Tel: 7676775624 | Mail: info@yellowandred.in

Language: EN KAN

    Follow us :


ಲೋಕಸಭಾ ಚುನಾವಣೆ ಸಿದ್ದತೆ :ಜಿಲ್ಲಾಡಳಿತದ ಕಾರ್ಯವೈಖರಿಗೆ ಮೆಚ್ಚುಗೆ

Posted date: 01 Apr, 2019

Powered by:     Yellow and Red

ಲೋಕಸಭಾ ಚುನಾವಣೆ ಸಿದ್ದತೆ :ಜಿಲ್ಲಾಡಳಿತದ ಕಾರ್ಯವೈಖರಿಗೆ ಮೆಚ್ಚುಗೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಗೆ ಚುನಾವಣಾಧಿಕಾರಿಗಳೂ ಹಾಗೂ ರಾಮನಗರ ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಯಾವುದೇ ಲೋಪವಿಲ್ಲದೇ ಪೂರ್ಣ ಸಿದ್ಧತೆಗಳನ್ನು ನಡೆಸುತ್ತಿರುವುದರಿಂದ ಸಾರ್ವಜನಿಕ ವಲಯದಿಂದ ಪ್ರಶಂಸೆ ವ್ಯಕ್ತವಾಗಿದೆ.
ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಂ.ಪಿ.ಮುಲ್ಲೈಮುಹಿಲನ್, ಪೋಲಿಸ್ ವರಿಷ್ಠಾಧಿಕಾರಿ ರಮೇಶ್.ಬಿ. ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಬಿ.ಪಿ. ವಿಜಯ್, ಹಾಗೂ ಇತರ ಅಧಿಕಾರಿಗಳ ತಂಡ ದಿನದ 24 ಗಂಟೆಯೂ ನಿರಂತರ ಚುನಾವಣಾ ಕಾರ್ಯದಲ್ಲಿ ನಿರತವಾಗಿದ್ದಾರೆ.
ಚುನಾವಣಾ ವೀಕ್ಷಕರು ಅನೇಕ ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದು ಸಾರ್ವಜನಿಕರಿಂದ ಗುರುತರ ಆರೋಪ ದಾಖಲಾಗದೇ ಇರುವುದು ಉತ್ತಮ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.
ಮಾದರಿ ನೀತಿ ಸಂಹಿತೆಯನ್ವಯ ಅಬಕಾರಿ ಇಲಾಖೆ ವತಿಯಿಂದ 232 ಪ್ರಕರಣಗಳನ್ನು ದಾಖಲಿಸಿ , 67ಲಕ್ಷ ಮೌಲ್ಯದ 16,907 ಲೀಟರ್ ಮಧ್ಯ ವಶಪಡಿಸಿಕೊಳ್ಳಲಾಗಿದೆ. ಮತ್ತು 6.25 ಲಕ್ಷ ಮೌಲ್ಯದ 25 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ಸಿಆರ್‍ಪಿಸಿ ಕಲಂ 107 ಮತ್ತು 110 ರಡಿಯಲ್ಲಿ 270 ಪ್ರಕರಣಗಳನ್ನು ದಾಖಲಿಸಿದ್ದು ಇದರಲ್ಲಿ 267 ಪ್ರಕರಣಗಳಲ್ಲಿ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಲಾಗಿದೆ. ಪೋಲಿಸ್ ಠಾಣೆಯಲ್ಲಿ 1811 ಆಯುಧಗಳನ್ನು ಠೇವಣಿ ಇರಿಸಿಕೊಳ್ಳಲಾಗಿದೆ.
ಮತದಾನ ಜಾಗೃತಿಗಾಗಿ ಸ್ವೀಪ್ ಸಮಿತಿ ಮೂಲಕ ಜಿಲ್ಲೆಯಲ್ಲಿ ಅನೇಕ ಕಾಂiÀರ್iಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಜನರಿಗೆ ಮತದಾನದ ಮಹತ್ವ ಕುರಿತು ಬೀದಿನಾಟಕ, ಬೈಕ್ ರ್ಯಾಲಿ, ಎತ್ತಿನ ಬಂಡಿ ಜಾಥಾ, ಮ್ಯಾರಾಥಾನ್, ನೃತ್ಯ ಮತ್ತಿತರ ಅನೇಕ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಜನರು ಮತದಾನ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಪ್ರೋತ್ಸಾಹವನ್ನು ನೀಡಲಾಗಿದೆ. ಅಣುಕು ಮತದಾನ ಕಾರ್ಯಕ್ರಮಗಳನ್ನು ಏರ್ಪಡಿಸಿ ಮತಯಂತ್ರ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ತಿಳಿಸಿಕೊಡುವುದರಲ್ಲಿ ಯಶಸ್ವಿಯಾಗಿದೆ.
ಇಂದು ಈ ಕ್ಷೇತ್ರದಲ್ಲಿ ಮತದಾರರೇ ಜನರಿಗೆ ಮತದಾನದ ಕುರಿತು ಜಾಗೃತಿ ಮೂಡಿಸುವ ಮಟ್ಟಕ್ಕೆ ಸ್ವೀಪ್‍ನ ಕಾರ್ಯಕ್ರಮಗಳು ಯಶಸ್ವಿಯಾಗಿವೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ಮತದಾನದ ಕುರಿತು ಮತ್ತು ಚುನಾವಣೆ ಕುರಿತು ವಸ್ತುÀ್ರ ಪ್ರದರ್ಶನ ಹಾಗೂ ಜಿಲ್ಲಾ ಮತ್ತು ತಾಲ್ಲೂಕುಗಳಲ್ಲಿ ಪ್ರಚಾರ ಫಲಕಗಳ ಮೂಲಕ ಅರಿವು ಮೂಡಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ 2672 ಮತಗಟ್ಟೆಗಳಿದ್ದು ಅದರಲ್ಲಿ ನಗರ ವ್ಯಾಪ್ತಿಯ ಮತಗಟ್ಟೆಗಳು 1159 ಮತ್ತು ಗ್ರಾಮೀಣ ವ್ಯಾಪ್ತಿಯ ಮತಗಟ್ಟೆಗಳು 1513. ಮತಗಟ್ಟೆಗಳಿಗೆ ಸಂಬಂಧಿಸಿದಂತೆ ಮತದಾರರನ್ನು ಸಕ್ರಿಯವಾಗಿ ಮತದಾನವನ್ನು ಮಾಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಚುನಾವಣೆಗೆ ಮತದಾರರ ಪಟ್ಟಿ ತಯಾರಿಯಲ್ಲಿ ಅನೇಕ ಸೂಕ್ತ ಕ್ರಮಗಳನ್ನು ಅನುಸರಿಸಿದ್ದು ಕ್ಷೇತ್ರದಲ್ಲಿ ಒಟ್ಟು 24,56,207 ಮತದಾರರು ಪಟ್ಟಿಯಲ್ಲಿದ್ದು ಪುರುಷ ಮತದಾರರು 12,67,376 ಮತ್ತು 11,88,207 ಮಹಿಳಾ ಮತದಾರರಿದ್ದಾರೆ ಅವರೆಲ್ಲ ಚುನಾವಣೆಯಲ್ಲಿ ಮತದಾನ ಮಾಡುವಂತೆ ಅನೇಕ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗಿದೆ.
ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅನೇಕ ಜಾಗೃತಿ ಕ್ರಮಗಳನ್ನು ಕೈಗೊಂಡು ಪೋಲಿಸ್ ಬಂದೋಬಸ್ತ್ ಮೂಲಕ ಶಾಂತಿಯುತ ವಾತಾವರಣದಲ್ಲಿ ನಾಮತ್ರಗಳನ್ನು ಸ್ವೀಕರಿಸಿ ನಿಷ್ಪಕ್ಷಪಾತವಾಗಿ ಪರಿಶೀಲಿಸಿ, ಅನರ್ಹವಾದ ನಾಮಪತ್ರಗಳನ್ನು ತಿರಸ್ಕರಿಸಿ ಕರ್ತವ್ಯ ನಿಷ್ಠೆಯನ್ನು ಮೆರೆಯಲಾಗಿದೆ.
ಮತದಾರರಿಗೆ ಮತ್ತು ಅಧಿಕಾರಿಗಳಿಗೆ ವಿವಿಪ್ಯಾಟ್ ಕುರಿತು ಇರುವ ಅನುಮಾನಗಳಿಗೆ ತರಬೇತಿ ಕಾರ್ಯಕ್ರಮಗಳ ಮೂಲಕ ಗೊಂದಲಗಳನ್ನು ಬಗೆಹರಿಸಲು ಕ್ರಮಗಳನ್ನು ಕೈಗೊಂಡು ಮತಗಟ್ಟೆಯಲ್ಲಿ ಅಧಿಕಾರಿಗಳ ಜವಬ್ದಾರಿಗಳ ಕುರಿತು ಕಾರ್ಯಗಾರವನ್ನು ಹಮ್ಮಿಕೊಂಡು ಮತಗಟ್ಟೆ ಅಧಿಕಾರಿ ಸಿಬ್ಬಂದಿಗಳಿಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಗೆ 26 ನಾಮಪ್ರಗಳು ಸಲ್ಲಿಕೆಯಾಗಿದ್ದು ಅವುಗಳಲ್ಲಿ 4 ನಾಮಪತ್ರಗಳು ತಿರಸ್ಕøತಗೊಂಡಿದ್ದು 3 ನಾಮಪತ್ರಗಳನ್ನು ಅಭ್ಯರ್ಥಿಗಳು ಹಿಂಪಡೆದಿರುವುದರಿಂದ ಅಂತಿಮ ಕಣದಲ್ಲಿ 15 ಮಂದಿ ಅಭ್ಯರ್ಥಿಗಳಿದ್ದಾರೆ. 14 ಪುರುಷ ಅಭ್ಯರ್ಥಿಗಳು ಮತ್ತು 01 ಮಹಿಳೆ ಅಭ್ಯರ್ಥಿ ಅಂತಿಮ ಕಣದಲ್ಲಿದ್ದಾರೆ.
ಮಹಿಳೆಯರಿಗಾಗಿ ಕೆಲವೊಂದು ಮತಗಟ್ಟೆಗಳನ್ನು ಪಿಂಕ್ ಮತಗಟ್ಟೆಗಳನ್ನಾಗಿಸಿದ್ದು ಮತಗಟ್ಟೆ ಸಿಬ್ಬಂದಿ ಮಹಿಳಾ ಸಿಬ್ಬಂದಿಗಳಾಗಿರುತ್ತಾರೆ. ಮತಗಟ್ಟೆಗೆ ಮತದಾರರು ಮತದಾನ ಮಾಡಲು ಬಂದಾಗ ಅನುಕೂಲಕರ ವಾತಾವರಣ ಕಲ್ಪಿಸುವ ಸಲುವಾಗಿ ಕೆಲವೊಂದು ನಗರ ಮತ್ತು ಗ್ರಾಮೀಣ ಮತಗಟ್ಟೆಗಳನ್ನು ಮಾದರಿ ಮತಗಟ್ಟೆಗಳನ್ನಾಗಿ ವಿನ್ಯಾಸಗೊಳಿಸಲು ತೀರ್ಮಾನಿಸಲಾಗಿದ್ದು ಅದಕ್ಕೆ ಬೇಕಾದ ಅಗತ್ಯ ತಯಾರಿಗಳನ್ನು ಮಾಡಿಕೊಂಡಿದ್ದಾರೆ.
ಕ್ಷೇತ್ರದಲ್ಲಿ ಹತ್ತು ಸಾವಿರಕ್ಕೂ ಅಧಿಕ ವಿಶೇಷ ಚೇತನ ಮತದಾರರಿದ್ದು ಅವರಿಗೆ ಅನುಕೂಲವಾಗುವಂತೆ ಎಲ್ಲಾ ಮತಗಟ್ಟೆಗಳಲ್ಲಿ ರ್ಯಾಂಪ್, ವೀಲ್ ಚೇರ್ ಮತ್ತು ಮತಗಟ್ಟೆಗಳಿಗೆ ಕರೆತರಲು ವಾಹನಗಳ ವ್ಯವಸ್ಥೆಯನ್ನು ಕಲ್ಪಿಸುವುದರ ಮೂಲಕ ವಿಶೇಷ ಚೇತನರಿಗೆ ಅನುಕೂಲವನ್ನು ಮಾಡಿಕೊಟ್ಟಿದ್ದು ವಿಶೇಷ ಚೇತನ ಮತದಾರರು ವೀಲ್‍ಚೇರ್‍ಗಳನ್ನು ಚುನಾವಣಾ ಆ್ಯಪ್ ಮೂಲಕ ಬುಕ್ ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಿಕೊಟ್ಟಿರುವುದು ವಿಶೇಷ ಚೇತನ ಮತದಾರರಲ್ಲಿ ಸಂತಸ ಮೂಡಿದೆ.
494 ಮತಗಟ್ಟೆಗಳಲ್ಲಿ 112 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಿ ಅವುಗಳಲ್ಲಿ ವೆಬ್ ಕ್ಯಾಸ್ಟಿಂಗ್ ಅಳವಡಿಸಲು ಕ್ರಮ ವಹಿಸಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಸೂಕ್ಷ್ಮ ವೀಕ್ಷಕರನ್ನು, ಛಾಯಾಗ್ರಾಹಕರನ್ನು ಮತ್ತು ಸಿಪಿಎಂಎಪ್ ಸೇನಾ ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳಲಾಗಿದ್ದು ಚುನಾವಣೆಯು ಯಾವುದೇ ಗೊಂದಲ ಮತ್ತು ಗಲಾಟೆಗಳಿಲ್ಲದೆ ಸುಸೂತ್ರವಾಗಿ ಮುಕ್ತಾಯಗೊಳಿಸಲು ಬೇಕಾದ ಎಲ್ಲಾ ಮುಂಜಾಗ್ರತೆ ಕ್ರಮಗಳನ್ನು ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಅವರ ಈ ಕ್ರಮಕ್ಕೆ ಶ್ಲಾಘನೆಗೆ ಪಾತ್ರವಾಗಿದೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑