Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣ ದಲ್ಲಿ ಅನಿತಾ ದರ್ಬಾರ್ ಬಿಜೆಪಿಗರ ಆರೋಪ

Posted date: 06 Dec, 2018

Powered by:     Yellow and Red

ಮುಖ್ಯಮಂತ್ರಿ ತವರುಜಿಲ್ಲೆಯಲ್ಲಿ ಪತಿ ಮತ್ತು ಪತ್ನಿ ಇಬ್ಬರೂ ಅವಳಿ ನಗರವೆಂದೇ ಉಲ್ಲೇಖಗೊಂಡಿರುವ ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ ಜಯಶಾಲಿಗಳಾಗಿದ್ದು, ಎರಡು ಕ್ಷೇತ್ರದಲ್ಲೂ ಅನಿತಾ ಕುಮಾರಸ್ವಾಮಿ ಯವರು ತಮ್ಮ ಅಂಧ ಮತ್ತು ಏಕಮುಖಿಯಾಗಿ ಅಧಿಕಾರ ಚಲಾಯಿಸುತ್ತಿರುವುದರಿಂದ ಕ್ಷೇತ್ರಗಳಲ್ಲಿ ಅರಾಜಕತೆ ತಾಂಡವವಾಡುತ್ತಿರುವುದಲ್ಲದೆ ಮುಖ್ಯಮಂತ್ರಿ  ಹೆಚ್‌,ಡಿ.ಕುಮಾರಸ್ವಾಮಿ ವತಿಯಿಂದ ತಾಲೂಕಿಗೆ ಯಾವುದೇ ರೀತಿಯ ಹೊಸ ಕೊಡುಗೆಯನ್ನು ನೀಡದೆ ಈ ಕ್ಷೇತ್ರದ ಮತದಾರರಿಗೆ ವಂಚಿಸುತಿದ್ದಾರೆ ಎಂದು ಚನ್ನಪಟ್ಟಣ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಮುಖ್ಯಮಂತ್ರಿ ಹಾಗೂ ರಾಮನಗರ ಶಾಸಕಿ ಅನಿತಾಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು
ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಅಮಾಯಕರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಪೋಲಿಸ್ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಜೆಡಿಎಸ್ ಮುಖಂಡರು ತಾಲೂಕಿನಲ್ಲಿ  ಗೂಂಡಾಗಿರಿ ನಡೆಸುತ್ತಿದ್ದಾರೆ ಎಂದು ದೂರಿದರು.

ಅಲ್ಲದೇ ಈ ಹಿಂದೆ ಯೋಗೇಶ್ವರ್ ರವರು ರೂಪಿಸಿದ್ದ ಹಲವಾರು ಯೋಜನೆಗಳನ್ನು ರಾಮನಗರ ಶಾಸಕಿ ಅನಿತಾಕುಮಾರಸ್ವಾಮಿ ತಾಲೂಕಿನಲ್ಲಿ ಮತ್ತೆ ಚಾಲನೆ ನೀಡುವ ಮೂಲಕ ಕ್ಷೇತ್ರದ ಜನರನ್ನ ದಾರಿ ತಪ್ಪಿಸುವ ಕೆಲಸವನ್ನ ಮಾಡುತಿದ್ದಾರೆ, ಜೊತೆಗೆ ತಾಲೂಕಿನಲ್ಲಿ ಮರಳು ಗಣಿಗಾರಿಕೆಗೆ ಜೆಡಿಎಸ್ ಮುಖಂಡರು ಉತ್ತೇಜನ ನೀಡುತ್ತಿದ್ದಾರೆ‌ ಎಂದು ಆರೋಪಿಸಿದ್ದರು.

ಇದೇವೇಳೆ ಅನಿತಾಕುಮಾರಸ್ವಾಮಿ ರಾಮನಗರ ಕ್ಷೇತ್ರಕ್ಕೆ ಮಾತ್ರ ಶಾಸಕಿ, ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರ‌ಮಕ್ಕೆ ಚಾಲನೆ ನೀಡಲು ಅವರು ಯಾರು ? ಅವರಿಗೆ ಸೂಪರ್ ಪವರ್ ಕೊಟ್ಟವರು ಯಾರು ಎಂದು  ಪ್ರಶ್ನೆ ಮಾಡಿದ ತಾಲ್ಲೂಕು ಬಿಜೆಪಿ ಮುಖಂಡರು, ಚನ್ನಪಟ್ಟಣ ದ ಜನ ಮತ ನೀಡಿರುವುದು ಇಲ್ಲಿ ಸ್ಪರ್ಧಿಸಿದ್ದ ಕುಮಾರಸ್ವಾಮಿರವರಿಗೆ ಆದರೆ ಕ್ಷೇತ್ರದಲ್ಲಿ ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಇಲ್ಲಿ ದರ್ಬಾರ್ ನಡೆಸುತ್ತಿದ್ದು ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಬಿಸಿಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲವೇಗೌಡ, ತಾಲೂಕು ಅಧ್ಯಕ್ಷ ಎಂ.ಎನ್.ಅನಂದಸ್ವಾಮಿ, ತಾಲೂಕು ಪಂಚಾಯತ್ ಅಧ್ಯಕ್ಷ ಹರೂರು ರಾಜಣ್ಣ, ತಾಲ್ಲೂಕು ಪಂಚಾಯತಿ ಸದಸ್ಯ ಪ್ರಭು, ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...
ಮೊ: 9845856139.



 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑