Tel: 7676775624 | Mail: info@yellowandred.in

Language: EN KAN

    Follow us :


ವೆಬ್‍ಸ್ಟರ್ ಶಾಲೆಯ ಶಾಲಾ ವಾರ್ಷಿಕೋತ್ಸವ ಸಮಾರಂಭ

Posted date: 03 Feb, 2018

Powered by:     Yellow and Red

ವೆಬ್‍ಸ್ಟರ್ ಶಾಲೆಯ ಶಾಲಾ ವಾರ್ಷಿಕೋತ್ಸವ ಸಮಾರಂಭ

ಚನ್ನಪಟ್ಟಣ: ನಗರದ ವೆಬ್‌ ಸ್ಟರ್ ಶಾಲೆಯಲ್ಲಿ ಮಂಗಳವಾರ ಸಂಜೆ ನಡೆದ ಹನ್ನೊಂದನೇ ಶಾಲಾ ವಾರ್ಷಿಕೋತ್ಸವದಲ್ಲಿ ದೀಪ ಬೆಳಗಿಸಿದ ಆದಿಚುಂಚನಗಿರಿ ಮಹಾಸಂಸ್ಥಾನದ ರಾಮನಗರ ಶಾಖಾಮಠದ ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿಗಳು ಆಶೀರ್ವಚನ ನೀಡಿದರು.

ಮನೆಯೇ ಮೊದಲ ಪಾಠಶಾಲೆ, ಜನನಿ ತಾನೇ ಮೊದಲ ಗುರುವು,ಜನನಿಯಿಂದ ಪಾಠಕಲಿತ ಜನರು ಧನ್ಯರು.

ಇಂದಿನ ಮಕ್ಕಳನ್ನು ಕೇವಲ ಶಾಲೆಗೆ ಕಳುಹಿಸಿ ಅಲ್ಲಿ ಓದಿಬಂದರೆ ಅಷ್ಟಕ್ಕೆ ಮುಗಿಯುವುದಿಲ್ಲ, ಮನೆಯಲ್ಲಿ ಹೆತ್ತವರು ಅದರಲ್ಲೂ ತಾಯಿಯಾದವರು ಮಕ್ಕಳಿಗೆ ಕಲಿಸಿದರೆ ಆ ಮಕ್ಕಳು ಸಮಾಜದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸುತ್ತಾರೆ, ನಿಮ್ಮ ಮಕ್ಕಳನ್ನು ಕೇವಲ ಪದವಿಗಾಗಿ ಓದಿಸದೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಒಳ್ಳೆಯ ವ್ಯಕ್ತಿತ್ವ ಉಳ್ಳವ ಅಬ್ದುಲ್ ಕಲಾಮ್, ವಿಶ್ವೇಶ್ವರಯ್ಯ ನವರಂತೆ ಬೆಳೆಸಲು ಪ್ರೇರೆಪಿಸಬೇಕು.

ವಿದ್ಯೆ ಕಲಿಸದ ತಂದೆಯು, ಬುದ್ದಿ ಹೇಳದ ಗುರುವು, ಬಿದ್ದಿರಲು ಬಂದು ನೋಡದ ತಾಯಿಯು ಶುದ್ಧ ವೈರಿಗಳು ಸರ್ವಜ್ಞ, ಎಂಬ ಸರ್ವಜ್ಞ ಮೂರ್ತಿಯ ನುಡಿಗಳಂತೆ ಹೆತ್ತ ಮಕ್ಕಳನ್ನು ಮೊದಲು ಪಾಠಶಾಲೆಯಲ್ಲಿ ಓದಿಸಿ ವಿದ್ಯಾವಂತನ್ನಾಗಿ ಮಾಡುವುದು ತಂದೆಯ ಕರ್ತವ್ಯ, ಶಾಲೆಗೆ ಬಂದ ಮಕ್ಕಳನ್ನು ತನ್ನ ಮಕ್ಕಳಂತೆಯೇ ಸಲುಹಿ ವಿದ್ಯೆಯ ಜೊತೆಗೆ ಬುದ್ದಿ ಕಲಿಸುವ ಹೊಣೆ ಗುರುವಿನದ್ದು ಹಾಗೆಯೇ ದಾರಿ ತಪ್ಪಿದ ಮಗನನ್ನು ಸರಿದಾರಿಗೆ ತರಲು ಪ್ರಯತ್ನ ಹೆತ್ತ ತಾಯಿಯದು, ಈ ಮೂವರು ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರೆ ಪ್ರತಿ ಮಗುವು ದೇಶೋದ್ದಾರಕನಾಗುವುದರಲ್ಲಿ ಸಂಸಯವೇ ಇಲ್ಲ ಎಂದರು.

ತಾಲ್ಲೂಕು ಪಂಚಾಯತ್ ಅಧ್ಯಕ್ಷ ಹರೂರು ರಾಜಣ್ಣ ಮಾತನಾಡಿ ತಮ್ಮ ಮಕ್ಕಳನ್ನು ಸರ್ಕಾರಿ ಕೆಲಸಕ್ಕೆಂದು ಒತ್ತಡ ಹಾಕಿ ಓದಿಸುವ ಬದಲು ಸಮಾಜಾಮುಖಿಯಾಗಿ ಚಿಂತಿಸುವ ಸತ್ಪ್ರಜೆಯಾಗಿ ರೂಪಿಸುವತ್ತ ಗಮನ ನೀಡಬೇಕೆಂದು ಪೋಷಕರಿಗೆ ಕರೆ ನೀಡಿದರು.

ಸಿ ಎಸ್ ಕೃಷ್ಣ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮತ್ತಿಕೆರೆ ಚಲುವರಾಜು ಮಾತನಾಡಿದರು.

ಶಾಲೆಯ ಸಂಸ್ಥಾಪಕರಾದ ಪಟೇಲ್ ಸಿ ರಾಜು ರವರು ಅಧ್ಯಕ್ಷತೆ ವಹಿಸಿದ್ದರು.

ಇದೆ ವೇಳೆ ಹರೂರು ರಾಜಣ್ಣ ಮತ್ತು ಮತ್ತಿಕೆರೆ ಚಲುವರಾಜು ರವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.

 

ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ನೆರೆದಿದ್ದವರ ಮನರಂಜಿಸಿದರು.

 

ವೇದಿಕೆಯ ಮೇಲೆ ನೃತ್ಯ ಪಟು ಸುಚೇಂದ್ರಬಾಬು, ಮೇಕೆದಾಟು ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಗೋ ರಾ ಶ್ರೀನಿವಾಸ, ಗೋಪಾಲಕೃಷ್ಣ, ಎಂ ಡಿ ಶಿವಕುಮಾರ್, ಬಿಜಿಎಸ್ ವಲ್ಡ್೯ ಸ್ಕೂಲ್‌ ಪ್ರಾಂಶುಪಾಲ ಬಿಜೋಶ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑