Tel: 7676775624 | Mail: info@yellowandred.in

Language: EN KAN

    Follow us :


ಅಜ್ಜಅಜ್ಜಿ ಸ್ಮರಣಾರ್ಥವಾಗಿ ಸರ್ಕಾರಿ ಪ್ರೌಢಶಾಲೆಗೆ ಡ್ರಮ್‌ಸೆಟ್‌ ವಿತರಣೆ

Posted date: 28 Feb, 2019

Powered by:     Yellow and Red

ಅಜ್ಜಅಜ್ಜಿ ಸ್ಮರಣಾರ್ಥವಾಗಿ ಸರ್ಕಾರಿ ಪ್ರೌಢಶಾಲೆಗೆ ಡ್ರಮ್‌ಸೆಟ್‌ ವಿತರಣೆ

ರಾಮನಗರ : ಸಮಾಜಮುಖಿ ಕೆಲಸಗಳನ್ನು ಎಲ್ಲರೂ ಮಾಡಬಹುದು, ಆದರೆ ಮನಸ್ಸು ಮಾಡಬೇಕು ಎಂದು ಕವಿ ವಾಸುದೇವ ನಾಡಿಗ್ ಹೇಳಿದರು.
ನಗರದ ಬಾಲಕಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಶೋಧನಾ ವಿದ್ಯಾರ್ಥಿ ಎಸ್. ರುದ್ರೇಶ್ವರ ಅವರು ತಮ್ಮ ಅಜ್ಜಅಜ್ಜಿ ಸ್ಮರಣಾರ್ಥ ಮಂಗಳವಾರ ಹಮ್ಮಿಕೊಂಡಿದ್ದ ಡ್ರಮ್ ಸೆಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಸ್ತುತ ಸಂದರ್ಭದಲ್ಲಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವವರು ಕಡಿಮೆಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಸೇವಾಮನೋಭಾವನೆಯನ್ನು ಬೆಳೆಸಬೇಕು ಎಂದು ತಿಳಿಸಿದರು.

ಮಹಿಳೆಯರು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ವಿದ್ಯಾರ್ಥಿನಿಯರು ತಮ್ಮ ಜೀವನದಲ್ಲಿ ಕನಸು ಕಟ್ಟಿಕೊಂಡು ಅಧ್ಯಯನದ ಕಡೆಗೆ ಸಾಧನೆಯ ಕಡೆಗೆ ಮನಸ್ಸು ಮಾಡಬೇಕು ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್. ಮರೀಗೌಡ ಮಾತನಾಡಿ ಜನರು ತಾವು ಆಚರಿಸುವ ಆಚರಣೆಗಳನ್ನು ಅದ್ದೂರಿಯಾಗಿ ಆಚರಿಸುವ ಬದಲು ತಮ್ಮ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳಿಗೆ ಅವಶ್ಯಕತೆ ಇರುವ ವಸ್ತುಗಳನ್ನು ನೀಡಬೇಕು. ಇದರಿಂದ ಸರ್ಕಾರಿ ಶಾಲೆಗಳ ಸಬಲೀಕರಣ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ ಎಸ್. ರುದ್ರೇಶ್ವರ ಅವರು ತಮ್ಮ ಅಜ್ಜಅಜ್ಜಿ ಸ್ಮರಣಾರ್ಥವಾಗಿ ಸರ್ಕಾರಿ ಶಾಲೆಗೆ ಡ್ರಮ್‍ಸೆಟ್ ನೀಡಿರುವುದು ಶ್ಲಾಘನೀಯ ಕೆಲಸ. ಇದು ಇತರರಿಗೆ ಪ್ರೇರಣೆಯಾಗಬೇಕು. ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಲು ಸರ್ಕಾರದ ಜತೆಗೆ ಸಂಘಸಂಸ್ಥೆಗಳು ಕೈ ಜೋಡಿಸಬೇಕು ಎಂದು ತಿಳಿಸಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್‍ನ ಜಿಲ್ಲಾ ಸಂಚಾಲಕಿ ಎಂ. ಪವಿತ್ರ ಮಾತನಾಡಿ ವಿದ್ಯಾರ್ಥಿಗಳು ತಾವು ಸ್ವಾವಲಂಬಿಗಳಾದ ಮೇಲೆ ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಹಿರಿಯರು ನಮ್ಮ ಸಮಾಜದ ಅಮೂಲ್ಯವಾದ ಆಸ್ತಿ ಎಂಬುದನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಲೇಖಕಿ ಬಿ.ಎಸ್. ರೂಪಾರೇವಣ್ಣ ಮಾತನಾಡಿ ಇಂದಿನ ಯಾಂತ್ರಿಕೃತ ಜೀವನದಲ್ಲಿ ಮಾನವೀಯತೆಯನ್ನು ಮರೆಯುತ್ತಿದ್ದೇವೆ. ಸಮಾಜದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳದಷ್ಟು ಸಂವೇದನಾಶೀಲತೆಯನ್ನು ಕಳೆದುಕೊಂಡಿದ್ದೇವೆ. ಎಲ್ಲರೂ ಸ್ವಾರ್ಥರಹಿತ ಜೀವನ ನಡೆಸಿದರೆ ಸಮಸಮಾಜ ನಿರ್ಮಾಣವಾಗುತ್ತದೆ ಎಂದರು. 
ನಗರಸಭಾ ಸದಸ್ಯ ಆರ್.ಎ. ಮಂಜುನಾಥ್ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಪೋಷಕರು ಖಾಸಗಿ ಶಾಲೆಗಳ ಭ್ರಮೆಗೆ ಒಳಗಾಗದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ತಿಳಿಸಿದರು.

ಸಂಶೋಧಾನ ವಿದ್ಯಾರ್ಥಿ ಎಸ್. ರುದ್ರೇಶ್ವರ ಮಾತನಾಡಿ ಇಂತಹ ಕೆಲಸಗಳನ್ನು ಎಲ್ಲರೂ ಮಾಡಬಹುದು, ಆದರೆ ಮನಸ್ಸು ಇರಬೇಕು ಅಷ್ಟೆ. ಇವತ್ತಿಗೆ ನಮ್ಮ ಅಜ್ಜಿಯನ್ನು ಕಳೆದುಕೊಂಡು 7 ವರ್ಷವಾಯಿತು. ಅಜ್ಜಿ ತಾತಾ ಅವರನ್ನು ಪ್ರತಿ ವರ್ಷ ನೆನೆಸಿಕೊಳ್ಳುವ ಜೊತೆಗೆ ಏನಾದರೂ ಮಾಡಬೇಕು ಎಂದು ಕಳೆದ ಆರು ವರ್ಷಗಳಿಂದ ಇಂತಹ ಕೆಲಸಗಳನ್ನು ಮಾಡುತ್ತಿದ್ದೇನೆ ಎಂದರು.
ಪ್ರಸ್ತುತ ಸಂದರ್ಭದಲ್ಲಿ ಬಹುತೇಕ ಮನೆಗಳಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ. ಹಿರಿಯರಿಗೆ ಶಕ್ತಿ ತುಂಬಲು ಸರ್ಕಾರದ ವತಿಯಿಂದ ಕಾನೂನುಗಳು ಜಾರಿಯಾದರೂ ಪ್ರಯೋಜನವಾಗುತ್ತಿಲ್ಲ. ತಮ್ಮ ಮಕ್ಕಳು ಏನೇ ಮಾಡಿದರೂ ಪೋಷಕರಿಗೆ ಒಲವು, ಅಭಿಮಾನ ಹೆಚ್ಚು ಎಂದರು.

ನಮ್ಮ ಅಜ್ಜಿ ಪಾರ್ವತಮ್ಮ, ತಾತಾ, ಸಿದ್ದವೀರಯ್ಯ(ಕೂನಮುದ್ದನಹಳ್ಳಿ, ನಮ್ಮ ತಂದೆ ಕೆ.ಎಸ್. ಶಿವಮೂರ್ತಿ ಅವರ ತಂದೆತಾಯಿ), ಅಜ್ಜಿ ಜಯಮ್ಮ, ತಾತಾ ಶಾಂತಯ್ಯ (ಕೆಂಚನಕುಪ್ಪೆ, ನಮ್ಮ ತಾಯಿ ಸುಮಿತ್ರ ಅವರ ತಂದೆತಾಯಿ).
ನಮ್ಮ ಅಜ್ಜಿ ತಾತಾ ಅವರನ್ನು ಕಳೆದುಕೊಂಡ ನೋವು ಇಂದಿಗೂ ನನ್ನನ್ನು ಕಾಡುತ್ತದೆ. ಕೆಲಸ ಮುಗಿಸಿ ಮನೆಗೆ ಹೋದಾಗ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಹಿರಿಯರೊಂದಿಗೆ ಮಾತನಾಡುವುದೆ ಒಂದು ಸಂತೋಷದ ಸಂಗತಿ ಎಂಬುದು ಹಲವರಿಗೆ ಗೊತ್ತಿಲ್ಲ. ನಮ್ಮ ಅಜ್ಜಿ ಪ್ರತಿದಿನವೂ ಕತೆ ಹೇಳುತ್ತಿದ್ದರು, ಜೀವನದ ಬಗ್ಗೆ ಅಗಾಧವಾದ ಆತ್ಮವಿಶ್ವಾಸವನ್ನು ಹೊಂದಿದ್ದರು. ಇಂದಿನ ಜನರಿಗೆ ಹಿರಿಯರು ಸಮಾಜದ ಆಸ್ತಿ ಎಂಬ ಭಾವನೆ ಬರಬೇಕಿದೆ ಎಂದರು. 
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ರಾಜು, ಕೆನರಾ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ಸಿ. ಬಸವರಾಜು, ಚಾಮನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಚ್.ಎಸ್. ಕೃಷ್ಣಮೂರ್ತಿ, ಯಲ್ಲೊ ಅಂಡ್ ರೆಡ್ ಫೌಂಡೇಷನ್ ಅಧ್ಯಕ್ಷ ಅಮಿತ್‍ರಾಜ್ ಶಿವ, ವ್ಯವಸ್ಥಾಪಕ ನಿರ್ದೇಶಕ ಆನಂದ ಶಿವ,  ಲೇಖಕಿ ಎ.ಜಿ. ಸುನೀತಗಂಗಾಧರ್, ಶಿಕ್ಷಕಿ ಕೆ.ಆರ್. ವಿನುತಾ, ಸಂಗೀತ ವಿದ್ವಾನ್ ಶಿವಾಜಿರಾವ್, ಸಾಂಸ್ಕøತಿಕ ಸಂಘಟಕಿ ಕವಿತಾರಾವ್, ನೃತ್ಯಗಾರ್ತಿ ಚಿತ್ರರಾವ್, ಗಾಯಕರಾದ ವಿಜಯೇಂದ್ರ, ಬಿ. ವಿನಯ್‍ಕುಮಾರ್, ಶಿಕ್ಷಕರಾದ ಎಂ.ಎಸ್. ಚನ್ನವೀರಪ್ಪ, ಬಿ.ಎನ್. ಶ್ರೀಧರ್, ಅರ್ಪಿತಾ ಚಾರಿಟಬಲ್ ಟ್ರಸ್ಟಿನ ಎನ್.ವಿ. ಲೋಕೇಶ್, ಸಂಘಟಕ ನಂಜುಂಡಿಬಾನಂದೂರು, ರೋಟರಿ ಕ್ಲಬ್ ನ ಎಲ್. ಸಿದ್ದಪ್ಪಾಜಿ, ರೋಟರಿ ಸಿಲ್ಕ್ ಸಿಟಿ ಕ್ಲಬ್‍ನ ಕಾರ್ಯದರ್ಶಿ ಅನುರಾಧ, ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಸ್.ಬಿ. ಬಸವರಾಜಪ್ಪ, ಶಿಕ್ಷಕರಾದ ಪ್ರಭುಲಿಂಗರಾಜು, ಮಂಗಳ ವಿ. ನಾಯ್ಕ, ಸಿ.ವಿ. ಜಯಣ್ಣ, ಕೆ. ರಮೇಶ್, ಎ.ವಿ. ಶಿವರಾಜು, ಶಿವಸ್ವಾಮಿ, ಲಕ್ಷ್ಮಣ್, ಚಿನ್ನಗಿರಯ್ಯ, ಪೇರಂ ವಿಜಯಲಕ್ಷ್ಮೀ, ಜ್ಯೋತಿ, ರತ್ನಮ್ಮ ಮುಂತಾದವರು ಉಪಸ್ಥಿತರಿದ್ದರು. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑