Tel: 7676775624 | Mail: info@yellowandred.in

Language: EN KAN

    Follow us :


ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ರಥಸಪ್ತಮಿ ಸಾಂಸ್ಕøತಿಕ ರಸಸಂಜೆ 

Posted date: 03 Feb, 2018

Powered by:     Yellow and Red

ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ರಥಸಪ್ತಮಿ ಸಾಂಸ್ಕøತಿಕ ರಸಸಂಜೆ 

ರಾಮನಗರ : ತಾಲ್ಲೂಕಿನ ಕೂನಗಲ್ ಗ್ರಾಮದ ಮಾರಮ್ಮ ದೇವಸ್ಥಾನದ ಆವರಣದಲ್ಲಿ ರಥಸಪ್ತಮಿ ಸಾಂಸ್ಕತಿಕ ರಸಸಂಜೆಯನ್ನು ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿತ್ತು. 
ಹಿರಿಯ ಜನಪದ ಗಾಯಕಿ ಸಣ್ಣಮ್ಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚಿನ ಮಟ್ಟದಲ್ಲಿ ನಡೆಯಬೇಕು. ಇದರಿಂದ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ದೊರೆತಂತಾಗುತ್ತದೆ. ಗ್ರಾಮಗಳಲ್ಲಿ ಶಾಂತಿ ಸೌಹಾರ್ಧತೆ ಮೂಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. 
ಇಂದು ಟಿವಿ ಮಾಧ್ಯಮದಿಂದ ಎಲ್ಲರೂ ದೂರ ಸರಿಯುತ್ತಿದ್ದಾರೆ. ಒಳ್ಳೆಯ ಸಂದೇಶಗಳಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೋಡಲು ಜನರು ದೂರದ ಊರುಗಳಿಂದಲೂ ಆಗಮಿಸುತ್ತಾರೆ. ಹಬ್ಬಹರಿದಿನಗಳಂದು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದರಿಂದ ಜನರಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಎಂದು ತಿಳಿಸಿದರು. 
ಪರಿವಾರ್ ಫೌಂಡೇಷನ್ ಅಧ್ಯಕ್ಷ ಹರೀಶ್ ಮಾತನಾಡಿ ಶಾಂತಲಾ ಚಾರಿಟಬಲ್ ಟ್ಟಸ್ಟ್ ಹಲವು ವರ್ಷಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿಕೊಡುತ್ತಿದೆ. ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದೆ ಎಂದು ತಿಳಿಸಿದರು.
ಪರಿಸರವಾದಿ ಬಿ.ಟಿ. ರಾಜೇಂದ್ರ ಮಾತನಾಡಿ ಸಾಂಸ್ಕೃತಿಕ ರಸಸಂಜೆಯಂತಹ ಕಾರ್ಯಕ್ರಮಗಳು ಹೆಚ್ಚಿನ ಮಟ್ಟದಲ್ಲಿ ನಡೆಯಬೇಕು. ಇದರಿಂದ ಜನರಲ್ಲಿ ಒಳ್ಳೆಯ ಅಭಿರುಚಿ ಬೆಳೆಯಲು ಸಾಧ್ಯವಾಗುತ್ತದೆ. ನಮ್ಮ ಸಂಸ್ಕೃತಿಯ ವಿಚಾರಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ನೃತ್ಯಗಾರ್ತಿ ಚಿತ್ರರಾವ್ ಗೀತಗಾಯನ ನಡೆಸಿಕೊಟ್ಟರು. ಶಾಂತಲಾ ಕಲಾಕೇಂದ್ರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. 
ಮುಖಂಡರಾದ ಜಯರಾಮಯ್ಯ, ಪ್ರಭಾವತಿ ದಶರಥ್, ಎನ್.ವಿ. ಲೋಕೇಶ್, ಶಾಂತಲಾ ಚಾರಿಟಬಲ್ ಟ್ರಸ್ಟಿನ ಕಾರ್ಯದರ್ಶಿ ಕವಿತಾರಾವ್ ಮುಂತಾದವರು ಉಪಸ್ಥಿತರಿದ್ದರು. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑