Tel: 7676775624 | Mail: info@yellowandred.in

Language: EN KAN

    Follow us :


ಈ ಸನ್ಮಾನ ಶ್ರೇಷ್ಠವಾದುದು:ಎಸ್.ರುದ್ರೇಶ್ವರ

Posted date: 23 Mar, 2019

Powered by:     Yellow and Red

ಈ ಸನ್ಮಾನ ಶ್ರೇಷ್ಠವಾದುದು:ಎಸ್.ರುದ್ರೇಶ್ವರ

ಡಾ.ಕೆ.ಪಿ.ಹೆಗ್ಡೆ ಅವರು ತಮ್ಮ 72ನೇ ಜನುಮ ದಿನದ ಅಂಗವಾಗಿ ನನ್ನನ್ನು ಕರೆಸಿ ರಾಮನಗರದ ಕಾಮಣ್ಣನ ಗುಡಿ ವೃತ್ತದಲ್ಲಿರುವ ಪ್ರಗತಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಸನ್ಮಾನಿಸಿದರು. ಪ್ರತಿ ವರ್ಷವೂ ಅವರು ತಮ್ಮ ಹುಟ್ಟು ಹಬ್ಬದಂದು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿರುವವರನ್ನು ಗುರುತಿಸಿ ಸನ್ಮಾನಿಸುವ ಮೂಲಕ ಅವರಲ್ಲಿನ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಿರುತ್ತಾರೆ. ಒಂದು ವಾರದ ಹಿಂದೆಯೇ ನನಗೆ 'ನೀವು ನಮ್ಮ ಶಾಲೆಯಲ್ಲಿ ನಡೆಯುವ ಸರಸ್ವತಿ ಪೂಜೆ' ಕಾರ್ಯಕ್ರಮಕ್ಕೆ ಬರಬೇಕು ಎಂದು ಕರೆದಿದ್ದರು. ಆದರೆ ನನ್ನ ಅರೆಉದ್ಯೋಗದ ಒತ್ತಡದಲ್ಲಿ ಅಂದು ಕಾರ್ಯಕ್ರಮಕ್ಕೆ ಹೋಗಲಾಗಲಿಲ್ಲ. ಆದರೆ ಪಟ್ಟು ಬಿಡದ ಹೆಗ್ಡೆ ಅವರು 'ಸರಸ್ವತಿ ಪೂಜೆ'ಗೂ ಬರಲಿಲ್ಲ, ನಮಗೆ ಬೇಜರಾಯಿತು. ನೀವು 23ನೇ ತಾರೀಖು ಬರಬೇಕು. ಅಂದು ನನ್ನ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸುತ್ತಾರೆ, ಈ ಬಾರಿ ತಪ್ಪಿಸಿಕೊಳ್ಳಬಾರದು ಎಂದರು. ನಾನು 'ಸರ್‌, ನನಗಿಂತ ಹಿರಿಯರಿದ್ದಾರೆ, ನೀವು ಅವರಿಗೆ ಗೌರವಿಸಿ ಎಂದು ಸಾಂಸ್ಕೃತಿಕ ಸಂಘಟಕರು, ಕಲಾವಿದರು ಸೇರಿದಂತೆ ಹಲವರ ಹೆಸರುಗಳನ್ನು ಸೂಚಿಸಿದೆ, ಆದರೆ ಅವರು ಒಪ್ಪಲಿಲ್ಲ. ಶನಿವಾರ ದೇಹದಾನ ಕುರಿತ ಜಾಗೃತಿ ಕಾರ್ಯಕ್ರಮವನ್ನು ರೂಪಿಸಿದ್ದೇನೆ. ಆ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತೇನೆ, ತಡವಾದರೆ ಬೇಸರಿಸಿಕೊಳ್ಳಬಾದರು ಎಂದೆ. ತಡವಾಗಿಯಾದರೂ ಬನ್ನಿ ಎಂದು ತಾಕೀತು ಮಾಡಿದರು. ಆದರೆ ಶುಕ್ರವಾರ ರಾತ್ರಿ ಅವರು ತಮ್ಮ ಮೊಬೈಲ್‌ ಅನ್ನು ಕಳೆದುಕೊಂಡು ಪೇಚಾಡುವಂತಾಗಿದೆ. 'ನೋಡಿ ಇವತ್ತು (ಶನಿವಾರ) ನನ್ನ ಹುಟ್ಟು ಹಬ್ಬ ಆದರೆ ಮೊಬೈಲ್ ಕಳೆದು ಹೋಗಿದೆ, ಶುಭಾಶಯಗಳನ್ನು ಹೇಳಲು ಹಲವರು ಪೋನ್ ಮಾಡುತ್ತಾರೆ, ಅವರೆಲ್ಲಾ ಏನು ತಿಳಿದುಕೊಳ್ಳುತ್ತಾರೊ ಎಂದು ಬೇಸರ ವ್ಯಕ್ತಪಡಿಸಿದರು.

ಸನ್ಮಾನ ಮಾಡುವಾಗ ನಾನು ಮಾಡುತ್ತಿರುವ ಕೆಲಸಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ನೀವು ಮಾತನಾಡಿ ಎಂದರೂ ನನಗೆ ಮಾತನಾಡಲು ಬರುವುದಿಲ್ಲ, ಬರೆಯಲು ಬರುತ್ತದೆ ಎಂದೆ, ಇನ್ನು ಮುಂದೆ ಮಾತನಾಡುವುದನ್ನು ಅಭ್ಯಾಸ ಮಾಡಿಕೊಳ್ಳಿ ಎಂದು ಹರಸಿದರು.


ಡಾ.ಕೆ.ಪಿ. ಹೆಗ್ಡೆ ಅವರು ನನಗೆ ಪರಿಚಯವಾಗಿದ್ದು 2004ರಲ್ಲಿ. ಆಗ ಅವರು ಶಾರದಾ ಪ್ರಿಂಟರ್ಸ್‌ನ ಪಕ್ಕದಲ್ಲಿ ಪ್ರಗತಿ ಕ್ಲಿನಿಕ್ ಅನ್ನು ನಡೆಸುತ್ತಿದ್ದರು. ಜೀವನದಲ್ಲಿ ಹಲವು ಏಳುಬೀಳುಗಳನ್ನು ಕಂಡವರು. ಅವರ ಜೀವನವನ್ನು ಹತ್ತಿರದಿಂದ ನೋಡಿದ್ದೇನೆ. ಅದನ್ನೆಲ್ಲಾ ದಾಖಲಿಸಿ ಪುಸ್ತಕ ಬರೆಯುತ್ತಿದ್ದೇನೆ. ಹೆಗ್ಡೆ ಅವರು ವೈದ್ಯ ವೃತ್ತಿಯನ್ನು ಎಂದೂ ಕೂಡ ಹಣ ಗಳಿಕೆಗೆ ಬಳಸಿಕೊಂಡವರಲ್ಲ. ಈಗ ಖಾಸಗಿ ಆಸ್ಪತ್ರೆಗಳು ಹೆಚ್ಚಾಗುತ್ತಿವೆ. ಆದರೂ ಇವರ ಕೈ ಗುಣ ಹಾಗೂ ದುಬಾರಿ ಹಣಕ್ಕೆ ಆಸೆ ಬೀಳದ ಕಾರಣ ಜನಸಾಮಾನ್ಯರು ಇವರನ್ನು ಹೆಚ್ಚು ಇಷ್ಟಪಡುತ್ತಾರೆ. ವೃತ್ತಿಯ ಜತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿರುವ ಇವರು, ಕನ್ನಡ ಸಾಹಿತ್ಯ ಪರಿಷತ್‌, ರೋಟರಿ ಕ್ಲಬ್‌, ಸೆಂಟ್ ಜಾನ್‌ ಆಂಬ್ಯುಲೆನ್ಸ್, ಕನ್ನಡ ಸಂಘರ್ಷ ಸಮಿತಿ, ಚುಟುಕು ಸಾಹಿತ್ಯ ಪರಿಷತ್‌, ಭಾರತ್‌ ಸೇವಾದಳ, ಭಾರತ್‌ ಸ್ಕೌಟ್ಸ್ ಅಂಡ್‌ ಗೈಡ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಣ ಎನ್ನುವುದು ಇಂದು ಉದ್ಯಮವಾಗಿದೆ. ಹೆಗ್ಡೆ ಅವರು ಕನ್ನಡ ಮಾಧ್ಯಮದಲ್ಲಿ ಪ್ರಗತಿ ಶಾಲೆ ಪ್ರಾರಂಭಿಸಿ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ. ತಮ್ಮ ಇಳಿ ವಯಸ್ಸಿನಲ್ಲಿಯೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಎಲ್ಲರಿಗೂ ಮಾದರಿಯಾಗಿದೆ.

ಇಷ್ಟೆಲ್ಲಾ ಮಾಡಿದವರಿಗೆ, ಮಾಡುತ್ತಿರುವವರಿಗೆ, ಕಳೆದ 51 ವರ್ಷಗಳಿಂದ ಹಲವು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರಿಗೆ "ಕನ್ನಡ ರಾಜ್ಯೋತ್ಸವ" ಪ್ರಶಸ್ತಿ ನೀಡಿ ಎಂದು ನಾನು ಮತ್ತು ಹಲವರು ಸರ್ಕಾರಕ್ಕೆ ಮನವಿ ಮಾಡಿದೇವು. ಆದರೆ......
ಮುಂದಿನದನ್ನು ಪುಸ್ತಕದಲ್ಲಿ ದಾಖಲಿಸಿದ್ದೇನೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑