ಕೊಳವೆ ಬಾವಿ ಕೊರೆಸಲು ನೋಂದಣಿ ಕಡ್ಡಾಯ
ರಾಮನಗರ : ಅಂತರ್ಜಲ ಸಂಪನ್ಮೂಲ ಮೌಲೀಕರಣ ಅನುಸಾರ ರಾಜ್ಯದಲ್ಲಿ 43 ತಾಲ್ಲೂಕುಗಳನ್ನು ಅಂರ್ತಜಲ ಅತಿ ಬಳಕೆಯ ತಾಲ್ಲೂಕುಗಳೆಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಅಧಿಸೂಚನೆಯ ಪ್ರಕಾರ ಜಿಲ್ಲೆಯ ಕನಕಪುರ ಮತ್ತು ರಾಮನಗರ ತಾಲ್ಲೂಕುಗಳÀನ್ನು ಅತಿ ಬಳಕೆಯ ತಾಲ್ಲೂಕು ಎಂದು ಪ್ರಕಟಿಸಲಾಗಿದೆ.
ಅಧಿಸೂಚಿತ ಪ್ರದೇಶದಲ್ಲಿ ಅಂತರ್ಜಲದ ಬಳಕೆಗೆ ಬಳಸುವ ಕೊಳವೆಬಾವಿ ಸೇರಿದಂತೆ ಬಾವಿ, ಕೊಳವೆ ಬಾವಿಗಳನ್ನು ಕೊರೆಯಲು ನೋಂದಣಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಅಂತರ್ಜಲ ಕುಸಿಯುತ್ತಿದ್ದು, ಬಹಳ ಆಳದವರೆಗೆ ಕೊಳವೆ ಬಾವಿಗಳನ್ನು ಕೊರೆಯುತ್ತಿರುವುದು ಇನ್ನಷ್ಟು ಅಂತರ್ಜಲ ಮಟ್ಟವು ಕುಸಿಯಲು ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಹೊಸದಾಗಿ ಬಾವಿ, ಕೊಳವೆ ಬಾವಿಗಳನ್ನು ಕೊರೆಯಲು ಇಚ್ಚಿಸುವಂತವರು ನಮೂನೆ-1 ಎ ರಲ್ಲಿ ಅರ್ಜಿ ಸಲ್ಲಿಸಿ ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಸಮಿತಿಯ ಪೂರ್ವಾನುಮತಿ ಪಡೆದು ಕೊರೆಸುವುದು ಕಡ್ಡಾಯವಾಗಿರುತ್ತದೆ. ತಪ್ಪಿದ್ದಲ್ಲಿ ಅಂತಹವರ ಮೇಲೆ ಕಾನೂನು ರೀತಿ ಕ್ರಮಕೈಗೊಳ್ಳುವುದು.
ಈಗಾಗಲೇ ಕನಕಪುರ ಮತ್ತು ರಾಮನಗರ ತಾಲ್ಲೂಕುಗಳÀಲ್ಲಿ ಬಾವಿ, ಕೊಳವೆ ಬಾವಿಗಳನ್ನು ಕೊರೆದಿರುವ ಖಾಸಗಿ ಸೇರಿದಂತೆ ಮತ್ತಿತರು ತಮ್ಮ ಬಾವಿ, ಕೊಳವೆ ಬಾವಿಗೆ ಸಂಬಂಧಿಸಿದಂತೆ ಪ್ರಾಧಿಕಾರಕ್ಕೆ ನಮೂನೆ-4 ರಲ್ಲಿ ಅರ್ಜಿ ಸಲ್ಲಿಸುವುದರೊಂದಿಗೆ ನೋಂದಣಿ ಮಾಡಿಸಬೇಕು. ಅರ್ಜಿಗಳನ್ನು ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಚೇರಿ, ಅಂತರ್ಜಲ ನಿರ್ದೇಶನಾಲಯ, ನಂ.2, 5ನೇ ಕ್ರಾಸ್, 1 ನೇ ಹಂತ, ವಿನಾಯಕ ನಗರ, ಚರ್ಚ್ ಹಿಂಭಾಗ, ರಾಮನಗರ ಇಲ್ಲಿಂದ ಅಥವಾ ವೆಬ್ಸೈಟ್ ತಿತಿತಿ.ಞhಚಿಟಿiರಿಚಿ.ಞಚಿಡಿ.ಟಿಛಿoಜe.iಟಿ ನಿಂದ ಪಡೆದು ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಚೇರಿ, ಅಂತರ್ಜಲ ನಿರ್ದೇಶನಾಲಯ, ನಂ.2, 5ನೇ ಕ್ರಾಸ್, 1 ನೇ ಹಂತ, ವಿನಾಯಕ ನಗರ, ಚರ್ಚ್ ಹಿಂಭಾಗ, ರಾಮನಗರ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಹಿರಿಯ ಭೂವಿಜ್ಞಾನಿ ಹಾಗೂ ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದೆ.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು