Tel: 7676775624 | Mail: info@yellowandred.in

Language: EN KAN

    Follow us :


ಸಾವಿರ ಭಾಷೆಗಳು ಸವಾರಿ ಮಾಡಿದರೂ ಕನ್ನಡ ಭಾಷೆ ಮತ್ತು ಸಾಹಿತ್ಯ ಯಾವತ್ತಿಗೂ ನಲುಗಿ ಹೋಗುವುದಿಲ್ಲ : ಡಾ.ಎಲ್.ಸಿ. ರಾಜು

Posted date: 01 Feb, 2018

Powered by:     Yellow and Red

ಸಾವಿರ ಭಾಷೆಗಳು ಸವಾರಿ ಮಾಡಿದರೂ ಕನ್ನಡ ಭಾಷೆ ಮತ್ತು ಸಾಹಿತ್ಯ ಯಾವತ್ತಿಗೂ ನಲುಗಿ ಹೋಗುವುದಿಲ್ಲ : ಡಾ.ಎಲ್.ಸಿ. ರಾಜು

ಶಾನುಬೋಗನಹಳ್ಳಿಯಲ್ಲಿ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು

ರಾಮನಗರ: ಶ್ರೀಮಂತಿಕೆ ಮತ್ತು ವಿಶಿಷ್ಟತೆಗಳನ್ನು ಸಾಧಿಸಿಕೊಂಡಿರುವ ಕನ್ನಡ ಭಾಷೆಯಾಗಲೀ, ಸಾಹಿತ್ಯವಾಗಲೀ ಅವನತಿಯಾಗಲು ಎಂದಿಗೂ ಸಾಧ್ಯವೇ ಇಲ್ಲ ಎಂದು ಸಮ್ಮೇಳನಾಧ್ಯಕ್ಷ ಡಾ.ಎಲ್.ಸಿ.ರಾಜು ಅಭಿಪ್ರಾಯಪಟ್ಟರು.
ತಾಲ್ಲೂಕಿನ ಶ್ಯಾನುಭೋಗನಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಬುಧವಾರ ನಡೆದ ತಾಲ್ಲೂಕು ಆರನೇ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿ ಮಾತನಾಡಿದ ಅವರು ಕನ್ನಡ ಭಾಷೆ ಮತ್ತು ಸಾಹಿತ್ಯ ತಮ್ಮ ಹುಟ್ಟಿನ ಜೊತೆಯಲ್ಲೇ ಅಮೃತತ್ವವನ್ನೂ ಪಡೆದುಕೊಂಡೇ ಬಂದಿವೆ. ಸಾವಿರ ಭಾಷೆಗಳು ಸವಾರಿ ಮಾಡಿದರೂ ಕನ್ನಡ ಭಾಷೆ ಮತ್ತು ಸಾಹಿತ್ಯ ಯಾವತ್ತಿಗೂ ನಲುಗಿ ಹೋಗುವುದಿಲ್ಲ ಎಂದು ಕನ್ನಡ ಭಾಷೆಗೆ ಎದುರಾಗಿರುವ ಸವಾಲುಗಳ ಬಗ್ಗೆ ಪ್ರತಿಪಾದಿಸಿದರು.
ಭಯವಿಲ್ಲದ ಕನ್ನಡ ಭಾಷೆಗೆ ಬದುಕಿನುದ್ದಕ್ಕೂ ನೋವು ಬಾಧಿಸುತ್ತಲೇ ಇರುವ ಆತಂಕವಂತೂ ಇದ್ದೇ ಇದೆ. ಈ ನೋವು ನೀಡುವವರಲ್ಲಿ ಪರಭಾಷಿಕರಿಗಿಂತ ಹೆಚ್ಚಾಗಿ ಸ್ವಭಾಷಿಕರ ಪ್ರಮಾಣವೇ ಹೆಚ್ಚಾಗಿರುವುದು ನಿಜಕ್ಕೂ ನೋವಿನ ಸಂಗತಿ ಹಾಗೆ ನೋಡಿದರೆ, ಕಿಟೆಲ್, ರೈಸ್‍ರಂತಹ ಪಾಶ್ಚಾತ್ಯ ವಿದ್ವಾಂಸರೇ ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗಾಗಿ ಮಹತ್ವದ ಕೆಲಸಗಳನ್ನು ಮಾಡಿದ್ದಾರೆ ಎಂದರು. 
ಮಕ್ಕಳಿಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಿದರೆ ಮಾತ್ರ ಪ್ರಗತಿ ಸಾಧ್ಯವೆಂಬ ಭ್ರಮೆ ಇದ್ದು, ಕನ್ನಡ ಮಾಧ್ಯಮವೆಂಬುದು ಬಡವರು ಮತ್ತು ದಡ್ಡರು ಶಿಕ್ಷಣ ಪಡೆಯಲು ಇರುವ ಏಕೈಕ ಮಾರ್ಗ ಎಂಬ ಭಾವನೆ ಬಲಿತಾಗಿದೆ. ಈ ಬಗೆಯ ಅನಿಸಿಕೆಯಿಂದಾಗಿ ಆಂಗ್ಲವು ಅನ್ನದ ಭಾಷೆಯೆಂಬ, ಕನ್ನಡವು ಬೇಡದ ಭಾಷೆಯೆಂಬ ಭ್ರಾಂತಿ ಬೇರೂರಿದೆ. ಹಾಗಾಗಿಯೇ, ಕನ್ನಡವು ಕೊರಳಿನ ಭಾಷೆಯೂ ಆಗದ, ಕರುಳಿನ ಭಾಷೆಯೂ ಆಗದ ಸ್ಥಿತಿಯೊಂದು ನಿರ್ಮಾಣವಾದಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಎಷ್ಟೇ ಭಾಷೆಗಳನ್ನು ಕಲಿತರೂ ಅದು ಲಾಭವೇ ಹೊರತು ನಷ್ಟವೇನಲ್ಲ. ಆದರೆ, ಕಲಿಕೆಯ ಆಸಕ್ತಿಯು ಪರಭಾಷಾ ವ್ಯಾಮೋಹವಾಗಿ ಮಾರ್ಪಟ್ಟು ಅದು ಕನ್ನಡವನ್ನು ಕಡೆಗಣಿಸುವಷ್ಟು ಪ್ರಬಲವಾಗಬಾರದು. ಪರಭಾಷಾ ಕಲಿಕೆಯು ಸ್ವಭಾಷೆಯ ಪೋಷಣೆಗೆ ಪೂರಕವಾಗಬೇಕು. ಶಿಕ್ಷಣ ನೀಡುವ ಸಾಂಪ್ರದಾಯಿಕ ಪದ್ಧತಿಯಲ್ಲೇ ಇಂದು ಆಮೂಲಾಗ್ರ ಬದಲಾವಣೆ ಆಗಬೇಕಾಗಿದ್ದು, ಕನ್ನಡ ಶಾಲೆಗಳ ದೇಹ ಮತ್ತು ಆತ್ಮಗಳೆರಡೂ ಹೊಸ ವಿನ್ಯಾಸವನ್ನು ಪಡೆದುಕೊಳ್ಳಬೇಕಾದ ಅಗತ್ಯತೆಯಿದೆ ಎಂದರು.
ವಿಧಾನ ಪರಿಷತ್ತು ಸದಸ್ಯ ಸಿ.ಎಂ.ಲಿಂಗಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಎಷ್ಟು ಭಾಷೆಗಳನ್ನಾದರೂ ಕಲಿಯಿರಿ. ಆದರೆ, ಕನ್ನಡ ಭಾಷೆಯಲ್ಲೇ ವ್ಯವಹರಿಸಿ. ಮಮ್ಮಿ, ಡ್ಯಾಡಿ, ಆಂಟಿ, ಅಂಕಲ್ ಬೇಡ. ಅಪ್ಪ, ಅಮ್ಮ, ಚಿಕ್ಕಮ್ಮ, ಚಿಕ್ಕಪ್ಪ ಎಂದೇ ಕರೆಯಿರಿ. ಕನ್ನಡ ಕೇವಲ ಭಾಷೆಯಲ್ಲ ಅದೊಂದು ಸಂಸ್ಕøತಿ, ಶಕ್ತಿ ಎಂದರು. ಕುದೂರು ಜಿಲ್ಲಾ ಪಂಚಾಯತ್ ಸದಸ್ಯ ಎ.ಮಂಜು, ನಿಕಟಪೂರ್ವ ಸಮ್ಮೇಳಾನಾಧ್ಯಕ್ಷರಾದ ಎಂ.ಬೈರೇಗೌಡ, ಕಸಾಪ ಜಿಲ್ಲಾಧ್ಯಕ್ಷ ಸಿಂ.ಲಿಂ.ನಾಗರಾಜು ಅವರು ಮಾತನಾಡಿದರು.
ವಿಜೃಂಭಣೆಯ ಮೆರವಣಿಗೆ: ಅರುಣೋದಯ ಶಾಲೆಯಿಂದ ಆರಂಭವಾದ ಮೆರವಣಿಗೆಗೆ ತಾಲೂಕು ಪಂಚಾಯಿತಿ ಸದಸ್ಯ ಜಗದೀಶ್ ಚಾಲನೆ ನೀಡಿದರು. ಪೂರ್ಣ ಕುಂಭದೊಂದಿಗೆ ಸಮ್ಮೇಳನಾಧ್ಯಕ್ಷರಾದ ಡಾ.ಎಲ್.ಸಿ ರಾಜು ಅವರನ್ನು ವೇದಿಕೆಗೆ ಕರೆತರಲಾಯಿತು. ಡೊಳ್ಳು ಕುಣಿತ, ಪಟದ ಕುಣಿತ,  ಪೂಜಾ ಕುಣಿತ, ಗಾರುಡಿ ಬೊಂಬೆಗಳು ಮೆರವಣಿಗೆ ಮೆರಗನ್ನು ಹೆಚ್ಚಿಸಿದವು. ನೂರಾರು ಸಂಖ್ಯೆಯಲ್ಲಿ ಕನ್ನಡಾಸಕ್ತರು ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು. ಮೆರವಣಿಗೆ ನಡುವೆ ವೀರಯೋದ ತಿರುಮಲೇಶ್ ಅವರ ಪ್ರತಿಮೆಗೆ ಬಿಡದಿ ಕೈಗಾರಿಕಾ ಪ್ರದೇಶ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಲ್. ಚಂದ್ರಶೇಖರ್ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಕಾವ್ಯ ವಾಹಿನಿ ಅಧ್ಯಕ್ಷತೆಯನ್ನು ಸಾಹಿತಿ ವಿ.ಎಚ್. ರಾಜಶೇಖರ್ ವಹಿಸಿದ್ದರು. ಸಾಹಿತಿ ಎಂ. ಶಿವನಂಜಯ್ಯ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಸಂಗೀತ ವಿದ್ಯಾಂಸರಾದ ಶಿವಾಜಿರಾವ್ ಆಶಯ ನುಡಿಗಳನ್ನಾಡಿದರು. ಹೊಸದೊಡ್ಡಿ ರಮೇಶ್, ಅಂಕನಹಳ್ಳಿ ಪಾರ್ಥ, ಸುಮಂಗಲ ಸಿದ್ದರಾಜು, ಸಪಿಲೆ ಸತೀಶ್, ಚನ್ನಮಾನಹಳ್ಳಿ ಮಲ್ಲೇಶ್, ಸತ್ಯಭಾಮ ಗೋಪಾಲ್, ಶಿವಹೊಂಬಯ್ಯ, ವಿ. ಆನಂದ್, ಕೃಷ್ಣಾನಾಯಕ್, ಹೆಚ್.ವಿ ಮೂರ್ತಿ, ಅರುಣ್ ಕವಣಾಪುರ, ಆನಂದ್ ಕಾವ್ಯ ವಾಚಿಸಿದರು.
ಡಾ.ಎಲ್.ಸಿ ರಾಜು ಸಾಹಿತ್ಯಾವಲೋಕನ ಕುರಿತು ಉಪನ್ಯಾಸಕರಾದ ಜಿ.ಶಿವಣ್ಣ, ಭವಿಷ್ಯದ ರಾಮನಗರ ಕುರಿತು ಆರಂಭ ಪತ್ರಿಕೆ ಸಂಪಾದಕರಾದ ಅಬ್ಬೂರು ರಾಜಶೇಖರ ಅವರು ಪ್ರಬಂಧ ಮಂಡಿಸಿದರು. ರೈತ-ವಿಜ್ಞಾನಿ ಸಂವಾದದಲ್ಲಿ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಭಾಗದ ವಿಜ್ಞಾನಿ ಡಾ.ಬಿ.ಜಿ ಹನುಮಂತರಾಯ ಅವರೊಂದಿಗೆ ರೈತರಾದ ಬಿ.ಸಿ.ವಾಸು, ರವಿ, ಗೌತಮ್‍ಗೌಡ, ರಾಮು, ಚಿಕ್ಕಪುಟ್ಟಯ್ಯ, ಪ್ರಕಾಶ್, ಸುಶೀಲಮ್ಮ, ಸದಾನಂದ ಅವರು ಭಾಗವಹಿಸಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ತಾಲೂಕು ದಂಡಾಧಿಕಾರಿಗಳಾದ ಮಾರುತಿ ಪ್ರಸನ್ನ ಅವರು ರಾಷ್ಟ್ರಧ್ವಜ ಆರೋಹಣ ಮಾಡಿದರು. ಸಿ.ಲಿಂ.ನಾಗರಾಜು ಅವರು ಕನ್ನಡ ಧ್ವಜಾರೋಹಣ ನೆರವೇರಿಸಿದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಟಿ.ಕಾಂತರಾಜ್ ಪಟೇಲ್, ಸÀರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಕೆ. ಬೈರಲಿಂಗಯ್ಯ ಕಸಾಪ ನಿಕಟಪೂರ್ವ ಅಧ್ಯಕ್ಷಕರಾದ ಬಿ.ಟಿ. ನಾಗೇಶ್, ಕಸಾಪ ತಾಲೂಕು ಅಧ್ಯಕ್ಷ ಬಿ.ಟಿ.ದಿನೇಶ್, ಗೌರವಾಧ್ಯಕ್ಷ ಶಿವಸ್ವಾಮಿ, ಪಧಾದಿಕಾರಿಗಳಾದ ಶೈಲಜಾ ಶ್ರೀನಿವಾಸ್, ಮಹದೇವಯ್ಯ ಪದಾಧಿಕಾರಿಗಳಾದ ಚಿನ್ನಗಿರಿಗೌಡ, ಡೈರಿ ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑