Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ರೋಟರಿ ಕ್ಲಬ್‌ : ಜಿಲ್ಲಾ ಪಾಲಕರ ಅಧಿಕೃತ ಭೇಟಿ ಸಮಾರಂಭ

Posted date: 07 Jan, 2019

Powered by:     Yellow and Red

ರಾಮನಗರ ರೋಟರಿ ಕ್ಲಬ್‌ : ಜಿಲ್ಲಾ ಪಾಲಕರ ಅಧಿಕೃತ ಭೇಟಿ ಸಮಾರಂಭ

ನಗರದ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ರೋಟರಿ ಸಂಸ್ಥೆಯ ಜಿಲ್ಲಾ ಪಾಲಕರ ಅಧಿಕೃತ ಭೇಟಿ ಸಮಾರಂಭ ನಡೆಯಿತು.
ರೋಟರಿ ಸಂಸ್ಥೆಯ ಜಿಲ್ಲಾ ಪಾಲಕ ಸುರೇಶ್‌ ಹರಿ ಮಾತನಾಡಿ ದೇಶದಲ್ಲಿ ಪೊಲಿಯೋ ನಿರ್ಮೂಲನೆ ಮಾಡುವಲ್ಲಿ ರೋಟರಿ ಕ್ಲಬ್‌ ಪ್ರಮುಖ ಪಾತ್ರ ವಹಿಸಿದೆ. ಪೊಲಿಯೋ ಸಮಾಜದ ಅಭಿವೃದ್ಧಿಗೆ ಮಾರಕವಾಗಿದೆ. ಈಗಲೂ ಕೆಲವು ದೇಶಗಳಲ್ಲಿ ಪೊಲಿಯೋ ನಿರ್ಮೂಲನೆಯಾಗಿಲ್ಲ. ಆದ್ದರಿಂದ ಎಲ್ಲರೂ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ರೋಟರಿ ಸಂಸ್ಥೆ ಪ್ರಾರಂಭವಾಗಿ 113ವರ್ಷಗಳಾಗಿದೆ. ರಾಮನಗರದಲ್ಲಿ ರೋಟರಿ ಸಂಸ್ಥೆಯು 48 ವರ್ಷಗಳಿಂದ ಸಮಾಜಸೇವಾ ಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ತಿಳಿಸಿದರು.
ರೋಟರಿ ಸಂಸ್ಥೆ ಉತ್ತಮ ಗೌರವವಿದ್ದು ಇಲ್ಲಿ ಸದಸ್ಯರಾದರೆ ನಾಯಕತ್ವದ ಗುಣಗಳನ್ನು ರೂಡಿಸಿಕೊಳ್ಳಬಹುದು.ಇದರ ಮೂಲಕ ಸಾಮಾಜಿಕವಾಗಿ ಮುನ್ನಡೆಯಬಹುದು ಎಂದು ತಿಳಿಸಿದರು. 

ರಾಮನಗರದಲ್ಲಿ ರೋಟರಿ ಸಂಸ್ಥೆ, ರೋಟರಿ ಸಿಲ್ಕ್‌ ಸಿಟಿ ಸಂಸ್ಥೆ ಸೇರಿ 100 ಮಂದಿ ಸದಸ್ಯರಿದ್ದಾರೆ. ಆದರೆ ರಾಮನಗರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯಿದೆ. ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವವರನ್ನು ಹುಡುಕಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಸದಸ್ಯರನ್ನಾಗಿ ಮಾಡಿ ಎಂದರು.

ತಂತ್ರಜ್ಞಾನದ ಆವಿಷ್ಕಾರಗಳನ್ನು ಯುವಸಮುದಾಯ ಸದುಪಯೋಗ ಪಡಿಸಿಕೊಂಡು ಸಮಾಜದ ಪ್ರಗತಿಗೆ ಕಾರಣರಾಗಬೇಕು. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ನಾಗರಿಕರು ಪ್ರಯತ್ನ ನಡೆಸಿದಾಗ ಮಾತ್ರ ಉತ್ತಮ ಪರಿಸರ ನಿರ್ಮಾಣ ಮಾಡಲು ಸಾಧ್ಯ. ಸಂಘ ಸಂಸ್ಥೆಗಳು ಕ್ರಿಯಾಶೀಲರಾಗಿ ಬಡವರ ನೆರವಿಗೆ ಧಾವಿಸುವ ಮನೋಭಾವ ರೂಢಿಸಿಕೊಳ್ಳಬೇಕು ಎಂದರು.
ರೋಟರಿ ಸಂಸ್ಥೆ ಅಧ್ಯಕ್ಷ ಡಿ.ಪಿ. ಶಂಕರಲಿಂಗೇಗೌಡ ಮಾತನಾಡಿ ರಾಮನಗರ ರೋಟರಿ ಕ್ಲಬ್‌ ವಿವಿದ ಸಮಾಜಮುಖಿ ಕಾರ್ಯಕ್ರಮಗಳ ಜತೆಗೆ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಮೂಲಕ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೂಟಗಲ್ ಪಂಡಿತ್‌ ನೆಹರೂ ಪ್ರೌಢಶಾಲೆಗೆ ಬ್ಯಾಂಡ್‌ಸೆಟ್‌ ಅನ್ನು ವಿತರಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಸಮಾಜ ಸೇವಕ ಆರ್. ದೊಡ್ಡವೀರಯ್ಯ, ಪ್ರಗತಿಪರ ರೈತ ಎಸ್.ಟಿ. ಪ್ರೇಮ್‌ಕುಮಾರ್, ಶೈಕ್ಷಣಿಕ ತಜ್ಞ ಸೈಯ್ಯದ್‌ ತಲ್ಹಾ ಪಾಷಾ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಎಸ್. ರುದ್ರೇಶ್ವರ ಅವರನ್ನು ಸನ್ಮಾನಿಸಲಾಯಿತು. ರೋಟರಿ ಕ್ಲಬ್‌ ನ ‘ಅರ್ಕಾವತಿ’ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.

ರೋಟರಿ ಸಂಸ್ಥೆಯ ಸಹಾಯಕ ಜಿಲ್ಲಾ ಪಾಲಕ ಬಿ.ಆರ್. ಶೀತಲ್‌ಕುಮಾರ್, ಜಿಲ್ಲಾ ಕಾರ್ಯದರ್ಶಿ ಎ. ತಿರುಮುರುಗನ್, ಕಾರ್ಯದರ್ಶಿ ಎಸ್.ಬಿ. ಸುನೀಲ್, ಪದಾಧಿಕಾರಿಗಳಾದ ಎಲ್. ಚಂದ್ರಶೇಖರ್, ಎಲ್.ಸಿದ್ದಪ್ಪಾಜಿ, ಆರ್. ಕುಮಾರಸ್ವಾಮಿ, ಅಲ್ತಾಪ್‌ ಅಹಮದ್, ಎಸ್.ನಾಗಭೂಷಣ್, ನಾಗರಾಜಯ್ಯ, ಡಿ. ಪುಟ್ಟಸ್ವಾಮಿ ಮುಂತಾದವರು ಪಾಲ್ಗೊಂಡಿದ್ದರು. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑