Tel: 7676775624 | Mail: info@yellowandred.in

Language: EN KAN

    Follow us :


ಸಂಶಯದ ಮನಸ್ಸು ಕೊಳಕಾಗಿರುತ್ತೆ, ಮಕ್ಕಳ ಮನಸ್ಸು ಮೃದುವಾಗಿರುತ್ತೆ ನಿರ್ಮಲಾನಂದನಾಥ ಸ್ವಾಮೀಜಿ

Posted date: 01 Feb, 2019

Powered by:     Yellow and Red

ಸಂಶಯದ ಮನಸ್ಸು ಕೊಳಕಾಗಿರುತ್ತೆ, ಮಕ್ಕಳ ಮನಸ್ಸು ಮೃದುವಾಗಿರುತ್ತೆ ನಿರ್ಮಲಾನಂದನಾಥ ಸ್ವಾಮೀಜಿ

ಮಕ್ಕಳ ಮನಸ್ಸನ್ನು ಮಲಿನಗೊಳಿಸಲು ಬಿಡದೆ ಪ್ರಬುದ್ಧರನ್ನಾಗಿ ಮಾಡಲು ಶಿಕ್ಷಕರ ಜೊತೆಯಲ್ಲಿ ಪೋಷಕರು ಶ್ರಮವಹಿಸಿದರೆ ಸಮಾಜದ ಉನ್ನತ ಸ್ಥರಕ್ಕೆ ತಮ್ಮ ಮಕ್ಕಳನ್ನು ಕರೆದೊಯ್ಯಬಹುದು ಎಂದು ಆದಿಚುಂಚನಗಿರಿ ಪೀಠಾಧಿಪತಿ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ತಮ್ಮ ಆಶೀರ್ವಚನದಲ್ಲಿ ಹೇಳಿದರು, ಅವರು ರಾಮನಗರದ ಅರ್ಚಕರಹಳ್ಳಿಯಲ್ಲಿರುವ ಬಿಜಿಎಸ್ ವಲ್ಡ್೯ ಸ್ಕೂಲ್ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ವಾರ್ಷಿಕ ವರದಿಯ ಪುಸ್ತಕವನ್ನು ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು.


ಬುದ್ದ, ಮಾಳವೀಕಾ ಬುದ್ದ ಮತ್ತು ಸಾರಿಬುದ್ದ ನ ಕಥೆಯನ್ನು ವಿಸ್ತರಿಸಿ ಹೇಳುತ್ತಾ ಸರ್ವಾಧಿಕಾರಿಯಂತೆ ವರ್ತಿಸದೆ ಸಮಾಜದಲ್ಲಿ ನಾಗರೀಕನಾಗಿ ಬಾಳುವಷ್ಟಾದರೂ ಶಿಕ್ಷಣ ಕೊಡಿಸಬೇಕು, ಇದು ಹೆತ್ತವರ ಕರ್ತವ್ಯ ಮತ್ತು ಪಾಲನೆಯಾಗಬೇಕು, ಮಕ್ಕಳನ್ನು ದಂಡಿಸುವುದೇ ಕೆಲಸವಾದರೆ ಮಕ್ಕಳು ಪೋಷಕರಿಗಿಂತಲೂ ಸರ್ವಾಧಿಕಾರಿ ಆಗುತ್ತಾರೆ ಎಂದು ಪೋಷಕರಿಗೆ ಕಿವಿಮಾತು ಹೇಳಿದರು.


ಕಲೋದಯ ೨ ಎಂಬ ಮಕ್ಕಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಮನಗರ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ ರಾಜೇಂದ್ರ ರವರು ಎರಡು ಮತ್ತು ಮೂರು ಮಕ್ಕಳಿರುವ ಪೋಷಕರು ಯಾವುದೇ ಕಾರಣಕ್ಕೂ ಚನ್ನಾಗಿ ಓದದಿರುವ ಮಕ್ಕಳ ಮುಂದೆ ಓದುವ ಮಕ್ಕಳಿಗೆ ಹೋಲಿಸಿ ಮಾತನಾಡುವುದು ಬೇಡ, ಇದಕ್ಕೆ ನಾನು ಸಹ ಸಾಕ್ಷಿ, ನನ್ನಣ್ಣಂದಿರಿಬ್ಬರು ಪ್ರಥಮ ಶ್ರೇಣಿ ಪಡೆದರೆ ನಾನು ಹತ್ತನೇ ತರಗತಿವರೆಗೂ ಓದಿನಲ್ಲಿ ಹಿಂದಿದ್ದವನು, ಆದರೂ ಇಂದು ಸೇನೆಯಲ್ಲಿ ಕೆಲಸ ಮಾಡಿ ಇಂದು ಜಿಲ್ಲಾಧಿಕಾರಿಯಾಗಿದ್ದೆನೆ, ಒಂದೊಂದು ಮಗುವಿನಲ್ಲಿಯೂ ಒಂದೊಂದು ಪ್ರತಿಭೆ ಅಡಗಿರುತ್ತದೆ ಅದನ್ನು ಪೋಷಕರು ಗುರುತಿಸಿ ಅದೆ ದಾರಿಯಲ್ಲಿ ಸಾಗಲು ಪ್ರೋತ್ಸಾಹಿಸಬೇಕು ಎಂದರು.


ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆಯ ಸಿಇಓ ಶಿವರಾಮರೆಡ್ಡಿಯವರು ಮಾತನಾಡಿ ಮಕ್ಕಳು ಒಂದು ವೇದಿಕೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು ಎಂದರೆ ಅವನು ನ್ಯಾಯಯುತವಾಗಿ ಬದುಕಬಲ್ಲ ಎಂಬುದು ಸಾಬೀತಾಗುತ್ತದೆ, ಮಕ್ಕಳು ಐಎಎಸ್‌, ಕೆಎಎಸ್, ಎಂಬಿಬಿಎಸ್, ಇಂಜಿನಿಯರ್ ಆಗಲೇಬೇಕೆಂದು ಮಕ್ಕಳ ಮೇಲೆ ಒತ್ತಡ ಹಾಕದೆ ಸಮಾಜದಲ್ಲಿ ಉತ್ತಮ ಪ್ರಜೆಯಾಗುವಂತೆ ಪ್ರೇರೇಪಿಸಬೇಕು, ಕೇವಲ ಶಾಲೆ ಮತ್ತು ಶಿಕ್ಷಕರಷ್ಟೇ ಅಲ್ಲದೆ ಪೋಷಕರಾದ ನೀವು ಕೈಜೋಡಿಸಿದರೇ ಮಾತ್ರ ಸಾಧ್ಯ ಎಂದರು.

ಇಂದಿನ ಕಾಲಘಟ್ಟಕ್ಕೆ ಹೊಂದುವಂತಹ ಅನೇಕ ನೃತ್ಯ ಗೀತೆಗಳನ್ನು ಮಕ್ಕಳು ಹಾಡಿ ರಂಜಿಸಿದರು, *ಅಂಧ ಮಕ್ಕಳು* ನೃತ್ಯ ಗೀತೆ ಮತ್ತು ನಾಟಕವನ್ನು ಅಭಿನಯಿಸಿದ ರೀತಿಗೆ ಗಣ್ಯರ ಜೊತೆಗೆ ಪೋಷಕರ ಕಣ್ಣು ತೇವಗೊಂಡವು, ಕಾಲಭೈರವನ ನಾಟಕ, ಬಡ ತಾಯಿ ಮತ್ತು ಮಗನ ನಾಟಕದ ದೃಶ್ಯ ಮನಸೂರೆಗೊಂಡಿತ್ತು. ಪುಟ್ಟ ಮಕ್ಕಳೇ ನಿರೂಪಿಸಿ ಪ್ರಬುದ್ದತೆ ಮೆರೆದರು, ಶಾಲೆಯ ಪ್ರಾಂಶುಪಾಲೆ ಸತ್ಯಲಕ್ಷ್ಮಿ ಶಾಲಾ ವಾರ್ಷಿಕ ವರದಿ ಮಂಡಿಸಿದರು, ಸಹಸಂಯೋಜಕಿ ನಳಿನಾಕ್ಷಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.


ವೇದಿಕೆಯಲ್ಲಿ ಶಾಖಾ ಮಠದ ಕಾರ್ಯದರ್ಶಿ ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ, ಪಿಯು ಕಾಲೇಜಿನ ಪ್ರಾಂಶುಪಾಲ ಸುರೇಶ್ ಮತ್ತು ಮಹಾಲಕ್ಷ್ಮಿ ಲೇಔಟ್ ಬಿಜಿಎಸ್ ಶಾಲೆಯ ಪ್ರಾಂಶುಪಾಲೆ ಮೀರಾ ಕುಮಾರ್ ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑