Tel: 7676775624 | Mail: info@yellowandred.in

Language: EN KAN

    Follow us :


ಪುರಾತನ ಭಾರತದ ಮಹಿಳೆಯರ ಸಂಸ್ಕೃತಿ ಅಮರ, ಜಾನಪದ ವಿದ್ವಾಂಸ ಡಾ ಕುರುವ ಬಸವರಾಜು

Posted date: 08 May, 2019

Powered by:     Yellow and Red

ಪುರಾತನ ಭಾರತದ ಮಹಿಳೆಯರ ಸಂಸ್ಕೃತಿ ಅಮರ, ಜಾನಪದ ವಿದ್ವಾಂಸ ಡಾ ಕುರುವ ಬಸವರಾಜು

ಪುರಾತನ ಭಾರತದ ಮಹಿಳೆಯರ ಸಂಸ್ಕೃತಿ ಎಂದೆಂದಿಗೂ ಅಮರವಾದದ್ದು, ಎಲ್ಲಾ ಪದಗಳು ಮತ್ತು ಸಂಸ್ಕಾರಗಳಿಗೆ ಮೂಲ ಜಾನಪದ, ಜಾನಪದಕ್ಕೆ ಮೂಲ ಭಾರತದ ಪುರಾತನ ಮಹಿಳೆಯರು ಎಂದು ಜಾನಪದ ವಿದ್ವಾಂಸ, ಜಾನಪದ ಲೋಕದ ಆಡಳಿತ ಅಧಿಕಾರಿ ಡಾ ಕುರುವ ಬಸವರಾಜು ತಿಳಿಸಿಕೊಟ್ಟರು.

ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ವತಿಯಿಂದ ರಾಮನಗರ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ೨೨ ನೇ ಮಹಿಳಾ ಜನ ಜಾಗೃತಿ ತರಬೇತಿ ಶಿಬಿರದಲ್ಲಿ ಜಾನಪದ ಉಳಿವಿನಲ್ಲಿ ಮಹಿಳೆಯರ ಪಾತ್ರ ಕುರಿತು ಉಪನ್ಯಾಸ ನೀಡಿದರು.


ಅಂದಿನ ಕಾಲದಲ್ಲಿ ದಿನನಿತ್ಯ ಬಳಸುತಿದ್ದ ಪರಿಕರಗಳು, ವ್ಯವಸಾಯದ ಉಪಕರಣಗಳು, ರಸಗೊಬ್ಬರ ಇಲ್ಲದೆ ಬೆಳೆಯುತ್ತಿದ್ದ ಆಹಾರ ಪದಾರ್ಥಗಳು ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು, ಇಂದಿಗೂ ಸಹ ಜಾನಪದ ವೈದ್ಯ ಚಾಲ್ತಿಯಲ್ಲಿದೆ.


ಮಕ್ಕಳು ಕೇವಲ ಪುಸ್ತಕದ ಓದು, ಕಂಪ್ಯೂಟರ್‌ ಗಷ್ಟೇ ಸೀಮಿತವಾಗದೆ ಪರಿಸರದ ಬಗ್ಗೆ ತಿಳಿದುಕೊಳ್ಳಬೇಕು, ಕತೆ ಕಟ್ಟುವ, ಹೇಳುವ ಪರಿಪಾಠ ಬೆಳೆಸಿಕೊಳ್ಳಬೇಕು, ಎಲ್ಲದಕ್ಕೂ ಮೂಲವಾದ ಜಾನಪದವನ್ನು ಓದಿಕೊಂಡು ಜೀವನ ಶೈಲಿಯನ್ನು ಬದಬದಲಿಸಿಕೊಳ್ಳಬೇಕೆಂದು ಶಿಬಿರದ ಮಕ್ಕಳಿಗೆ ಕರೆ‌ ನೀಡಿದರು.


ಸಾಯಿ ಕೀರ್ತಿನಾಥ ಸ್ವಾಮೀಜಿ ಸಾನಿಧ್ಯವಹಿಸಿದರು, ವಿಶೇಷ ಆಹ್ವಾನಿತರಾಗಿ ಉದಯವಾಣಿ ಪತ್ರಿಕೆಯ ವರದಿಗಾರ ಸೂರ್ಯಪ್ರಕಾಶ್, ಕಲಾಪ್ರಿಯ ಪತ್ರಿಕೆಯ ಸಂಪಾದಕರಾದ ಸುಧಾರಾಣಿ, ರಾಮನಗರ ವಾರ್ತೆ ಪತ್ರಿಕೆಯ ಸಂಪಾದಕ ಚಲುವರಾಜು, ಕನ್ನಡಪ್ರಭ ಪತ್ರಿಕೆಯ ಜಿಲ್ಲಾ ವರದಿಗಾರ ಆಫ್ರೋಜ್ ಖಾನ್ ಮತ್ತು ಮಾಸ್ತಮ್ಮವಾಣಿ ಪತ್ರಿಕೆಯ ಸಂಪಾದಕ ಡಿ ಎಂ ಮಂಜುನಾಥ ಭಾಗವಹಿಸಿದ್ದರು.


ಬೆಳಿಗ್ಗೆ ಶಿಬಿರದ ಹೆಣ್ಣು ಮಕ್ಕಳಿಗೆ ಲಕ್ಷ್ಮಿ ಗೋ ರಾ ಶ್ರೀನಿವಾಸ ರವರು ವಿಶೇಷವಾಗಿ ಕರಾಟೆ ತರಬೇತಿ ನೀಡಿದರು, ಸಂಜೆ ಭಜನೆ ಇತ್ಯಾದಿ ಕಾರ್ಯಕ್ರಮಗಳು ಜರುಗಿದವು.

ಸಂಜೆ ವೇಳೆ ಜಾದೂ ಗಂಗಾಧರ ರವರಿಂದ ಜಾದು ಏರ್ಪಡಿಸಲಾಗಿತ್ತು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑