Tel: 7676775624 | Mail: info@yellowandred.in

Language: EN KAN

    Follow us :


ನಮ್ಮ ಚಿಂತನೆ ಸರಿ ಇದ್ದರೆ ಸಮಾಜದ ಚಿಂತನೆಯೂ ಸರಿಯಿರುತ್ತದೆ, ಮುಲ್ಲೈಮುಹಿಲನ್

Posted date: 07 May, 2019

Powered by:     Yellow and Red

ನಮ್ಮ ಚಿಂತನೆ ಸರಿ ಇದ್ದರೆ ಸಮಾಜದ ಚಿಂತನೆಯೂ ಸರಿಯಿರುತ್ತದೆ, ಮುಲ್ಲೈಮುಹಿಲನ್

ನಾವು ಸಮಾಜದ ಬಗ್ಗೆ ಏನನ್ನು ಚಿಂತಿಸುತ್ತೇವೆಯೋ ಹಾಗೆ ಸಮಾಜವೂ ಚಿಂತಿಸುತ್ತದೆ, ನಾವು ಒಳ್ಳೆಯದನ್ನು ಚಿಂತಿಸಿದರೆ ಸಮಾಜವೂ ಒಳ್ಳೆಯದನ್ನು ಚಿಂತಿಸುತ್ತದೆ, ಹಾಗಾಗಿ ಸಮಾಜಕ್ಕೆ ನಾವು ಯಾವಾಗಲೂ ಒಳ್ಳೆಯದನ್ನೇ ಬಯಸಬೇಕು, ಒಳ್ಳೆಯದನ್ನೇ ಪಡೆಯಬೇಕು, ಎಂದು ರಾಮನಗರ ಜಿಲ್ಲಾ ಪಂಚಾಯತಿ ಕಾರ್ಯ ನಿರ್ವಹಣಾ ಅಧಿಕಾರಿ ಮುಲ್ಲೈಮುಹಿಲನ್ ತಿಳಿಸಿದರು.

ಅವರು ಆದಿಚುಂಚನಗಿರಿ ಮಹಾಸಂಸ್ಥಾನ ದ ರಾಮನಗರ ಶಾಖಾ ಮಠದಲ್ಲಿ ಆಯೋಜಿಸಿದ್ದ ೨೨ ನೇ ರಾಜ್ಯಮಟ್ಟದ ಮಹಿಳಾ ಜನ ಜಾಗೃತಿ ತರಬೇತಿ ಶಿಬಿರದಲ್ಲಿ ಶಿಬಿರಾರ್ಥಿಳನ್ನು ಉದ್ದೇಶಿಸಿ ಮಾತನಾಡಿದರು.


ತಪ್ಪು ಸರಿ ಎಂಬ ತಿಳುವಳಿಕೆಯೇ ಸಂಸ್ಕಾರ, ಎಳವೆಯಲ್ಲಿ ಕಲಿತದ್ದು ಶಾಶ್ವತವಾಗಿ ಉಳಿದುಕೊಳ್ಳುತ್ತದೆ, ಶಿಬಿರದಲ್ಲಿ ಮತ್ತು ಶಾಲೆಯಲ್ಲಿ ಕಲಿಯುವುದರ ಜೊತೆಗೆ ಸಮಾಜದ ನಡುವಿನ ಅನುಭವಗಳು ಕೂಡ ನಮ್ಮನ್ನು ಉನ್ನತ ಮಟ್ಟಕ್ಕೆ ಕರೆದೊಯ್ಯುತ್ತವೆ ಎಂದು ಶಿಬಿರಾರ್ಥಿಗಳಿಗೆ ತಿಳಿಸಿಕೊಟ್ಟರು.


ಮಕ್ಕಳಲ್ಲಿ ಮಗುವಾಗಿ ಬೆರೆತ ಅಧಿಕಾರಿಯು ಬಹುತೇಕ ಮಕ್ಕಳನ್ನು ತಮ್ಮದೇ ರೀತಿಯಲ್ಲಿ ಸೆಳೆದು ಮುಂದಿನ ಭವಿಷ್ಯದ ಬಗ್ಗೆ ಕೇಳಿ ತಿಳಿದುಕೊಂಡು, ಶೈಕ್ಷಣಿಕ ಜೀವನದ ಅನುಭವವನ್ನು, ತನ್ನ ತಾಯಿ ಪಟ್ಟ ಕಷ್ಟಗಳನ್ನು ಹೇಳಿ ಅವರ ಭವಿಷ್ಯದ ಜೀವನ ಹೇಗಿರಬೇಕೆಂದು ಮಾರ್ಗದರ್ಶನ ಮಾಡಿದರು.


ತಮ್ಮ ಸ್ವಯಂ ರಕ್ಷಣೆಗಾಗಿ ಕರಾಟೆ ಯಂತಹ ವಿದ್ಯೆಗಳನ್ನು ಕಲಿಯಬೇಕೆಂದು ಸಲಹೆ ನೀಡಿದರು.


ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಸಾಯಿ ಕೀರ್ತಿನಾಥ ಸ್ವಾಮೀಜಿ ಸಾನಿಧ್ಯ ವಹಿಸಿದರು, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ನರಸಿಂಹಯ್ಯ, ಹೇಮಗಿರಿ ಕ್ಷೇತ್ರದ ಯೋಗರಾಜ್,ಬಿಜಿಎಸ್ ವಲ್ಡ್೯ ಸ್ಕೂಲ್ ನ ಪ್ರಾಂಶುಪಾಲೆ ಸತ್ಯಲಕ್ಷ್ಮಿ ಉಪಸ್ಥಿತರಿದ್ದರು. ಎಂಟುನೂರಕ್ಕೂ ಹೆಚ್ಚು ಶಿಬಿರಾರ್ಥಿಗಳು

ರಾಜ್ಯದ ಅನೇಕ ಜಿಲ್ಲೆಗಳಿಂದ ಬಂದು ಭಾಗವಹಿಸಿದ್ದರು.


ಸಂಜೆಯ ಕಾರ್ಯಕ್ರಮದಲ್ಲಿ ರಾಮನಗರ ತಾಲೂಕಿನ ದೊಡ್ಡಗಂಗವಾಡಿ ಗ್ರಾಮದ ಹಿರಿಯ *ತೊಗಲು ಗೊಂಬೆ* ಕಲಾವಿದೆ ಗೌರಮ್ಮ ನವರಿಂದ ಪ್ರದರ್ಶನ ಏರ್ಪಡಿಸಿಲಾಗಿತ್ತು.

ಪ್ರದರ್ಶನವನ್ನು ಅನ್ನದಾನೇಶ್ವರನಾಥ ಸ್ವಾಮೀಜಿ, ಚಂದ್ರನಾಥ ಸ್ವಾಮೀಜಿ, ಮಂಗಳನಾಥ ಸ್ವಾಮೀಜಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ ರಾಜು ರವರು ವೀಕ್ಷಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑