Tel: 7676775624 | Mail: info@yellowandred.in

Language: EN KAN

    Follow us :


ದೇಹದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆಯಿರಿ : ಸಿದ್ಧಲಿಂಗ ಸ್ವಾಮೀಜಿ

Posted date: 24 Mar, 2019

Powered by:     Yellow and Red

ದೇಹದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆಯಿರಿ : ಸಿದ್ಧಲಿಂಗ ಸ್ವಾಮೀಜಿ

ನಾವು ದೇಹ ದಾನ ಮಾಡುವ ಮೂಲಕ ನಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆಯಬೇಕಿದೆ ಎಂದು ಸಿದ್ಧಗಂಗಾಮಠದ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.


ನಗರದ ಐಜೂರಿನ ಮಲ್ಲೇಶ್ವರ ಬಡಾವಣೆಯ ಎಂ. ಚಂದ್ರಶೇಖರ್ ಅವರ ನಿವಾಸದ ಆವರಣದಲ್ಲಿ ಶನಿವಾರ ನಡೆದ 'ದೇಹದಾನ ಜಾಗೃತಿ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಭೂಮಿ ಮೇಲೆ ಮನುಷ್ಯನಿಗೆ ಉನ್ನತ ಸ್ಥಾನವಿದೆ. ನಾವೆಲ್ಲರೂ ಮಾನವೀಯ ಮೌಲ್ಯಗಳು ಹಾಗೂ ದಾಸೋಹ ಪದ್ಧತಿಯನ್ನು ಮುಂದುವರೆಸಿಕೊಂಡು ಹೋಗುತ್ತಾ ಸದೃಢ ಸಮಾಜದ ನಿರ್ಮಾಣದತ್ತ ದೃಷ್ಠಿ ಹರಿಸುವುದು ಸೂಕ್ತವಾಗಿದೆ ಎಂದು ತಿಳಿಸಿದರು.


ದೇಹ ದಾನದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಜತೆಗೆ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದಂತಾಗುತ್ತದೆ. ಪ್ರಸಕ್ತ ವೈಜ್ಞಾನಿಕ ಯುಗದಲ್ಲಿ ದೇಹ ದಾನದ ಬಗ್ಗೆ ಜನರಲ್ಲಿ ಇನ್ನೂ ಹಲವಾರು ಸಂಶಯಗಳಿವೆ. ಅದರ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ತಿಳಿಸಿದರು.


ನಾವು ದೇಹ ದಾನ ಮಾಡುವ ಮೂಲಕ ನಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆಯಬೇಕಿದೆ. ಈ ಭೂಮಿ ಮೇಲೆ ಮನುಷ್ಯನಿಗೆ ಉನ್ನತ ಸ್ಥಾನವಿದೆ. ನಾವೆಲ್ಲರೂ ಮಾನವೀಯ ಮೌಲ್ಯಗಳು ಹಾಗೂ ದಾಸೋಹ ಪದ್ಧತಿಯನ್ನು ಮುಂದುವರೆಸಿಕೊಂಡು ಹೋಗುತ್ತಾ ಸದೃಢ ಸಮಾಜದ ನಿರ್ಮಾಣದತ್ತ ದೃಷ್ಠಿ ಹರಿಸುವುದು ಸೂಕ್ತವಾಗಿದೆ ಎಂದು ತಿಳಿಸಿದರು. 


ರುದ್ರಮುನೇಶ್ವರ ಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ ನೇತ್ರದಾನ, ರಕ್ತದಾನ, ಕಿಡ್ನಿ ದಾನದಂತೆ ವೈದ್ಯಕೀಯ ಕಾಲೇಜುಗಳಿಗೆ 'ದೇಹದಾನ' ಮಾಡುವಂತೆ ಸಾರ್ವಜನಿಕರನ್ನು ಪ್ರೇರೇಪಿಸಬೇಕು. ರಕ್ತದಾನ, ಕಿಡ್ನಿದಾನ ಮಾಡಿ ರೋಗಿಗಳ ಜೀವ ಉಳಿಸಿದಂತೆ, ನೇತ್ರದಾನ ಮಾಡಿ ಅಂಧರಿಗೆ ಬೆಳಕು ನೀಡಿದಂತೆ, ಮೃತ ವ್ಯಕ್ತಿಗಳ ದೇಹವನ್ನು ಮೆಡಿಕಲ್ ಕಾಲೇಜುಗಳಿಗೆ ದಾನ ಮಾಡಿ, ವೈದ್ಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ನೆರವು ನೀಡಬೇಕು ಎಂದು ತಿಳಿಸಿದರು.


ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಚರ್ಮರೋಗ ತಜ್ಞ ಡಾ.ಬಿ.ಸಿ. ಅನಿಲ್‌ಕುಮಾರ್ ಮಾತನಾಡಿ ದೇಹ ದಾನದಿಂದ ದುಷ್ಪರಿಣಾಮ ಆಗುತ್ತದೆ ಎನ್ನುವ ತಪ್ಪು ತಿಳುವಳಿಕೆ ಅನೇಕರಲ್ಲಿರುವುದು ಸರಿಯಲ್ಲ. ದೇಹ ಅಥವಾ ಅಂಗಾಂಗ ದಾನದಿಂದ ಯಾವುದೇ ದುಷ್ಪರಿಣಾಮ ಉಂಟಾಗುವುದಿಲ್ಲ. ಪುರಾಣ ಕಾಲದಿಂದಲೂ ದೇಹ ದಾನ ಮಾಡಿರುವ ಕುರಿತು ಇತಿಹಾಸದಿಂದ ತಿಳಿದು ಬರುತ್ತದೆ ಎಂದು ತಿಳಿಸಿದರು.


ವೈದ್ಯಕೀಯ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಅಂಗರಚನಾ ಶಾಸ್ತ್ರ ವಿಷಯ ಬಹುಮುಖ್ಯವಾಗಿದೆ. ಹಲವಾರು ಕಾಲೇಜುಗಳಲ್ಲಿ ಮೃತ ದೇಹಗಳ ಕೊರತೆಯಿಂದ ಅಭ್ಯಾಸಕ್ಕೆ ತೊಂದರೆ ಆಗುತ್ತಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಹೆಚ್ಚಿನ ಮಟ್ಟದಲ್ಲಿ ತಿಳುವಳಿಕೆ ಮೂಡುತ್ತದೆ ಎಂದು ಅವರು ಹೇಳಿದರು. 


ಅಪಘಾತದ ಸಂದರ್ಭದಲ್ಲಿ ಮನುಷ್ಯನ ಮೆದುಳು ನಿಷ್ಕ್ರಿಯಯವಾದರೂ, ಅವರ ಕೆಲವು ಅಂಗಾಂಗಗಳು ಕೆಲ ಸಮಯ ಜೀವಂತವಾಗಿರುತ್ತವೆ. ಅವರು ನೀಡುವ ಅಂಗಾಂಗಗಳಿಂದ ಇತರ ರೋಗಿಗಳಿಗೆ ಜೀವದಾನ ಸಿಗುತ್ತದೆ. ದೇಹದಾನ ಮತ್ತು ಅಂಗಾಂಗ ದಾನ ಮಾಡಲು ನಿರ್ಧಾರ ಕೈಗೊಳ್ಳುವ ಜನರಲ್ಲಿರುವ ಆತಂಕ ಇದರಿಂದ ದೂರವಾಗಬೇಕು ಎಂದರು.


ಯಾರೇ ಆಗಲಿ ದೇಹದಾನ ಮತ್ತು ಅಂಗಾಂಗ ದಾನ ಮಾಡಲು ನಿರ್ಧಾರ ಕೈಗೊಳ್ಳುವ ಸಂದರ್ಭದಲ್ಲಿ ಯಾವುದೇ ಅವಸರ, ಆತಂಕ ಪಡಬೇಡಿ. ದೇಹದಾನದಿಂದಾಗುವ ಉಪಯೋಗದ ಕುರಿತು ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ, ಎಲ್ಲರ ವಿಶ್ವಾಸ ಪಡೆದುಕೊಂಡು ದೇಹದಾನ ಮಾಡಬೇಕು ಎಂದು ಅವರು ಹೇಳಿದರು.


ಹಿರಿಯ ಮುಖಂಡ ಎಚ್. ಶಿವಪ್ರಸಾದ್ ಮಾತನಾಡಿ ಜಯಮ್ಮ ಅವರು ತಮ್ಮ ಜೀವನದುದ್ದಕ್ಕೂ ಆದರ್ಶಮಯ ಬದುಕು ಸಾಗಿಸಿದವರು. ಅವರು  ದೇಹದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.  ಮರಣಾನಂತರ ದೇಹವನ್ನು ಸುಡುವದಾಗಲಿ, ಮಣ್ಣಲ್ಲಿ ಹೂಳುವದಾಗಲಿ, ಹಾಗೂ ಜಲಸಮಾಧಿ ಮಾಡುವದಾಗಲಿ ಮಾಡಬಾರದು ಎಂದರು.


ಬದುಕಿರುವಾಗ ಇನ್ನೊಬ್ಬರ ಜೀವ ಉಳಿಸಲು ರಕ್ತದಾನ ಹಾಗೂ ಸತ್ತ ನಂತರ ನೇತ್ರ ಮತ್ತು ದೇಹದಾನವನ್ನು ವೈದ್ಯಕೀಯ ಮಹಾವಿದ್ಯಾಲಯಗಳಿಗೆ ದಾನ ಮಾಡಿ ವೈದ್ಯ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕವಾಗಿ ಕಲಿಯಲು ಸಹಾಯಕವಾಗುತ್ತದೆ. ಎಂ. ಚಂದ್ರಶೇಖರ್ ಅವರ ತಾಯಿ ದೇಹದಾನ ಮಾಡಿರುವುದು  ಬರುವ ದಿನಗಳಲ್ಲಿ ಇತರರಿಗೆ ಪ್ರೇರಣೆಯಾಗಬೇಕು ಎಂದು ತಿಳಿಸಿದರು.


ವಿವಿಧ ಮಠಗಳ ಮಠಾಧೀಶರಾದ ಮೃತ್ಯುಂಜಯ ಸ್ವಾಮೀಜಿ, ವಿರೂಪಾಕ್ಷ ಸ್ವಾಮೀಜಿ, ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ, ಹಿರಿಯ ಮುಖಂಡರಾದ ತಡಿಕವಾಗಲು ರಾಮಯ್ಯ, ರಾಜಶೇಖರ್, ಆರ್.ಎ. ಮಂಜುನಾಥ್, ಹೋಲಿ ಕ್ರೆಸೆಂಟ್ ಇಂಗ್ಲಿಷ್ ಶಾಲೆಯ ಕಾರ್ಯದರ್ಶಿ ಅಲ್ತಾಫ್ ಅಹಮದ್, ಆರೋಗ್ಯ ಭಾರತಿ ಜಿಲ್ಲಾ ಘಟದ ಗೌರವಾಧ್ಯಕ್ಷ ಪಟೇಲ್ ಸಿ.ರಾಜು, ಉಪನ್ಯಾಸಕ ಎ.ಎಸ್. ಜಯಕುಮಾರ್, ಸಂಶೋಧಾನ ವಿದ್ಯಾರ್ಥಿ ಎಸ್. ರುದ್ರೇಶ್ವರ, ಶಿಕ್ಷಕ ಎಂ.ಎಸ್. ಚನ್ನವೀರಪ್ಪ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಯ್ಯ, ಶಾಲಿನಿ, ಪರಿಮಳ, ಪ್ರಭುದೇವರು, ವಿನಯ್ ಕುಮಾರ್, ನಂದ ಗೋಕುಲ ವೃದ್ಧಾಶ್ರಮದ ಸಂಸ್ಥಾಪಕ ಎನ್.ವಿ. ಲೋಕೇಶ್, ರಾಯರು ಮುಂತಾದವರು ಪಾಲ್ಗೊಂಡಿದ್ದರು. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑