Tel: 7676775624 | Mail: info@yellowandred.in

Language: EN KAN

    Follow us :


ಕೊಪ್ಪ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ ನದಿಗೆ ಕಲುಸಿತ ನೀರು

Posted date: 22 Nov, 2018

Powered by:     Yellow and Red

ಕೊಪ್ಪ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ ನದಿಗೆ ಕಲುಸಿತ ನೀರು

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ  ಕೊಪ್ಪ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟದಿಂದಾಗಿ ಶಿಂಷಾ ನದಿಗೆ ಕಲುಷಿತ ನೀರು ಸೇರ್ಪಡೆಯಾಗಿದ್ದು, ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ಸ್ಥಗಿತ ಗೊಳಿಸಲಾಗಿದೆ.

ತಾಲೂಕಿನ ಇಗ್ಗಲೂರು ಗ್ರಾಮದ ಬಳಿ ಇರುವ ದೇವೇಗೌಡ ಬ್ಯಾರೇಜ್ ಅನ್ನು ಶಿಂಷಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದು, ನದಿಯ ನೀರನ್ನು ಬಳಸಿ ತಾಲೂಕಿನ ಎಲ್ಲಾ ಕೆರೆಗಳನ್ನು ಏತನೀರಾವರಿ ಯೋಜನೆ ಮೂಲಕ ತುಂಬಿಸಲಾಗುತ್ತಿದೆ. ಇದೀಗ ನದಿಗೆ ಕಲುಷಿತ ನೀರು ಸೇರ್ಪಡೆ ಗೊಂಡಿರುವ ಸಾಧ್ಯತೆ ಇರುವ ಕಾರಣ ಗುರವಾರ ಮಧ್ಯಾನದಿಂದ ತಾಲೂಕಿನ ಕೆರೆಗಳನ್ನು ತುಂಬಿಸುವ ೯ ಪಂಪು ಮೋಟರ್‌ಗಳನ್ನು ನಿಲ್ಲಿಸಲಾಗಿದೆ.

ಜಿಲ್ಲಾಧಿಕಾರಿ ಸೂಚನೆ: ಕೆರೆಗಳಿಗೆ ನೀರು ತುಂಬಿಸಿರುವುದನ್ನು ಸ್ಥಗಿತ ಗೊಳಿಸಿರುವ ಸಂಗತಿಯನ್ನು ದೃಢ ಪಡಿಸಿರುವ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಮೋಟರ್‌ಗಳನ್ನು ಬಂದ್ ಮಾಡಿರುವುದಾಗಿ ಬಯಲುಸೀಮೆ ಮತ್ತು sanmitra.co.in ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಮದ್ದೂರು ತಾಲೂಕಿನ ವಿವಿಧ ಭಾಗಗಳಲ್ಲಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಲಿಯ ತಜ್ಞರು ನೀರಿನ ಮಾದರಿಯನ್ನು ಸಂಗ್ರಹಿಸಿದ್ದು, ಪ್ರಯೋಗಾಲಯದಲ್ಲಿ ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ. ವರದಿ ಬಂದ ಬಳಿಕ ಕೆರೆಗಳಿಗೆ ನಿರು ತುಂಬಿಸುವ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಪರಿಶೀಲನೆ: ಕೊಪ್ಪ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಪೋಟದಿಂದ ಹೊರ ಬಂದಿರುವ ಕಲುಷಿತ ನೀರು ಶಿಂಷಾ ನದಿಗೆ ಸೇರಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ರಾಜೇಂದ್ರ ನೇತೃತ್ವದ ಅಧಿಕಾರಿಗಳ ತಂಡ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇಗ್ಗಲೂರು ಬ್ಯಾರೇಜ್ ಮತ್ತು ಏತನೀರಾವರಿ ಯೋಜನೆಯ ಪಂಪ್‌ಹೌಸ್‌ಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿದರು.

ಇಗ್ಗಲೂರಿಗೆ ಕಲುಷಿತ ನೀರು ಬಂದಿಲ್ಲ: ತಾಲೂಕಿನ ಗಡಿ ಭಾಗದಲ್ಲಿರುವ ಇಗ್ಗಲೂರು ಬ್ಯಾರೇಜ್‌ಗೆ ಕೊಪ್ಪ ಸಕ್ಕರೆ ಕಾರ್ಖಾನೆಯ ಕಲುಷಿತ ನೀರು ಸೇರ್ಪಡೆ ಗೊಂಡಿಲ್ಲ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ವೆಂಕಟೇಗೌಡ ತಿಳಿಸಿದ್ದಾರೆ.

ಈಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಮಂಡ್ಯ ಜಿಲ್ಲಾ ಭಾಗದಲ್ಲೇ ಕಲುಷಿತ ನೀರನ್ನು ಹೊರತೆಗೆಯುವ ಕೆಲಸ ಮಾಡಲಾಗುತ್ತಿದೆ. ಬ್ಯಾರೇಜ್‌ಗೆ ಶಿಂಷಾ ನದಿಗಿಂತ ಹೆಚ್ಚಾಗಿ ಮದ್ದೂರು ಕಡೆಯ ಹೆಬ್ಬಳ್ಳದಿಂದ ನೀರು ಬರುತ್ತಿದ್ದು, ಕಾರ್ಖಾನೆಯ ಹಾನಿಕಾರಕ ರಾಸಾಯಿನಕ ಬಂದಿರುವ ಸಾಧ್ಯತೆ ತೀರಾ ಕಡಿಮೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಲಿಯ ಅಂತಿಮ ವರದಿ ಕೈ ಸೇರುವ ವರೆಗೆ ನೀರನ್ನು ಸ್ಥಗಿತ ಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಾಯ್ಲರ್ ಹೊಡೆದು ಬಂದ ಕಲುಸಿತ ರಾಸಾಯನಿಕ ಮಿಶ್ರಿತ ನೀರು ಮದ್ದೂರು ತಾಲ್ಲೂಕಿನ ಹಲವಾರು ಜಮೀನು ಗಳ ಮೇಲೆ ಹರಿದುಬಂದಿರುವ ಕಾರಣ ಅಲ್ಲಿನ ಬೆಳೆ ಹಾಳಾಗಿರುವ ರೈತರಿಗೆ ಕಾರ್ಖಾನೆ ವತಿಯಿಂದ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿಸೆಂಬರ್ ನಲ್ಲಿ ಬಾಯ್ಲರ್ ಬದಲಾವಣೆ ಮಾಡಬೇಕಾಗಿದ್ದು ಅದು ಈ ತಿಂಗಳೇ ಸ್ಪೋಟಗೊಂಡಿರುವುದು ಆತಂಕಕ್ಕೀಡು ಮಾಡಿರುವುದಲ್ಲದೆ ಸಂಬಂಧಿಸಿದ ಕಾರ್ಖಾನೆಯ ಅಧಿಕಾರಿಗಳೇ ಹೊಣೆ, ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

 

ಗೋ ರಾ ಶ್ರೀನಿವಾಸ...

ಮೊ:9845856139.



 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑