ಬಹುಮುಖ ಪ್ರತಿಭೆಯ ಕಾಶಿನಾಥ್
ರಾಮನಗರ : ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿದ್ದವರು ಕಾಶಿನಾಥ್ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ರಾಜು ಹೇಳಿದರು.
ತಾಲ್ಲೂಕಿನ ಕೃಷ್ಣಾಪುರದೊಡ್ಡಿಯ ತಾನಿನಾ ರಂಗದಂಗಳದಲ್ಲಿ ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಈಚೆಗೆ ನಿಧನರಾದ ನಟ, ನಿರ್ದೇಶಕ ಕಾಶಿನಾಥ್, ಗಾಯಕ ಶಿವರಾಮಯ್ಯ, ಪೂಜಾ ಕುಣಿತದ ಕಲಾವಿದ ಶಿವಕುಮಾರ್ ಅವರಿಗೆ ಹಮ್ಮಿಕೊಂಡಿದ್ದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉಪೇಂದ್ರ, ಮನೋಹರ್, ಸುನೀಲ್ಕುಮಾರ್ ದೇಸಾಯಿ ಮುಂತಾದ ಹೆಸರಾಂತ ನಿರ್ದೇಶಕರನ್ನು ಕಾಶಿನಾಥ್ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದರು. ಜತೆಗೆ ಹಲವು ಪ್ರತಿಭಾನ್ವಿತರಿಗೆ ಚಿತ್ರರಂಗದಲ್ಲಿ ಅವಕಾಶಗಳನ್ನು ಕಲ್ಪಿಸಿಕೊಟ್ಟಿದ್ದರು ಎಂದರು.
ಶಾಂತಲಾ ಚಾರಿಟಬಲ್ ಟ್ರಸ್ಟಿನ ಕಾರ್ಯದರ್ಶಿ ಕವಿತಾರಾವ್ ಮಾತನಾಡಿ ಕಾಶಿನಾಥ್ ಅವರು ನಟನ ಜತೆಗೆ, ನಿರ್ಮಾಣ, ನಿರ್ದೇಶನವನ್ನು ಮಾಡಿದ್ದಾರೆ. ಇವರ ಚಿತ್ರಗಳಲ್ಲಿ ಬದುಕಿನ ನೈಜತೆಯನ್ನು ಕಾಣಬಹುದಾಗಿದೆ ಎಂದು ತಿಳಿಸಿದರು.
ಗಾಯಕ ಶಿವರಾಮಯ್ಯ, ಪೂಜಾ ಕುಣಿತದ ಕಲಾವಿದ ಶಿವಕುಮಾರ್ ಅವರ ಅಕಾಲಿಕ ಮರಣ ಜಿಲ್ಲೆಯ ಸಾಂಸ್ಕೃತಿಕ ಲೋಕಕ್ಕೆ ನಷ್ಟವನ್ನು ಉಂಟು ಮಾಡಿದೆ. ಇವರಿಬ್ಬರು ಗಾಯನ ಹಾಗೂ ಜನಪದ ಕಲಾ ಪ್ರದರ್ಶನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದು ಸ್ಮರಿಸಿದರು.
ಸಂಗೀತ ವಿದ್ವಾನ್ ಶಿವಾಜಿರಾವ್, ಲೇಖಕರ ವೇದಿಕೆಯ ಅಧ್ಯಕ್ಷ ಕೂ.ಗಿ. ಗಿರಿಯಪ್ಪ, ಸಾಮಾಜಿಕ ಕಾರ್ಯರ್ತೆ ಎಸ್. ಪದ್ಮರೇಖಾ, ಪೂಜಾ ಕುಣಿತದ ಕಲಾವಿದ ಅಂಕನಹಳ್ಳಿ ಶಿವಣ್ಣ, ಕಲಾವಿದರಾದ ಶ್ರೀನಿವಾಸ್, ರವೀಶ್, ಪ್ರಸನ್ನ ಉಪಸ್ಥಿತರಿದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು