Tel: 7676775624 | Mail: info@yellowandred.in

Language: EN KAN

    Follow us :


ಬ್ರಿಟೀಷರ ಕಾಲದಲ್ಲಿ ಪಡೆದುಕೊಂಡಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು ಧನಂಜಯ

Posted date: 26 Jan, 2019

Powered by:     Yellow and Red

ಬ್ರಿಟೀಷರ ಕಾಲದಲ್ಲಿ ಪಡೆದುಕೊಂಡಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು ಧನಂಜಯ

ಬಹುತೇಕ ಬುದ್ದಿಜೀವಿಗಳು ಬ್ರಿಟೀಷರು ನಮಗೆ ಶಿಕ್ಷಣ ಕೊಟ್ಟರು, ರೈಲು ಕೊಟ್ಟರು, ಅಂಚೆ ಪರಿಚಯಿಸಿದರು, ಅವರ ಕೊಡುಗೆ ನಮ್ಮ ದೇಶಕ್ಕೆ ಬಹಳ ಇದೆ ಎಂದು ಮಾತನಾಡುತ್ತಾರೆ, ಅವರು ಅಂದುಕೊಂಡಂತೆ ಬ್ರಿಟೀಷರು ಅವೆಲ್ಲವನ್ನೂ ಮಾಡಿದ್ದು ಅವರ ಅನುಕೂಲಕ್ಕಾಗಿಯೇ ವಿನಹ ನಮ್ಮ ದೇಶದ ಅಭಿವೃದ್ಧಿಗಲ್ಲ ಎಂದು ಕೋಡಂಬಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಕೆ ಎಸ್ ಧನಂಜಯ ತಿಳಿಸಿದರು.


ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಎಪ್ಪತ್ತನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.


ಸಂವಿಧಾನ ರಚನೆಯಿಂದ ಪ್ರಜಾಪ್ರಭುತ್ವ ರಚನೆಯಾಗಿದೆ, ಬಡತನ ನಿರ್ಮೂಲನೆ ಆಗಿದೆ, ಆರನೆಯ ಶ್ರೀಮಂತ ದೇಶವಾಗಿದೆ, ಕಾರ್ಖಾನೆ, ಶಿಕ್ಷಣದಲ್ಲಿ ಮುಂಚೂಣಿಯಲ್ಲಿದೆ,

ಪ್ಲಾಸಿಕದನ ನಡೆದ ಸಮಯದಲ್ಲಿ ಬ್ರಿಟೀಷ್ ಸೈನಿಕರು ಕೇವಲ ೭೫೦ ಮಂದಿ ಅವರು ತರಬೇತಿ ನೀಡಿದ ನಮ್ಮ ದೇಶದ ಸೈನಿಕರು ೨,೫೦೦, ಅಂದಿನ ರಾಜರುಗಳ ಬಳಿ ಇದ್ದ ಸೈನಿಕರು ೫೦,೦೦೦ ಮತ್ತು ಕದನವನ್ನು ನೋಡಲು ಸೇರಿದ್ದ ಜನಸ್ತೋಮ ೫೦,೦೦೦ ಆದರೂ ಕೆಲವೇ ಗಂಟೆಗಳಲ್ಲಿ ನಾವು ಸೋತುಹೋದೆವು ಎಂದರೆ ನಮ್ಮ ದೇಶದ ಸಾರ್ವಜನಿಕರಲ್ಲಿ ಯಾವುದೇ ರೀತಿಯ ಉತ್ಸಾಹ, ದೇಶಾಭಿಮಾನ ಇಲ್ಲ.


ಆ್ಯಂಗ್ರಿ‌ಮ್ಯಾಡಿನ್ ಎಂಬ ಲೇಖಕರು ದಾಖಲೆ ಮಾಡಿರುವಂತೆ ಎರಡು ಸಾವಿರ ವರ್ಷಗಳ ಹಿಂದೆ ನಮ್ಮ ದೇಶದ ಜಿಡಿಪಿ ಶೇಕಡಾ ೩೩ ಇತ್ತು, ೧೫೦೦/೧೬೦೦ ರಲ್ಲಿ ಅದು ಶೇಕಡಾ ೨೩ ಆಗಿತ್ತು ಬ್ರಿಟೀಷರು ಬಂದ ನಂತರ ನಮ್ಮ ಜಿಡಿಪಿ ಶೇಕಡಾ ೦೩ ಕ್ಕೆ ಇಳಿದಿದೆ ಎಂದರೆ ಅಭಿವೃದ್ಧಿ ಆಗಿದೆಯಾ ಎಂದು ಊಹಿಸಿಕೊಳ್ಳಲೂ ಸಾಧ್ಯವಿಲ್ಲ ಎಂದರು, ಅಂಚೆಯನ್ನು ಅವರ ಪತ್ರ ವ್ಯವಹಾರ ಕ್ಕೂ, ರೈಲ್ವೇಯನ್ನು ನಮ್ಮ ಸರಕುಗಳನ್ನು ಸಾಗಿಸಿಕೊಳ್ಳಲು, ಶಿಕ್ಷಣವನ್ನು ಅವರ ಅನುಕೂಲಕ್ಕೆ ಬಳಸಿಕೊಳ್ಳಲು ಉಪಯೋಗಿಸಿಕೊಂಡರು, ಡಾ ಬಿ ಆರ್ ಅಂಬೇಡ್ಕರ್ ಮತ್ತು ತಂಡ ಅಂದು ನಮಗೆ ಸಂವಿಧಾನ ನೀಡಲಾಗಿ ಪ್ರಜಾಪ್ರಭುತ್ವ ಉಳಿದುಕೊಳ್ಳಲು ಸಾಧ್ಯವಾಯಿತು ಎಂದರು.


ತಹಶೀಲ್ದಾರ್ ಯೋಗಾನಂದ ರವರು ಶಾಲಾ ಮಕ್ಕಳಿಗೆ ಹಸ್ತಲಾಘವ ನೀಡಿ ಶುಭಾಶಯ ಕೋರಿದರು, ನಂತರ ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದ ಅವರು ಸಂವಿಧಾನ ಜಾರಿಯಾಗಿ ಎಪ್ಪತ್ತು ವರ್ಷ ಕಳೆದರೂ ಜಾತಿ, ಧರ್ಮ ಎಂದು ಹೊಡೆದಾಡುವುದರಲ್ಲೇ ತಲ್ಲೀನರಾಗಿದ್ದೇವೆ, ಇದೆಲ್ಲವನ್ನೂ ಹೊರತುಪಡಿಸಿ ದೇಶ ಕಟ್ಟುವ, ಜಾತಿ ಧರ್ಮಗಳನ್ನು ಒಗ್ಗೂಡಿಸುವ ಕೆಲಸವನ್ನು ಮಾಡಬೇಕು, ಆಗಲೇ ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಲು, ಸಂವಿಧಾನದ ಆಶಯಗಳನ್ನು ಉಳಿಸಲು ಸಾಧ್ಯ ಎಂದರು.


ಇಂದು ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮವು ಬಹುತೇಕ ಲೋಪದೋಷಗಳಿಲ್ಲದೆ ಅದ್ದೂರಿಯಾಗಿ ಜರುಗಿತು, ಎಲ್ಲಾ ಅಧಿಕಾರಿಗಳು, ಶಾಲಾ ಸಿಬ್ಬಂದಿ ಮತ್ತು ಮಕ್ಕಳು ಶಿಸ್ತಿನಿಂದ ಸರಿಯಾದ ಸಮಯಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಕಾರಣವಾದರು, ದಂಡಾಧಿಕಾರಿ ಯೋಗಾನಂದ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮು ರವರ ಶ್ರಮ ಎದ್ದುಕಾಣುತ್ತಿತ್ತು.


ಹಲವು ಸರ್ಕಾರಿ ನೌಕರರು, ಸಮಾಜ ಸೇವಕರು ಹಾಗೂ ಹೆಚ್ಚು ಅಂಕ ಪಡೆದ ಶಾಲಾ ಮಕ್ಕಳು ಸೇರಿದಂತೆ ಅನೇಕ ಗಣ್ಯರನ್ನು‌ ಇದೇ ಸಂದರ್ಭದಲ್ಲಿ ತಾಲ್ಲೂಕು ಆಡಳಿತದಿಂದ ಸನ್ಮಾನಿಸಲಾಯಿತು, ನಗರಸಭೆಯ ಅಧ್ಯಕ್ಷೆ ನಜ್ಮುನ್ನೀಷಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು, ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಸಿ ಸೀತಾರಾಮು ಸ್ವಾಗತಿಸಿದರು, ಶಿಕ್ಷಕ ಯೋಗೇಶ್ ನಿರೂಪಿಸಿದರು, ವಿವಿಧ ಶಾಲೆಯ ಮಕ್ಕಳು ದೇಶಾಭಿಮಾನದ ಗೀತೆಗಳಿಗೆ ಹೆಜ್ಜೆ ಹಾಕಿ ನೆರೆದಿದ್ದವರನ್ನು ಪುಳಕಿತಗೊಳಿಸಿದರು.


ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತ ಅಧ್ಯಕ್ಷ ಹರೂರು ರಾಜಣ್ಣ, ನಗರಸಭೆಯ ಉಪಾಧ್ಯಕ್ಷೆ ಸರಳಾ, ಸ್ಥಾಯಿ ಸಮಿತಿಯ ಅಧ್ಯಕ್ಷ ಎಂ ರಾಮು, ಎಪಿಎಂಸಿ ಅಧ್ಯಕ್ಷ ಯಾಲಕ್ಕಿಗೌಡ, ನಗರಸಭೆ ಸದಸ್ಯ ನಂದೀಶ್, ಕಾರ್ಯನಿರ್ವಾಹಣಾಧಿಕಾರಿ ಎಂ ರಾಮಕೃಷ್ಣ, ಪೌರಾಯುಕ್ತ ಸಿ ಪುಟ್ಟಸ್ವಾಮಿ, ಹಲವಾರು ಸಂಘಟನೆಯ ಪದಾಧಿಕಾರಿಗಳು, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಮುಖ್ಯಸ್ಥರು, ಶಿಕ್ಷಕರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.



ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑