Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲಾ ಪಂಚಾಯಿತಿ ಸದಸ್ಯ ಎ. ಮಂಜು ಸತ್ಯಕ್ಕೆ ದೂರವಾದುದು : ಕೆ. ಶೇಷಾದ್ರಿ

Posted date: 27 Jan, 2018

Powered by:     Yellow and Red

ಜಿಲ್ಲಾ ಪಂಚಾಯಿತಿ ಸದಸ್ಯ ಎ. ಮಂಜು ಸತ್ಯಕ್ಕೆ ದೂರವಾದುದು : ಕೆ. ಶೇಷಾದ್ರಿ

ರಾಮನಗರ : ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನ ತಮಗೆ ತಪ್ಪಲು ಕಾಂಗ್ರೆಸ್ ಮುಖಂಡ ಕೆ.ಶೇಷಾದ್ರಿ ಮತ್ತು ಸಿ.ಎಂ.ಲಿಂಗಪ್ಪ ಅವರೇ ಕಾರಣ ಎಂದು ಜಿಪಂ ಸದಸ್ಯ ಎ.ಮಂಜು ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ಎಂಇಐ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು. 

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಪಂ ಸದಸ್ಯ ಎ.ಮಂಜು ಅವರು ಜನರಿಂದ ಅನುಕಂಪ ಗಿಟ್ಟಿಸಲು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರಿಗೆ ಅಧ್ಯಕ್ಷಗಾದಿ ತಪ್ಪಿಸುವುದರಿಂದ ನನಗಾಗಲಿ ಅಥವಾ ಸಿ.ಎಂ.ಲಿಂಗಪ್ಪ ಅವರಿಗಾಗಲಿ ಯಾವುದೇ ಲಾಭ ಇಲ್ಲ. ಆದರೆ ಎ.ಮಂಜು ಅವರು ಸತ್ಯಾಂಶ ಮುಚ್ಚಿಟ್ಟು ಸುಳ್ಳು ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದರು.

ಜಿಪಂ ಅಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರಿ ಲ್ಲದ ತಾಲ್ಲೂಕುಗಳಿಗೆ ಆದ್ಯತೆ ನೀಡಬೇಕೆಂದು ಸಚಿವ ಡಿಕೆಶಿ ಅವರು ಇರಾದೆ ಹೊಂದಿದ್ದರು. ಆದರೆ ಬದಲಾದ ಬೆಳವಣಿಗೆಗಳಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ರವರು ಚನ್ನಪಟ್ಟಣ ತಾಲ್ಲೂಕಿನಿಂದ ಐದು ಜನ ಜಿಲ್ಲಾ ಪಂಚಾಯಿತಿ ಸದಸ್ಯರನ್ನು ಕಾಂಗ್ರೆಸ್ ಪಕ್ಷದಿಂದ ಗೆಲ್ಲಿಸಿದ್ದು ತಮಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ಒತ್ತಾಯ ಮಂಡಿಸಿದರು. ಈ ವಿಚಾರವಾಗಿ ಸಭೆಯನ್ನು ನಡೆಸುತ್ತಿದ್ದ ಈ ಸಂದರ್ಭದಲ್ಲಿ ಸಂಸದ ಡಿ.ಕೆ.ಸುರೇಶ್ ಮತ್ತು ಎಂಎಲ್‍ಸಿ ಎಸ್. ರವಿ ಅವರು ಎ.ಮಂಜು ಪರ ಬ್ಯಾಟಿಂಗ್ ಮಾಡಿದರು. ಆದರೂ ಸಹ ಸಿ.ಪಿ.ಯೋಗೇಶ್ವರ್ ಅವರು ತಮ್ಮ ಪಟ್ಟು ಸಡಿಲಿಸಲಿಲ್ಲ.

ಸಿ.ಪಿ.ಯೋಗೇಶ್ವರ್ ಅವರನ್ನು ಡಿ.ಕೆ.ಶಿವಕುಮಾರ್ ರವರ ಬಳಿ ಮಾತನಾಡಲು ಕರೆ ತಂದಿದ್ದನ್ನು ಹೊರತು ಪಡಿಸಿದರೆ ಬೇರಾವುದೇ ವಿಚಾರಗಳು ನನಗೆ ಸಂಬಂಧಿಸಿಲ್ಲ. ಆದರೆ ಎ. ಮಂಜು ಅವರು ಸುಳ್ಳು ಹೇಳುವ ಮೂಲಕ ಆರೋಪ ಮಾಡು ವುದು ಸರಿಯಲ್ಲ. ಮತ್ತು ಎಂಎಲ್‍ಸಿ ಸಿ.ಎಂ.ಲಿಂಗಪ್ಪ ಅವರು ಸಹ ಅಧ್ಯಕ್ಷಗಾದಿ ತಪ್ಪಿಸಲು ಯಾವುದೇ ಸಂಚನ್ನು ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಗಿರಿಗೌಡ ಉಪಸ್ಥಿತರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑