Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಯಾಗಿ ಸಾಹಿತ್ಯಕ–ಸಾಂಸ್ಕೃತಿಕ ಮನೋಭಿವ್ಯಕ್ತಿತ್ವದ ಎಸ್. ರುದ್ರೇಶ್ವರ ನೇಮಕ

Posted date: 26 Nov, 2018

Powered by:     Yellow and Red

ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಯಾಗಿ ಸಾಹಿತ್ಯಕ–ಸಾಂಸ್ಕೃತಿಕ ಮನೋಭಿವ್ಯಕ್ತಿತ್ವದ ಎಸ್. ರುದ್ರೇಶ್ವರ ನೇಮಕ

ಜಾತ್ಯಾತೀತ ಮನೋಧರ್ಮ, ಸಾಮಾಜಿಕ ಕಳಕಳಿ ಮತ್ತು ಸಾಂಸ್ಕೃತಿಕ ಅಭಿರುಚಿಯ ಸಮ್ಮಿಳಿತದ ವ್ಯಕ್ತಿತ್ವ ಹೊಂದಿರುವ ಎಸ್. ರುದ್ರೇಶ್ವರ ಅವರನ್ನು ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. 

 

ವಿದ್ಯಾರ್ಥಿ ದೆಸೆಯಿಂದಲೆ ಸಾಹಿತ್ಯ ಮತ್ತು ಸಂಸ್ಕೃತಿಯ ಅಭಿರುಚಿಯನ್ನು ಮೈಗೂಡಿಸಿಕೊಂಡು ಬಂದ ರುದ್ರೇಶ್ವರ ಅವರು ಪದವಿ ಓದುತ್ತಿರುವಾಗಲೆ ಸಾಹಿತ್ಯ ಕೃಷಿಗೆ ತಮ್ಮನ್ನು ತೊಡಗಿಸಿಕೊಂಡವರು.

 

ಪ್ರಾರಂಭದಲ್ಲಿ ಕವನಗಳ ಮೂಲಕ ತಮ್ಮ ಅಭಿವ್ಯಕ್ತಿಯನ್ನು ರೂಪಿಸಿಕೊಂಡ ಇವರು ನಂತರದ ದಿನಗಳಲ್ಲಿ ಸಾಹಿತ್ಯದ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಂಡು ಪತ್ರಿಕೆಗಳಿಗೆ ಲೇಖನಗಳನ್ನು ಬರೆಯುವ ಮೂಲಕ ಜಿಲ್ಲೆಯ ಯುವ ಸಾಹಿತ್ಯ ಪ್ರತಿಭೆಯಾಗಿ ರೂಪುಗೊಂಡರು. ಇವರ ತಂದೆ ಕೆ.ಎಸ್. ಶಿವಮೂರ್ತಿ, ತಾಯಿ ಸುಮಿತ್ರ.

 

ಯುವ ಸಾಹಿತ್ಯ ಪ್ರತಿಭೆ ಎಸ್.ರುದ್ರೇಶ್ವರ ಅವರು ತಮ್ಮ ಸಾಹಿತ್ಯ, ಸಾಂಸ್ಕೃತಿಕ ಕೃಷಿಯ ಮೂಲಕ ಜಿಲ್ಲೆಯ ಜನಮಾನಸದಲ್ಲಿ ತಮ್ಮ ಚಾಪನ್ನು ಮೂಡಿಸುತ್ತಿದ್ದಾರೆ. ಅಧ್ಯಯನ ಮತ್ತು ಬರಹದಲ್ಲಿಯೇ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.

 

‘ಕನ್ನಡ ಸಾಹಿತ್ಯ’ದಲ್ಲಿ ಹಾಗೂ ‘ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ’ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಜೊತೆಗೆ ‘ರಾಮನಗರ ಜಿಲ್ಲೆಯ ಸ್ಥಳನಾಮಗಳು’ ಎಂಬ ವಿಯಷದ ಮೇಲೆ ಸಂಶೋಧನಾ ಪ್ರಬಂಧ ಮಂಡಿಸಿ ಆಂದ್ರಪ್ರದೇಶದ ಕುಪ್ಪಂನಲ್ಲಿರುವ ದ್ರಾವಿಡ ವಿಶ್ವವಿದ್ಯಾನಿಲಯದಿಂದ ಎಂ.ಫಿಲ್ ಪದವಿಯನ್ನು ಪಡೆದಿದ್ದಾರೆ.

 

ಈಗ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ‘ರಾಮನಗರ ಜಿಲ್ಲೆಯ ಬುಡಕಟ್ಟುಗಳ ಸಾಂಸ್ಕೃತಿಕ ಸ್ಥಿತ್ಯಂತರಗಳು’ ಎಂಬ ವಿಷಯವನ್ನು ಕುರಿತು ಸಂಶೋಧನೆ (ಪಿಎಚ್‍.ಡಿ) ಕೈಗೊಂಡಿದ್ದಾರೆ.

 

ಶೈಕ್ಷಣಿಕ ಸಾಧನೆಯ ಜೊತೆಜೊತೆಗೆ ಸಾಹಿತ್ಯ ಕ್ಷೇತ್ರ ಹಾಗು ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುತ್ತಾರೆ. ‘ಸನ್ಮಿತ್ರ’ ದಿನಪತ್ರಿಕೆಯನ್ನು ಪ್ರಾರಂಭಿಸಿ ಅದರ ಸಂಪಾದಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸಂಜೆಸಮಾಚಾರ, ಬೆಂಗಳೂರು ಖಡ್ಗ, ವಾರ್ತಾಭಾರತಿ ದಿನಪತ್ರಿಕೆಗಳ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ‘ಪ್ರಜಾವಾಣಿ’ ದಿನಪತ್ರಿಕೆಯಲ್ಲಿ ಜಿಲ್ಲಾ ಸಹಾಯಕ ವರದಿಗಾರನಾಗಿ ಕರ್ತವ್ಯನಿರ್ವಹಿಸುತ್ತಿದ್ದಾರೆ. 

 

ಪತ್ರಿಕೋದ್ಯಮ ವೃತ್ತಿಯೊಂದಿಗೆ ತಮ್ಮ ಸಾಹಿತ್ಯ ಪ್ರತಿಭೆಯ ಮೂಲಕ ಸಮಾಜವನ್ನು ತಿದ್ದುವ ಕವನಗಳನ್ನು, ಸಮಾಜದ ಪ್ರತಿಬಿಂಬವಾದ ಕತೆಗಳನ್ನು, ಅಷ್ಟೆ ಅರಿತವಾದ ಲೇಖನಗಳನ್ನು ಬರೆದು ಯುವಸಾಹಿತಿ ಎಂದು ಗುರುತಿಸಲ್ಪಟ್ಟಿದ್ದಾರೆ.

 

ತಾನೊಬ್ಬನೆ ಬೆಳೆದರೆ ಸಾಲದು ಎಂದು ಉದಯೋನ್ಮುಖ ಬರಹಗಾರರಿಗೆ, ಚಳುವಳಿಗಾರರಿಗೆ, ಹೋರಾಟಗಾರರಿಗೆ, ಸಾಮಾಜಿಕ ಕಳಕಳಿ ಇರುವವರಿಗೆ ಸ್ಪೂರ್ತಿ ತುಂಬುತ್ತಾ, ಜನರಲ್ಲಿ ಸಾಹಿತ್ಯ ಪ್ರಜ್ಞೆಯನ್ನು ಹೆಚ್ಚಿಸುವುದರಲ್ಲಿ ತಮ್ಮದೇ ಆದ ರೀತಿಯಲ್ಲಿ ಶ್ರಮಿಸುತ್ತಿದ್ದಾರೆ. ಇವೆಲ್ಲದರ ಜೊತೆಗೆ ಸಮಾಜದ ಅಸಮಾನತೆ ವಿರುದ್ಧ ಸಮರ ಸಾರುವ ದೀನದುರ್ಬಲರ ನೋವು, ಸಂಕಟಗಳಿಗೆ ಪ್ರಾಮಾಣಿಕ ದನಿಯಾಗಿದ್ದಾರೆ.

 

ಹಲವು ಸೂಪ್ತ ಪ್ರತಿಭೆಗಳನ್ನು ತಮ್ಮ ಬರಹದ ಮೂಲಕ ಸಮಾಜಕ್ಕೆ ಪರಿಚಯಿಸಿರುವ ಇವರು, ಇರುಳಿಗರು, ಬುಡಕಟ್ಟು ಜನರು, ದೀನ ದಲಿತರ ನೋವುಗಳನ್ನು ತಮ್ಮ ಅರಿತವಾದ ಲೇಖನದ ಮೂಲಕ ಸಮಾಜದ ಮುಖ್ಯವಾಹಿನಿಗೆ ತಿಳಿಸಿದ್ದಾರೆ.

 

ಪತ್ರಿಕೋದ್ಯಮದ ಜೊತೆಗೆ ಸಮಾಜಮುಖಿ, ಸಾಹಿತ್ಯಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. 



 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑