Tel: 7676775624 | Mail: info@yellowandred.in

Language: EN KAN

    Follow us :


ಪ್ರಾದೇಶಿಕ ಆಯುಕ್ತರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪರಿಶೀಲನೆ

Posted date: 31 Jan, 2018

Powered by:     Yellow and Red

ಪ್ರಾದೇಶಿಕ ಆಯುಕ್ತರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪರಿಶೀಲನೆ

ರಾಮನಗರ : ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಶಿವಯೋಗಿ ಸಿ ಕಳಸದ್ ಅವರು ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ಕುರಿತು ಜ.30ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಡಾ. ಬಿ.ಆರ್. ಮಮತಾ, ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರ್. ಲತಾ, ಅಪರ ಜಿಲ್ಲಾಧಿಕಾರಿ ಡಾ. ಆರ್. ಪ್ರಶಾಂತ್ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರ ಸಭೆಯಲ್ಲಿ ಭಾಗವಹಿಸಿದ್ದರು.

ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ನೋಂದಾಯಿಸಿಕೊಳ್ಳುವ ಅವಧಿಯನ್ನು ಇದೇ ಜ. 22ರ ವರೆಗೆ ಮುಂದೂಡಲಾಗಿತ್ತು. ಈ ಅವಧಿಯಲ್ಲಿ ಜಿಲ್ಲೆಯ ನಾಲ್ಕೂ ತಾಲ್ಲೂಕುಗಳಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದವರ ವಿವರ, ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ವರ್ಗಾವಣೆಗೊಂಡವರ ವಿವರ ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲಾಗಿರುವ ವಿವರದ ಬಗ್ಗೆ ಕೂಲಂಕುಷವಾಗಿ ಪರಿಷ್ಕರಿಸಿದ ಪ್ರಾದೇಶಿಕ ಆಯುಕ್ತರು ಮತದಾರರ ಪಟ್ಟಿಯಲ್ಲಿ ಹೆಸರುಗಳು ತಿರಸ್ಕøತವಾಗಿರುವುದಕ್ಕೆ ಸ್ಪಷ್ಟಕಾರಣಗಳ ವಿವರವನ್ನು ಕೇಳಿದರು.

ಆ ಸಂದರ್ಭದಲ್ಲಿ ಮಾತನಾಡಿದ ಮಾಗಡಿ ತಹಶೀಲ್ದಾರರು, ಮಾಗಡಿ ತಾಲ್ಲೂಕಿನಲ್ಲಿ 19 ಅರ್ಜಿಗಳು ತಿರಸ್ಕøತಗೊಂಡಿದ್ದು, ಸೂಕ್ತ ದಾಖಲಾತಿಗಳು ಇಲ್ಲದ ಕಾರಣ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದರು.

ಜಿಲ್ಲಾ ಚುನಾವಣಾ ವೆಬ್‍ಸೈಟ್‍ನಲ್ಲಿ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ವಿವರಗಳನ್ನು ಅಪ್‍ಲೋಡ್ ಮಾಡುವಂತೆ ಸೂಚಿಸಿದ ಪ್ರಾದೇಶಿಕ ಆಯುಕ್ತರು, ಈ ಸಂದರ್ಭದಲ್ಲಿ ಪತದಾರರ ಪಟ್ಟಿ ಪರಿಷ್ಕರಣೆಯು ತುಂಬಾ ಪ್ರಾಮುಖ್ಯತೆ ಗಳಿಸಿದ್ದು, ಸಾರ್ವಜನಿಕರಿಂದ ಅಹವಾಲುಗಳು ಬಂದಲ್ಲೀ ಅವುಗಳನ್ನು ಸಹ ವೆಬ್‍ಸೈಟ್‍ನಲ್ಲಿ  ಪ್ರಕಟಿಸುವಂತೆ ತಿಳಿಸಿದರು. ಅದೇ ರೀತಿ ಮತದಾರರ ಪಟ್ಟಿಯಲ್ಲಿ ಮರಣ ಹೊಂದಿದವರ ಹೆಸರುಗಳನ್ನು ತೆಗೆದುಹಾಕುವಂತೆ ಹಾಗೂ ಪುರುಷ ಹಾಗೂ ಮಹಿಳಾ ಮತದಾರರ ಸರಾಸರಿಯಲ್ಲಿ ಸಾಕಷ್ಟು ಅಂತರವಿದ್ದಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನು ಪತ್ತೆ ಮಾಡಿ ವರದಿ ನೀಡುವಂತೆ ತಿಳಿಸಿದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑