Tel: 7676775624 | Mail: info@yellowandred.in

Language: EN KAN

    Follow us :


ಮಾಚಿದೇವರು ವಚನಗಳ ಮೂಲಕ ಮನಸ್ಸಿನ ಕೊಳೆ ತೆಗೆದಿದ್ದಾರೆ: ಮಾರುತಿ ಪ್ರಸನ್ನ

Posted date: 01 Feb, 2018

Powered by:     Yellow and Red

ಮಾಚಿದೇವರು ವಚನಗಳ ಮೂಲಕ ಮನಸ್ಸಿನ ಕೊಳೆ ತೆಗೆದಿದ್ದಾರೆ: ಮಾರುತಿ ಪ್ರಸನ್ನ

ರಾಮನಗರ : ವಚನಗಳ ಮೂಲಕ ಜನರ ಮನಸ್ಸಿನ ಕೊಳೆ ತೆಗೆಯುವ ಕೆಲಸವನ್ನು ಮಡಿವಾಳ ಮಾಚಿದೇವರು ಮಾಡಿದ್ದಾರೆ ಎಂದು ರಾಮನಗರ ತಹಶೀಲ್ದಾರ್ ಮಾರುತಿ ಪ್ರಸನ್ನ ಅವರು ಬಣ್ಣಿಸಿದರು. 
ಅವರು ನಗರದ ಗುರುಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ಮಾಚಿದೇವರು 354 ವಚನಗಳನ್ನು ರಚಿಸಿದ್ದು, ಅವುಗಳಲ್ಲಿ ಭಕ್ತಿಯ ಸಾರವನ್ನು ಉಣಬಡಿಸಿದ್ದಾರೆ, ಅಲ್ಲದೆ ಅವರ ವಚನಗಳು ನಿಷ್ಠೂರವಾಗಿದ್ದು, ಲೋಕದ ಅಂಕು ಡೊಂಕುಗಳನ್ನು ಆ ಮೂಲಕ ತಿದ್ದುವ ಕೆಲಸ ಮಾಡಿದ್ದಾರೆ.  ಅದಕ್ಕಿಂತ ಪ್ರಮುಖವಾಗಿ ಕಲ್ಯಾಣದ ಬಿಜ್ಜಳ ಮಹಾರಾಜ ವಚನಗಳನ್ನೇ ನಾಶ ಪಡಿಸುವ ಸಂದರ್ಭದಲ್ಲಿ ಅವುಗಳನ್ನು ಉಳಿಸಿಕೊಟ್ಟಿದ್ದಾರೆ. ಇಂದಿಗೂ ಲಭ್ಯವಿರುವ ವಚನಗಳು ನಮಗೆ ಲಭಿಸಲು ಮಾಚೀದೇವರೇ ಕಾರಣ ಎಂದು ಅವರು ಹೇಳಿದರು. 
ದೇವರಲ್ಲಿ ಶರಣಾಗಿ, ಕಾಯಕದ ಮೂಲಕ ಗುರುಗಳಿಗೆ ಹತ್ತಿರವಾಗಿ, ಆ ಮೂಲಕ ಮುಕ್ತಿ ಪಡೆಯಿರಿ ಎಂಬ ಸಂದೇಶ ನೀಡಿದ್ದಾರೆ. ಹಣೆ ಮೇಲೆ ವಿಭೂತಿ ಧರಿಸಿದರೆ ಭಕ್ತಿ ಇದೆ ಎಂದಲ್ಲ, ಅದು ಮನಸ್ಸಿನಲ್ಲಿರಬೇಕು ಎಂಬುದನ್ನು ತಿಳಿಸಿಕೊಟ್ಟಿರುವ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ನಮ್ಮ ಜೀವನ ಉನ್ನತೆಗೆ ಏರಬಹುದು ಎಂದು ಹೇಳಿದರು.
ಡಿ.ಎಂ ಮಹದೇವಪ್ಪ ಅವರು ಪ್ರಧಾನ ಉಪನ್ಯಾಸ ನೀಡಿದರು. ಮುಖಂಡರಾದ ನಾಗರಾಜು ಅವರು ಮಾತನಾಡಿದರು.  
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ, ಮುಖಂಡರಾದ ರಂಗಸ್ವಾಮಿ, ವೀರಭದ್ರಯ್ಯ, ನಾರಾಯಣಪ್ಪ, ರಂಗಪ್ಪ, ಶಿವಲಿಂಗಯ್ಯ, ಕೆ. ಲಿಂಗರಾಜು ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯ ನಿರ್ದೇಶಕರು ಸ್ವಾಗತಿಸಿದರು. 
ಸಮುದಾಯದ ಮುಖಂಡರು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಮಡಿವಾಳ ಮಾಚೀದೇವರ ಭಕ್ತರು, ಅಭಿಮಾನಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 
ಮೆರವಣಿಗೆ: ಇದ್ದಕ್ಕೂ ಮುನ್ನ ನಗರದ ಮಿನಿವಿಧಾನ ಸೌಧದಿಂದ ಗುರುಭವನದ ವರೆಗೆ ಮಡಿವಾಳ ಮಾಚಿದೇವರ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಮಡಿವಾಳ ಮಾಚೀದೇವರ ಭಕ್ತರು, ಅಭಿಮಾನಿಗಳು, ಅನುಯಾಯಿಗಳು, ಮುಖಂಡರು, ಸಮುದಾಯದ ಮುಖಂಡರು ಮೆರವಣಿಗೆಗೆ ಚಾಲನೆ ನೀಡಿದರು.   

 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑