Tel: 7676775624 | Mail: info@yellowandred.in

Language: EN KAN

    Follow us :


ಹಾರೊಹಳ್ಳಿ ಮರಳವಾಡಿಯಲ್ಲಿ ಅನಿತಾಕುಮಾರಸ್ವಾಮಿ ಪ್ರಚಾರ

Posted date: 11 Apr, 2018

Powered by:     Yellow and Red

ಹಾರೊಹಳ್ಳಿ ಮರಳವಾಡಿಯಲ್ಲಿ ಅನಿತಾಕುಮಾರಸ್ವಾಮಿ ಪ್ರಚಾರ

ಕನಕಪುರ: ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯನವರ ಸರಕಾರದಿಂದ ರಾಜ್ಯದ ಜನರ ಹಿತಕಾಯಲು ಸಾಧ್ಯವಿಲ್ಲದ ಕಾರಣ ಮುಂದೆ ರಾಜ್ಯದ ರೈತರ ಹಾಗು ಜನಪರ ಅಭಿವೃದ್ಧಿಗಾಗಿ ಜಾತ್ಯಾತೀತ ಜನತಾದಳವನ್ನು ಬೆಂಬಲಿಸಬೇಕೆಂದು ಅನಿತಾ ಕುಮಾರಸ್ವಾಮಿ ತಿಳಿಸಿದರು.

ರಾಮನಗರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿ-ಮರಳವಾಡಿ ಹೋಬಳಿಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತ ಮುಖಂಡರ ಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಕಾಂಗ್ರೆಸ್ ಸರಕಾರವು ರಾಜ್ಯಕ್ಕೆ ಹಿಂದಿನಿಂದಲೂ ಅನ್ಯಾಯ ಮಾಡಿಕೊಂಡು ಬಂದಿದೆ. ಇದೀಗ ಮತ್ತೆ ಅದನ್ನೇ ಮುಂದುವರೆಸಿಕೊಂಡು ಬರುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಸಿದ್ದರಾಮಯ್ಯನವರು ಸರ್ವಾಧಿಕಾರಿ, ದ್ಷೇಷ ಹಾಗು ಉಡಾಫೆ ರೀತಿಯಿಂದ ಸರಕಾರವನ್ನು ನಡೆಸುವ ಮೂಲಕ ಜನರ ವಿರೋಧವನ್ನು ಕಟ್ಟಿಕೊಂಡಿದ್ದಾರೆ. ರಾಜ್ಯದ ಉದ್ದಗಲಕ್ಕೂ ಜನರು ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಬೇಕು ಎಂಬ ಅಭಿಲಾಷೆ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಈ ಭಾಗದ ಜನ ಹಿಂದಿನಂತೆ ಮತ್ತೆ ಅತಿಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಆಶೀರ್ವಾದ ಮಾಡಬೇಕಾಗಿದೆ. 

ಕಾಂಗ್ರೆಸ್ ಸರಕಾರ ಸಾಲಮನ್ನಾ, ಅನ್ನಭಾಗ್ಯ, ಕ್ಷೀರಭಾಗ್ಯಗಳ ಹೆಸರಿನಲ್ಲಿ ಸರಕಾರದ ಖಜಾನೆಯನ್ನು ಖಾಲಿಮಾಡಿದ್ದಾರೆ. ಮುಂದೆ ಸರಕಾರವನ್ನು ಆಳುವವರಿಗೆ ಸಾಲದ ಹೊರೆಯನ್ನು ಹೊರಿಸಲು ಹೊರಟಿದ್ದಾರೆ. ಅಂತಹವರನ್ನು ಸೋಲಿಸಿ ಮನೆಗೆ ಕಳುಹಿಸಬೇಕಾಗಿದೆ. ದೊಡ್ಡಮಟ್ಟದಲ್ಲಿ ಬಿ.ಎಸ್.ಪಿ.ಯ ಅಗ್ರಗಣ್ಯ ನಾಯಕಿ ಮಾಯಾವತಿಯವರೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ನಮ್ಮ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ದೀನ, ದಲಿತ, ದುರ್ಬಲರು ಎಲ್ಲರೂ ಒಮ್ಮತವಾಗಿ ಪಕ್ಷದ ಗೆಲುವಿಗೆ ಮತಚಲಾಯಿಸಬೇಕೆಂದು ಮನವಿ ಮಾಡಿದರು. 

ಹಾರೋಹಳ್ಳಿ-ಮರಳವಾಡಿ ಅವಳಿ ಹೋಬಳಿಗಳು ಕುಮಾರಸ್ವಾಮಿಯವರಿಗೆ ತಾಯಿ-ಮಗುವಿನ ಸಂಬಂಧವಿದ್ದಂತೆ ಜೊತೆಗೆ ರಾಮನಗರ ಅವರ ಕರ್ಮಭೂಮಿಯಾಗಿರುವುದರಿಂದ ಎರಡೂ ಕಡೆ ಸ್ಪರ್ಧಿಸುತ್ತಾರೆಂಬ ಆತಂಕ ಯಾರಿಗೂ ಬೇಡ. ಈ ಕ್ಷೇತ್ರವನ್ನು ಬಿಟ್ಟುಹೋಗುವ ಪ್ರಶ್ನೆಯೇ ಇಲ್ಲ. ಭೂಮಿಯ ಮೇಲೆ ಸೂರ್ಯ ಚಂದ್ರರು ಇರುವಷ್ಟೇ ಸತ್ಯವಾಗಿ ಮುಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು. 

ಕುಮಾರಸ್ವಾಮಿಯವರು ಇಲ್ಲಿ ಸ್ಪರ್ಧೆ ಮಾಡಿದ್ದರೂ ರಾಜ್ಯದ ಉದ್ದಗಲಕ್ಕೂ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದರಿಂದ ಅವರು ಕ್ಷೇತ್ರಕ್ಕೆ ಬಾರಲು ಆಗದ ಕಾರಣ ಪ್ರತಿಯೊಬ್ಬ ಕಾರ್ಯಕರ್ತ ಮುಖಂಡರೂ ತಾನೇ ಕುಮಾರಸ್ವಾಮಿ ಎಂದು ಮನೆಮನೆಗೆ ತೆರಳಿ ಹೆಚ್.ಡಿ.ಕೆ.ಯವರ 20 ತಿಂಗಳ ಅಧಿಕಾರಾವಧಿಯ ಜನಪರ ಕೆಲಸಗಳನ್ನು ಹೇಳುವ ಮೂಲಕ ಪಕ್ಷದ ಗೆಲುವಿಗೆ ನೆರವಾಗಬೇಕು. ಈ ಬಾರಿಯ ಚುನಾವಣೆಯನ್ನು ಕಾರ್ಯಕರ್ತರು, ಮುಖಂಡರು ಯಾವುದೇ ರೀತಿಯಲ್ಲೂ ನಿರ್ಲಕ್ಷ ಮಾಡಬೇಡಿ. ಕುಮಾರಸ್ವಾಮಿಯರಿಗೆ ಹೆಚ್ಚಿನ ಶಕ್ತಿ ತುಂಬಲು ಅಧಿಕ ಮತಗಳಿಂದ ಗೆಲ್ಲಿಸಲು ಕಾರ್ಯತಂತ್ರ ರೂಪಿಸಬೇಕು ಎಂದರು.

ಜಿಲ್ಲಾಧ್ಯಕ್ಷ ಅಶೋಕ್, ಉಪಾಧ್ಯಕ್ಷ ಕೋಣಾಳುದೊಡ್ಡಿ ರಾಮಕೃಷ್ಣ, ತಾಲ್ಲೂಕು ಅಧ್ಯಕ್ಷ ರಾಜಶೇಖರ್, ಜಿ.ಪಂ. ಮಾಜಿ ಸದಸ್ಯ ಡಿ.ಎಸ್.ಭುಜಂಗಯ್ಯ, ತುಮಗಣಿ ಪುಟ್ಟಸ್ವಾಮಿ, ಭೈರೇಗೌಡರವರು ಮಾತನಾಡಿ ಕ್ಷೇತ್ರದಲ್ಲಿ ಕುಮಾರಸ್ವಾಮಿಯವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಕಾಂಗ್ರೆಸ್‍ನವರು ತಮ್ಮ ಕಿರುಹೊತ್ತಿಗೆಯಲ್ಲಿ ತಮ್ಮದೇ ಅಭಿವೃದ್ಧಿಗಳೆಂದು ಸುಳ್ಳು ಕರಪತ್ರಗಳನ್ನು ಮುದ್ರಿಸಿ ಹಂಚುವ ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ನಮ್ಮ ಅಭ್ಯರ್ಥಿ ಹಿಮಾಲಯ ಪರ್ವತವಿದ್ದಂತೆ ಕಾಂಗ್ರೆಸ್‍ನ ಅಭ್ಯರ್ಥಿ ಮರಳಿನ ಗುಡ್ಡೆಯಿದ್ದಂತೆ ಇವರ ಅಜಗಜಾಂತರ ವ್ಯತ್ಯಾಸದ ನಡುವೆ ಜೆಡಿಎಸ್‍ನ ಜನಪರ ಆಡಳಿತಕ್ಕೆ ಕುಮಾರಸ್ವಾಮಿಯವರನ್ನು ಬೆಂಬಲಿಸಬೇಕೆಂದು ಕರೆ ನೀಡಿದರು. 

ವಿಧಾನಪರಿಷತ್ ಸದಸ್ಯ ಎಂ. ಮರಿಲಿಂಗೇಗೌಡ, ರಾಜ್ಯ ಉಪಾಧ್ಯಕ್ಷ ಉಮೇಶ್, ವೀರಶೈವ ಮುಖಂಡ ಶಿವಶಂಕರ್, ಮಾಜಿ ಸಚಿವ ಪಿಜಿಆರ್ ಸಿಂಧ್ಯ ಸಹೋದರ ಬಾಬುರಾವ್‍ಸಿಂಧ್ಯ, ಸೋಮಶೇಕರ್, ರಾಮ-ಲಕ್ಷ್ಮಣ, ಗ್ರಾ.ಪಂ. ಅಧ್ಯಕ್ಷ ತಹಸೀನ್‍ತಾಜ್‍ರೆಹಮತ್‍ವುಲ್ಲಾ, ತಮ್ಮಯ್ಯಣ್ಣ, ಕೃಷ್ಣಮೂರ್ತಿ, ಕಿರಣ್, ಮಂಜು ಹಲವರು ಸೇರಿದಂತೆ ಉಪಸ್ಥಿತರಿದ್ದರು.

ಈ ವೇಳೆ ಕಗ್ಗಲಹಳ್ಳಿ ಪಂಚಾಯತಿ ಮುಖಂಡ ಆನಂದ್, ವೀರಶೈವ ಮುಖಂಡ ಬಾಬು, ಜಗನ್ನಾಥ್‍ಸಿಂಧ್ಯ ಸೇರಿದಂತೆ ಹಲವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑