Tel: 7676775624 | Mail: info@yellowandred.in

Language: EN KAN

    Follow us :


ರಾಮನಗರದಲ್ಲಿ ಹೆದ್ದಾರಿ ಸಂಜೀವಿನಿ ಮಾರುಕಟ್ಟೆ ಮಳಿಗೆ : ಡಾ.ಬಿ.ಆರ್. ಮಮತಾ

Posted date: 10 Jan, 2019

Powered by:     Yellow and Red

ರಾಮನಗರದಲ್ಲಿ ಹೆದ್ದಾರಿ ಸಂಜೀವಿನಿ ಮಾರುಕಟ್ಟೆ ಮಳಿಗೆ : ಡಾ.ಬಿ.ಆರ್. ಮಮತಾ

ಕುಂಬಾಪುರದ ಬಳಿ ಇರುವ ಕಾವೇರಿ ಮಣ್ಣಿನ ಕಲಾಕೃತಿಗಳ ಸಂಕೀರ್ಣ ಮತ್ತು ಮಾರಾಟ ಮಳಿಗೆ ಕೇಂದ್ರದಲ್ಲಿ ಹೆದ್ದಾರಿ ಸಂಜೀವಿನಿ ಮಾರುಕಟ್ಟೆ ಮಳಿಗೆ ಪ್ರಾರಂಭಿಸಲಾಗುವುದು ಎಂದು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ನಿರ್ದೇಶಕಿ ಡಾ.ಬಿ.ಆರ್. ಮಮತಾ ತಿಳಿಸಿದರು. 
ಕುಂಬಾಪುರದ ಬಳಿ ಇರುವ ಕುಂಬಾರಿಕೆ ಕಲಾ ಸಂಕೀರ್ಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅವರು ಮಾತನಾಡಿದರು. ಈ ಪ್ರದೇಶದಲ್ಲಿ 30 ಮಳಿಗೆಗಳು, ಕ್ಯಾಂಟೀನ್, ವಸತಿ ಗೃಹಗಳನ್ನು ನಿರ್ಮಿಸಲಾಗುವುದು. ಜತೆಗೆ ವಿವಿಧ ಕರಕುಶಲ ವಸ್ತುಗಳನ್ನು ತಯಾರಿಸುವ ಪ್ರಾತ್ಯಕ್ಷಿಕೆಯನ್ನು ಸಹ ತೋರಿಸಲಾಗುವುದು ಎಂದು ತಿಳಿಸಿದರು. 

ಹೆದ್ದಾರಿ ಸಂಜೀವಿನಿ ಮಾರುಕಟ್ಟೆ ಮಳಿಗೆಯನ್ನು ಸ್ಥಾಪಿಸಲು ಪ್ರಸ್ತಾವನೆಯನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗುವುದು. ಇಲ್ಲಿ 1.6 ಎಕರೆ ಪ್ರದೇಶವಿದ್ದು, ಖಾಲಿ ಇರುವ ಈ ಪ್ರದೇಶವನ್ನು ಸಮಪರ್ಕವಾಗಿ ಬಳಸಿಕೊಂಡು ಗ್ರಾಹಕರ- ಉತ್ಪಾದಕರ ಸಂಪರ್ಕ ಹಾಗೂ ಮತ್ತಿತರ ಅಂಶಗಳ ಮಾಹಿತಿ ವಿನಿಮಯ ಮಾಡಿಕೊಳ್ಳಲು ಅನುಕೂಲ ಕಲ್ಪಿಸಲಾಗುವುದು ಎಂದರು.
ಮಹಿಳಾ ಸ್ವಸಹಾಯ ಗುಂಪಿನ ಸದಸ್ಯರು ತಯಾರಿಸುವ ಗೃಹೋಪಯೋಗಿ ಹಾಗೂ ಗುಡಿ ಕೈಗಾರಿಕೆ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸಿ, ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿಸುವುದು ಇದರ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಇಲ್ಲಿ ವಿವಿಧ ವೈವಿಧ್ಯಮಯ ಉತ್ಪನ್ನಗಳ ತಯಾರಿಕೆ, ಪ್ಯಾಕಿಂಗ್‌, ಬೈಂಡಿಂಗ್‌, ಮಾರುಕಟ್ಟೆ ಸೌಲಭ್ಯ, ಕೌಶಲ, ಗ್ರಾಹಕರ- ಉತ್ಪಾದಕರ ಸಂಪರ್ಕ ಹಾಗೂ ಮತ್ತಿತರ ಅಂಶಗಳ ಮಾಹಿತಿ ವಿನಿಮಯ ಮಾಡಿಕೊಳ್ಳಲು ಅನುಕೂಲ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಇದರಿಂದ ಸ್ವ ಸಹಾಯ ಗುಂಪುಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ರಾಷ್ಟ್ರೀಯ ಮಾರುಕಟ್ಟೆ ದೊರೆಯುವ ಮೂಲಕ ಆದಾಯ ಹಾಗೂ ಜೀವನ ಮಟ್ಟ ಸುಧಾರಿಸುತ್ತದೆ ಎಂದು ತಿಳಿಸಿದರು.
ಪ್ರತಿ ಗುಂಪಿಗೆ ಎರಡು ವಾರಗಳ ಅವಕಾಶ ನೀಡಲಾಗುವುದು. ಎಲ್ಲಾ ಗುಂಪುಗಳಿಗೂ ಅವಕಾಶ ಸಿಗುವಂತೆ ನೋಡಿಕೊಳ್ಳಲಾಗುವುದು. ಗ್ರಾಮೀಣ ಬಡ ಮತ್ತು ದುರ್ಬಲ ವರ್ಗದ  ಕುಟುಂಬಗಳ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಜೀವನೋಪಾಯ ಕಾರ್ಯಕ್ರಮಗಳನ್ನು ಲಾಖೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಪ್ರತಿದಿನ ನೂರಾರು ಪ್ರವಾಸಿಗರು ಸಂಚರಿಸುತ್ತಾರೆ. ಜತೆಗೆ ವಾಹನ ನಿಲುಗಡೆಯ ವ್ಯವಸ್ಥೆಯೂ ಚೆನ್ನಾಗಿರುವುದರಿಂದ ಪ್ರವಾಸಿಗರು ಸೇರಿದಂತೆ ಎಲ್ಲರಿಗೂ ಅನುಕೂಲವಾಗಲಿದೆ. ಮಾದರಿಯಾದ ಹೆದ್ದಾರಿ ಸಂಜೀವಿನಿ ಮಾರುಕಟ್ಟೆ ಮಳಿಗೆ ಇದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮುಲ್ಲೈಮುಹಿಲನ್ ಮಾತನಾಡಿ ಸಂಜೀವಿನಿ ಮಾರುಕಟ್ಟೆ ಮಳಿಗೆಯನ್ನು ನಿರ್ಮಿಸಲು ಜಿಲ್ಲಾ ಪಂಚಾಯಿತಿ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಹೊನಮಾನೆ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ನಾಗರಾಜು, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಹಿರಿಯ ವ್ಯವಸ್ಥಾಪಕ ಎಂ.ಎನ್. ನಾಗೇಂದ್ರಪ್ಪ ಮುಂತಾದವರು ಪಾಲ್ಗೊಂಡಿದ್ದರು.  

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑