Tel: 7676775624 | Mail: info@yellowandred.in

Language: EN KAN

    Follow us :


ಗುಣಮಟ್ಟದ ಹಾಲನ್ನು ಸರಬರಾಜು ಮಾಡಿ : ಎಸ್. ಲಿಂಗೇಶ್ ಕುಮಾರ್

Posted date: 12 Jul, 2018

Powered by:     Yellow and Red

ಚನ್ನಪಟ್ಟಣ : ಹೈನೋದ್ಯಮ ರೈತರನ್ನು ಕೈಹಿಡಿದಿದ್ದು, ಹೈನುಗಾರಿಕೆಯಲ್ಲಿ ತೊಡಗಿಸಿ ಕೊಂಡು ಬಮೂಲ್ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಗುಣಮಟ್ಟದ ಹಾಲನ್ನು ಸರಬರಾಜು ಮಾಡಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಸ್ವಾವಲಂಭಿಗಳಾಗಿ ಸಂಘದ ಅಭಿವೃದ್ಧಿಗೆ ಸಹಕಾರಿಗಳಾಗಬೇಕು ಎಂದು ಬಮೂಲ್ ನಿರ್ದೇಶಕ ಎಸ್.ಲಿಂಗೇಶ್‍ಕುಮಾರ್ ಕರೆ ರೈತರಿಗೆ ನೀಡಿದರು.
ತಾಲೂಕಿನ ಸುಣ್ಣಘಟ್ಟ ಗ್ರಾಮದ  ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಸುಮಾರು 8 ಲಕ್ಷ ರೂಪಾಯಿಗೂ ಹೆಚ್ಚಿನ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಸಂಘದ ಮೊದಲ ಅಂತಸ್ತಿನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಮೂಲ್ ವತಿಯಿಂದ ಹಾಲು ಉತ್ಪಾದಕ ರೈತರಿಗೆ ಹೆಚ್ಚಿನ ಸವಲತ್ತುಗಳನ್ನು ದೊರಕಿಸಿ ಕೊಡುತ್ತಿದ್ದು ನಿರೀಕ್ಷೆಗೂ ಮೀರಿ ಹೆಚ್ಚಿನ  ಹಾಲು ಸಂಗ್ರಹವಾಗುತ್ತಿದೆ. ಅದರಿಂದ  ಪ್ರತಿ ದಿನ ಬಮೂಲ್‍ಗೆ 40 ಲಕ್ಷ ರೂ.ನಂತೆ ತಿಂಗಳಿಗೆ ಸುಮಾರು 12 ಕೋಟಿ ರೂ.ನಷ್ಟವಾಗುತ್ತಿದೆ. ಸಂಗ್ರಹವಾಗುವ ಹಾಲನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಈ ನಷ್ಟವನ್ನು ತಪ್ಪಿಸಿಕೊಳ್ಳಲು ಕನಕಪುರದ ಬಳಿ ಸುಮಾರು 550 ಕೋಟಿ ರೂ.ವೆಚ್ಚದಲ್ಲಿ ಹಾಲಿನ ಪೌಡರ್ ಮತ್ತು ಇತರೆ ಉತ್ಪನ್ನಗಳನ್ನು ತಯಾರಿಸುವ ಘಟಕದ ಕಾಮಗಾರಿ ಪ್ರಗತಿಯಲ್ಲಿದ್ದು ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸಲಾಗುತ್ತಿದೆ. ಇನ್ನು 2-3 ತಿಂಗಳಲ್ಲಿ ಆ ಘಟಕವನ್ನು ಪ್ರಾರಂಭಿಸಲಾಗುವುದು. ಇದರಿಂದ ರೈತರಿಗೆ ಮತ್ತಷ್ಟು ಅನುಕೂಲ, ಲಾಭವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ತಾಲ್ಲೂಕಿನಿಂದ ಪ್ರತಿದಿನ 2.9 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಅದೇ ರೀತಿ ತಾಲ್ಲೂಕಿಗೆ ಪ್ರತಿ ತಿಂಗಳು 15 ಕೋಟಿ ರೂ.ಗೂ ಹೆಚ್ಚು ಹಾಲಿನ ಹಣ ಹಾಲು ಉತ್ಪಾದಕರಿಗೆ ಬಡಾವಡೆಯಾಗಲಿದೆ. ಹೈನುಗಾರಿಕೆಯಿಂದ ರೈತರು 15 ದಿನಕ್ಕೊಮ್ಮ ಹಣ ನೋಡುವಂತಾಗಿರುವುದು ಸಂತಸದ ವಿಚಾರ. ಸದಸ್ಯರು ಆಕಸ್ಮಿಕವಾಗಿ ಮರಣ ಹೊಂದಿದರೆ ಅವರ ಕುಟಂಬದ ನಾಮಿನಿಗೆ 2 ಲಕ್ಷ ರೂ.ವರೆಗೆ ವಿಮಾ ಪರಿಹಾರ ಹಣ ದೊರಕಲಿದೆ ಎಂದು ತಿಳಿಸಿದ ಅವರು, ರೈತರಿಗೆ ಹೆಚ್ಚು ಹೆಚ್ಚು ಅನುಕೂಲ ಮಾಡಿ ಕೊಡುವ ನಿಟ್ಟಿನಲ್ಲಿ ಬಮೂಲ್ ಶ್ರಮಿಸುತ್ತಿದ್ದು, ರೈತರಿಗೆ ಈಗ ಕೊಡುತ್ತಿರುವ 5 ರೂ.ಬೆಂಬಲ ಬೆಲೆಯನ್ನು 7 ರೂ.ಗೆ ಹೆಚ್ಚಿಸುವಂತೆ ಕೋರಿ ಮುಖ್ಯಮಂತ್ರಿಗಳಲ್ಲಿ ಕೋರಿಕೆಯನ್ನು ಸಲ್ಲಿಸಿದ್ದು ಅವರೂ ಸಹ ಸಕರಾತ್ಮಕವಾಗಿ ಸ್ಪಂದಿಸಿದ್ದು ಶೀಘ್ರದಲ್ಲೇ ಅದು ಕಾರ್ಯರೂಪಕ್ಕೆ ಬರಲಿದೆ ಎಂದರು.  ತಾಲ್ಲೂಕಿನಲ್ಲಿ 160 ಸಂಘಗಳು ಕಾರ್ಯನಿರ್ವಹಿಸುತ್ತಿದ್ದು ಅದರಲ್ಲಿ 84 ಸಂಘಗಳು ಸ್ವಂತ ಕಟ್ಟಡವನ್ನು ಹೊಂದಿವೆ. 15 ಸಂಘಗಳು ಜಾಗವನ್ನು ಹೊಂದಿವೆ. ಉಳಿದ ಸಂಘಗಳು  ಸ್ವಂತ ಕಟ್ಟಡವನ್ನು ನಿರ್ಮಿಸಿ ಕೊಳ್ಳಲು ಮುಂದೆ ಬಂದರೆ ಕೆ.ಎಂ.ಎಫ್.ಬಮೂಲ್ ಮತ್ತು ಧರ್ಮಸ್ಥಳ ಸಂಸ್ಥೆ ಸೇರಿದಂತೆ ಒಟ್ಟು 8.5 ಲಕ್ಷ ರೂ.ಅನುದಾನ ದೊರಕಲಿದೆ. ಉಳಿದ ಹಣವನ್ನು ಭರಿಸಿಕೊಂಡು ಸ್ವಂತ ಕಟ್ಟಡವನ್ನು ನಿರ್ಮಿಸಿ ಕೊಳ್ಳಬೇಕು ಎಂದು ಅವರು ಹೇಳಿ, ಗ್ರಾಮಸ್ಥರ ಕೋರಿಕೆ ಮೇರೆಗೆ ಗ್ರಾಮದಲ್ಲಿ ಬಮೂಲ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿ ಕೊಡುವುದರ ಜೊತೆಗೆ ಉಚಿತವಾಗಿ ನೀರಿನ ಕ್ಯಾನ್‍ಗಳನ್ನು ವಿತರಿಸುವುದಾಗಿ ಎಸ್.ಲಿಂಗೇಶ್‍ಕುಮಾರ್ ಭರವಸೆ ನೀಡಿದರು.
ಶಿಬರದ ಉಪ ವ್ಯವಸ್ಥಾಪಕ ಡಾ.ಕೆ.ಸಿ.ಶ್ರೀಧರ್ ಮಾತನಾಡಿ ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಲು ಉತ್ಪಾದಕರು ಮತ್ತು ರೈತರಿಗೆ ಅತ್ಯಂತ ಹೆಚ್ಚಿನ ರೀತಿಯಲ್ಲಿ ಸಹಕಾರಿಯಾಗಿವೆ. ಡೈರಿ ಹಾಲು ಉತ್ಪಾದಕರು ಮತ್ತು ರೈತರ ಪರವಿದ್ದು ಪ್ರಸ್ತುತ ಡೈರಿ ನಷ್ಟದಲ್ಲಿದೆ. ಆದರೂ ಇಡೀ ರಾಜ್ಯದಲ್ಲೇ ಬಮೂಲ್ ರೈತರಿಗೆ ಅತೀ ಹೆಚ್ಚಿನ ಹಣ ಕೊಡುತ್ತಿದೆ. ಡೈರಿ ಆನೆ ಇದ್ದಂತೆ. ಮಲಗಿದರೆ ಮೇಲೆ ಎತ್ತಲಾಗದು.ಆದ್ದರಿಂದ  ಅದನ್ನು ಮೇಲೆ ಎತ್ತಲು ಸಹಕರಿಸಬೇಕು. ಡೈರಿಗೆ ಆದಾಯ ಬಂದರೆ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಹೇಳಿದರು. 
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಹನುಮೇಗೌಡ ಮಾತನಾಡಿ ಸಂಘದ ಆಡಳಿತ ಮಂಡಳಿ ಸದಸ್ಯರು ಮತ್ತು ಷೇರುದಾರರು ಗ್ರಾಮಸ್ಥರ ಸಹಕಾರದಿಂದ 2009ರಲ್ಲಿ ಸುಮಾರು 10 ಲಕ್ಷ ರೂ.ವೆಚ್ಚದಲ್ಲಿ ಸಂಘದ ಕಟ್ಟಡವನ್ನು ನಿರ್ಮಿಸಲಾಗಿತ್ತು. ಈಗ ಸುಮಾರು 8 ಲಕ್ಷ ರೂ.ಗೂ ಹೆಚ್ಚಿನ ವೆಚ್ಚದಲ್ಲಿ ಸಂಘದ ಮೇಲಂತಸ್ತಿನ ಕಟ್ಟಡವನ್ನು ನಿರ್ಮಿಸಿ ಸಮರ್ಪಿಸಲಾಗಿದೆ. ಕಟ್ಟಡಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದರು.
ವೇದಿಕೆಯಲ್ಲಿ ವಿಸûರಣಾಧಿಕಾರಿಗಳಾದ ಜಿ.ಆನಂದ್‍ಕುಮಾರ್, ಅಲ್ಲಾಸಾಬ ಮಡ್ಡಿಮನಿ, ಸಂಘದ ಉಪಾಧ್ಯಕ್ಷ ಪುಟ್ಟಪ್ಪ ಎಸ್.ಎಂ., ನಿರ್ದೇಶಕರಾದ ವೆಂಕಟೇಶ್,ನಾರಾಯಣಸ್ವಾಮಿ, ರಾಮಣ್ಣ, ಉಮೇಶ್ ಎಸ್.ಎನ್., ಕುಮಾರ ಪಿ. ಚಿಕ್ಕಗೋವಿಂದ, ಸಾವಿತ್ರಮ್ಮ, ಅಲುಮೇಲಮ್ಮ, ಗ್ರಾಮದ ಮುಖಂಡರಾದ ಎಸ್.ಎನ್.ನಾಗರಾಜು, ಪುಟ್ಟಸ್ವಾಮಿ, ಸಂಘದ ಕಾರ್ಯದರ್ಶಿ ಗೀತಾರಾಜಣ್ಣ, ಹೊಂಗನೂರು ಎಂ.ಪಿ.ಸಿ.ಎಸ್.ಕಾರ್ಯದರ್ಶಿ ಪುಟ್ಟರಾಜು  ಮುಂತಾದವರು ಉಪಸ್ಥಿತರಿದ್ದರು.
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑