Tel: 7676775624 | Mail: info@yellowandred.in

Language: EN KAN

    Follow us :


ಮತದಾನದ ಚೀಟಿ ಹೊಂದಿದ್ದು ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಆತ ಮತದಾನ ಮಾಡಲು ಅವಕಾಶವಿಲ್ಲ ಡಾ ಯತೀಶ್ ಉಲ್ಲಾಳ

Posted date: 20 Mar, 2019

Powered by:     Yellow and Red

ಮತದಾನದ ಚೀಟಿ ಹೊಂದಿದ್ದು ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಆತ ಮತದಾನ ಮಾಡಲು ಅವಕಾಶವಿಲ್ಲ ಡಾ ಯತೀಶ್ ಉಲ್ಲಾಳ

ಮತದಾನದ ಗುರುತಿನ ಚೀಟಿ ಹೊಂದಿದ್ದು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಆ ಮತದಾರನಿಗೆ ಮತ ಚಲಾಯಿಸಲು ಕಾನೂನಿನಲ್ಲಿ ಅವಕಾಶ ಇಲ್ಲ ಇದನ್ನು ಈಗಲೇ ಪರಿಶೀಲಿಸಿಕೊಳ್ಳಬೇಕೆಂದು ಸಹಾಯಕ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ ತಿಳಿಸಿದರು.

ಅವರು ಇಂದು ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಕರೆದಿದ್ದ ಮಾಧ್ಯಮ, ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರಿಗೆ ಮಾಹಿತಿ ನೀಡಿ,

ಈಗಾಗಲೇ ಮತದಾನ ಮಾಡಲು ಮತದಾರರ ಹೆಸರನ್ನು ಸೇರ್ಪಡಿಸುವ ದಿನಾಂಕ ಮುಗಿದಿದ್ದು ಮುಂದಿನ ಚುನಾವಣೆಗಾಗಿ ಮಾತ್ರ ಸೇರಿಸಿಕೊಳ್ಳಲು ಅವಕಾಶವಿರುತ್ತದೆ ಎಂದರು.


ನಾಮಪತ್ರ ಸಲ್ಲಿಸಲು ಈ ತಿಂಗಳ ೨೬ರ ತನಕ ಅವಕಾಶವಿದ್ದು ರಜಾದಿನ ಹೊರತು ಪಡಿಸಿ ಬೆಳ್ಳಿಗ್ಗೆ ೧೧ ರಿಂದ ಮದ್ಯಾನ್ನ ೩ ಗಂಟೆಯವರೆಗೆ ನಾಮ ಪತ್ರ ಸಲ್ಲಿಸ ಬಹುದಾಗಿದೆ. ನಾಮಪತ್ರವನ್ನು ಉಮೇದುವಾರರು ಅಥವಾ ಸೂಚಕರು ಚುನಾವಣಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿಯವರಕಛೇರಿಯಲ್ಲಿ ಪಡೆದು ಕೊಳ್ಳಬಹುದು.


೨೭ನೇ ತಾರೀಖು ನಾಮಪತ್ರ ಪರಿಶೀಲನೆಗೊಂಡು ೨೯ರಂದು ಹಿಂತೆಗೆದುಕೊಳ್ಳುವ ಪ್ರಕ್ರಿಯೆ ಇದ್ದು ೧೮-೦೪-೨೦೧೯ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೬ ಗಂಟೆಯ ವರೆಗೆ ಮತದಾನ ನಡೆಯಲಿದೆ.


೨೩-೦೫-೨೦೧೯ರಂದು ಎಣಿಕೆ ನಡೆದು ಲೋಕಸಭಾ ಅಭ್ಯರ್ಥಿಯಾರೆಂದು ಗೊತ್ತಾಗಲಿದೆ.

ಬೆಂಗಳೂರು ಗ್ರಾ.ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨೬೬ ಮತಗಟ್ಟೆಗಳು ಇದ್ದು ೧,೦೬,೦೮೬ ಪುರುಷ ಮತದಾರರು ಇದ್ದು ೧,೦೯,೯೭೫ ಮಹಿಳಾ ಮತದಾರರು ಹಾಗೂ ಇತರೆ ೪ ಮತದಾರರು ಇದ್ದು ಒಟ್ಟು ೨,೧೬,೦೬೫ ಮತದಾರರು ಇದ್ದಾರೆ.


ಹೊಂಗನೂರಿನ ೧೮೩ ಸಂಖ್ಯೆಯ ಮತಗಟ್ಟೆಯನ್ನು ಮಾದರಿ ಮತಗಟ್ಟೆ ಕೇಂದ್ರವಾಗಿ ಗುರುತಿಸಲಾಗಿದೆ. ನಗರಸಭೆಯ ೪ ಮತ ಕೇಂದ್ರಗಳನ್ನು ಸಖಿ ಮತಕೇಂದ್ರಗಳಾಗಿ ಗುರುತಿಸಿದೆ. ೫೩ ಸೂಕ್ಷ್ಮ ಮತಕೇಂದ್ರಗಳೆಂದು ಗುರುತಿಸಿದೆ.

ಕ್ಷೇತ್ರಕ್ಕೆ ಸಂಬಂಧಿಸಿದಂತೆ ೩ಕಡೆ ಚೆಕ್‌ಪೋಸ್ಟ್ಗಳನ್ನು ನಿರ್ಮಿಸಲಾಗಿದೆ.


ಗಣತಂತ್ರ ನೆನಪಿಗಾಗಿ ೧೯೫೦  ತಂತ್ರಾಂಶದಲ್ಲಿ ಆನ್‌ಲೈನ್ ವ್ಯವಸ್ಥೆ ಮಾಡಲಾಗಿದ್ದು ಅದರಲ್ಲಿ ದೂರುಗಳನ್ನು ದಾಖಲು ಮಾಡಬಹುದು.

ಸಿವಿಜಿಲ್ (cVIGIL) ಎನ್ನುವ ಆ್ಯಪ್ ಬಿಡುಗಡೆ ಮಾಡಿದ್ದು ಆಂಡ್ರಾಯ್ಡ್ ಮೊಬೈಲ್ ಹೊಂದಿರುವವರು ಅಕ್ರಮ ಹಾಗೂ ನೀತಿ ಸಂಹಿತೆಗೆ  ಸಂಬಂದಪಟ್ಟಂತೆ ಫೋಟೊ ತೆಗೆದು ಕಳುಹಿಸಿದರೆ ೧೦೦ ನಿಮಿಷಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.


ಈ ಚುನಾವಣೆ ಜನರ ಚುನಾವಣೆಯಾಗಿದ್ದು ಚುನಾವಣೆಯ ಸಿಬ್ಬಂದಿ ಜೊತೆ ಸಹಕಾರ ಮಾಡಿದರೆ ಆದಷ್ಟು ಸುಲಲಿತವಾಗಿ ಚುನಾವಣೆಯನ್ನು ನಡೆಸ ಬಹುದಾಗಿದೆ. ಚುನಾವಣಾ ಆಯೋಗವು ಈವರೆಗಿನ ಅನುಭವದ ಆಧಾರದ ಮೇಲೆ ತನ್ನದೇ ಆದ ರೀತಿಯಲ್ಲಿ ಎಲ್ಲಾ ಮುನ್ನೆಚ್ಚರಿಕೆಗಳನ್ನು ಸಹ ವಹಿಸುತ್ತಿದೆ. ಈ ಎಚ್ಚರಿಕೆಯನ್ನು ಅಭ್ಯರ್ಥಿಗಳು ಆಗುವವರು ಸಹ ಬಹಳ ಸೂಕ್ಷ್ಮವಾಗಿ ಗಮನಿಸಿಕೊಂಡು ನಿಗಾವಹಿಸುವ ಕೆಲಸವನ್ನು ಮಾಡಬೇಕಾಗಿದೆ,

ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಇಷ್ಟೊಂದು  ಮುತುವರ್ಜಿ ವಹಿಸಲಾಗಿದೆ ಎಂದು ತಿಳಿಸಿದರು.


ಪತ್ರಿಕಾಗೋಷ್ಟಿಯಲ್ಲಿ ತಹಶಿಲ್ದಾರ್ ಶಿವಕುಮಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ, ನಗರಸಭೆ ಆಯುಕ್ತ ಸಿ.ಪುಟ್ಟಸ್ವಾಮಿ,ಸರ್ಕಲ್ ಇನ್‌ಸ್ಪೆಕ್ಟರ್ ಸತೀಶ್ ,ಎಲ್ಲಾ ಠಾಣೆಗಳ ಸಬ್ ಇನ್‌ಸ್ಪೆಕ್ಟರ್‌ಗಳು ಚುನಾವಣೆಗೆ ಸಂಬಂಧಿಸದಿ ಅಧಿಕಾರಿ ವರ್ಗ ಹಾಗೂ ರಾಜಕೀಯ ಮುಂಖಡರು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑