Tel: 7676775624 | Mail: info@yellowandred.in

Language: EN KAN

    Follow us :


ನಾಳೆ ಆರನೆಯ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Posted date: 30 Jan, 2018

Powered by:     Yellow and Red

ನಾಳೆ ಆರನೆಯ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ರಾಮನಗರ: ಕನ್ನಡ ಸಾಹಿತ್ಯ ಪರಿಷತ್ ಜ.31 ರಂದು 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ.
ತಾಲೂಕಿನ ಕೂಟಗಲ್ ಹೋಬಳಿಯ ಶ್ಯಾನುಭೋಗನಹಳ್ಳಿಯ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಸಮ್ಮೇಳನಾಧ್ಯಕ್ಷರಾದ ಡಾ.ಎಲ್.ಸಿ. ರಾಜು ಅವರ ಅಧ್ಯಕ್ಷತೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ಬಿ.ಟಿ ದಿನೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮ್ಮೇಳನದ ಮಹಾ ಮಂಟಪಕ್ಕೆ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮಿ, ಪ್ರಧಾನ ವೇದಿಕೆಗೆ ಜಿ.ಪಿ ರಾಜರತ್ನಂ,  ಮಹಾದ್ವಾರಕ್ಕೆ ಕೆಂಗಲ್ ಹನುಮಂತಯ್ಯ ಹಾಗೂ ದ್ವಾರಕ್ಕೆ ವೀರಯೋಧ ತಿರುಮಲೇಶ್ ಅವರ ಹೆಸರನ್ನು ಇಡಲಾಗಿದೆ ಎಂದರು.
ಅಂದು ಬೆಳಿಗ್ಗೆ 8ಕ್ಕೆ ತಾಲೂಕು ದಂಡಾಧಿಕಾರಿ ಮಾರುತಿ ಪ್ರಸನ್ನ ರಾಷ್ಟ್ರಧ್ವಜ, ಕಸಾಪ ಜಿಲ್ಲಾಧ್ಯಕ್ಷ ಸಿಂ.ಲಿಂ.ನಾಗರಾಜು ಅವರು ಕನ್ನಡ ಧ್ವಜ ಆರೋಹಣ ಮಾಡಲಿದ್ದಾರೆ.
8.30ಕ್ಕೆ ಸಮ್ಮೇಳಾಧ್ಯಕ್ಷರ ಮೆರವಣಿಗೆ ಅರುಣೋದಯ ಶಾಲಾ ಮುಂಭಾಗದಿಂದ ವಿದ್ಯಾರ್ಥಿಗಳ ಪೂರ್ಣ ಕುಂಭ ಮತ್ತು ವಿವಿಧ ಸಾಂಸ್ಕøತಿ ಕಲಾ ತಂಡಗಳೊಂದಿಗೆ ವೇದಿಕೆಯವರೆಗೆ ನಡೆಯಲಿದೆ. ಮೆರವಣಿಗೆಯನ್ನು ತಾಲೂಕು ಪಂಚಾಯಿತಿ ಸದಸ್ಯ ಎಸ್.ಪಿ. ಜಗದೀಶ್ ಉದ್ಘಾಟಿಸಲಿದ್ದಾರೆ. ಬಿಡದಿ ಕೈಗಾರಿಕಾ ಪ್ರದೇಶ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಲ್.ಚಂದ್ರಶೇಖರ್ ಯೋಧ ತಿರುಮಲೇಶ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
10.30ಕ್ಕೆ ಸಮ್ಮೇಳನವನ್ನು ಶಾಸಕ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಡಿ.ಕೆ.ಸುರೇಶ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಶಾಸಕ ಎಚ್.ಸಿ. ಬಾಲಕೃಷ್ಣ ಕವನ ಸಂಕಲನ ಬಿಡುಗಡೆ ಮಾಡಲಿದ್ದಾರೆ. ಪುಸ್ತಕ ಮಳಿಗೆಯನ್ನು ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ, ಮಹಾ ಮಂಟಪವನ್ನು ಎಂಎಲ್‍ಸಿ ಸೈಯದ್ ಮುದೀರ್ ಆಗಾ, ಮುಖ್ಯದ್ವಾರವನ್ನು ಎ.ಮಂಜುನಾಥ್ ಉದ್ಘಾಟಿಸಲಿದ್ದಾರೆ.
1:30ಕ್ಕೆ ನಡೆಯುವ ಕಾವ್ಯ ವಾಹಿನಿ ಅಧ್ಯಕ್ಷತೆಯನ್ನು ಸಾಹಿತಿ ವಿ.ಎಚ್. ರಾಜಶೇಖರ್ ವಹಿಸಲಿದ್ದು, ಸಾಹಿತಿ ಎಂ. ಶಿವನಂಜಯ್ಯ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಗೀತ ವಿದ್ಯಾಂಸರಾದ ಶಿವಾಜಿರಾವ್ ಆಶಯ ನುಡಿಗಳನ್ನು ಆಡಲಿದ್ದಾರೆ.
3 ಗಂಟೆಗೆ ನಡೆಯುವ ವಿಚಾರ ವಾಹಿನಿಯ ಅಧ್ಯಕ್ಷತೆಯನ್ನು ಚಿಂತಕರಾದ ಸು.ಚಿ.ಗಂಗಾಧರಯ್ಯ ವಹಿಸಲಿದ್ದು, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ರಾಜಣ್ಣ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಡಾ.ಎಲ್.ಸಿ ರಾಜು ಸಾಹಿತ್ಯಾವಲೋಕನ ಕುರಿತು ಉಪನ್ಯಾಸಕರಾದ ಜಿ.ಶಿವಣ್ಣ ಕೊತ್ತೀಪುರ, ಭವಿಷ್ಯದ ರಾಮನಗರ ಕುರಿತು ಆರಂಭ ಪತ್ರಿಕೆ ಸಂಪಾದಕರಾದ ಅಬ್ಬೂರು ರಾಜಶೇಖರ ಅವರು ಪ್ರಬಂಧ ಮಂಡಿಸಲಿದ್ದಾರೆ.
ಸಂಜೆ 4 ಗಂಟೆಗೆ ನಡೆಯುವ ರೈತ-ವಿಜ್ಞಾನಿ ಸಂವಾದದ ಅಧ್ಯಕ್ಷತೆಯನ್ನು ಪ್ರಗತಿಪರ ರೈತ ಕಾಂತರಾಜ್ ಪಟೇಲ್ ಅವರು ವಹಿಸಲಿದ್ದು, ಜಾನಪದ ವಿದ್ವಾಂಸ ಡಾ. ಕುರುವ ಬಸವರಾಜು ಅವರು ಪ್ರಧಾನ ನಿರ್ವಹಣೆ ಮಾಡಲಿದ್ದಾರೆ.
ಸಂವಾದದಲ್ಲಿ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಭಾಗದ ವಿಜ್ಞಾನಿ ಡಾ.ಬಿ.ಜಿ ಹನುಮಂತರಾಯ ಅವರೊಂದಿಗೆ ರೈತರಾರ ಬಿ.ಸಿ.ವಾಸು, ರವಿ, ಗೌತಮ್ ಗೌಡ, ರಾಮು, ಚಿಕ್ಕಪುಟ್ಟಯ್ಯ, ಪ್ರಕಾಶ್, ಸುಶೀಲಮ್ಮ, ಸದಾನಂದ ಅವರು ಭಾಗವಹಿಸಲಿದ್ದಾರೆ.
ಸಂಜೆ 5 ಗಂಟೆಗೆ ನಡೆಯುವ ಬಹಿರಂಗ ಅಧಿವೇಶನದ ಅಧ್ಯಕ್ಷತೆಯನ್ನು ಕಸಾಪ ತಾಲೂಕು ಅಧ್ಯಕ್ಷ ಬಿ.ಟಿ.ದಿನೇಶ್ ಬಿಳಗುಂಬ ವಹಿಸಲಿದ್ದು, ಗೌರವ ಕಾರ್ಯದರ್ಶಿ ಜಿ.ಟಿ ಕೃಷ್ಣ ನಿರ್ಣಯಗಳನ್ನು ಮಂಡಿಸಲಿದ್ದಾರೆ.
5:10 ಸಮ್ಮೇಳಾಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ರುದ್ರೇಶ್ವರ, ರಾಣಿ ಕಿರಣ್, ಪಿ. ಶ್ರೀನಿವಾಸ್, ಜಯದೇವ್, ಪೂರ್ಣಚಂದ್ರ, ಶ್ವೇತಮಣಿ ಭಾಗವಹಿಸಲಿದ್ದು, ರಂಗ ನಿರ್ದೇಶಕ ಬೈರ್ನಳ್ಳಿ ಶಿವರಾಂ ಅವರು ಸಂವಾದದ ಪ್ರಧಾನ ನಿರ್ವಹಣೆ ಮಾಡಲಿದ್ದಾರೆ.
5.30ಕ್ಕೆ ನಡೆಯುವ ಸನ್ಮಾನ ಮತ್ತು ಸಮಾರೋಪ ಸಮಾರಂಭದಲ್ಲಿ ಮೈಸೂರು ಎಲೆಕ್ಟ್ರೀಕಲ್ ಇಂಡಸ್ಟ್ರೀಸ್ ನಿಗಮದ ಅಧ್ಯಕ್ಷರಾದ ಕೆ. ಶೇಷಾದ್ರಿ ಅವರು ಸಮ್ಮೇಳನಾಧ್ಯಕ್ಷರಿಗೆ ಗೌರವ ಅರ್ಪಣೆ ಮಾಡಲಿದ್ದು, ಕೆ.ಎಂ.ಎಫ್ ಅಧ್ಯಕ್ಷ ಪಿ.ನಾಗರಾಜು ಸನ್ಮಾನಿಸಲಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ವೆಂಕಟಾಚಲಯ್ಯ, ರಂಗಭೂ ಅಪ್ಪಾಜಿ ಚನ್ನಮಾನಹಳ್ಳಿ, ಸಮಾಜಸೇವೆಯಲ್ಲಿ ಶಫೀಕ್ ಅಹಮದ್, ಸಂಗೀತ ರಮಣಿ, ಚಿತ್ರಕಲೆ ನಾರಾಯಣ್ ಭಂಡಾರಿ, ಪರಿಸರ ಶಶಿ ಕುಮಾರ್, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಮಧುಸೂಧನ್, ಸಾಹಿತ್ಯ ಜಿ.ಹೆಚ್. ರಾಮಯ್ಯ, ಜಾನಪದ ಮಾಯಮ್ಮ, ಪತ್ರಿಕೋದ್ಯಮದಲ್ಲಿ ಗಿರೀಶ್ ಕೊತ್ತೀಪುರ, ರೈತ ಕ್ಷೇತ್ರದಲ್ಲಿ ಸುರೇಂದ್ರ ಹಾಗೂ ವೀರಯೋಧನ ಪತ್ನಿ ಗಾಯಿತ್ರಮ್ಮ ಅವರಿಗೆ ರೇಷ್ಮೆ ನಾಡು ಪ್ರಶಸ್ತಿ ನೀಡಲಾಗುತ್ತಿದೆ.
ಕೂಟಗಲ್ ಹೋಬಳಿಯ ಎಲ್ಲ ಶಾಲಾ ಮಕ್ಕಳು ಭಾಗವಹಿಸಲು ಬಿಇಒ ಮರಿಗೌಡ ಅವರು ಅನುಮತಿ ನೀಡಿದ್ದು, ಕಾಲೇಜು ವಿದ್ಯಾರ್ಥಿಗಳು ಸಹ ಭಾಗವಹಿಸಲಿದ್ದಾರೆ. ಊಟ, ಶಾಮಿಯಾನ ವ್ಯವಸ್ಥೆಯನ್ನು ಶ್ಯಾನುಭೋಗನಹಳ್ಳಿ ಗ್ರಾಮಸ್ಥರೇ ಮಾಡಿಕೊಡುತ್ತಿದ್ದು, ಸಾಹಿತ್ಯಾಸಕ್ತರಿಂದ ದಿವ್ಯ ಆತಿಥ್ಯ ನೀಡಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೂಟಗಲ್ ಹೋಬಳಿ ಕಸಾಪ ಅಧ್ಯಕ್ಷ ಚಿನ್ನಗಿರಿಗೌಡ, ತಾಲೂಕು ಕಸಾಪದ ಗೌರವಾಧ್ಯಕ್ಷ ಶಿವಸ್ವಾಮಿ, ಗೌರವ ಕಾರ್ಯದರ್ಶಿ ಕೃಷ್ಣ ಗೌಡಯ್ಯನದೊಡ್ಡಿ, ನಗರ ಘಟಕದ ಅಧ್ಯಕ್ಷ ಡೈರಿ ವೆಂಕಟೇಶ್, ಸಂಚಾಲಕರಾದ ಕಿರಣ್ ಬಿಳಗುಂಬ, ಸಮದ್, ಮಹದೇವ್, ಕೋಶಾಧ್ಯಕ್ಷರಾದ ರಾಜೇಶ್ ಕವಣಾಪುರ, ಪದಾಧಿಕಾರಿಗಳಾದ ಕಾಂತರಾಜು, ನಂಜುಡಿ ಬಾನಂದೂರು, ಮಹಮದ್ ಅಲೀಂ, ಹರಿಹಾನ್ ಷರೀಫ್ ಮತ್ತಿತರು ಉಪಸ್ಥಿತರಿದ್ದರು.

 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑