Tel: 7676775624 | Mail: info@yellowandred.in

Language: EN KAN

    Follow us :


16ರಂದು ರಾಮನಗರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗಮನ

Posted date: 12 Jul, 2018

Powered by:     Yellow and Red

16ರಂದು ರಾಮನಗರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗಮನ

ರಾಮನಗರ ಜು. 12 (ಕರ್ನಾಟಕ ವಾರ್ತೆ):- ಇದೇ ಜು. 16ರ ಸೋಮವಾರ ರಾಜ್ಯದ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ರಾಮನಗರಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ, ತದನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸುವರು ಈ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸರ್ವರೀತಿಯ ಸಿದ್ದತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಅವರು ನಿರ್ದೇಶನ ನೀಡಿದರು.
ಅವರು ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜು. 12ರ ಗುರುವಾರ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರ ಸ್ಥಳೀಯ ಸಂಸ್ಥೆಗಳ ವತಿಯಿಂದ ಕೈಗೊಳ್ಳಲಾಗುತ್ತಿರುವ ನೂತನ ಕಾಮಗಾರಿಗಳು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಸೇರಿದಂತೆ ಬೆಸ್ಕಾಂ ವತಿಯಿಂದ ನಿರ್ಮಿಸಬೇಕಾಗಿರುವ ನೂತನ ವಿದ್ಯುತ್ ಸ್ಟೇಷನ್‍ಗಳು, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ, ಅರಣ್ಯ, ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ರಾಷ್ಟ್ರೀಯ ಹೆದ್ದಾರಿ, ಕ್ರೀಡಾ, ಕಂದಾಯ ಇಲಾಖೆ, ಕೆ.ಎಸ್.ಆರ್.ಟಿ.ಸಿಯನ್ನೊಳಗೊಂಡಂತೆ ವಿವಿಧ ಇಲಾಖೆಗಳಲ್ಲಿ ನೂತನ ಕಾಮಗಾರಿಗಳಿಗೆ ಅಡಿಗಲ್ಲು ಸಮಾರಂಭ ಹಾಗೂ ಉದ್ಘಾಟನೆಗೆ ಸಿದ್ದಗೊಂಡಿರುವ ವಿವಿಧ ಕಾಮಗಾರಿಗಳ ಪಟ್ಟಿ ಹಾಗೂ ನೂತನ ಪ್ರಸ್ತಾವನೆಗಳಿದ್ದಲ್ಲೀ ಈ ಕೂಡಲೇ ಸಲ್ಲಿಸುವಂತೆ ಅವರು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ಆರ್. ಪ್ರಶಾಂತ್, ಉಪವಿಭಾಗಾಧಿಕಾರಿ ಡಾ. ರಾಜೇಂದ್ರ ಪ್ರಸಾದ್, ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೃಷ್ಣಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑