Tel: 7676775624 | Mail: info@yellowandred.in

Language: EN KAN

    Follow us :


ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಪಾದಯಾತ್ರೆ.

Posted date: 19 Jul, 2018

Powered by:     Yellow and Red

ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಪಾದಯಾತ್ರೆ.

ಸದ್ಯ ಎರಡು ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಯೂ ಆಗಿರುವ ಹೆಚ್ ಡಿ ಕುಮಾರಸ್ವಾಮಿ ಹಾಗೂ ರಾಜ್ಯ ಸರ್ಕಾರದ ಗಮನ ಸೆಳೆಯಲು ಬಿಜೆಪಿಯ ರಾಮನಗರ ಜಿಲ್ಲಾ ಘಟಕದ ವತಿಯಿಂದ ದಿನಾಂಕ 26ರಿಂದ28 ರ ನಡುವೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್ ತಿಳಿಸಿದರು.

ಮಾಜಿ ಶಾಸಕ ಸಿ ಪಿ ಯೋಗೇಶ್ವರ್ ರವರ ಮನೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಮಾನ್ಯ ಕುಮಾರಸ್ವಾಮಿ ಯವರು ಸರ್ಕಾರ ರಚನೆಯಾದ ಇಪ್ಪತ್ನಾಲ್ಕು ಗಂಟೆಗಳಲ್ಲಿ ಎಲ್ಲಾ ರೈತರ ಸಾಲಮನ್ನಾ ಮಾಡುವೆ ಎಂದು ಹೇಳಿದ್ದರು, ಎರಡು ತಿಂಗಳು ಕಳೆದರೂ ಸಂಪೂರ್ಣ ಸಾಲ ಮನ್ನಾ ಮಾಡಿಲ್ಲ, ಇದರ ವಿರುದ್ಧ ರಾಜ್ಯ ರೈತಸಂಘ (ಲಕ್ಷ್ಮಿ ನಾರಾಯಣ ಗಬ್ಬಾಡಿ ಬಣ) ದೊಟ್ಟಿಗೆ ಸೇರಿ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಿಂದ ವಿಧಾನಸೌಧಕ್ಕೆ ನಮ್ಮ ನಾಯಕರ ಜೊತೆಗೂಡಿ ಪಾದಯಾತ್ರೆ ಮಾಡುತ್ತೇವೆ ಎಂದರು.

ರಾಮನಗರ ಜಿಲ್ಲೆಯಲ್ಲಿ ಮಾವು ಮತ್ತು ತೋಟದ ಬೆಳೆಗಳ ಸಂಸ್ಕರಣ ಘಟಕಗಳ ಸ್ಥಾಪನೆ, ರಾಮನಗರದಲ್ಲಿ ನಿರ್ಮಾಣ ಮಾಡಲುದ್ದೇಶಿಸಿರುವ ರಾಜೀವ್ ಗಾಂಧಿ ಆರೋಗ್ಯ ವಿವಿ ಬದಲು ಕೆಂಗಲ್ ಹನುಮಂತಯ್ಯನವರ ಹೆಸರಿಡಲು ಒತ್ತಾಯ, ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸಲು ಒತ್ತಾಯ, ರೇಷ್ಮೆ ಗೆ ಬೆಂಬಲ ಬೆಲೆ, ಹಾಲಿಗೆ ಪ್ರೋತ್ಸಾಹ ಧನ ಹಾಗೂ ಇನ್ನಿತರ ರೈತೋಪಯೋಗಿ ಯೋಜನೆಗಳನ್ನು ರೂಪಿಸಬೇಕೆಂದು ಒತ್ತಾಯ ಮಾಡಲು ಈ ಪಾದಯಾತ್ರೆಯನ್ನು ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ ನಾಗರಾಜು, ತಾಲ್ಲೂಕು ಪಂಚಾಯತ ಅಧ್ಯಕ್ಷ ಹರೂರು ರಾಜಣ್ಣ, ಆರ್ ಎನ್ ಮಲವೇಗೌಡ, ಶಿವಲಿಂಗಯ್ಯ, ಸದಾನಂದ, ಆನಂದ ಸ್ವಾಮಿ, ಎಪಿಎಂಸಿ ಕುಮಾರ್ ಹಾಜರಿದ್ದರು.

ಗೋ ರಾ ಶ್ರೀನಿವಾಸ...
ಮೊ: 9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑