Tel: 7676775624 | Mail: info@yellowandred.in

Language: EN KAN

    Follow us :


ವಿವೇಕಯುತ ಮತದಾನದಿಂದ ಪ್ರಜಾಪ್ರಭುತ್ವ ಸದೃಢ : ನ್ಯಾ. ಪ್ರಕಾಶ್ ನಾಡಿಗೇರ್

Posted date: 28 Jan, 2018

Powered by:     Yellow and Red

ವಿವೇಕಯುತ ಮತದಾನದಿಂದ ಪ್ರಜಾಪ್ರಭುತ್ವ ಸದೃಢ : ನ್ಯಾ. ಪ್ರಕಾಶ್ ನಾಡಿಗೇರ್

ರಾಮನಗರ : ವಿವೇಕಯುತ ಮತ ಚಲಾವಣೆಯಿಂದ ಮಾತ್ರ ಸಧೃಡ ಪ್ರಜಾಪ್ರಭುತ್ವ ನಿರ್ಮಾಣ ಸಾಧ್ಯ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರೂ ಆಗಿರುವ ನ್ಯಾ. ಪ್ರಕಾಶ್ ಎಲ್. ನಾಡಿಗೇರ್ ಅವರು ಅಭಿಪ್ರಾಯಪಟ್ಟರು.
    ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ನಗರದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಚುನಾವಣೆಯಲ್ಲಿ ಮುಕ್ತ, ನ್ಯಾಯ ಸಮ್ಮತ ಹಾಗೂ ಯಾವುದೇ ಅಪೇಕ್ಷೆಗಳಿಗೆ ಅಥವಾ ಆಕರ್ಷಣೆಗಳಿಗೆ ಒಳಗಾಗದೆ ಸಂವಿಧಾನ ನಮಗೆ ನೀಡಿರುವ ಹಕ್ಕನ್ನು ಚಲಾಯಿಸಿ ದೇಶದ ಹಾಗೂ ರಾಜ್ಯದ ಅಭಿವೃದ್ಧಿಗೆ ಕಾರಣರಾಗುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು, ಹೀಗಾದಾಗ ಪ್ರಜಾಪ್ರಭುತ್ವ ವ್ಯವಸ್ಥೆ ಸಧೃಡಗೊಳ್ಳುತ್ತದೆ ಎಂದು ಅವರು ಹೇಳಿದರು.
ಮತದಾರರು ಯಾವ ಅಪೇಕ್ಷೆ ಅಥವಾ ಉದ್ದೇಶದಿಂದ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದೇವೆ ಎಂಬುದನ್ನು ಈ ಸಂದರ್ಭದಲ್ಲಿ ಆತ್ಮವಿಮರ್ಶೆ ಮಾಡಿಕೊಳ್ಳಬೇಕು, ಅಲ್ಲದೇ ಮತದಾನದ ದಿನ ಸಾರ್ವತ್ರಿಕ ರಜಾ ಘೋಷಣೆಗೊಂಡಿರುವುದರಿಂದ ತಮ್ಮ ಜವಾಬ್ದಾರಿಗಳನ್ನು ನಿಭಾಯಿಸುವ ಬದಲು ರಜೆಯಲ್ಲಿ ಕಳೆದು ಹೋಗುವುದು ಕಂಡುಬರುತ್ತಿದೆ, ವಿಶೇಷವಾಗಿ ಯುವಜನತೆಯಲ್ಲಿ ದೇಶಕ್ಕಾಗಿ ಚಿಂತನೆ ಮಾಡುವ ವಿವೇಚನೆ ಮೂಡಬೇಕು ಈ ದೇಶದ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಯನ್ನು ಪ್ರತಿಯೊಬ್ಬರು ಅರಿತುಕೊಂಡು ದೇಶದ ಅಭಿವೃದ್ಧಿಯಲ್ಲಿ ತೊಡಗುವ ಉತ್ತಮ ಅಭ್ಯರ್ಥಿಗೆ ಮತ ನೀಡಬೇಕು. ಚುನಾವಣೆಯ ನಂತರ ಇದು ಸಾಧ್ಯವಾಗುವುದಿಲ್ಲ, ಮತದಾನದ ದಿನದಂದು ಕಡ್ಡಾಯವಾಗಿ ಅರ್ಹ ಅಭ್ಯರ್ಥಿಗಳನ್ನು ಚುನಾಯಿಸಲು ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಅವರು ತಿಳಿಸಿದರು.  
1950ರ ಜ. 26ರಂದು ನಮ್ಮ ರಾಷ್ಟ್ರ ಗಣರಾಜ್ಯವಾಯಿತು. ಜ. 25ರಂದು ಚುನಾವಣಾ ಆಯೋಗ ಅಸ್ತಿತ್ವಕ್ಕೆ ಬಂದ ದಿನವಾಗಿದೆ. ಅದರ ನೆನಪಿಗೆ ಹಾಗೂ ಮತದಾರರಲ್ಲಿ ಹಕ್ಕು ಚಲಾಯಿಸಲು ಜಾಗೃತಿ ಮೂಡಿಸಲು ರಾಷ್ಟ್ರಿಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. 18 ವರ್ಷ ಪೂರೈಸಿದ ಪ್ರತಿಯೊಬ್ಬರು ಮತದಾನದಲ್ಲಿ ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ಹೊಂದಿರುತ್ತಾರೆ. ಒಳ್ಳೆಯ ಹಾಗೂ ಅಭಿವೃದ್ಧಿ ಉದ್ದೇಶದಿಂದ ಮತ ಚಲಾಯಿಸಬೇಕು, ನಿರ್ಭೀತರಾಗಿ ಹಾಗೂ ನಮ್ಮ ವಿವೇಚನೆಗೆ ಅನುಗುಣವಾಗಿ ಮತ ಚಲಾಯಿಸುವಂತೆ ಅವರು ಕರೆ ನೀಡಿದರು. 
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ಬಿ.ಆರ್ ಮಮತಾ ಅವರು ಮಾತನಾಡಿ, ಚುನಾವಣಾ ಮತದಾನದಲ್ಲಿ ಹಕ್ಕು ಚಲಾಯಿಸಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವುದು ದೇಶ ಕಟ್ಟುವ ಕೆಲಸವಾಗಿದೆ, ಕಷ್ಪಪಟ್ಟು ಪಡೆದ ಸ್ವಾತಂತ್ರ್ಯವನ್ನು ಉಳಿಸಿ-ಬೆಳಸಲು ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು, ಈ ದಿಸೆಯಲ್ಲಿ ಯುವ ಜನತೆ ಮತ ಚಲಾಯಿಸುವುದರೊಂದಿಗೆ ಮತದಾನ ಮಾಡುವಂತೆ ತಮ್ಮ ಪರಿಸರದಲ್ಲಿ ಜಾಗೃತಿ ಮೂಡಿಸಬೇಕು, ತಮ್ಮ ಜವಾಬ್ದಾರಿಯನ್ನು ನಿಭಾಯಿಸುವುದರಲ್ಲಿ ಯಾರೊಬ್ಬರು ಹಿಂಜರಿಯಬಾರದು ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞೆಯನ್ನು ವಿಶೇಷ ಭೂಸ್ವಾದೀನಾಧಿಕಾರಿ ಜಯಮಾಧವ್ ಬೋಧಿಸಿದರು. 
ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ, ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಹಾಗೂ ಕೊಲಾಜ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ವಿಜೇತರಾದ ಪ್ರೌಢಶಾಲೆ, ಪದವಿ ಪೂರ್ವ ಕಾಲೆಜು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 
ಗೌರವಾನ್ವಿತ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಟಿ. ಗೋಪಾಲಕೃಷ್ಣ ರೈ, ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರ್. ಲತಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಎಸ್ ಹೊನ್ನಸ್ವಾಮಿ, ಜಿಲ್ಲಾ ಪಂಚಾಯತ್‍ನ ಉಪಕಾರ್ಯದರ್ಶಿ ಪುಟ್ಟಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ರತ್ನಮ್ಮ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಮಾರೇಗೌಡ, ರಾಮನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಮರಿಗೌಡ, ಚುನಾವಣಾ ತಹಶೀಲ್ದಾರ್ ಅನಂತ ರಾಜು ವೇದಿಯಲ್ಲಿದ್ದರು. 
ಉಪವಿಭಾಗಾಧಿಕಾರಿ ಡಾ. ರಾಜೇಂದ್ರ ಪ್ರಸಾದ್ ಸ್ವಾಗತಿಸಿದರು,  ಸಂಪತ್ ಕುಮಾರ್ ವಂದಿಸಿದರು. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑