ್ಭದಲ್ಲಿ ಪುರಸಭೆ ಅಧ್ಯಕ್ಷೆ ವೆಂಕಟೇಶಮ್ಮ ರಾಮಕೃಷ್ಣಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಉಮೇಶ್, ಬನ್ನಿಕುಪ್ಪೆ ಗ್ರಾಪಂ ಅಧ್ಯಕ್ಷೆ ನೇತ್ರಾವತಿಮಂಜುನಾಥ್, ಪುರಸಭೆ ಸದಸ್ಯರಾದ ರಾಕೇಶ್, ರಮೇಶ್‍ಕುಮಾರ್, ಕುಮಾರ್, ಸಂತೋಷ್‍ಕುಮಾರ್, ಶಿವಕುಮಾರ್, ಮಂಜುನಾಥ್, ಮಂಗಳಮ್ಮ ದಾಸಪ್ಪ, ಆರ್‍ಎಸ್‍ಎಸ್‍ಬಿಎನ್ ಅಧ್ಯಕ್ಷ ಚಂದ್ರಶೇಖರ್, ಮುಖಂಡರಾದ ನರಸಿಂಹಯ್ಯ, ಆವರಗೆರೆ ರವಿಕುಮಾರ್, ವಸಂತು, ನಂಜುಂಡಿ, ರೋಟರಿ ಮಾಜಿ ಅಧ್ಯಕ್ಷ ಗೋವಿಂದಯ್ಯ ಮತ್ತಿತರ ಮುಖಂಡರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑