ಭೂಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ವಿರುದ್ಧ ಅವಿಶ್ವಾಸ ಮಂಡನೆ
ತಾಲ್ಲೂಕಿನ ಭೂಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ನಿಂಗೇಗೌಡ ವಿರುದ್ಧ ಹನ್ನೊಂದು ಜನ ಸದಸ್ಯರು ಉಪವಿಭಾಗಾಧಿಕಾರಿಗೆ ದೂರುಸಲ್ಲಿಸಿದ ಕಾರಣ ಇಂದು ಅಧಿಕಾರಿಗಳು ಮತ್ತು ಸದಸ್ಯರ ಸಮಕ್ಷಮದಲ್ಲಿ ಅವಿಶ್ವಾಸ ನಿರ್ಣಯವನ್ನು ಮಂಡಿಸಲಾಯಿತು.
ಭೂಹಳ್ಳಿ, ಮೆಣಸಿಗನಹಳ್ಳಿ, ತಾಂಡ್ಯ, ಉಜ್ಜನಹಳ್ಳಿ, ಅರಳುಕುಪ್ಪೆದೊಡ್ಡಿ, ಬುಕ್ಕಸಾಗರ ಮತ್ತು ಪೀಹಳ್ಳಿದೊಡ್ಡಿ ಗ್ರಾಮ ಸೇರಿದಂತೆ ಏಳು ಗ್ರಾಮಗಳ ಹದಿನಾರು ಮಂದಿ ಸದಸ್ಯರಲ್ಲಿ ಹನ್ನೊಂದು ಮಂದಿ ಸದಸ್ಯರುಗಳು ಪಂಚಾಯತಿ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಂಡು ವಿದ್ಯುತ್, ಶುದ್ಧ ಕುಡಿಯುವ ನೀರು, ಕೆರೆಗಳ ಮೀನಿನ ಹರಾಜಿನ ಹಣ ಹಾಗೂ ಖಾಸಗಿ ಜಮೀನಿನವರಿಗೆ ಕಿರುಕುಳ ಇತ್ಯಾದಿ ದೂರುಗಳನ್ನು ಉಪವಿಭಾಗಾಧಿಕಾರಿಗಳ ಕಛೇರಿಗೆ ನೀಡಿ ಅವಿಶ್ವಾಸಕ್ಕೆ ಮನವಿ ಸಲ್ಲಿಸಿದ್ದರು.
ಇಂದು ಬೆಳಿಗ್ಗೆ ಭೂಹಳ್ಳಿ ಪಂಚಾಯತಿಗೆ ಆಗಮಿಸಿದ್ದ ಉಪವಿಭಾಗಾಧಿಕಾರಿಗಳಾದ ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯತಿ ಕಾರ್ಯಾನಿರ್ವಹಣಾಧಿಕಾರಿ ರಾಮಕೃಷ್ಣ ಮತ್ತು ಅಕ್ಕೂರು ಪೋಲಿಸರು ಹಾಗೂ ಹನ್ನೊಂದು ಸದಸ್ಯರ ಹಾಜರಿಯೊಂದಿಗೆ ಅಧ್ಯಕ್ಷ ನಿಂಗೆಗೌಡರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಲಾಯಿತು.
೨೦೧೮ ರ ನವೆಂಬರ್ ೧೯ ರಂದೇ ನಮ್ಮ ಪತ್ರಿಕೆಯಲ್ಲಿ ಅಧ್ಯಕ್ಷ ನಿಂಗೇಗೌಡರ ಕಾರ್ಯವೈಖರಿ ಬಗ್ಗೆ ಪ್ರಸ್ತಾಪಿಸಲಾಗಿತ್ತು.
ಅವಿಶ್ವಾಸ ನಿರ್ಣಯ ಮತ್ತು ಕಳಂಕ ದ ಬಗ್ಗೆ ನಿಂಗೇಗೌಡರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದು ನಂತರ ಕಾಂಗ್ರೆಸ್ ಸೇರಿ ಅಧ್ಯಕ್ಷ ಪದವಿಯನ್ನು ಪಡೆದಿದ್ದೆ, ನಾನು ಯಾವ ತಪ್ಪನ್ನೂ ಮಾಡಿಲ್ಲ, ನನಗೆ ಮತ ನೀಡಿದ ಮತದಾರ ಪ್ರಭುಗಳಿಗೆ ಚಿರ ಋಣಿಯಾಗಿರುತ್ತೇನೆ, ನನ್ನ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ ಮತ್ತು ಕಳಂಕ ಮುಕ್ತನಾಗಿ ಹೊರಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು