Tel: 7676775624 | Mail: info@yellowandred.in

Language: EN KAN

    Follow us :


ಹುಕ್ಕಾ ಮತ್ತು ಮಾದಕ ಪದಾರ್ಥ ಸೇವಿಸಲು ಜಿಲ್ಲಾಧಿಕಾರಿ ಅನುಮತಿ !? ಆರಕ್ಷಕ ಉಪ ನಿರೀಕ್ಷಕ

Posted date: 23 Nov, 2018

Powered by:     Yellow and Red

ಹುಕ್ಕಾ ಮತ್ತು ಮಾದಕ ಪದಾರ್ಥ ಸೇವಿಸಲು ಜಿಲ್ಲಾಧಿಕಾರಿ ಅನುಮತಿ !? ಆರಕ್ಷಕ ಉಪ ನಿರೀಕ್ಷಕ

ಹುಕ್ಕಾ ಮತ್ತು ಮಾದಕ ಪದಾರ್ಥ ಸೇವಿಸಲು ಜಿಲ್ಲಾಧಿಕಾರಿ ಅನುಮತಿ !? ಆರಕ್ಷಕ ಉಪ ನಿರೀಕ್ಷಕ

ರಾಮನಗರ ಬಿಡದಿ ನಡುವೆ ಇರುವ ಮಾಯಗಾನಹಳ್ಳಿ ಗ್ರಾಮದ ಹೆದ್ದಾರಿಯಲ್ಲಿ ರಾಸ್ತಾ ಕೆಫೆ ಎಂಬ ಹೋಟೆಲ್ ಇದ್ದು ಆ ಹೋಟೆಲ್ ನಲ್ಲಿ ತಡರಾತ್ರಿವರೆಗೂ ಹುಕ್ಕಾ ಮತ್ತು ಮಾದಕವಸ್ತುಗಳನ್ನು ಸೇವಿಸುತ್ತಿದ್ದು ಕೂಗಳತೆ ದೂರದಲ್ಲಿಯೇ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಸರ್ಕಾರಿ ಕೈಗಾರಿಕಾ ತರಬೇತಿ ಕಾಲೇಜು ಇರುವುದರಿಂದ ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಅಲ್ಲಿನ ಪ್ರಾಂಶುಪಾಲರುಗಳು ರಾಮನಗರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ದೂರನ್ನು ಗಮನಿಸಿದ ಪೋಲಿಸ್ ವರಿಷ್ಠಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳ ಮೂಲಕ ವಿಚಾರಣೆ ನಡೆಸಿ, ದೂರುದಾರರಾದ ಪ್ರಾಂಶುಪಾಲರಿಗೆ ಈ ಅರ್ಜಿ ಸಂಬಂಧವಾಗಿ ರಾಸ್ತಾ ಕೆಫೆಯವರನ್ನು ಪೋಲಿಸ್ ಠಾಣೆಗೆ ಕರೆಸಿ ಸೂಕ್ತ ತಿಳುವಳಿಕೆ ನೀಡುರುತ್ತೆ, ಆದರೂ ಮಾನ್ಯ ಜಿಲ್ಲಾಧಿಕಾರಿಯವರಿಂದ ಅನುಮತಿ ಪಡೆದುಕೊಂಡಿರುವುದು ವಿಚಾರಣೆಯಿಂದ ತಿಳಿದುಬಂದಿರುತ್ತೆ. ಎಂಬುದಾಗಿ NO/RR/PS/ಸಕಾಲ ಅರ್ಜಿ/53/2018. ಎಂಬ ಪತ್ರದ ಮುಖೇನ ಉತ್ತರ ನೀಡಿದ್ದಾರೆ.

ಹುಕ್ಕಾ ಮತ್ತು ಮಾದಕ ವಸ್ತು ಸೇವನೆಗೆ ಜಿಲ್ಲಾಧಿಕಾರಿ ಅನುಮತಿಸಿದ್ದಾರೆಯೇ ?

ಮಾನ್ಯ ಜಿಲ್ಲಾಧಿಕಾರಿ ಗಳು ಹುಕ್ಕಾ ಮತ್ತು ಮಾದಕ ವಸ್ತು ಸೇವನೆಗೆ ರಾಸ್ತಾ ಕೆಫೆ ಹೋಟೆಲ್‌ ಗೆ ಅನುಮತಿ ನೀಡಿದ್ದಾರೆಯೇ ? ನೀಡಿದ್ದರೇ ಯಾವ ಕಲಂ ಅಡಿಯಲ್ಲಿ ಅನುಮತಿ ನೀಡಿದ್ದಾರೆ ? ಕೇವಲ ರಾಸ್ತಾ ಕೆಫೆ ಹೋಟೆಲ್ ಗೆ ಮಾತ್ರ ಅನುಮತಿ ನೀಡಿದ್ದಾರೋ ಅಥವಾ ಜಿಲ್ಲಾದ್ಯಂತ ಹಲವಾರು ಹೋಟೆಲ್ ಗಳಿಗೆ ನೀಡಿದ್ದಾರೋ ಎಂಬುದನ್ನು ಮಾಹಿತಿ ನೀಡಿರುವ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಗಳು ಸ್ಪಷ್ಟನೆ ನೀಡಬೇಕಾಗಿದೆ.

ರಾಸ್ತಾ ಕೆಫೆ ಮಾಲಿಕರಿಂದ ಬೂಸಾ ಕಾರ್ಖಾನೆ ನಿರ್ಮಾಣ ಮಕ್ಕಳ ಮೇಲೆ ದುಷ್ಪರಿಣಾಮ

ರಾಸ್ತಾ ಕೆಫೆ ಹೋಟೆಲ್ ಗೆ ಅಂಟಿಗೊಂಡಂತೆ ಸರ್ಕಾರಿ ಕೈಗಾರಿಕಾ ತರಬೇತಿ ಕಾಲೇಜು ಹಾಗೂ ಎರಡುನೂರಾ ಐವತ್ತು ಮಕ್ಕಳು ಮತ್ತು ಬೋಧಕ/ಬೋಧಕೇತರ ಸಿಬ್ಬಂದಿಯಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿದ್ದು ಈ ಎರಡು ಶಾಲೆಗಳ ನಡುವೆ ಇದೇ ರಾಸ್ತಾ ಕೆಫೆ ಮಾಲೀಕರು ಬೃಹತ್ ಬೂಸಾ (ಫೀಡ್ಸ್) ಕಾರ್ಖಾನೆಯನ್ನು ನಿರ್ಮಿಸುತಿದ್ದಾರೆ.

ಎರಡು ಶಾಲೆಗಳ ನಡುವೆ ಕಾರ್ಖಾನೆ ನಿರ್ಮಾಣವಾಗುತ್ತಿರುವುದರಿಂದ ಪರಿಸರ ಮಾಲಿನ್ಯ ಹಾಳಾಗುತ್ತಿರುವುದರ ಜೊತೆಗೆ ಶಾಲೆಯ ಎಳೆಯ ಮಕ್ಕಳು ಮತ್ತು ಕಾಲೇಜಿನ ಮಕ್ಕಳ ಆರೋಗ್ಯದ ದುಷ್ಪರಿಣಾಮ ಬೀರುವುದರಿಂದ ಈ ಕಾರ್ಖಾನೆ ಕಾಮಗಾರಿಯನ್ನು ಸ್ಥಗಿಸಗೊಳಿಸಬೇಕೆಂದು ಎರಡು ಶಾಲೆಯ ಪ್ರಾಂಶುಪಾಲರುಗಳು ಜಿಲ್ಲಾಧಿಕಾರಿ ಮತ್ತು ಪೋಲಿಸ್ ವರಿಷ್ಠಾಧಿಕಾರಿಗಳಿಗೆ ೨೬/೦೭/೨೦೧೮ ಅಂದರೆ ನಾಲ್ಕು ತಿಂಗಳಾಗುತ್ತಾ ಬಂದರು ಸಹ ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳದಿರುವುದು, ಕ್ರಮ ತೆಗೆದುಕೊಂಡಿದ್ದರೆ ಮಾಹಿತಿ ನೀಡದಿರುವುದು ಏಕೆ ಎಂಬುದರ ಬಗ್ಗೆಯೂ ಸ್ಪಷ್ಟನೆ ನೀಡಬೇಕಾಗಿದೆ.

ಮಕ್ಕಳ ಆರೋಗ್ಯಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ

ರಾಸ್ತಾ ಕೆಫೆ ಯಿಂದ ನಿರ್ಮಾಣವಾಗುತ್ತಿರುವ ಕಾರ್ಖಾನೆ ಮತ್ತು ಮಾದಕ ದ್ರವ್ಯ ವ್ಯಸನಿಗಳಿಂದ ಅಲ್ಲಿನ ಶಾಲಾ ಕಾಲೇಜಿನ ಮಕ್ಕಳ ಆರೋಗ್ಯ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವುದು ಖಚಿತ, ಭವಿಷ್ಯದ ಪ್ರಜೆಗಳು ಪೂರಕವಾಗದೇ ಮಾರಕವಾಗುವುದರ ಜೊತೆಗೆ ಆರೋಗ್ಯ ಹಾಳು ಮಾಡಲು ಜಿಲ್ಲಾಧಿಕಾರಿ ಮತ್ತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆಯಾದ್ದರಿಂದ ಖಡಕ್ ಅಧಿಕಾರಿ ಎಂದು ಹೆಸರು ಮಾಡಿರುವ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ರವರು ಹೋಟೆಲ್ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಹಾಗೂ ಪೋಲಿಸ್ ಇಲಾಖೆ ನೀಡಿರುವ ಉತ್ತರಕ್ಕೆ ಸ್ಪಷ್ಟನೆಯನ್ನು ನೀಡಬೇಕಾಗಿದೆ.

ಗೋ ರಾ ಶ್ರೀನಿವಾಸ...
ಮೊ:9845856139.

 


 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑