Tel: 7676775624 | Mail: info@yellowandred.in

Language: EN KAN

    Follow us :


ಪ್ರತಿ ಹೆಣ್ಣಿಗೂ ಗಂಡಿನಷ್ಟೇ ಅಧಿಕಾರವಿದೆ, ಹಿರಿಯ ಸಿವಿಲ್ ನ್ಯಾಯಾಧೀಶೆ ಅನಿತಾ

Posted date: 05 May, 2019

Powered by:     Yellow and Red

ಪ್ರತಿ ಹೆಣ್ಣಿಗೂ ಗಂಡಿನಷ್ಟೇ ಅಧಿಕಾರವಿದೆ, ಹಿರಿಯ ಸಿವಿಲ್ ನ್ಯಾಯಾಧೀಶೆ ಅನಿತಾ

ನಮ್ಮ ದೇಶದ ಸಂವಿಧಾನದಲ್ಲಿ ಸಮಾನತೆಯ ದೃಷ್ಟಿಯಿಂದ ಪುರುಷರಿಗೆ ಏನೇನು ಅಧಿಕಾರ ಇದೆಯೋ ಅಷ್ಟೇ ಅಧಿಕಾರ ಪ್ರತಿ ಹೆಣ್ಣಿಗೂ ಇದೆ, ಕಾನೂನಿನ ಜ್ಞಾನವನ್ನು ಈಗಿನಿಂದಲೇ ಅಳವಡಿಸಿಕೊಂಡರೆ ಭವಿಷ್ಯದ ಬದುಕಿನಲ್ಲಿ ಬರುವ ಎಡರುತೊಡರುಗಳನ್ನು ನಿವಾರಿಸಿಕೊಳ್ಳಬಹುದು ಎಂದು ರಾಮನಗರ ದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಅನಿತಾ ರವರು ಮಕ್ಕಳಿಗೆ ತಿಳಿಸಿಕೊಟ್ಟರು.

ಅವರು ಆದಿಚುಂಚನಗಿರಿ ಮಹಾಸಂಸ್ಥಾನ ಅರ್ಚಕರಹಳ್ಳಿ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ೨೨ ನೇ ಮಹಿಳಾ ಜನ ಜಾಗೃತಿ ತರಬೇತಿ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಕಾನೂನು ಅರಿವಿನ ಬಗ್ಗೆ ಜಾಗೃತಿ ಮೂಡಿಸಿದರು.


ಇಂದು ತಂದೆಯ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಸಮಾನ ಹಕ್ಕಿದೆ, ಮೊದಲು ಕೀರ್ತಿಗೊಬ್ಬ ಮಗ, ಆರತಿಗೊಬ್ಬಳು ಮಗಳು ಎಂದಿದ್ದ ಸರ್ಕಾರದ ಘೋಷಣೆಯನ್ನು ಇಂದು ಆಸ್ತಿಗೊಬ್ಬ ಮಗ, ಆಶ್ರಯಕ್ಕೊಬ್ಬ ಮಗಳು ಎಂದು ಮಾರ್ಪಡಿಸುವ ಕಾಲ ಒದಗಿ ಬಂದಿದೆ ಎಂದು ಮಾರ್ಮಿಕವಾಗಿ ನುಡಿದರು.


ಇಂದಿನ ಕಾಲಘಟ್ಟದಲ್ಲಿ ಬಹುತೇಕ ಎಲ್ಲಾ ಮಕ್ಕಳು ದ್ವಿಚಕ್ರ ವಾಹನ ಚಲಾಯಿಸುತ್ತಾರೆ, ಆದರೆ ಯಾರೂ ಸಹ ಪರವಾನಗಿ ಪಡೆದಿರುವುದಿಲ್ಲ, ಕಾರಣ ಅವರ ವಯಸ್ಸು ಹದಿನೆಂಟು ದಾಟದಿರುವುದರಿಂದ ಅವರಿಗೆ ಪರವಾನಗಿ ನೀಡುವುದಿಲ್ಲ, ಆದ್ದರಿಂದ ಯಾವ ಮಕ್ಕಳು ಸಹ ಯಾವುದೇ ಮೋಟಾರು ವಾಹನಗಳನ್ನು ಚಲಾಯಿಸಬಾರದು, ಹಾಗೊಂದು ವೇಳೆ ಚಲಾಯಿಸಿ ಅಪಘಾತವಾದರೆ ಅದರ ಸಂಪೂರ್ಣ ಹೊರೆಯನ್ನು ಪೋಷಕರು ಹೊರಬೇಕೆಂಬ ಕಾನೂನು ಬಂದಿದೆ ಎಂದು ಮಕ್ಕಳು ಮತ್ತು ಪೋಷಕರಿಗೆ ಎಚ್ಚರಿಕೆ ನೀಡಿದರು.


ನಮ್ಮ ದೇಶಗಳಲ್ಲಿ ಮಗು ಹುಟ್ಟಿದ ನಂತರ ಗಳಿಗೆ, ಗಂಟೆ, ಜಾತಕ ನೋಡಿ ಹೆಸರಿಡುತ್ತಾರೆ, ಆದರೆ ವಿದೇಶಗಳಲ್ಲಿ ಮಗು ಹುಟ್ಟುವ ಮೊದಲೆ ಇಂತಹ ಹೆಸರಿಡಬೇಕೆಂದು ಸಂಕಲ್ಪ ಮಾಡಿಕೊಂಡು ಅದೇ ಹೆಸರಿಡುತ್ತಾರೆ, ಈ ರೀತಿಯ ಮೌಢ್ಯಗಳು ತೊಲಗಬೇಕೆಂದರೆ ನಿಮಗೆ ಸಂವಿಧಾನದ ಅರಿವು ಇರಬೇಕು.


ಪೋಷಕರಾದವರು ಮಗು ಹುಟ್ಟಿದಾಗ ಜನನ ಪ್ರಮಾಣ ಪತ್ರ ಮತ್ತು ಮರಣಾನಂತರ ಮರಣ ಪ್ರಮಾಣ ಪತ್ರವನ್ನು ಸಂಬಂಧಿಸಿದ ಕಛೇರಿಗಳಲ್ಲಿ ತಪ್ಪದೇ ಮಾಡಿಸಿಟ್ಟುಕೊಳ್ಳಬೇಕು, ಅದು ಮುಂದಿನ ಎಲ್ಲಾ ವ್ಯವಹಾರಗಳಿಗೂ ಅನುಕೂಲವಾಗಲಿದೆ,  ಮಕ್ಕಳು ಓದಿನ ಬಗ್ಗೆ ಎಷ್ಟು ಗಮನ ಕೊಡುತ್ತೀರೋ ಅಷ್ಟೇ ಗಮನವನ್ನು ಪರಿಸರ ಕಾಳಜಿಯಲ್ಲೂ ಹೊಂದಬೇಕು, ಇಂದು ಮನುಷ್ಯನ ದುರಾಸೆಯಿಂದ ಕೆರೆ, ಕಟ್ಟೆ, ನದಿ ಮತ್ತು ಗೋಮಾಳಗಳು ಕಣ್ಮರೆಯಾಗುತ್ತಿವೆ ಎಂದು ಮಕ್ಕಳಿಗೆ ಮನದಟ್ಟು ಮಾಡಿಕೊಟ್ಟು ಅವರ ಜೊತೆ ಸಂವಾದ ನಡೆಸಿ ಶಿಬಿರಾರ್ಥಿಗಳ ಮನಗೆದ್ದರು.


ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಮಂಗಳೂರಿನ ಶಾಖಾ ಮಠದ ಸ್ವಾಮೀಜಿಗಳಾದ ಧರ್ಮಪಾಲನಾಥ ಸ್ವಾಮೀಜಿಗಳು ಮಹಾಭಾರತದ ಕರ್ಣನ ರಹಸ್ಯ ಜನ್ಮ ವೃತ್ತಾಂತವನ್ನು ಎಳೆಎಳೆಯಾಗಿ ಬಿಡಿಸಿ ಹೇಳುವ ಮೂಲಕ ಮಕ್ಕಳಿಗೆ ಜ್ಞಾನದ ಮಾರ್ಗದರ್ಶನ ನೀಡಿದರು.


ಎಂದಿನಂತೆ ಯೋಗ, ಭಜನೆ, ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.


ವೇದಿಕೆಯಲ್ಲಿ ರಾಮನಗರ ಶಾಖಾ ಮಠದ ಕಾರ್ಯದರ್ಶಿಗಳಾದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ, ಬಿಜಿಎಸ್ ವಲ್ಡ್೯ ಶಾಲೆಯ ಪ್ರಾಂಶುಪಾಲೆ ಸತ್ಯಲಕ್ಷ್ಮಿ, ವಿಶೇಷ ಆಹ್ವಾನಿತರಾದ  ಪ್ರಜಾ ಟಿವಿ ಜಿಲ್ಲಾ ವರದಿಗಾರ ಅರ್ಕೇಶ್, ಪವರ್ ಟಿವಿ ಜಿಲ್ಲಾ ವರದಿಗಾರ ಪ್ರವೀಣ್ ಮತ್ತು ಪಾದರಹಳ್ಳಿ ರಾಜು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑