Tel: 7676775624 | Mail: info@yellowandred.in

Language: EN KAN

    Follow us :


ಬಿಡದಿಯ ವೃಷಭಾವತಿ ಕಣಿವೆ ಮತ್ತು ಬೈರಮಂಗಲ ಕೆರೆಗೆ ಲೋಕಾಯುಕ್ತರ ಭೇಟಿ

Posted date: 01 Feb, 2018

Powered by:     Yellow and Red

ಬಿಡದಿಯ ವೃಷಭಾವತಿ ಕಣಿವೆ ಮತ್ತು ಬೈರಮಂಗಲ ಕೆರೆಗೆ ಲೋಕಾಯುಕ್ತರ ಭೇಟಿ

ರಾಮನಗರ : ವೃಷಭಾವತಿ ಕಣಿವೆ ಮತ್ತು ಬೈರಮಂಗಲ ಕೆರೆ ವ್ಯಾಪ್ತಿಯ ಪ್ರದೇಶಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಖುದ್ಧು ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಸ್ವಾತಂತ್ರ್ಯ ಹೋರಾಟಗಾರ ಎಚ್ .ಎಸ್ .ದೊರೆಸ್ವಾಮಿ ನೇತೃತ್ವದ  ನಮ್ಮ ಬೆಂಗಳೂರು ಫೌಂಡೇಶನ್ ವತಿಯಿಂದ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿರವರು ಬಿಬಿಎಂಪಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
    ಈ ವೇಳೆ ಹಾಜರಿದ್ದ ಬೈರಮಂಗಲ ಕೆರೆ ಪ್ರದೇಶದ ಸುತ್ತಮುತ್ತಲ ಗ್ರಾಮದ ಮುಖಂಡರು, ಬೆಂಗಳೂರಿನ ಮ¯್ಲÉೀಶ್ವರಂ, ಪೀಣ್ಯ ಪ್ರದೇಶಗಳ ಆದಿಯಾಗಿ ಕೆಂಗೇರಿ, ಬಿಡದಿ ಕೈಗಾರಿಕಾ ಪ್ರದೇಶಗಳಿಂದ ವೃಷಭಾವತಿ ಕಣಿವೆಯಲ್ಲಿ ಹರಿದು ಬೈರಮಂಗಲ ಕೆರೆಯಲ್ಲಿ  ಶೇಖರಣೆಯಾಗುವ ಕಲ್ಮಷ ನೀರಿನಿಂದ ಹತ್ತಾರು ಹಳ್ಳಿಗಳಲ್ಲಿ ಉಂಟಾಗಿರುವ ದುಷ್ಪರಿಣಾಮಗಳು. ಕೊಳಚೆ ನೀರು ಮತ್ತು ಸೊಳ್ಳೆಗಳ ಹಾವಳಿಯಿಂದ ಅನುಭವಿಸುತ್ತಿರುವ ನಕರಯಾತನೆಗೆ ಅಂತ್ಯ ಹಾಡುವಂತೆ ಲೋಕಾಯುಕ್ತರಲ್ಲಿ ಮನವಿ ಮಾಡಿದರು. 
    ಬೈರಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ರಾಮಯ್ಯ ಮಾತನಾಡಿ, ಜಲಾಶಯದ ಪಕ್ಕದಲ್ಲಿ ಯಾಕಾದರೂ ನೆಲೆಸಿz್ದÉೀವೊ ಎಂಬ ಚಿಂತೆ ನಮ್ಮನ್ನು ಕಾಡುತ್ತಿದೆ. ಜನ ಜಾನುವಾರುಗಳ ಆರೋಗ್ಯಕ್ಕೆ ಮಾರಕವಾಗಿರುವ ಕೊಳಚೆ ನೀರು ಸಂಸ್ಕರಣೆಗೆ ಸೂಕ್ತ ಕ್ರಮ ವಹಿಸುವಂತೆ ಸರ್ಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಬೇಕು ಎಂದು ಕೋರಿದರು.
    ಆಸಿಡ್ ಮಿಶ್ರಿತ ನೊರೆ ಮನುಷ್ಯರ ಕೈ ಮೇಲೆ ಬಿದ್ದರೆ ಚರ್ಮ ಸುಡುತ್ತದೆ. ಅಲ್ಲದೆ ರೈತರ ಬೆಳೆಗಳ ಮೇಲೆ ಬಿದ್ದು ಬೆಳೆ ನಾಶವಾಗುತ್ತಿದೆ. ಕೈಗಾರಿಕೆಗಳಿಂದ ಕೊಳಚೆ ನೀರು ಹರಿಯ ಬಿಡುವ ಮೂಲವನ್ನು ಪತ್ತೆಮಾಡಿ ಕಡಿವಾಣ ಹಾಕಬೇಕು.
    ಸಂಪೂರ್ಣ ಕಲುಷಿತಗೊಂಡಿರುವ ವೃಷಭಾವತಿ ಕಣಿವೆ ಮತ್ತು ಬೈರಮಂಗಲ ಕೆರೆ ಪಾತ್ರದಲ್ಲಿರುವ ಹಳ್ಳಿಗಳ ಜನ ವಿವಿಧ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದು, ಗ್ರಾಮಗಳನ್ನು ತೊರೆಯುವ ಚಿಂತೆಯಲ್ಲಿz್ದÁರೆ ಎಂದು ತಿಳಿಸಿದರು.
    ಬೈರಮಂಗಲ ಗ್ರಾಮದ ನಿವಾಸಿ ಶಿವಣ್ಣ ಮಾತನಾಡಿ ಕೆರೆಯಲ್ಲಿ ಸಂಗ್ರಹವಾಗುವ ಕೊಳಚೆ ನೀರಿನಿಂದ ಆಸುಪಾಸಿನ ಸುಮಾರು 20 ಕೀ.ಮೀ ದೂರದವರೆಗೆ ಅಂತರ್ಜಲ ಕಲುಷಿತವಾಗಿದ್ದು, ಕೊಳವೆ ಬಾವಿ ನೀರು ಸಹ ಕುಡಿಯಲು ಯೋಗ್ಯವಲ್ಲದಂತಾಗಿದೆ. ನಮಗೆ ಕುಡಿಯಲು ಕಾವೇರಿ ನೀರು ಪೂರೈಕೆ ಮಾಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡುವಂತೆ  ಲೋಕಾಯುಕ್ತರನ್ನು ಒತ್ತಾಯಿಸಿದರು.
    ಸ್ಥಳೀಯರ ಅಹವಾಲುಗಳನ್ನು ಆಲಿಸಿದ ಲೋಕಾಯುಕ್ತ ನ್ಯಾಯಮೂರ್ತಿಗಳು, ಆದಷ್ಟು ಬೇಗನೆ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ. ನಂತರ ನನ್ನ ದಾಟಿಯಲ್ಲಿ ಅವರಿಗೆ ಚುರುಕು ಮುಟ್ಟಿಸುವುದಾಗಿ ಭರವಸೆ ನೀಡಿದರು.
    ಇದಕ್ಕೂ ಮುನ್ನ ಬಿಡದಿ ಹೋಬಳಿ ಶ್ಯಾನುಮಂಗಲ ಗ್ರಾಮದ ಬಳಿ ಕೊಳಕು ನೀರಿನಿಂದ ಹರಿಯುವ ವೃಷಭಾವತಿ ಕಣಿವೆ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥಶೆಟ್ಟಿರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಲೋಕಾಯುಕ್ತ ರಿಜಿಸ್ಟ್ರಾರ್  ನಂಜುಂಡಸ್ವಾಮಿ, ಅಡಿಷನಲ್ ರಿಜಿಸ್ಟ್ರಾರ್  ಚಂದ್ರಮ¯್ಲÉೀಗೌಡ, ಬಿಬಿಎಂಪಿ ಮುಖ್ಯ ಅಭಿಯಂತರ ಬೆಟ್ಟೇಗೌಡ, ಸಹಾಯಕ ಅಭಿಯಂತರ ಸೂರ್ಯನಾರಾಯಣ, ಬಿಡಬ್ಲುಎಸ್‍ಎಸ್ಬಿ ಎಂಜಿನಿಯರ್  ರೇಣುಕುಮಾರ್ , ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಸಿದ್ಧರಾಮಯ್ಯ ಮುಂತಾದವರು ಉಪಸ್ಥಿತರಿದ್ದರು. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑