Tel: 7676775624 | Mail: info@yellowandred.in

Language: EN KAN

    Follow us :


ವಿದ್ಯಾಮಾತಾ ಫೌಂಡೇಶನ್ ವತಿಯಿಂದ ನೋಟ್ ಪುಸ್ತಕಗಳ ವಿತರಣೆ

Posted date: 14 Jul, 2018

Powered by:     Yellow and Red

ವಿದ್ಯಾಮಾತಾ ಫೌಂಡೇಶನ್ ವತಿಯಿಂದ ನೋಟ್ ಪುಸ್ತಕಗಳ ವಿತರಣೆ

ರಾಮನಗರ : ತಾಲ್ಲೂಕಿನ ಬಿಡದಿ ಹೋಬಳಿಯ ಹಕ್ಕಿಪಿಕ್ಕಿ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವಿದ್ಯಾಮಾತಾ ಫೌಂಡೇಶನ್  ವತಿಯಿಂದ ಇಂದು ಲೇಖನ ಸಾಮಾಗ್ರಿ, ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಸಮಾರಂಭದ ಉದ್ಘಾಟನೆಯನ್ನು ವಂಡರ್ ಲಾ ಪಾರ್ಕಿನ ಮ್ಯಾನೇಜರ್ ರುದ್ರೇಶ್ ಉದ್ಘಾಟಿಸಿ ಮಾತನಾಡಿ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ಬಡವರಾಗಿದ್ದು, ಅವರ ವಿದ್ಯಾಭ್ಯಾಸಕ್ಕೆ ನೆರವು ನೀಡುವ ಮೂಲಕ ಸಾಮಾಜಿಕ ಸೇವೆ ಮಾಡುತ್ತಿರುವ ವಿದ್ಯಾಮಾತಾ ಫೌಂಡೇಶನ್ ಸೇವೆ ಶ್ಲಾಘನೀಯ ಎಂದರು

ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿದ ಬಿಡದಿ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕುಮಾರ್ ಮಾತನಾಡಿ ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಜೊತೆಗೆ ಸರ್ಕಾರ ಹಲವು ಸೌಲಭ್ಯಗಳನ್ನು ನೀಡುವ ಮೂಲಕ ಖಾಸಗಿ ಶಾಲೆಗಳಿಗಿಂತಲೂ ಹೆಚ್ಚಿನ ಆದ್ಯತೆಯನ್ನು ನೀಡುತ್ತಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಕರೆ ನೀಡಿದರು

ವಿದ್ಯಾಮಾತಾ ಪೌಂಢೇಶನ್ ಅಧ್ಯಕ್ಷ ಭಾಗೇಶ್ ರೈ ಮಾತನಾಡಿ ವಿದ್ಯಾಮಾತಾ ಫೌಂಡೇಶನ್ ಕಳೆದ ಹಲವು ವರ್ಷಗಳಿಂದಲೂ ಸಾಮಾಜಿಕ ಸೇವೆ ಮಾಡುತ್ತಿದೆ. ದಕ್ಷಿಣ ಕನ್ನಡದ ಪುತ್ತೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವು ಶಾಲೆಗಳಿಗೆ ನೋಟ್ ಪುಸ್ತಕ, ಲೇಖನ ಸಾಮಾಗ್ರಿ ವಿತರಿಸುವ ಕೆಲಸ ಮಾಡುತ್ತಿದೆ. ಎಂದರು

ಕಳೆದ ವರ್ಷ ಪುತ್ತೂರಿನಲ್ಲಿ ಉದ್ಯೋಗ ಮೇಳ ಏರ್ಪಡಿಸಿ 115 ಕಂಪನಿಗಳಿಗೆ 3000 ಮಂದಿ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿಕೊಟ್ಟಿದೆ. ಮಹಿಳೆಯರಿಗೆ ಜಾಗೃತಿ ಶಿಬಿರಗಳನ್ನು ಆಯೋಜಿಸಿ ಅರಿವು ಮೂಡಿಸುವ ಕೆಲಸ ಮಾಡುವ ಜೊತೆಗೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಂದರ್ಭದಲ್ಲಿ ಪೂರ್ವ ತರಭೇತಿ ನೀಡುವ ಮೂಲಕ ಸಮಾಜಕ್ಕೆ ತನ್ನದೇ ಆದ ಸೇವೆ ಮಾಡುತ್ತಿರುವ ವಿದ್ಯಾಮಾತಾ ಫೌಂಡೇಶನ್ ಗೆ ಈ ದಿನ 6 ಮಂದಿ ನೂತನ ನಿರ್ದೇಶಕರು ಸೇರ್ಪಡೆಯಾಗಿದ್ದು, ಮುಂದಿನ ದಿನಗಳಲ್ಲಿ  ಮತ್ತಷ್ಟು ಸಮಾಜ ಸೇವೆ ಮಾಡಲು ಉತ್ಸುಕವಾಗಿದೆ ಎಂದರು.

ಶಾಲೆಯ ಸುಮಾರು 40 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಜಾಮಿಟ್ರಿ, ಲೇಖನಿಗಳು, ಅಂಗನವಾಡಿ ಮಕ್ಕಳಿಗೆ ಸ್ಲೇಟ್ ವಿತರಿಸಲಾಯಿತು

ಸಮಾರಂಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಹಾರ್ಧಿಕ್, ವಿದ್ಯಾಮಾತಾ ಫೌಂಡೇಶನ್  ನ ಪದಾಧಿಕಾರಿಗಳು ಹಾಜರಿದ್ದರು

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑