Tel: 7676775624 | Mail: info@yellowandred.in

Language: EN KAN

    Follow us :


ಡಿಕೆ ಸಹೋದರರ ಸವಾಲು ಸ್ವೀಕರಿಸಿದ ಸಿಪಿವೈ

Posted date: 16 Mar, 2019

Powered by:     Yellow and Red

ಡಿಕೆ ಸಹೋದರರ ಸವಾಲು ಸ್ವೀಕರಿಸಿದ ಸಿಪಿವೈ

ದೇಶದ ಭವಿಷ್ಯ ನೋಡಿ, ಮೋದಿ‌ಯವರು ದೇಶ ನಡೆಸುವ ರೀತಿ ನೋಡಿ ಜನ ಮತ ಹಾಕುತ್ತಾರೆಯೇ ವಿನಹ ದರ್ಪಕ್ಕೆ ಹೆದರಿ ಮತ ಹಾಕುವ ಮತದಾರರು ಇಂದಿಲ್ಲ, ಮೋದಿ ವಿರುದ್ಧ ನಿಂತು ಗೆಲ್ತಿನಿ ಎಂದು ಹೇಳುವ ಹುಂಬತನ, ತೋಳ್ಬಲ, ಹಣ ಬಲಕ್ಕೆ ಹೆದರುವುದಿಲ್ಲ ಎಂದು ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ ಸಿ ಪಿ ಯೋಗೇಶ್ವರ್ ಡಿ ಕೆ ಸಹೋದರರ ಸವಾಲನ್ನು ಸ್ವೀಕರಿಸುವುದಾಗಿ ತಿಳಿಸಿದರು.

ಅವರು ಹೆದ್ದಾರಿಯ ಜಾನಪದ ಲೋಕದ ಕಾಮತ್ ಹೋಟೆಲ್‌ ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


ಈ ಹಿಂದೆ ಸಹೋದರರಿಬ್ಬರು ಈ ದೇಶದ ಪ್ರಧಾನ ಮಂತ್ರಿ ಗಳಾದ ನರೇಂದ್ರ ಮೋದಿಯವರು ಈ ಬಾರಿ ಎಷ್ಟು ಮತಗಳಿಸುತ್ತಾರೋ ಅದಕ್ಕಿಂತ ಹೆಚ್ಚು ಮತಗಳನ್ನು ಡಿ ಕೆ ಸುರೇಶ್ ಗಳಿಸುತ್ತಾರೆ, ಒಂದು ವೇಳೆ ಈ ಕ್ಷೇತ್ರದಲ್ಲಿಯೇ ಮೋದಿ ಸ್ಪರ್ಧಿಸಿದರೂ ಸಹ ಡಿ ಕೆ ಸುರೇಶ್ ರವರೇ ಗೆಲ್ಲುತ್ತಾರೆ ಎಂಬ ಉದ್ದಟತನದ ಹೇಳಿಕೆ ನೀಡಿರುವುದು ಅವರ ಹಣಬಲದ ಅಹಂ ತೋರಿಸುತ್ತದೆ.


ಡಿ ಕೆ ಶಿವಕುಮಾರ್ ರವರು ದೇಶದಲ್ಲಿಯೇ ಶ್ರೀಮಂತ ರಾಜಕಾರಣಿ, ಜೊತೆಗೆ ರಾಜ್ಯದಲ್ಲಿ ಪ್ರಭಾವಿ ನಾಯಕ, ಅವರು ಹೇಗೆ ಹಣ ಮಾಡಿದರು ಎಂಬುದನ್ನು ನಾ ಹೇಳಬೇಕಾಗಿಲ್ಲ, ಈ ಹಿಂದೆ ಇದ್ದಂತಹ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರೂ ಸಹ ಅವರ ಜೊತೆ ಹೋಗಲಾರರು, ಅವರೂ ಸಹ ಅವರ ದುರಹಂಕಾರದಿಂದ ಬೇಸತ್ತಿದ್ದಾರೆ, ಇವೆಲ್ಲದರ ಫಲವನ್ನು ಅವರು ಈ ಬಾರಿಯ ಚುನಾವಣೆಯಲ್ಲಿ ಅನುಭವಿಸುತ್ತಾರೆ ಎಂದು ಭವಿಷ್ಯ ನುಡಿದರು.


ಜೆಡಿಎಸ್ ಪಕ್ಷದ ಬಗ್ಗೆ ಮಾತನಾಡುವುದಿಲ್ಲ, ಆ ಪಕ್ಷದ ಮತ ಸಂಪೂರ್ಣವಾಗಿ ಕಾಂಗ್ರೆಸ್ ಗೆ ದಕ್ಕುವುದಿಲ್ಲ, ಚುನಾವಣೆ ಘೋಷಣೆಗೂ ಮುನ್ನಾ ಕುಮಾರಸ್ವಾಮಿಯವರು ಪ್ರಧಾನಮಂತ್ರಿ ಬಳಿ‌ ಗಂಟೆಗಟ್ಟಲೆ ಚರ್ಚಿಸುತ್ತಾರೆ, ಪ್ರತಿ ಭೇಟಿಯಲ್ಲೂ ಪ್ರಧಾನಮಂತ್ರಿ ಯವರ ಜೊತೆ ಮಾತನಾಡುತ್ತಾರೆ ಎಂದರೆ ಅರ್ಥಮಾಡಿಕೊಳ್ಳಿ, ಜೆಡಿಎಸ್ ಒಂದು ಸ್ವತಂತ್ರ ಪಕ್ಷ ಯಾವಾಗ ಎಲ್ಲಿ ಯಾರ ಜೊತೆ ಬೇಕಾದರೂ ಮೈತ್ರಿ ಮಾಡಿಕೊಳ್ಳುತ್ತಾರೆ ಎಂದು ಮಾರ್ಮಿಕವಾಗಿ ನುಡಿದರು.


ನಾನು ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿಯೇ ಹೇಳಿಕೆ ನೀಡಿದ್ದೆ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ ಎಂದು ಈಗಲೂ ಅದಕ್ಕೆ ಬದ್ದವಾಗಿದ್ದೇನೆ, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತೇನೆ, ಒಂದು ವೇಳೆ ಪಕ್ಷ ನನ್ನನ್ನೇ ಅಭ್ಯರ್ಥಿ ಎಂದು ಘೋಷಿಸಿದರೆ ಆ ಸಮಯಕ್ಕೆ ಯೋಚಿಸುತ್ತೇನೆ ಎಂದು ಗೆರೆ ಎಳೆದರು.


ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್, ತಾಲ್ಲೂಕು ಅಧ್ಯಕ್ಷ ಆನಂದಸ್ವಾಮಿ, ಪದ್ಮನಾಭ, ಮಲವೇಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು, ಬಹುತೇಕ ಪತ್ರಿಕಾಗೋಷ್ಠಿಯಲ್ಲಿ ಹಾಜರಿರುತ್ತಿದ್ದ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಹರೂರು ರಾಜಣ್ಣ ಗೈರು ಎದ್ದು ಕಾಣುತ್ತಿತ್ತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑