Tel: 7676775624 | Mail: info@yellowandred.in

Language: EN KAN

    Follow us :


ತೊಡೆ ತಟ್ಟಿ ಪೊರಕೆಯಲ್ಲಿ ಹೊಡೆಸೋ ಗಂಡು ಎಲೆಕ್ಷನ್ ನಿಲ್ಬೇಕಾಗಿತ್ತು: ಡಿ ಕೆ ಶಿವಕುಮಾರ್

Posted date: 12 Apr, 2019

Powered by:     Yellow and Red

ತೊಡೆ ತಟ್ಟಿ ಪೊರಕೆಯಲ್ಲಿ ಹೊಡೆಸೋ ಗಂಡು ಎಲೆಕ್ಷನ್ ನಿಲ್ಬೇಕಾಗಿತ್ತು: ಡಿ ಕೆ ಶಿವಕುಮಾರ್

ಚನ್ನಪಟ್ಟಣದಲ್ಲಿ ನಮಗೆ ತೊಡೆ ತಟ್ಟಿದ ಗಂಡ್ಸು, ಹೆಂಗಸರ ಕೈಯಲ್ಲಿ ಪೊರಕೆಯಿಂದ ಹೊಡೆಸ್ತೀನಿ ಅಂದವರು ಇಂದಿನ ಚುನಾವಣೆಗೆ ನಿಂತು ಗೆದ್ದು ತೋರಿಸಬೇಕಾಗಿತ್ತು, ಪಾಪ ಯಾರೋ ಕುಸ್ತಿ ನೋಡಲು ಬಂದವರನ್ನೇ ಅಖಾಡಕ್ಕೆ ಇಳಿಸಿ ಮಜಾ ಮಾಡ್ತಿದ್ದಾರೆ, ಎಂದು ನೇರವಾಗಿ ಸಿ ಪಿ ಯೋಗೇಶ್ವರ್ ಹೆಸರಿಸಿ ಮಾಜಿ ಶಾಸಕ ಸಿ ಪಿ ಯೋಗೇಶ್ವರ್ ಗೆ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಟಾಂಗ್ ನೀಡಿದರು.


ಅವರು ಇಂದು ಸಂಜೆ ನಗರದ ಅಂಬೇಡ್ಕರ್ ನಗರದಲ್ಲಿ (ವೀರೇಗೌಡನದೊಡ್ಡಿ) ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಅಭ್ಯರ್ಥಿ ಸಹೋದರ ಡಿ ಕೆ ಸುರೇಶ್ ರವರ ಪರ ಬಹಿರಂಗ ಮತಯಾಚನೆ ಸಮಯದಲ್ಲಿ ಸೇರಿದ್ದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದರು.


ಇಲ್ಲಿ ಬಹುತೇಕ ಅಂಬೇಡ್ಕರ್ ನಗರದ ಜನರೇ ಸೇರಿದ್ದೀರಿ, ನಾವು ನೀವೆಲ್ಲರೂ ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ರವರ ಪುತ್ಥಳಿ ಗಳನ್ನು ಸ್ಥಾಪಿಸಿ ಪೂಜಿಸುತ್ತಿದ್ದೇವೆ, ನಮ್ಮ ಪ್ರಜಾಪ್ರಭುತ್ವ ಅದರ ಮೇಲೆಯೇ ನಿಂತಿದೆ, ಇಂತಹ ಸಂವಿಧಾನವನ್ನು ಬಿಜೆಪಿ ಯ ಸಂಸದ ಅನಂತಕುಮಾರ ಹೆಗ್ಗಡೆ ಬದಲಿಸ್ತೀನಿ ಅಂತಾರೆ, ಅಂತವರಿಗೆ ನೀವು ಓಟು ಹಾಕ್ತಿರಾ ಎಂದು ಪ್ರಶ್ನಿಸಿದರು.


ನಿಮ್ಮ ಸಮಸ್ಯೆಗಳಗೆ ಸ್ಪಂದಿಸುವವರು ನಾವು, ಮೋದಿಯಾಗಲಿ, ಶಾ ಆಗಲಿ ಅಥವಾ ಯಡಿಯೂರಪ್ಪ ಆಗಲಿ ಬರುವುದಿಲ್ಲ, ಯಡಿಯೂರಪ್ಪ ನ ಕಾಲವೂ ಮುಗಿಯಿತು, ಅಡ್ವಾಣಿ ಮತ್ತು ಜೋಷಿ ಯವರನ್ನೇ ಮೂಲೆ ಗುಂಪು ಮಾಡಿದ ಬಿಜೆಪಿಗೆ ಯಡಿಯೂರಪ್ಪ ಯಾವ ಲೆಕ್ಕ ಎಂದು ಮೂದಲಿಸಿದರು.


ಯಾರು ಬೇಕಾದರೂ ಪಕ್ಷಕ್ಕೆ ಬಂದು ಸೇರಿಕೊಳ್ಳಬಹುದು, ಹೆಚ್ ಡಿ ಕುಮಾರಸ್ವಾಮಿ ಮತ್ತು ಡಿ ಕೆ ಸುರೇಶ್ ರವರ ದೂರಾಲೋಚನೆ ಮತ್ತು ಪರಿಶ್ರಮದಿಂದ ಚನ್ನಪಟ್ಟಣ ಇನ್ನು ಮುಂದೆ ಸಂಪೂರ್ಣ ನೀರಾವರಿ ಕ್ಷೇತ್ರ ಆಗಲಿದೆ, ಈಗಾಗಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ೨೭೫ ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ.


ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಿಗೆ ಸೇರಿ ಕೋಮುವಾದಿ ಬಿಜೆಪಿ ಪಕ್ಷವನ್ನು ದೂರ ಇಟ್ಟು ದೇಶದ ರಕ್ಷಣೆ ಮತ್ತು ಸಂವಿಧಾನವನ್ನು ಉಳಿಸುವ ಕೆಲಸ ಮಾಡಬೇಕಾಗಿದೆ, ಆದ ಕಾರಣ ನಿಮ್ಮ ಮತವನ್ನು ಯಾರ ಮಾತು‌ ಕೇಳದೇ ಮೈತ್ರಿ ಅಭ್ಯರ್ಥಿ ಡಿ ಕೆ ಸುರೇಶ್ ರವರಿಗೆ ನೀಡಬೇಕು ಎಂದು ಮನವಿ ಮಾಡಿದರು.


ಅಂಬೇಡ್ಕರ್ ನಗರಕ್ಕೆ ಅಪ್ಪಗೆರೆ, ಹೊಂಗನೂರು, ಲಾಳಾಘಟ್ಟ, ತಗಚಗೆರೆ ಮತ್ತಿತರ ಗ್ರಾಮಗಳಿಂದ ಜನರನ್ನು ಮಿನಿ ಲಾರಿ, ಕ್ಯಾಂಟರ್ ಗಳಲ್ಲಿ ಕರೆದುಕೊಂಡು ಬರಲಾಗಿತ್ತು, ಮಧ್ಯಾಹ್ನ ೦೩:೩೦ ಕ್ಕೆ ನಿಗದಿಯಾಗಿದ್ದ ಸಭೆಯು ಮೂರು ಗಂಟೆಗೂ ಹೆಚ್ಚು ಅಂದರೆ ಸಂಜೆ ೦೬:೧೫ ಕ್ಕೆ ಆರಂಬವಾಯಿತು, ಡಿ ಕೆ ಶಿವಕುಮಾರ್ ಭಾಷಣ ಮುಗಿಯುವ ತನಕವೂ ಸಾತನೂರು ರಸ್ತೆಯ ಎರಡೂ ಭಾಗಗಳಲ್ಲಿಯೂ ಪ್ರಯಾಣಿಕರ ವಾಹನಗಳು ನಿಂತು ಟ್ರಾಫಿಕ್ ಜಾಮ್ ಆಗಿತ್ತು.


ಡಿ ಕೆ ಶಿವಕುಮಾರ್ ಜೊತೆ ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ, ಚನ್ನಪಟ್ಟಣ ಪ್ರಾಧಿಕಾರದ ಅಧ್ಯಕ್ಷ ಎ ಸಿ ವೀರೇಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಾಂಪುರ ರಾಜಣ್ಣ, ವಕೀಲ ಹನುಮಂತು, ಶರತ್, ಸಿಂಲಿಂ ನಾಗರಾಜು, ಜಯಮುತ್ತು, ಮುದ್ದುಕೃಷ್ಣ, ಪಿ ಡಿ ರಾಜು ಸೇರಿದಂತೆ ಅನೇಕ ಮೈತ್ರಿ ಪಕ್ಷದ ಪದಾಧಿಕಾರಿಗಳು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑